Just In
- 42 min ago
6 ಏರ್ಬ್ಯಾಗ್ ಜೊತೆ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಸಿಗುವ ಟಾಪ್ 5 ಕಾರುಗಳು
- 1 hr ago
ಎಲೆಕ್ಟ್ರಿಕ್ ಬಳಿಕ ಸಿಎನ್ಜಿ ಕಾರುಗಳ ವಿಭಾಗದಲ್ಲೂ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ ಟಾಟಾ
- 1 hr ago
ಹೊಸ ಮಹೀಂದ್ರಾ ಎಲೆಕ್ಟ್ರಿಕ್ XUV700 ಟೀಸರ್ ಬಿಡುಗಡೆ... ಫೆ.10 ರಂದು BE ಸರಣಿ SUV ಗಳ ಪ್ರದರ್ಶನ
- 2 hrs ago
ಭಾರತದಲ್ಲಿ ಬಿಡುಗಡೆಯಾಗಲಿವೆ ಹೋಂಡಾದ 3 ಕಾರುಗಳು: ಇವು ಬಂದ್ರೆ...!
Don't Miss!
- Movies
27, 100ರ ಸಂಭ್ರಮಕ್ಕೆ ಕೇಕ್ ಕತ್ತರಿಸಿ ಸಂಭ್ರಮಿಸಿದ ಕಿಚ್ಚ - ಶಿವಣ್ಣ, ದರ್ಶನ್!
- News
BBC ಸಾಕ್ಷ್ಯಚಿತ್ರಕ್ಕೆ ನಿರ್ಬಂಧ: ಕೇಂದ್ರಕ್ಕೆ ಸುಪ್ರೀಂ ನೋಟೀಸ್
- Sports
ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಘೋಷಿಸಿದ 2007ರ ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ
- Technology
ಅರ್ಧಕೋಟಿಗೂ ಅಧಿಕ ಬೆಲೆಯಲ್ಲಿ ಈ ಹಳೇ ಐಫೋನ್ ಮಾರಾಟ!..ಅದ್ಹೇಗೆ ಸಾಧ್ಯ ಅಂತೀರಾ!?
- Finance
ಅಮುಲ್ ಹಾಲಿನ ದರ ಮತ್ತೆ 3 ರೂ ಏರಿಕೆ, ನೂತನ ದರ ಪರಿಶೀಲಿಸಿ
- Lifestyle
Maha Shivratri 2023 : ಮಹಾಶಿವರಾತ್ರಿ ದಿನಾಂಕ, ಪೂಜಾ ಮುಹೂರ್ತ, ಮಹತ್ವ, ಆಚರಣೆ ಹಿನ್ನೆಲೆ ಏನು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಜನಪ್ರಿಯ ಹೋಂಡಾ ಶೈನ್ ಬೈಕ್ ಖರೀದಿ ಮೇಲೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್
ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ (ಹೆಚ್‌ಎಂಎಸ್‌ಐ) ತನ್ನ ಶೈನ್ ಬೈಕ್ ಮೇಲೆ ವಿಶೇಷ ಆಪರ್ ಗಳನ್ನು ಘೋಷಿಸಿದೆ. ಹೋಂಡಾ ಶೈನ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಬೈಕ್ ಗಳಲ್ಲಿ ಒಂದಾಗಿದೆ. ಈ ಸೀಮಿತ ಅವಧಿಯವರೆಗೂ ಈ ಆಫರ್ ಲಭ್ಯವಿರುತ್ತದೆ.
ಈ ವರ್ಷದ ಕೊನೆಯಲ್ಲಿ ಹೋಂಡಾ ಭಾರತದಲ್ಲಿ ತನ್ನ ಅತ್ಯುತ್ತಮ-ಮಾರಾಟದ ಮೋಟಾರ್‌ಸೈಕಲ್, ಶೈನ್ ಮೇಲೆ ಹಬ್ಬದ ಕೊಡುಗೆಗಳನ್ನು ನೀಡುತ್ತಿದೆ, ಈ ಜನಪ್ರಿಯ ಹೋಂಡಾ ಶೈನ್ ಬೈಕ್ ಮೇಲೆ ಈಗ ರೂ. 5,000 ವರೆಗಿನ ಕ್ಯಾಶ್‌ಬ್ಯಾಕ್‌ನೊಂದಿಗೆ ಲಭ್ಯವಿದೆ. ಇದಲ್ಲದೆ, ಖರೀದಿದಾರರು ಕಡಿಮೆ ಡೌನ್ ಪೇಮೆಂಟ್ ಯೋಜನೆಗಳ ಪ್ರಯೋಜನಗಳನ್ನು ತೆಗೆದುಕೊಳ್ಳಬಹುದು. ಕಡಿಮೆ ಡೌನ್ ಪೇಮೆಂಟ್‌ನಲ್ಲಿ ರೂ 3,999 ರಿಂದ ಪ್ರಾರಂಭಿಸುತ್ತದ. ಈ ಆಫರ್ ಈ ತಿಂಗಳ ಅಂತ್ಯದವರೆಗೂ ಮಾತ್ರ ಲಭ್ಯವಿರುತ್ತದೆ.
ಇದಲ್ಲದೆ, ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ಈ ಮೋಟಾರ್‌ಸೈಕಲ್‌ನೊಂದಿಗೆ ಶೇಕಡಾ 7.99 ರಿಂದ ಪ್ರಾರಂಭವಾಗುವ ಬಡ್ಡಿದರ ಮತ್ತು ಶೇಕಡಾ ಐದು (ರೂ 5,000 ವರೆಗೆ) ಕ್ಯಾಶ್‌ಬ್ಯಾಕ್ ಅನ್ನು ಘೋಷಿಸಿದೆ. ಕ್ಯಾಶ್‌ಬ್ಯಾಕ್ ಕೊಡುಗೆಯನ್ನು ಕನಿಷ್ಠ 30,000 ರೂಪಾಯಿಗಳ ವಹಿವಾಟಿಗೆ ಅನ್ವಯಿಸುತ್ತದೆ ಮತ್ತು ಇದನ್ನು ಆಯ್ದ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳೊಂದಿಗೆ EMI ವಹಿವಾಟುಗಳಲ್ಲಿ ಪಡೆಯಬಹುದು. ನಿರ್ದಿಷ್ಟಪಡಿಸಿದ ಮಾನದಂಡಗಳಿಗೆ ಸರಿಹೊಂದುವ ಪ್ರೊಫೈಲ್‌ಗಳ ಗ್ರಾಹಕರಿಗೆ ಆಯ್ದ ಹಣಕಾಸು ಪಾಲುದಾರರ ಮೂಲಕ ಲಭ್ಯವಿರುತ್ತದೆ.
ಈ ಕೊಡುಗೆಗಳ ಕುರಿತು ಹೆಚ್ಚಿನ ವಿವರಗಳಿಗಾಗಿ, ನಿಮ್ಮ ಹತ್ತಿರದ ಅಧಿಕೃತ ಹೋಂಡಾ ಡೀಲರ್‌ಶಿಪ್‌ಗೆ ಭೇಟಿ ನೀಡಿ. ಹೋಂಡಾ ಶೈನ್ ಮಾದರಿಯು ಬ್ರ್ಯಾಂಡ್‌ಗೆ ಹೆಚ್ಚು ಮಾರಾಟವಾಗುವ ಬೈಕ್ ಗಳಲ್ಲಿ ಒಂದಾಗಿದೆ. ಈ ಹೋಂಡಾ ಶೈನ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ 1 ಕೋಟಿ ಮಾರಾಟವಾಗಿ ಹೊಸ ಮೈಲಿಗಲ್ಲನ್ನು ಕೂಡ ಸಾಧಿಸಿತು. ಭಾರತದಲ್ಲಿ 125 ಸಿಸಿ ಬೈಕ್ ವಿಭಾಗದಲ್ಲಿ ಈ ಹೋಂಡಾ ಶೈನ್ ಮಾದರಿಯು ಅಗ್ರ ಸ್ಥಾನವನ್ನು ಹೊಂದಿದೆ.
ಅಲ್ಲದೇ ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್ ಅವರು ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಈ ಜನಪ್ರಿಯ ಹೋಂಡಾ ಶೈನ್ ವರ್ಷದಿಂದ ವರ್ಷಕ್ಕೆ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಹೊಂದಿದೆ. ಅಲ್ಲದೇ ಬರೊಬ್ಬರಿ 1 ಕೋಟಿ ಗ್ರಾಹಕರ ಮೈಲಿಗಲ್ಲನ್ನು ತಲುಪಿದ ಮೊದಲ 125 ಸಿಸಿ ಬೈಕ್ ಇದಾಗಿದೆ. ಈ ಜನಪ್ರಿಯ ಹೋಂಡಾ ಶೈನ್ ಬೈಕ್ ನಲ್ಲಿ 124 ಸಿಸಿ, ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ.
ಈ 124 ಸಿಸಿ ಎಂಜಿನ್ 7500 ಆರ್‌ಪಿಎಂನಲ್ಲಿ 10.7 ಬಿಹೆಚ್‍ಪಿ ಪವರ್ ಮತ್ತು 6000 ಆರ್‌ಪಿಎಂನಲ್ಲಿ 11 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಈ ಹೋಂಡಾ ಶೈನ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಈ ಬೈಕಿನ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಮತ್ತು ಹಿಂಭಾಗದಲ್ಲಿ ಹೈಡ್ರಾಲಿಕ್ ಯುನಿಟ್ ಸಸ್ಪೆಂಕ್ಷನ್ ಸೆಟಪ್ ಅನ್ನು ಹೊಂದಿದೆ.
ಇನ್ನು ಪ್ರಮುಖವಾಗಿ ಈ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಈ ಬೈಕಿನ ಮುಂಭಾಗ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್‌ಗಳನ್ನು ನೀಡಲಗಿದೆ, ಇದರೊಂದಿಗೆ ಮುಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ಆಯ್ಕೆಯನ್ನು ನೀಡಲಾಗಿದೆ. ಈ ಜನಪ್ರಿಯ ಹೋಂಡಾ ಶೈನ್ ಬೈಕ್ ಅನ್ನು 2006 ರಲ್ಲಿ ಬಿಡುಗಡೆ ಮಾಡಲಾಯಿತು ಮತ್ತು 2008 ರಲ್ಲಿ ಬಿಡುಗಡೆಯಾದ ಕೇವಲ ಎರಡು ವರ್ಷಗಳ ನಂತರ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ 125 ಸಿಸಿ ಬೈಕ್ ಎಂಬ ಖ್ಯಾತಿಯನ್ನು ಪಡೆದುಕೊಂಡಿತ್ತು.
ಹೋಂಡಾ ಶೈನ್ ಬೈಕ್ 50 ಲಕ್ಷ ಯುನಿಟ್ ಮಾರಾಟದ ಮೈಲಿಗಲ್ಲನ್ನು ತಲುಪಿದ ಮೊದಲ 125 ಸಿಸಿ ಬೈಕ್ ಕೂಡ ಇದೇ ಆಗಿದೆ. ಇದು 2020ರ ವೇಳೆಗೆ 90 ಲಕ್ಷಕ್ಕೂ ಹೆಚ್ಚು ಗ್ರಾಹಕರನ್ನು ಸಾಧಿಸಿದೆ ಮತ್ತು 90 ಲಕ್ಷಕ್ಕೂ ಹೆಚ್ಚು ಗ್ರಾಹಕರನ್ನು ಸಾಧಿಸಿದೆ ಮತ್ತು ನಂತರ ಬರೊಬ್ಬರಿ 1 ಕೋಟಿ ಮಾರಾಟಾದ ಮೈಲಿಗಲ್ಲನ್ನು ಸಾಧಿಸಿತು. ಹೋಂಡಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಮೋಟಾರ್‌ಸೈಕಲ್ ಪೋರ್ಟ್‌ಫೋಲಿಯೊವನ್ನು ಬಲಪಡಿಸಲು ನೋಡುತ್ತಿದ್ದಾರೆ. ಭಾರತದಲ್ಲಿ ಹೊಸ ಬೈಕ್ ಮಾದರಿಗಳನ್ನು ಪರಿಚಯಿಸಲು ಹೋಂಡಾ ಕಂಪನಿಯು ಸಜ್ಜಾಗಿದೆ.