Just In
- 5 hrs ago
ಹೊಸ ಇನೋವಾ ಹೈಕ್ರಾಸ್ ಬಲದೊಂದಿಗೆ ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ ಟೊಯೊಟಾ
- 6 hrs ago
ದ್ವಿಚಕ್ರ ವಾಹನ ಖರೀದಿಸುತ್ತಿದ್ದೀರಾ? ಇದೇ ತಿಂಗಳ ಪ್ರಮುಖ ಬಿಡುಗಡೆಗಳನ್ನು ಒಮ್ಮೆ ಪರಿಶೀಲಿಸಿ
- 7 hrs ago
ಸಪ್ತ ಸಾಗರದಾಚೆಯೂ ಮಹೀಂದ್ರಾ ಕಾರಿಗೆ ಬೇಡಿಕೆ... ನೇಪಾಳದಲ್ಲಿ ಎಕ್ಸ್ಯುವಿ700 ಬಿಡುಗಡೆ
- 8 hrs ago
ಸೇನೆಗೆ ಮಾರುತಿ ಜಿಪ್ಸಿ ಬದಲಿಗೆ ಅತ್ಯಾಧುನಿಕ ಹೊಸ ಜಿಮ್ನಿ ಸೇರ್ಪಡೆ ಹೇಗಿರಬಹುದು?
Don't Miss!
- News
ಗ್ರಾಮಗಳು ವೃದ್ಧಾಶ್ರಮಗಳಾಗಿವೆ, ಉಡುಪಿಯಲ್ಲಿ ಐಟಿ ಪಾರ್ಕ್ ನಿರ್ಮಿಸಿ: ಕೇಂದ್ರ ಸರ್ಕಾರಕ್ಕೆ ಪೇಜಾವರ ಶ್ರೀ ಒತ್ತಾಯ
- Movies
'ಕ್ರಾಂತಿ' ಬೈಕ್ ಪ್ರಚಾರ ಮಾಡಿ ಇದ್ದ ಕೆಲಸ ಹೋಯ್ತು ಎಂದ ಅಭಿಮಾನಿ: ವಿಡಿಯೋ ವೈರಲ್
- Sports
IND vs NZ 3rd T20: ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಮಿಂಚು; ನ್ಯೂಜಿಲೆಂಡ್ ವಿರುದ್ಧ ಸರಣಿ ಗೆದ್ದ ಭಾರತ
- Lifestyle
ಗರುಡ ಪುರಾಣ ಪ್ರಕಾರ ಈ 9 ಬಗೆಯ ವ್ಯಕ್ತಿಗಳ ಮನೆಯಲ್ಲಿ ಆಹಾರ ತಿನ್ನಲೇಬಾರದು
- Technology
ಚೀನಾದಲ್ಲಿ ಸೌಂಡ್ ಮಾಡಿದ್ದ ಈ ಡಿವೈಸ್ ಇದೀಗ ಜಾಗತಿಕ ಮಾರುಕಟ್ಟೆಗೆ ಎಂಟ್ರಿ!
- Finance
Union Budget 2023: ಹೊಸ ತೆರಿಗೆ ಪದ್ಧತಿಯಡಿಯಲ್ಲಿ ತೆರಿಗೆ ಲೆಕ್ಕಾಚಾರ ಹೇಗೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಮತ್ತೊಂದು ಐಷಾರಾಮಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲು ಸಜ್ಜಾದ ಬಿಎಂಡಬ್ಲ್ಯು
ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿರುವುದರಿಂದ ಜಮರ್ನಿ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ಬಿಎಂಡಬ್ಲ್ಯು ಮೋಟೊರಾಡ್ ತನ್ನ ಬಿಎಂಡಬ್ಲ್ಯು ಸಿಇ 04 ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಅಗ್ರೇಸಿವ್ ಲುಕ್ ಮತ್ತು ಅತ್ಯಾಧುನಿಕ ಫೀಚರ್ಸ್ ಗಳೊಂದಿಗೆ ಬರುತ್ತಿದೆ.
ಇದೀಗ ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ಈ ಹೊಸ ಬಿಎಂಡಬ್ಲ್ಯು ಸಿಇ 04 ಎಲೆಕ್ಟ್ರಿಕ್ ಸ್ಕೂಟರ್ ಟೀಸರ್ ಅನ್ನು ಬಿಡುಗಡೆಗೊಳಿಸಿದೆ. ಟೀಸರ್ ಪ್ರಕಾರ, ಬಿಎಂಡಬ್ಲ್ಯು ಸಿಇ 04 ಎಲೆಕ್ಟ್ರಿಕ್ ಸ್ಕೂಟರ್ ಡಿಸೆಂಬರ್ 10 ರಿಂದ 11 ರಂದು ಬಿಡುಗಡೆಯಾಗುವ ಸಾಧ್ಯತೆಗಳಿದೆ. ಈ ಐಷಾರಾಮಿ ಎಲೆಕ್ಟ್ರಿಕ್ ಸ್ಕೂಟರ್ ಯುಎಸ್ನಲ್ಲಿ $ 11,795 (ಅಂದಾಜು ರೂ. 9.71 ಲಕ್ಷ) ಆರಂಭಿಕ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಪರ್ಮೆನೆಂಟ್ ಮ್ಯಾಗ್ನೆಟ್ ಮೋಟರ್ ಅನ್ನು ಹೊಂದಿದೆ.
ಇದನ್ನು ಬ್ಯಾಟರಿ ಮತ್ತು ಹಿಂದಿನ ಚಕ್ರದ ನಡುವೆ ಸ್ಟೀಲ್ ಫ್ರೇಮ್ ನಲ್ಲಿ ಜೋಡಿಸಲಾಗಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಪರ್ಮೆನೆಂಟ್ ಮ್ಯಾಗ್ನೆಟ್ ಮೋಟರ್ ಅನ್ನು ಹೊಂದಿದ್ದು, ಇದನ್ನು ಬ್ಯಾಟರಿ ಮತ್ತು ಹಿಂದಿನ ಚಕ್ರದ ನಡುವೆ ಸ್ಟೀಲ್ ಫ್ರೇಮ್ ನಲ್ಲಿ ಜೋಡಿಸಲಾಗಿದೆ. ಇದು 42 ಬಿಹೆಚ್‍ಪಿ ಪವರ್ ಮತ್ತು 62 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ದುಬಾರಿ ಎಲೆಕ್ಟ್ರಿಕ್ ಸ್ಕೂಟರ್ ಟಾಪ್ ಸ್ಪೀಡ್ .121 ಕಿ.ಮೀ.ಗೆ ಸೀಮಿತಗೊಳಿಸಿದೆ.
ಇನ್ನು ಈ ಹೊಸ ಬಿಎಂಡಬ್ಲ್ಯು ಸಿಇ 04 ಎಲೆಕ್ಟ್ರಿಕ್ ಸ್ಕೂಟರ್ 2.6 ಸೆಕೆಂಡುಗಳಲ್ಲಿ 0 ದಿಂದ 50 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ. ಈ ಬಿಎಂಡಬ್ಲ್ಯು ಸಿಇ 04 ಎಲೆಕ್ಟ್ರಿಕ್ ಸ್ಕೂಟರ್ ಇಕೋ, ರೋಡ್ ಮತ್ತು ರೈನ್ ಎಂಬ ಸ್ಟ್ಯಾಂಡರ್ಡ್ ರೈಡಿಂಗ್ ಮೋಡ್‌ಗಳೊಂದಿಗೆ ಬರುತ್ತದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಡೈನಾಮಿಕ್ ಮತ್ತು ಡೈನಾಮಿಕ್ ಟ್ರ್ಯಾಕ್ಷನ್ ಕಂಟ್ರೋಲ್ ಅನ್ನು ಹೊಂದಿದೆ. ಬಿಎಂಡಬ್ಲ್ಯು ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಪ್ಯಾಕ್ ಅನ್ನು 2.3 ಕಿ.ವ್ಯಾಟ್ ಚಾರ್ಜರ್ ಮೂಲಕ 4 ಗಂಟೆ 20 ನಿಮಿಷಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಬಹುದು.
ಚಾರ್ಜಿಂಗ್ ಸಮಯವನ್ನು 6.9 ಕಿ.ವ್ಯಾಟ್ ಫಾಸ್ಟ್ ಚಾರ್ಜರ್ ಮೂಲಕ ಒಂದು ಗಂಟೆ 40 ನಿಮಿಷಕ್ಕೆ ಇಳಿಸಬಹುದು. ಎಲೆಕ್ಟ್ರಿಕ್ ಸ್ಕೂಟರ್ ಟ್ಯೂಬಲರ್ ಸ್ಟೀಲ್ ಫ್ರೇಮ್ ಅನ್ನು ಆಧರಿಸಿದೆ. ಇನ್ನು ಈ ಹೊಸ ಬಿಎಂಡಬ್ಲ್ಯು ಎಲೆಕ್ಟ್ರಿಕ್ ಸ್ಕೂಟರ್ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 35 ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಸಿಂಗಲ್ ಸೈಡಡ್ ಸ್ವಿಂಗಾಮ್ ನೊಂದಿಗ್ ಪ್ರಿ-ಲೋಡ್ ಹೊಂದಾಣಿಕೆ ಮಾಡಬಹುದಾದ ಮೊನೊಶಾಕ್ ಅನ್ನು ಒಳಗೊಂಡಿದೆ.
ಇನ್ನು ಪ್ರಮುಖವಾಗಿ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 265 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ ಸಿಂಗಲ್ ಡಿಸ್ಕ್ ಬ್ರೇಕ್ ಅನ್ನು ಹೊಂದಿದೆ. ಇದರೊಂದಿಗೆ ಎಬಿಎಸ್ ಪ್ರೊ ಸಿಸ್ಟಂ ಅನ್ನು ಆಯ್ಕೆಯಾಗಿ ನೀಡಲಾಗುತ್ತದೆ. ಈ ಬಿಎಂಡಬ್ಲ್ಯು ಎಲೆಕ್ಟ್ರಿಕ್ ಸ್ಕೂಟರ್ ಸ್ಮಾರ್ಟ್ ಪೋನ್ ಕನೆಕ್ಟಿವಿಟಿ ಹೊಂದಿರುವ ದೊಡ್ಡ 10.25-ಇಂಚಿನ, ಹೆಚ್ಚಿನ ರೆಸಲ್ಯೂಶನ್ ಹೊಂದಿರುವ ಟಿಎಫ್ಟಿ ಡಿಸ್ ಪ್ಲೇಯನ್ನು ಕೂಡ ಹೊಂದಿದೆ. ಇದು ರೈಡಿಂಗ್ ಮೋಡ್ ಗಳ ಮಾಹಿತಿಯನ್ನು ಕೂಡ ಪ್ರದರ್ಶಿಸುತ್ತದೆ.
ಭಾರತೀಯ ಮಾರುಕಟ್ಟೆಯಲ್ಲಿ, ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ಈ ಹಿಂದೆ ಬಿಎಂಡಬ್ಲ್ಯು ಸಿ 400 ಜಿಟಿ ಮ್ಯಾಕ್ಸಿ-ಸ್ಕೂಟರ್ ಅನ್ನು ಬಿಡುಗಡೆಗೊಳಿಸಿತ್ತು, ಈ ಹೊಸ ಬಿಎಂಡಬ್ಲ್ಯು ಸಿ 400 ಜಿಟಿ ಮ್ಯಾಕ್ಸಿ-ಸ್ಕೂಟರ್ ಬೆಲೆಯು ರೂ.9,95,000 ಆಗಿದೆ. ಈ ಹೊಸ ಬಿಎಂಡಬ್ಲ್ಯು ಸಿ 400 ಜಿಟಿ ಐಷಾರಾಮಿ ಮ್ಯಾಕ್ಸಿ-ಸ್ಕೂಟರ್ ಆಗಿದೆ. ಈ ಹೊಸ ಬಿಎಂಡಬ್ಲ್ಯು ಸಿ 400 ಜಿಟಿ ಭಾರತದಲ್ಲಿ ಬಿಎಂಡಬ್ಲ್ಯು ಮೊಟೊರಾಡ್‌ನ ಮೊದಲ ಮ್ಯಾಕ್ಸಿ-ಸ್ಕೂಟರ್ ಆಗಿದೆ. ಈ ಪ್ರೀಮಿಯಂ ಮಿಡ್ ಸೈಜ್ ಸ್ಕೂಟರ್ ಸಿಬಿಯು ಯುನಿಟ್ ಆಗಿ ಲಭ್ಯವಿರುತ್ತದೆ.
ಈ ಬಿಎಂಡಬ್ಲ್ಯು ಸಿ 400 ಜಿಟಿ ಸ್ಕೂಟರ್ ಆಲ್ಪೈನ್ ವೈಟ್ ಮತ್ತು ಸ್ಟೈಲ್ ಟ್ರಿಪಲ್ ಬ್ಲ್ಯಾಕ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿರುತ್ತದೆ. ಈ ದುಬಾರಿ ಬಿಎಂಡಬ್ಲ್ಯು ಸಿ 400 ಜಿಟಿ ಸ್ಕೂಟರ್ ಮುಂಭಾಗದಲ್ಲಿ ಎಲ್‌ಇಡಿ ಡೇಟೈಮ್ ರನ್ನಿಂಗ್ ಲೈಟ್ಸ್, ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್ಸ್, ವಿಂಡ್‌ಶೀಲ್ಡ್, ಎರಡು ಗ್ಲೌಸ್ ಕಂಪಾರ್ಟ್‌ಮೆಂಟ್‌ಗಳು, ಸಿಂಗಲ್-ಸೆಕ್ಷನ್ ಸೀಟಿನ ಅಡಿಯಲ್ಲಿ ಒಂದು ಫ್ಲೆಕ್ಸ್‌ಕೇಸ್ ಮತ್ತು ಕೀಲೆಸ್ ರೈಡ್‌ನಂತಹ ಟ್ವಿನ್-ಪಾಡ್ ಎಲ್‌ಇಡಿ ಹೆಡ್‌ಲೈಟ್ ಅನ್ನು ಹೊಂದಿದೆ.