Just In
- 9 hrs ago
ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು...
- 11 hrs ago
ಮೇಡ್ ಇನ್ ಇಂಡಿಯಾ ಯುದ್ಧ ವಾಹನಗಳ ಅಬ್ಬರ: ಮತ್ತಷ್ಟು ಬಲಿಷ್ಟಗೊಂಡ ಭಾರತೀಯ ಸೇನೆ!
- 13 hrs ago
ವಾರದ ಸುದ್ದಿಗಳು: ಎಕ್ಸ್ಯುವಿ700 ಮಾದರಿಗೆ ಸೇಫರ್ ಚಾಯ್ಸ್ ಪ್ರಶಸ್ತಿ, ಸುರಕ್ಷತೆಯಲ್ಲಿ ಮುಗ್ಗರಿಸಿದ ಕಿಯಾ ಕಾರೆನ್ಸ್..
- 1 day ago
ಶೀಘ್ರದಲ್ಲಿ ಜಾರಿಗೆ ಬರಲಿದೆ ದೇಶಿಯ ಮಾರುಕಟ್ಟೆಯಲ್ಲಿನ ಕಾರುಗಳಿಗೆ ಭಾರತ್ ಎನ್ಸಿಎಪಿ ಕ್ರ್ಯಾಶ್ ಟೆಸ್ಟ್
Don't Miss!
- News
ಶಿವಸೇನೆ-ಬಿಜೆಪಿ ಮೈತ್ರಿ ಸುಳಿವು ಕೊಟ್ಟ ಕರ್ನಾಟಕದ ಸಚಿವ!
- Sports
ಭಾರತ ತಂಡದ ಭವಿಷ್ಯದ ನಾಯಕ ನಿಶ್ಚಿತವಾಗಿಯೂ ಈತನೇ ಎಂದ ದಿಲೀಪ್ ವೆಂಗ್ಸರ್ಕಾರ್
- Movies
ತಾಯಿ ಆಗಿಲ್ಲ ಏಕೆ ಎಂದವರಿಗೆ ತಕ್ಕ ಉತ್ತರ ಕೊಟ್ಟ ನಟಿ
- Finance
Gold Rate Today: ನಿಮ್ಮ ನಗರದಲ್ಲಿ ಜೂ.26ರಂದು ಚಿನ್ನದ ಬೆಲೆ ಎಷ್ಟಿದೆ ನೋಡಿ
- Technology
ಬೇರೆಯವರು ನಿಮ್ಮ ನೆಟ್ಫ್ಲಿಕ್ಸ್ ಖಾತೆ ಬಳಸುತ್ತಿದ್ದರೆ ತಿಳಿಯಲು ಹೀಗೆ ಮಾಡಿ?
- Education
PGCIL Recruitment 2022 : 32 ಡೆಪ್ಯುಟಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಜೂನ್ 26 ರಿಂದ ಜುಲೈ 2ರ ವಾರ ಭವಿಷ್ಯ: ಈ ರಾಶಿಯ ವ್ಯಾಪಾರಿಗಳು ಜಾಗರೂಕತೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ
- Travel
ಕರ್ನಾಟಕದಲ್ಲಿರುವ ಈ 5 ಹೆಸರಾಂತ ವಿಷ್ಣುದೇವರ ದೇವಾಲಯಗಳಿಗೆ ಭೇಟಿ ಕೊಟ್ಟು ಧನ್ಯರಾಗಿ!
ಹೊಸ ನವೀಕರಣಗಳೊಂದಿಗೆ ಬಿಡುಗಡೆಗೆ ಸಜ್ಜಾದ 2022ರ ಕೆಟಿಎಂ ಆರ್‌ಸಿ 390 ಬೈಕ್
ಆಸ್ಟ್ರಿಯಾದ ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಕೆಟಿಎಂ (KTM) ತನ್ನ 2022ರ ಕೆಟಿಎಂ ಆರ್‌ಸಿ 390 ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ 2022ರ ಕೆಟಿಎಂ ಆರ್‌ಸಿ 390 (KTM RC 390) ಬೈಕ್ ಹಲವಾರು ಹೊಸ ನವೀಕರಣಗಳೊಂದಿಗೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ.

ಕೆಟಿಎಂ ಇಂಡಿಯಾ ತನ್ನ ವೆಬ್‌ಸೈಟ್‌ನಲ್ಲಿ 2022ರ ಆರ್‌ಸಿ 390 ಬೈಕ್ ಬಿಡುಗಡೆಗೆ ಮುಂಚಿತವಾಗಿ ಪಟ್ಟಿ ಮಾಡಿದೆ. ಇನ್ನು ಇತ್ತೀಚಿನ ವರದಿಯ ಪ್ರಕಾರ, ಬಜಾಜ್ ಆಟೋ 2022ರ ಕೆಟಿಎಂ ಆರ್‌ಸಿ 390 ಗಾಗಿ ಅನುಮೋದನೆ ದಾಖಲೆಗಳನ್ನು ಸಲ್ಲಿಸಿದೆ. ಕಂಪನಿಯು ಶೀಘ್ರದಲ್ಲೇ ಅಧಿಕೃತ ಬಿಡುಗಡೆ ಮಾಡಬಹುದೆಂದು ಈ ದಾಖಲೆಗಳು ಸೂಚಿಸುತ್ತವೆ. ಆದರೆ ಅಧಿಕೃತ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿಲ್ಲ, ಈ ಇಂಡಿಯಾ-ಸ್ಪೆಕ್ ಮಾಡೆಲ್ ಸ್ವೀಕರಿಸುವ ಎಲ್ಲಾ ವೈಶಿಷ್ಟ್ಯಗಳನ್ನು ಕಂಪನಿಯು ಪಟ್ಟಿ ಮಾಡಿದೆ.

ಆದರೆ ಈ ಹೊಸ ಕೆಟಿಎಂ ಆರ್‌ಸಿ 390 ಸೂಪರ್‌ಸ್ಪೋರ್ಟ್ ಬೈಕ್ ಈ ತಿಂಗಳಲ್ಲಿ ಅಥವಾ ಮುಂದಿನ ತಿಂಗಳಿನಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ..ಹೊಸ ಕೆಟಿಎಂ ಆರ್‌ಸಿ 390 ಬೈಕ್ ಕಳೆದ ವರ್ಷ ಅಂತರರಾಷ್ತ್ರೀಯ ಮಾರುಕಟ್ಟೆಗಳನ್ನು ಪ್ರವೇಶಿಸಿದೆ. ಭಾರತದಲ್ಲಿನ ಅಭಿಮಾನಿಗಳು ಈ ಬೈಕ್ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿದ್ದಾರೆ.

ಈ ಹೊಸ ಕೆಟಿಎಂ ಆರ್‌ಸಿ 390 ಬೈಕ್ ಹಿಂದಿನ ಮಾದರಿಗಿಂತ ಹೆಚ್ಚು ತೀಕ್ಷ್ಣವಾದ ವಿನ್ಯಾಸವನ್ನು ಹೊಂದಿದೆ. ಮುಂಭಾಗದಲ್ಲಿ, ನಾವು ಫೇರಿಂಗ್-ಮೌಂಟೆಡ್ ಟರ್ನ್-ಇಂಡಿಕೇಟರ್‌ಗಳ ಜೊತೆಗೆ ಹೊಸ ಹೆಡ್‌ಲ್ಯಾಂಪ್ ವಿನ್ಯಾಸವನ್ನು ನೋಡುತ್ತೇವೆ. ಬೈಕು ಹೊಸ ಮುಂಭಾಗದ ಫೇರಿಂಗ್ ಅನ್ನು ಹೊಂದಿರಲಿದೆ.

ಇದರ ಜೊತೆಗೆ ವಿಭಿನ್ನ ಇಂಧನ ಟ್ಯಾಂಕ್ ಅನ್ನು ಹೊಂದಿದೆ. ಮೋಟಾರ್‌ಸೈಕಲ್ ಹೊಸ ಸ್ಪ್ಲಿಟ್-ಸೀಟ್ ಸೆಟಪ್ ಅನ್ನು ಸಹ ಪಡೆಯುತ್ತದೆ, ಆದರೆ 17-ಇಂಚಿನ ಅಲಾಯ್ ವ್ಹೀಲ್ ಗಳು ಹೊಸ ವಿನ್ಯಾಸವನ್ನು ಹೊಂದಿವೆ ಮತ್ತು ಮೊದಲಿಗಿಂತ ಹಗುರವಾಗಿರುತ್ತವೆ.

ನ್ಯೂ ಜನರೇಷನ್ ಕೆಟಿಎಂ ಆರ್‌ಸಿ 390 ಬೈಕ್ ಅದೇ 373.2 ಸಿಸಿ, ಸಿಂಗಲ್ ಸಿಲಿಂಡರ್, ಲಿಕ್ವಿಡ್ ಕೂಲ್ಡ್, ಫ್ಯೂಯಲ್-ಇಂಜೆಕ್ಟ್ ಎಂಜಿನ್ ಹೊಂದಿರುತ್ತದೆ. ಈ ಎಂಜಿನ್ 43.5 ಬಿಹೆಚ್‍ಪಿ ಪವರ್ ಮತ್ತು 37 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಇದರೊಂದಿಗೆ ಸ್ಲಿಪ್ಪರ್ ಮತ್ತು ಅಸಿಸ್ಟ್ ಕ್ಲಚ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತದೆ.

ಇನ್ನು ಈ ಕೆಟಿಎಂ ಆರ್‌ಸಿ 390 ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಫೋರ್ಕ್‌ಗೆ ಹೊಂದಾಣಿಕೆ ಮಾಡಬಹುದಾದ ಕಂಪ್ರೆಷನ್ ಮತ್ತು ರಿಬೌಂಡ್ ಡ್ಯಾಂಪಿಂಗ್ ಅನ್ನು ಒಳಗೊಂಡಿದೆ.ಇನ್ನು ಹಿಂಭಾಗದಲ್ಲಿ ಪ್ರಿ-ಲೋಡ್ ಹೊಂದಾಣಿಕೆಯ ಸೆಟಪ್ ಅನ್ನು ಒಳಗೊಂಡಿರುತ್ತದೆ.

ಇನ್ನು ಇದರೊಂದಿಗೆ ಪ್ರಮುಖವಾಗಿ ಈ ಕೆಟಿಎಂ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗ 320 ಎಂಎಂ ಮತ್ತು ಹಿಂಭಾಗದಲ್ಲಿ 230 ಎಂಎಂ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ. ಇದರೊಂದಿಗೆ ಹೆಚ್ಚಿನ ಸುರಕ್ಷತೆಗಾಗಿ ಡ್ಯುಯಲ್-ಚಾನೆಲ್ ಬಾಷ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತದೆ. ಇದು ಕಾರ್ನರ್ ಗಳಲ್ಲಿ ಅಥವಾ ಹೆಚ್ಚಿನ ವೇಗದಲ್ಲಿ ಬ್ರೇಕ್ ಮಾಡುವಾಗ ಅತ್ಯುತ್ತಮ ಸುರಕ್ಷತೆಯನ್ನು ಖಚಿತಪಡಿಸುತ್ತದೆ

ನ್ಯೂ ಜನರೇಷನ್ ಕೆಟಿಎಂ ಆರ್‌ಸಿ 390 ಬೈಕಿನಲ್ಲಿ ಟ್ರಾಕ್ಷನ್ ಕಂಟ್ರೋಲ್, ಕಾರ್ನರ್ ಮಾಡುವ ABS (ಡ್ಯುಯಲ್-ಚಾನೆಲ್, ಹೊಂದಾಣಿಕೆ) ಮತ್ತು ಹೊಂದಾಣಿಕೆ ಮಾಡಬಹುದಾದ ಕ್ಲಿಪ್-ಆನ್ ಹ್ಯಾಂಡಲ್‌ಬಾರ್‌ಗಳಂತಹ ಕೆಲವು ಹೊಸ ವೈಶಿಷ್ಟ್ಯಗಳನ್ನು ಮೋಟಾರ್‌ಸೈಕಲ್ ಪಡೆದುಕೊಳ್ಳಲು ನಾವು ನಿರೀಕ್ಷಿಸುತ್ತೇವೆ. ಹೆಡ್‌ಲ್ಯಾಂಪ್ ಅನ್ನು ಈಗ ಆಲ್-ಎಲ್‌ಇಡಿ ಯುನಿಟ್ ಆಗಿ ಅಪ್‌ಗ್ರೇಡ್ ಮಾಡಲಾಗುತ್ತದೆ, ಆದರೆ ಟರ್ನ್ ಇಂಡಿಕೇಟರ್‌ಗಳು ಮತ್ತು ಟೈಲ್‌ಲೈಟ್ ಈಗಾಗಲೇ ಎಲ್‌ಇಡಿ ಯುನಿಟ್ ಗಳಾಗಿದೆ,

ಈ ಬೈಕಿನಲ್ಲಿ TFT ಇನ್ಸ್ ಟ್ರೂಮೆಂಟ್ ಕ್ಲಸ್ಟರ್ (ಬ್ಲೂಟೂತ್-ಸಕ್ರಿಯಗೊಳಿಸಿದ ಸ್ಮಾರ್ಟ್‌ಫೋನ್ ಸಂಪರ್ಕದೊಂದಿಗೆ) ಬದಲಾಗದೆ ಮುಂದುವರಿಯುತ್ತದೆ. ವರದಿಗಳ ಪ್ರಕಾರ, ಇಂಟರ್ನ್ಯಾಷನಲ್ ಆವೃತ್ತಿಯಂತೆಯೇ ಹೊಂದಾಣಿಕೆ ಮಾಡಬಹುದಾದ ಮುಂಭಾಗ ಸಸ್ಪೆಂಕ್ಷನ್ ಕೂಡ ಲಭ್ಯವಿರಬಹುದು.

ಇದರ ಜೊತೆಗೆ ಕೆಟಿಎಂ ಕಂಪನಿಯು ತನ್ನ ಬಹುನಿರೀಕ್ಷಿತ 2022ರ 390 ಅಡ್ವೆಂಚರ್ ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ 2022ರ ಕೆಟಿಎಂ 390 ಅಡ್ವೆಂಚರ್ ಬೈಕ್ ಹೊಸ ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ. 2022ರ ಕೆಟಿಎಂ 390 ಅಡ್ವೆಂಚರ್ ಬೈಕ್ ಇತ್ತೀಚೆಗೆ ಯುಎಸ್ ಮತ್ತು ಉತ್ತರ ಅಮೆರಿಕಾದ ಮಾರುಕಟ್ಟೆಗಳಲ್ಲಿ ಬಿಡುಗದೆಗೊಳಿಸಲಾಗಿದೆ. 2022ರ ಕೆಟಿಎಂ 390 ಅಡ್ವೆಂಚರ್ ಬೈಕ್ ಮೊದಲ ಬ್ಯಾಚ್ ಭಾರತದಾದ್ಯಂತ ಡೀಲರ್ ಶೋರೂಮ್‌ಗಳಿಗೆ ಆಗಮಿಸಲು ಪ್ರಾರಂಭಿಸಿದೆ.

ಪ್ರಪಂಚದಾದ್ಯಂತದ ಕೆಟಿಎಂ ಸರಣಿಯಿಂದ 390 ಸರಣಿಯವರೆಗಿನ ಮಾದರಿಗಳನ್ನು ಭಾರತದಲ್ಲಿ ಬಜಾಜ್ ಆಟೋ ತನ್ನ ಚಕನ್-ಆಧಾರಿತ ಘಟಕದಲ್ಲಿ ತಯಾರಿಸುತ್ತದೆ. ಆದ್ದರಿಂದ ಯುಎಸ್ ನಲ್ಲಿ ಬಿಡುಗಡೆ ಮಾಡಲಾದ ಮಾದರಿಯು ಭಾರತದಿಂದ ರಫ್ತು ಮಾಡುವ ಸಾಧ್ಯತೆಯಿದೆ. 2022ರ ಕೆಟಿಎಂ 390 ಅಡ್ವೆಂಚರ್ ಬೈಕ್ ಸೂಕ್ಷ್ಮ ಮತ್ತು ಗಮನಿಸಬಹುದಾದ ನವೀಕರಣಗಳೊಂದಿಗೆ ಬರುತ್ತದೆ. ಈ ಅಡ್ವೆಂಚರ್ ಟೂರರ್‌ನಲ್ಲಿನ ದೃಶ್ಯ ನವೀಕರಣಗಳು ಡಾಕರ್ ವಿಜೇತ KTM ಫ್ಯಾಕ್ಟರಿ ರ್ಯಾಲಿ ಯಂತ್ರಗಳಿಗೆ ಅನುಗುಣವಾಗಿರುತ್ತವೆ. ಇದರ ಒಟ್ಟಾರೆ ವಿನ್ಯಾಸವು ಒಂದೇ ಆಗಿರುತ್ತದೆ, ಇದು ತಿಳಿದಿರುವ ಅದೇ ಒರಟಾದ ವಿನ್ಯಾಸ ಶೈಲಿಯನ್ನು ಹೊಂದಿದೆ.

ಹೊಸ ವಿನ್ಯಾಸದ ನ್ಯೂ ಜನರೇಷನ್ ಆರ್‌ಸಿ ಬೈಕ್‌ಗಳು ಪ್ರಸ್ತುತ ತಲೆಮಾರಿಗೆ ಹೋಲಿಸಿದರೆ ಸಂಪೂರ್ಣವಾಗಿ ವಿಭಿನ್ನ ಶೈಲಿಯನ್ನು ಹೊಂದಿದೆ. ಈ ನ್ಯೂ ಜನರೇಷನ್ ಬೈಕ್‌ಗಳು ಮಾರಾಟದಲ್ಲಿ ಕೆಟಿಎಂ ಕಂಪನಿಗೆ ಹೆಚ್ಚಿನ ಕೊಡುಗೆಯನ್ನು ನೀಡಬಹುದು. ಇದರೊಂದಿಗೆ ನ್ಯೂ ಜನರೇಷನ್ ಕೆಟಿಎಂ ಆರ್‌ಸಿ 390 ಬೈಕ್ ಕೂಡ ಹೊಸ ಬದಲಾವಣೆಗಳೊಂದಿಗೆ ಭಾರತೀಯ ಮಾರುಕಟ್ಟೆಯನ್ನು ಶೀಘ್ರದಲ್ಲೇ ಪ್ರವೇಶಿಸಲಿದೆ.