Just In
Don't Miss!
- Lifestyle
ಆಯುರ್ವೇದ ಔಷಧಿ ಸೇವಿಸುವ ಮುನ್ನ ಈ ಎಚ್ಚರಿಕೆಗಳನ್ನು ನೀವು ತೆಗೆದುಕೊಳ್ಳಲೇಬೇಕು
- News
ಪಲ್ಲವಿ ಡೇ ಬಳಿಕ ಮತ್ತೊಬ್ಬ ಯುವ ರೂಪದರ್ಶಿ ಆತ್ಮಹತ್ಯೆ
- Sports
ಮಹಿಳಾ ಟಿ20 ಚಾಲೆಂಜ್: ವೆಲಾಸಿಟಿ ವಿರುದ್ಧ ಗೆದ್ದ ಟ್ರೈಲ್ಬ್ಲೇಜರ್ಸ್, ಆದ್ರೂ ಫೈನಲ್ ಮಿಸ್
- Finance
ಮೇ 26ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
ಬಾಲಕೃಷ್ಣ 107ನೇ ಸಿನಿಮಾದ ಟೈಟಲ್ 'ಜೈ ಬಾಲಯ್ಯ'
- Technology
ಸ್ಯಾಮ್ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್ಫೋನ್ ಬಿಡುಗಡೆ! ವಿಶೇಷತೆ ಏನು?
- Education
Karnataka SSLC Revaluation 2022 : ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜಿಂದಾಲ್ ಮೊಬಿಲಿಟ್ರಿಕ್ ತೆಕ್ಕೆಗೆ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಕಂಪನಿ ಅರ್ಥ್ ಎನರ್ಜಿ
ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಅರ್ಥ್ ಎನರ್ಜಿ ಕಂಪನಿಯನ್ನು ಜವಳಿ ಉದ್ಯಮದಲ್ಲಿ ಮುಂಚೂಣಿಯಲ್ಲಿರುವ ಜಿಂದಾಲ್ ವರ್ಲ್ಡ್‌ವೈಡ್ ಕಂಪನಿಯು ಸ್ವಾಧೀನಪಡಿಸಿಕೊಂಡಿದ್ದು, ಅರ್ಥ್ ಎನರ್ಜಿ ಕಂಪನಿಯಲ್ಲಿ ಜಿಂದಾಲ್ ಕಂಪನಿಯು ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾಗಿದೆ.

ಜಿಂದಾಲ್ ವರ್ಲ್ಡ್‌ವೈಡ್ ಕಂಪನಿಯು ಎಲೆಕ್ಟ್ರಿಕ್ ವಾಹನ ಉದ್ಯಮ ಪ್ರಕ್ರಿಯೆಗಾಗಿ ಪ್ರತ್ಯೇಕವಾಗಿ ಜಿಂದಾಲ್ ಮೊಬಿಲಿಟ್ರಿಕ್ ಕಂಪನಿಯನ್ನು ತೆರೆದಿದ್ದು, ಹೊಸ ಉದ್ಯಮ ಯೋಜನೆ ಅಡಿಯಲ್ಲಿ ಜಿಂದಾಲ್ ಮೊಬಿಲಿಟ್ರಿಕ್ ಕಂಪನಿಯು ಅರ್ಥ್ ಎನರ್ಜಿ ಕಂಪನಿಯಲ್ಲಿ ಹೂಡಿಕೆ ಮಾಡಲಿದೆ. ಹೊಸ ಯೋಜನೆಯೊಂದಿಗೆ ಅರ್ಥ್ ಎನರ್ಜಿ ಕಂಪನಿಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲಿದೆ.

ಸದ್ಯ ಅರ್ಥ್ ಎನರ್ಜಿ ಕಂಪನಿಯು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಮಾತ್ರ ಉತ್ಪಾದನೆ ಮಾಡುತ್ತಿದ್ದು, ಇದೀಗ ಅರ್ಥ್ ಎನರ್ಜಿಯಲ್ಲಿ ಹೊಸ ಹೂಡಿಕೆ ಮಾಡಲಿರುವ ಜಿಂದಾಲ್ ಮೊಬಿಲಿಟ್ರಿಕ್ ಕಂಪನಿಯು ಇವಿ ದ್ವಿಚಕ್ರ ವಾಹನಗಳ ಜೊತೆಗೆ ಇವಿ ತ್ರಿ-ಚಕ್ರ ವಾಹನಗಳನ್ನು ಸಹ ಉತ್ಪಾದನೆ ಮಾಡಲು ನಿರ್ಧರಿಸಿದೆ.

ಹೊಸ ಉದ್ಯಮ ಕಾರ್ಯಾಚರಣೆಗಾಗಿ ಜಿಂದಾಲ್ ಮೊಬಿಲಿಟ್ರಿಕ್ ಕಂಪನಿಯು ಅಹಮದಾಬಾದ್‌ನಲ್ಲಿ ಬೃಹತ್ ಪ್ರಮಾಣದ ಹೊಸ ಉತ್ಪಾದನಾ ಘಟಕ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದು, ಮುಂದಿನ ಒಂದು ವರ್ಷದೊಳಗಾಗಿ ಹೊಸ ಉತ್ಪಾದನಾ ಘಟಕವು ಕಾರ್ಯಾಚರಣೆ ಆರಂಭಿಸಲಿದೆ.

ದುಬಾರಿ ಇಂಧನ ದರ ಮತ್ತು ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಯಾಗಿ ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳಿಗೆ ಜಾರಿಗೆ ತಂದಿದ್ದು, ಹೊಸ ಯೋಜನೆಗಳ ಪರಿಣಾಮ ಇವಿ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆಯಾಗಿದೆ.

ಇವಿ ವಾಹನಗಳ ಉತ್ತೇಜನೆ ಪರಿಣಾಮ ಹೊಸ ಯೋಜನೆಗಳೊಂದಿಗೆ ಹಲವಾರು ಸ್ಟಾರ್ಟ್ಅಪ್ ಕಂಪನಿಗಳು ಇವಿ ಉತ್ಪಾದನೆಗೆ ಪ್ರವೇಶಿಸಿದ್ದು, ಮುಂಬೈ ಮೂಲದ ಇವಿ ಉತ್ಪಾದನಾ ಕಂಪನಿಯಾಗಿರುವ ಅರ್ಥ್ ಎನರ್ಜಿ ಕಂಪನಿಯು ಹೊಸ ಮಾದರಿಯ ಇವಿ ದ್ವಿಚಕ್ರ ವಾಹನಗಳೊಂದಿಗೆ ಗ್ರಾಹಕನ್ನು ಸೆಳೆಯುತ್ತಿದೆ.

ಸದ್ಯಕ್ಕೆ ಮುಂಬೈನಲ್ಲಿಯೇ ಹೊಸ ವಾಹನ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿರುವ ಅರ್ಥ್ ಎನರ್ಜಿ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ವಾಹನಗಳ ಉತ್ಪಾದನೆಗಾಗಿ ಗರಿಷ್ಠ ಶೇ.96ರಷ್ಟು ದೇಶಿಯ ಮಾರುಕಟ್ಟೆಯಲ್ಲಿ ಉತ್ಪಾದನೆಗೊಂಡ ಬಿಡಿಭಾಗಗಳನ್ನೇ ಬಳಕೆ ಮಾಡುತ್ತಿದೆ.

ಸೀಮಿತವಾದ ಮಾರುಕಟ್ಟೆ ಸೌಲಭ್ಯದೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿರುವ ಅರ್ಥ್ ಎನರ್ಜಿ ಕಂಪನಿಯು ಇದೀಗ ಜಿಂದಾಲ್ ಮೊಬಿಲಿಟ್ರಿಕ್ ಕಂಪನಿಯೊಂದಿಗೆ ಮತ್ತಷ್ಟು ಹೊಸ ಮಾರಾಟ ಮಳಿಗೆಗಳನ್ನು ತೆರೆಯಲು ಸಿದ್ದವಾಗುತ್ತಿದ್ದು, 2022ರ ಅಂತ್ಯಕ್ಕೆ ದೇಶದ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಮಾರಾಟ ಮಳಿಗೆಗಳನ್ನು ತೆರೆಯುವ ಯೋಜನೆ ರೂಪಿಸಿದೆ.

ಅರ್ಥ್ ಎನರ್ಜಿ ಕಂಪನಿಯು ವಿವಿಧ ಇವಿ ಸ್ಕೂಟರ್ ಮತ್ತು ಬೈಕ್ ಮಾದರಿಗಳ ಮಾರಾಟ ಆರಂಭಿಸಿದ ನಂತರ ಇದುವರೆಗೆ ಸುಮಾರು 50 ಸಾವಿರಕ್ಕೂ ಹೆಚ್ಚು ಗ್ರಾಹಕರಿಂದ ಬುಕಿಂಗ್ ಸ್ವಿಕರಿಸಿದ್ದು, ಸದ್ಯಕ್ಕೆ ದೇಶದ ಪ್ರಮುಖ ಹತ್ತು ರಾಜ್ಯಗಳಲ್ಲಿ ಕೆಲವು ಕೆಲವು ಮಾರಾಟ ಮಳಿಗೆಗಳನ್ನು ಹೊಂದಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ಹೊಸ ಗ್ಲೈಡ್ ಎಸ್‌ಎಕ್ಸ್ ಮತ್ತು ಗ್ಲೈಡ್ ಎಸ್‌ಎಕ್ಸ್ ಪ್ಲಸ್ ಸ್ಕೂಟರ್ ಬಿಡುಗಡೆಯ ಮೂಲಕ ಸದ್ಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳತ್ತಿದ್ದು, ಜಿಂದಾಲ್ ಮೊಬಿಲಿಟ್ರಿಕ್ ಕಂಪನಿಯೊಂದಿಗನ ಹೊಸ ಹೂಡಿಕೆಯೊಂದಿಗೆ ಮತ್ತಷ್ಟು ಹೊಸ ಇವಿ ಮಾದರಿಗಳನ್ನು ಬಿಡುಗಡೆ ಮಾಡಲಿದೆ.

ಹೊಸ ಗ್ಲೈಡ್ ಎಸ್‌ಎಕ್ಸ್ ಮತ್ತು ಗ್ಲೈಡ್ ಎಸ್‌ಎಕ್ಸ್ ಪ್ಲಸ್ ಎಲೆಕ್ಟ್ರಿಕ್ ಸ್ಕೂಟರ್‌ಗಳ ದರ ಮಾಹಿತಿ ಹಂಚಿಕೊಂಡಿರುವ ಅರ್ಥ್ ಎನರ್ಜಿ ಕಂಪನಿಯು ಹೊಸ ಸ್ಕೂಟರ್‌ಗಳನ್ನು ಮುಂದಿನ ಕೆಲವೇ ತಿಂಗಳುಗಳಲ್ಲಿ ವಿತರಣೆ ಆರಂಭಿಸಲಿದೆ.

ಹೊಸ ಗ್ಲೈಡ್ ಎಸ್‌ಎಕ್ಸ್ ಮತ್ತು ಗ್ಲೈಡ್ ಎಸ್‌ಎಕ್ಸ್ ಪ್ಲಸ್ ಇವಿ ಸ್ಕೂಟರ್ ಮಾದರಿಗಳು ವಿವಿಧ ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 78 ಸಾವಿರದಿಂದ ಟಾಪ್ ಎಂಡ್ ಮಾದರಿಯು ರೂ. 1 ಲಕ್ಷ ಬೆಲೆ ಹೊಂದಿದೆ.

ಗ್ಲೈಡ್ ಎಸ್‌ಎಕ್ಸ್ ಮತ್ತು ಗ್ಲೈಡ್ ಎಸ್‌ಎಕ್ಸ್ ಪ್ಲಸ್ ಇವಿ ಸ್ಕೂಟರ್ ಮಾದರಿಗಳು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಉತ್ತಮ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದ್ದು, ತಾಂತ್ರಿಕವಾಗಿ ಎರಡು ಸ್ಕೂಟರ್‌ಗಳು ಒಂದೇ ಆಗಿದ್ದರೂ ಸಹ ವಿಭಿನ್ನವಾದ ವಿನ್ಯಾಸವನ್ನು ಹೊಂದಿರಲಿವೆ.

ಹೊಸ ಸ್ಕೂಟರ್‌ಗಳಲ್ಲಿ ಅರ್ಥ್ ಎನರ್ಜಿ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ 3.9 kW ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಎಸ್ಎಕ್ಸ್ ಮಾದರಿಯ ಪ್ರತಿ ಚಾರ್ಜ್‌ಗೆ ಗರಿಷ್ಠ 150 ಕಿ.ಮೀ ಮೈಲೇಜ್ನೊಂದಿಗೆ ಪ್ರತಿ ಗಂಟೆಗೆ 25 ಕಿ.ಮೀ ಟಾಪ್ ಸ್ಪೀಡ್ ಹೊಂದಿದೆ.

ಹಾಗೆಯೇ ಎಸ್ಎಕ್ಸ್ ಪ್ಲಸ್ ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 100 ಕಿ.ಮೀ ಮೈಲೇಜ್ನೊಂದಿಗೆ ಪ್ರತಿ ಗಂಟೆಗೆ 90 ಕಿ.ಮೀ ಟಾಪ್ ಸ್ಪೀಡ್ ತಲುಪಬಹುದಾಗಿದ್ದು, ಫಾಸ್ಟ್ ಚಾರ್ಜಿಂಗ್ ಮೂಲಕ 40 ನಿಮಿಷಗಳಲ್ಲಿ ಮತ್ತು ಸಾಮಾನ್ಯ ಎಸಿ ಚಾರ್ಜರ್ ಮೂಲಕ 2 ಗಂಟೆ 30 ನಿಮಿಷದಲ್ಲಿ ಪೂರ್ಣ ಪ್ರಮಾಣದ ಚಾರ್ಜ್ ಮಾಡಬಹುದು.