Just In
- 9 hrs ago
ಕ್ರ್ಯಾಶ್ ಟೆಸ್ಟ್ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ ಹೊಸ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು
- 9 hrs ago
ಕೇವಲ 40 ಸಾವಿರ ರೂ. ಬೆಲೆಗೆ ಬಿಡುಗಡೆಯಾಗಿದೆ 100 ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್
- 10 hrs ago
ಎರ್ಟಿಗಾದಲ್ಲಿ ಹೊಸ ಸಿಎನ್ಜಿ ರೂಪಾಂತರಗಳನ್ನು ಪರಿಚಯಿಸಲು ಸಜ್ಜಾದ ಮಾರುತಿ ಸುಜುಕಿ
- 11 hrs ago
ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಯಮಹಾ ಎಂಟಿ-15 ಬೈಕ್
Don't Miss!
- Lifestyle
Today Rashi Bhavishya: ಗುರುವಾರದ ದಿನ ಭವಿಷ್ಯ: ಕರ್ಕ, ಕನ್ಯಾ, ಕುಂಭ, ಮೀನ ರಾಶಿಯವರಿಗೆ ಉತ್ತಮ ದಿನ
- Sports
IPL 2022: ಕೆಎಲ್ ರಾಹುಲ್ ಹೋರಾಟ ವ್ಯರ್ಥ, ಲಕ್ನೋಗೆ ಮಣ್ಣು ಮುಕ್ಕಿಸಿದ ಆರ್ಸಿಬಿ ಟ್ರೋಫಿ ಕನಸು ಜೀವಂತ
- News
ವಿಮಾನ ಇಂಧನ ತೆರಿಗೆ ಕಡಿತ ಮಾಡುತ್ತಾ ಕೇಂದ್ರ ಸರ್ಕಾರ?
- Movies
ಹಿಜಾಬ್ ಧರಿಸಿ ಮುಸ್ಲಿಂ ಮಹಿಳೆಯರ ಪಾತ್ರ ಮಾಡುತ್ತಿರುವ ಸ್ಟಾರ್ ನಟಿಯರಿವರು
- Finance
ಮೇ 25ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Technology
ಅಪ್ಲಿಕೇಶನ್ ಡೆವಲಪರ್ಗಳಿಗೆ ಮತ್ತೊಮ್ಮೆ ಸಂದೇಶ ಕಳುಹಿಸಿದ ಆಪಲ್ ಕಂಪೆನಿ!
- Education
ESIC MTS 2022 : ಫೇಸ್ I ಫಲಿತಾಂಶ ಮತ್ತು ಫೇಸ್ II ಪ್ರವೇಶ ಪತ್ರ ಪ್ರಕಟ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ ಬೆನೆಲ್ಲಿ ಲಿಯಾನ್‍ಸಿನೊ 500 ಬೈಕ್
ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಬೆನೆಲ್ಲಿ ಇಂಡಿಯಾ ತನ್ನ ಬಿಎಸ್-6 ಲಿಯಾನ್‍ಸಿನೊ 500 ಬೈಕಿನ ಬೆಲೆಯನ್ನು ಪರಿಷ್ಕರಿಸಿದೆ. ಇದೀಗ ಈ ಬೆನೆಲ್ಲಿ ಲಿಯಾನ್‍ಸಿನೊ 500 ಮಿಡಲ್ ವೇಟ್ ಸ್ಟ್ರೀಟ್ ಸ್ಕ್ರ್ಯಾಂಬ್ಲರ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ತುಸು ದುಬಾರಿಯಾಗಿದೆ.

ಬೆನೆಲ್ಲಿ ಲಿಯಾನ್‍ಸಿನೊ 500 ಬೈಕಿಗೆ ಈ ಹಿಂದೆ ಬೆಲೆಯು ರೂ.4,69,900 ಆಗಿತ್ತು. ಇದೀಗ ಬೆಲೆ ಏರಿಕಯ ಬಳಿಕ, ಬೆನೆಲ್ಲಿ ಲಿಯಾನ್‍ಸಿನೊ 500 ಬೈಕಿನ ಬೆಲೆಯು ರೂ.4,96,000 ಗಳಾಗಿದೆ, ಈ ಬೈಕ್ ಸ್ಟೀಲ್ ಗ್ರೇ ಮತ್ತು ಲಿಯೊನ್ಸಿನೊ ರೆಡ್ ಎಂಬ ಎರಡು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ. ಇದೀಗ ಬೆನೆಲ್ಲಿ ಲಿಯಾನ್‍ಸಿನೊ 500 ಸ್ಟೀಲ್ ಗ್ರೇ ಬಣ್ಣದ ಮಾದರಿಯ ಬೆಲೆಯು ರೂ.4,96,000 ಗಳಾದರೆ, ಲಿಯೊನ್ಸಿನೊ ರೆಡ್ ಬಣ್ಣದ ಮಾದರಿಯ ಬೆಲೆಯು ರೂ.5,10,000 ಗಳಾಗಿದೆ.

ಬೆಲೆ ಏರಿಕೆಯನ್ನು ಹೊರತುಪಡಿಸಿ ಉಳಿದಂತೆ ಯವುದೇ ಬದಲಾವಣೆಗಳನ್ನು ಹೊಂದಿಲ್ಲ. ಈ ಬೆನೆಲ್ಲಿ ಲಿಯಾನ್‍ಸಿನೊ 500 ಬೈಕಿನಲ್ಲಿ 499ಸಿಸಿ ಪ್ಯಾರಲಲ್ ಟ್ವಿನ್ ಲಿಕ್ವಿಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 8500 ಆರ್‌ಪಿಎಂನಲ್ಲಿ 47 ಬಿಹೆಚ್‌ಪಿ ಪವರ್ ಮತ್ತು 4500 ಆರ್‌ಪಿಎಂನಲ್ಲಿ 46 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸವ ಸಾಮರ್ಥ್ಯವನ್ನು ಹೊಂದಿದೆ.

ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಇನ್ನು ಈ ಬೆನೆಲ್ಲಿ ಲಿಯಾನ್‍ಸಿನೊ 500 ಬೈಕ್ ರೆಟ್ರೊ ಸ್ಕ್ರ್ಯಾಂಬ್ಲರ್ ಶೈಲಿಯ ವಿನ್ಯಾಸವನ್ನು ಹೊಂದಿದೆ. ಈ ಮಿಡಲ್ ವೇಟ್ ಸ್ಟ್ರೀಟ್ ಸ್ಕ್ರ್ಯಾಂಬ್ಲರ್ ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿದೆ.

ಈ ಬೆನೆಲ್ಲಿ ಲಿಯಾನ್‍ಸಿನೊ 500 ಬೈಕಿನಲ್ಲಿ ಹಿಂದಿನ ಮಾದರಿಯಲ್ಲಿ ಇದ್ದ ಅದೇ ಫೀಚರ್ ಗಳನ್ನು ಮುಂದುವರೆಸಲಾಗಿದೆ. ಇನ್ನು ಈ ಬೈಕಿನಲ್ಲಿ 17 ಇಂಚಿನ ಅಲಾಯ್ ವ್ಹೀಲ್ ಗಳನ್ನು ಅಳವಡಿಸಲಾಗಿದೆ. ಇನ್ನು ಈ ಬೈಕಿನಲ್ಲಿ ಪೂರ್ಣ ಪ್ರಮಾಣದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಈ ಕ್ಲಸ್ಟರ್ ಓಡೋ ಮೀಟರ್, ಫ್ಯೂಯಲ್ ಗೇಜ್, ಸ್ಪೀಡ್ ಮತ್ತು ಇತರ ಮಾಹಿತಿಗಳನ್ನು ಪ್ರದರ್ಶಿಸುತ್ತದೆ.

ಬಿಎಸ್-6 ಬೆನೆಲ್ಲಿ ಲಿಯಾನ್‍ಸಿನೊ 500 ಬೈಕಿನ ಸ್ಟೈಲಿಂಗ್ ಬಗ್ಗೆ ಹೇಳುವುದಾದರೆ, ರೌಂಡ್ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಲೋ ಸೆಟ್ ಹ್ಯಾಂಡಲ್‌ಬಾರ್, ಹಿಂಭಾಗದಲ್ಲಿ ಮಿನಿಮಲ್ ಪ್ಯಾನೆಲ್ ಮತ್ತು ಮುಂಭಾಗದ ಫೆಂಡರ್‌ನಲ್ಲಿ ಮೆಟಾಲಿಕ್ ಆರ್ನಾಮೆಂಟ್‍ಗಳಿವೆ. ಇದರಂದಿಗೆ ಎಲ್ಇಡಿ ಡಿಆರ್‍ಎಲ್ ಹಾಗೂ ಎಲ್ಇಡಿ ಟರ್ನ್ ಇಂಡಿಕೇಟರ್‍ಗಳನ್ನು ಒಳಗೊಂಡಿದೆ.

ಸ್ಕ್ರ್ಯಾಂಬ್ಲರ್ ಶೈಲಿಯ ಲಿಯಾನ್‍ಸಿನೊ 500 ಬೈಕ್ ಟ್ಯೂಬುಲರ್ ಸ್ಟೀಲ್ ಟ್ರೆಲ್ಲಿಸ್ ಫ್ರೇಂಗಳನ್ನು ಹೊಂದಿದೆ. ಲಿಯಾನ್‍ಸಿನೊ 500 ಬೈಕಿನ ಸಸ್ಪೆಂಕ್ಷನ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಅಪ್‌ಸೈಡ್ ಡೌನ್ 50 ಎಂಎಂ ಯುಎಸ್‌ಡಿ ಫೋರ್ಕ್ಸ್ ಹಾಗೂ ಹಿಂಭಾಗದಲ್ಲಿ ಮೊನೊ ಶಾಕ್ ಸೆಟಪ್ ಅನ್ನು ಹೊಂದಿದೆ. ಇವುಗಳು ಪ್ರಿ ಲೋಡ್ ಅಡ್ಜಸ್ಟ್ ಮೆಂಟ್ ಹೊಂದಿವೆ.

ಇನ್ನು ಸುರಕ್ಷತೆಯಲ್ಲಿ ಪ್ರಮುಖ ಪಾತ್ರವಹಿಸುವ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 320 ಎಂಎಂ ಟ್ವಿನ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 260 ಎಂಎಂ ಡಿಸ್ಕ್ ಗಳಿವೆ. ಇದರೊಂದಿಗೆ ಹೆಚ್ಚಿನ ಸುರಕ್ಷತೆಗಾಗಿ ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಇದರೊಂದಿಗೆ ಬೆನೆಲ್ಲಿ ತನ್ನ ಟಿಆರ್‌ಕೆ 251 ಕ್ವಾರ್ಟರ್-ಲೀಟರ್ ಅಡ್ವೆಂಚರ್ ಟೂರರ್ ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಇದೀಗ ಬೆನೆಲ್ಲಿ ಕಂಪನಿಯು ಈ ಟಿಆರ್‌ಕೆ 251 ಬೈಕಿನ ಬೆಲೆಯನ್ನು ಹೆಚ್ಚಿಸಿದೆ.

ಈ ಹೊಸ ಬೆನೆಲ್ಲಿ ಟಿಆರ್‌ಕೆ 251 ಅಡ್ವೆಂಚರ್ ಟೂರರ್ ಬೈಕ್ ಅನ್ನು ಎಕ್ಸ್ ಶೋರೂಂ ಪ್ರಕಾರ ರೂ.2.51 ಲಕ್ಷ ಬೆಲೆಯಲ್ಲಿ ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ಈ ಬೈಕಿನ ಬೆಲೆಯನ್ನು ರೂ.3,000 ವರೆಗೆ ಬೆಲೆಯನು ಹೆಚ್ಚಿಸಿದೆ. ಇನ್ನು ಬೆನೆಲ್ಲಿ ಕಂಪನಿಯು ಈ ಹೊಸ ಟಿಆರ್‌ಕೆ 251 ಅಡ್ವೆಂಚರ್ ಬೈಕ್ ಖರೀದಿಗಾಗಿ ಬುಕ್ಕಿಂಗ್ ಅನ್ನು ಈಗಾಗಲೇ ಪ್ರಾರಂಭಿಸಿದ್ದಾರೆ. ಈ ಹೊಸ ಎಂಟ್ರಿ-ಲೆವೆಲ್ ಅಡ್ವೆಂಚರ್ ಟೂರರ್ ಬೈಕ್ ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತ ರೂ.6,000 ಪಾವತಿಸಿ ಆನ್‌ಲೈನ್ ಅಥವಾ ಭಾರತದಾದ್ಯಂತ ಅಧಿಕೃತ ಡೀಲರ್‌ಶಿಪ್‌ಗಳ ಮೂಲಕ ಬುಕ್ಕಿಂಗ್ ಮಾಡಿಕೊಳ್ಳಬಹುದು.

ಅಡ್ವೆಂಚರ್ ಬೈಕ್ ಪ್ರಸ್ತುತ ಭಾರತದಲ್ಲಿ ಬೆನೆಲ್ಲಿಯ ಅತ್ಯಂತ ಕೈಗೆಟುಕುವ ಮಾದರಿಯಾಗಿದೆ. ಈ ಹೊಸ ಬೆನೆಲ್ಲಿ ಟಿಆರ್‌ಕೆ 251 ಅಡ್ವೆಂಚರ್ ಟೂರರ್ ಬೈಕ್ ಸಾಕಷ್ಟು ಸ್ಟೈಲಿಂಗ್ ಅಂಶವು ಟಿಆರ್‌ಕೆ 502 ಮಾದರಿಯಿಂದ ಎರವಲು ಪಡೆದುಕೊಂಡಿದೆ. ಈ ಕ್ವಾರ್ಟರ್-ಲೀಟರ್ ಬೈಕಿನಲ್ಲಿ ಇದು ದೊಡ್ಡ ವಿಂಡ್‌ಸ್ಕ್ರೀನ್, ಫ್ರಂಟ್ ಹೆವಿ ಕ್ವಾರ್ಟರ್ ಫೇರಿಂಗ್, ತೆರೆದ ಟ್ರೆಲ್ಲಿಸ್ ಫ್ರೇಮ್ ಮತ್ತು ಸ್ಕಲಪಟಡ್ ಫ್ಯೂಯಲ್ ಟ್ಯಾಂಕ್‌ನಂತಹ ಸಿಗ್ನೇಚರ್ ಅಡ್ವೆಂಚರ್ ಸ್ಟೈಲಿಂಗ್ ಅಂಶಗಳನ್ನು ಪಡೆಯುತ್ತದೆ.

ಇನ್ನು ಬೆನೆಲ್ಲಿ ಟಿಆರ್‌ಕೆ 251 ಅಡ್ವೆಂಚರ್ ಟೂರರ್ ಬೈಕ್ ಮುಂಭಾಗ ಮತ್ತು ಬದಿಯ ಫೇರಿಂಗ್ ಮತ್ತು ಟೈಲ್ ವಿಭಾಗದಲ್ಲಿ ಸ್ಪೋರ್ಟಿ ಗ್ರಾಫಿಕ್ಸ್ ನಿಂದ ಗೋಚರಿಸುತ್ತದೆ. ಅಗಲ ಮತ್ತು ಎತ್ತರದ ಹ್ಯಾಂಡಲ್‌ಬಾರ್‌ಗಳು ಸೆಂಟರ್-ಸೆಟ್ ಫುಟ್‌ಪೆಗ್‌ಗಳನ್ನು ಹೊಂದಿದೆ. 800 ಎಂಎಂ ಪ್ರವೇಶಿಸಬಹುದಾದ ಸ್ಯಾಡಲ್ ಎತ್ತರವು ಆರಾಮದಾಯಕ ರೈಡಿಂಗ್ ಅನುಭವ ನೀಡುತ್ತದೆ.