Just In
- 1 hr ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 1 hr ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- 2 hrs ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- 2 hrs ago ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
Don't Miss!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಹಕ್ ಪಿ-14 ಎಲೆಕ್ಟ್ರಿಕ್ ಬೈಕ್ ಪ್ರಿ-ಬುಕಿಂಗ್ ಪ್ರಾರಂಭ: ಹೀಗೆ ಮಾಡಿದರೆ ಶೇ10 ರಿಯಾಯಿತಿ
ಎಲೆಕ್ಟ್ರಿಕ್ ವಾಹನ ತಯಾರಕ ನಹಕ್ ಮೋಟಾರ್ಸ್ ತನ್ನ ಮುಂಬರುವ ಹೈ-ಸ್ಪೀಡ್ ಎಲೆಕ್ಟ್ರಿಕ್ ಬೈಕ್ ನಹಕ್ ಪಿ-14 ಅನ್ನು ಕಾಯ್ದಿರಿಸಲು ಪ್ರಾರಂಭಿಸಿದೆ. ನಹಕ್ ಪಿ-14 ಗಾಗಿ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಬುಕಿಂಗ್‌ಗಳನ್ನು ಮಾಡಬಹುದು. ಇದಕ್ಕಾಗಿ ಆನ್‌ಲೈನ್ ವಿಂಡೋವನ್ನು ಮಾರ್ಚ್ 15 ರಿಂದ ಮಾರ್ಚ್ 30ರ ವರೆಗೆ ತೆರೆಯಲಾಗಿದೆ.
ಮಾಹಿತಿ ಪ್ರಕಾರ, ಕಂಪನಿಯು ಈ ವರ್ಷದ ಮೇ ನಿಂದ ಈ ಬೈಕ್ ವಿತರಣೆಯನ್ನು ಪ್ರಾರಂಭಿಸಲಿದೆ. ಈ ಬೈಕ್ ಬುಕ್ ಮಾಡಲು ಗ್ರಾಹಕರು ರೂ.11,000 ಟೋಕನ್ ಮೊತ್ತವನ್ನು ಪಾವತಿಸಬೇಕಾಗುತ್ತದೆ. ನಹಕ್ ಪಿ-14 ಹೈಸ್ಪೀಡ್ ಎಲೆಕ್ಟ್ರಿಕ್ ಬೈಕ್ ಬೆಲೆ 2.49 ಲಕ್ಷ ರೂ.(ಎಕ್ಸ್ ಶೋ ರೂಂ) ಇದೆ. ಕಂಪನಿ ನೀಡಿರುವ ಕಾಲಾವಧಿಯಲ್ಲಿ ಬೈಕ್ ಬುಕ್ ಮಾಡುವ ಗ್ರಾಹಕರಿಗೆ ಶೇಕಡಾ 10 ರಷ್ಟು ರಿಯಾಯಿತಿಯನ್ನು ಸಹ ನೀಡಲಾಗುತ್ತಿದೆ.
ನಹಕ್ ಪಿ-14 ಅನ್ನು ಮೊದಲ ಬಾರಿಗೆ ಆಟೋ ಎಕ್ಸ್ ಪೋ (2020) ನಲ್ಲಿ ಪ್ರದರ್ಶಿಸಲಾಗಿತ್ತು. ಗಂಟೆಗೆ 135 ಕಿಲೋಮೀಟರ್ ಗೂ ಹೆಚ್ಚಿನ ವೇಗವನ್ನು ಹೊಂದಿರುವ ಭಾರತದ ಮೊದಲ ಹೈಸ್ಪೀಡ್ ಎಲೆಕ್ಟ್ರಿಕ್ ಬೈಕ್ ಎಂದು ಕಂಪನಿ ಹೇಳಿಕೊಂಡಿದೆ. ಈ ಬೈಕ್‌ಗೆ 72ವಿ 60ಎಎಚ್ ಲಿಥಿಯಂ ಅಯಾನ್ ಬ್ಯಾಟರಿ ಅಳವಡಿಸಲಾಗಿದೆ.
ಸರಳ ಚಾರ್ಜರ್‌ನಿಂದ ಬ್ಯಾಟರಿಯನ್ನು 3 ಗಂಟೆಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಬಹುದು, ಫಾಸ್ಟ್ ಚಾರ್ಜರ್‌ನಿಂದ ಸಂಪೂರ್ಣವಾಗಿ ಚಾರ್ಜ್ ಮಾಡಲು ಕೇವಲ 30 ನಿಮಿಷಗಳು ಮಾತ್ರ ತೆಗೆದುಕೊಳ್ಳುತ್ತದೆ. ನಹಕ್ ಪಿ-14 ಹೈಸ್ಪೀಡ್ ಎಲೆಕ್ಟ್ರಿಕ್ ಬೈಕ್‌ನ ಪ್ರೀ-ಲಾಂಚ್-ಬುಕಿಂಗ್‌ಗೆ ಚಾಲನೆ ನೀಡಿದ ನಹಕ್ ಗ್ರೂಪ್‌ನ ಅಧ್ಯಕ್ಷ ಪ್ರವತ್ ನಹ್ಕ್, "ನಾವು ಉತ್ತಮ ಗುಣಮಟ್ಟದ ಎಲೆಕ್ಟ್ರಿಕ್ ವಾಹನಗಳನ್ನು ತಯಾರಿಸಲು ಬದ್ಧರಾಗಿದ್ದೇವೆ.
ಸಾಮಾನ್ಯವಾಗಿ ಎಲೆಕ್ಟ್ರಿಕ್ ವಾಹನಗಳು ಕಡಿಮೆ ವೇಗ ಮತ್ತು ಚಾರ್ಜಿಂಗ್ ಸಮಯಕ್ಕೆ ಆದ್ಯತೆ ನೀಡುವುದಿಲ್ಲ, ಆದರೆ ನಾವು ಈ ಸಮಸ್ಯೆಯನ್ನು ಪರಿಹರಿಸಿದ್ದೇವೆ ಎಂದರು. " ಕಂಪನಿಯು ಈ ಬೈಕಿನ ವ್ಯಾಪ್ತಿಯ ಬಗ್ಗೆ ಯಾವುದೇ ಮಾಹಿತಿಯನ್ನು ಅಧಿಕೃತವಾಗಿ ಹಂಚಿಕೊಂಡಿಲ್ಲವಾದರೂ, ಕಳೆದ ವರ್ಷ ಕಂಪನಿಯ ಅಧ್ಯಕ್ಷರು ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ಬೈಕ್ ಒಂದೇ ಚಾರ್ಜ್‌ನಲ್ಲಿ 150 ಕಿ.ಮೀ.ನಿಂದ 180 ಕಿ.ಮೀ. ಚಾಲನಾ ವ್ಯಾಪ್ತಿಯನ್ನು ನೀಡಬಹುದು ಎಂದು ಹೇಳಿದ್ದರು.
ಇನ್ನು ನಹಕ್ ಕಂಪನಿ ಹಲವು ಎಲೆಕ್ಟ್ರಿಕ್ ಮಾದರಿಗಳನ್ನು ಪರಿಚಯಿಸಿದ್ದು, ಭಾರತದಲ್ಲಿ ಸಣ್ಣ ಪ್ರಮಾಣದ ಸರಕು ಸಾಗಾಣಿಕೆಯಲ್ಲಿ ಹೆಸರು ಮಾಡಿರುವ ಟಿವಿಎಸ್ ಎಕ್ಸ್‌ಎಲ್ ಮಾದರಿಯಲ್ಲೇ ಸಂಪೂರ್ಣವಾಗಿ ಭಾರತೀಯ ನಿರ್ಮಿತ ನಹಕ್ ಎಕ್ಸಿಡೊ ಸೋಲೊವನ್ನು ಇ-ಮೊಪೆಡ್‌ನಲ್ಲಿ ಇತ್ತೀಚೆಗೆ ಬಿಡುಗಡೆ ಮಾಡಿದೆ.
ಈ ಎಲೆಕ್ಟ್ರಿಕ್ ದ್ವಿಚಕ್ರ ವಾಹನವು ಭಾರತದಲ್ಲಿ ಪ್ರಸಿದ್ದಿ ಪಡೆದಿರುವ ಟಿವಿಎಸ್ ಎಕ್ಸ್‌ಎಲ್ ಮೊಪೆಡ್ ಅನ್ನು ಪ್ರತಿಬಿಂಬಿಸುವಂತೆ ವಿನ್ಯಾಸಗೊಳಿಸಲಾಗಿದೆ. ಇದು ಎಕ್ಸಿಡೊ ಸೋಲೊ ಮೊಪೆಡ್ ಎಲೆಕ್ಟ್ರಿಕ್ ಬೈಕ್ ಆಗಿದ್ದು, ಈ ವಾಹನವು ಇದೀಗ ಮಾರಾಟಕ್ಕೆ ಲಭ್ಯವಿದೆ. ಇದು ಸಂಪೂರ್ಣವಾಗಿ ಭಾರತದಲ್ಲಿ ತಯಾರಿಸಿರುವ ಎಲೆಕ್ಟ್ರಿಕ್ ದ್ವಿಚಕ್ರ ವಾಹನವಾಗಿದೆ.
ಹರಿಯಾಣದ ಫರಿದಾಬಾದ್ ಮೂಲದ ನಹಕ್ ಮೋಟಾರ್ಸ್ ಈ ವಾಹನವನ್ನು ಮಾರಾಟಕ್ಕೆ ತಂದಿದೆ. ಇದರ ಪರಿಚಯಾತ್ಮಕ ಬೆಲೆ ರೂ. 85,999ಕ್ಕೆ ನಿಗದಿಪಡಿಸಲಾಗಿದೆ. ಇದು ಕೇವಲ ಎಕ್ಸ್ ಶೋರೂಮ್ ಬೆಲೆಯಾಗಿದೆ. ಇದರ ಸಂಪೂರ್ಣ ಕಾರ್ಯ ವೈಖರಿಯನ್ನು ಕಂಪನಿಯ ಅಧಿಕೃತ ವೆಬ್ ಪೇಜ್ ಮೂಲಕ ತಿಳಿಸಲಾಗುತ್ತಿದೆ. ಜತೆಗೆ ವಿತರಕರ ಮೂಲಕ ಬುಕ್ಕಿಂಗ್ ಕಾರ್ಯ ನಡೆಯಲಿದೆ. ಈ ದ್ವಿಚಕ್ರ ವಾಹನವನ್ನು ಏಪ್ರಿಲ್‌ನಿಂದ ಗ್ರಾಹಕರಿಗೆ ತಲುಪಿಸುವುದಾಗಿ ಕಂಪನಿ ತಿಳಿಸಿದೆ.