ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಂಡ ಹಸ್ಕ್​ವರ್ನಾ ಸ್ವಾರ್ಟ್‌ಪಿಲೆನ್ 250, ವಿಟ್‌ಪಿಲೆನ್ 250

ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಹಸ್ಕ್​ವರ್ನಾ ಭಾರತದಲ್ಲಿ ಹಬ್ಬದ ಸೀಸನ್‍ನಲ್ಲಿ ಹೊಸ ಬಣ್ಣದ ಆಯ್ಕೆಗಳೊಂದಿಗೆ ತನ್ನ ಜನಪ್ರಿಯ ಸ್ವಾರ್ಟ್‌ಪಿಲೆನ್ 250 ಹಾಗೂ ವಿಟ್‌ಪಿಲೆನ್ 250 ಬೈಕ್‌ಗಳನ್ನು ರಿಫ್ರೆಶ್ ಮಾಡಿದೆ. ಹಸ್ಕ್​ವರ್ನಾ ಸ್ವಾರ್ಟ್‌ಪಿಲೆನ್ 250 ಬೈಕ್ ಬ್ಲ್ಯಾಕ್ ಬ್ಲೂ ಮೂನ್ ಲೈನ್ ಹಾಗೂ ವಿಟ್‌ಪಿಲೆನ್ 250 ಬೈಕ್ ಸೆರಾಮಿಕ್ ವೈಟ್ ಬಣ್ಣದ ಆಯ್ಕೆಯನ್ನು ಪಡೆದುಕೊಂಡಿದೆ.

ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಂಡ ಹಸ್ಕ್​ವರ್ನಾ ಸ್ವಾರ್ಟ್‌ಪಿಲೆನ್ 250, ವಿಟ್‌ಪಿಲೆನ್ 250

ಹೊಸ ಬಣ್ಣದ ಆಯ್ಕೆಯನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬಾದಲಾವಣೆಗಳನ್ನು ಪಡೆದುಕೊಂಡಿಲ್ಲ. ಹಸ್ಕ್​ವರ್ನಾ ಸ್ವಾರ್ಟ್‌ಪಿಲೆನ್ 250 ಹಾಗೂ ವಿಟ್‌ಪಿಲೆನ್ 250 ಬೈಕ್‌ಗಳ ಬೆಲೆಗಳು ಮೊದಲಿನಂತೆಯೇ ಎಕ್ಸ್ ಶೋರೂಂ ಪ್ರಕಾರ ರೂ.2.19 ಲಕ್ಷವಾಗಿದೆ. ಹೊಸ ಬಣ್ಣದ ಆಯ್ಕೆಗಳೊಂದಿಗೆ ಈ ಎರಡೂ ಬೈಕ್‌ಗಳ ಖರೀದಿಗಾಗಿ ಬುಕ್ಕಿಂಗ್‌ಗಳು ಈಗಾಗಲೇ ತೆರೆದಿವೆ. ಆಸಕ್ತ ಗ್ರಾಹಕರು ಟೋಕನ್ ಮೊತ್ತವನ್ನು ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದು.

ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಂಡ ಹಸ್ಕ್​ವರ್ನಾ ಸ್ವಾರ್ಟ್‌ಪಿಲೆನ್ 250, ವಿಟ್‌ಪಿಲೆನ್ 250

ಹಸ್ಕ್​ವರ್ನಾ ಬ್ರ್ಯಾಂಡ್ 2020ರ ಫೆಬ್ರವರಿ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಗೆ ಹೊಸದಾಗಿ ಪ್ರವೇಶಿಸಿದ್ದರೂ ಕಡಿಮೆ ಅವಧಿಯಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಸ್ವಾರ್ಟ್‌ಪಿಲೆನ್ 250 ಹಾಗೂ ವಿಟ್‌ಪಿಲೆನ್ 250 ಬೈಕ್‌ಗಳು ಭಾರತದಲ್ಲಿ ಮೊದಲ ಬಾರಿಗೆ ನವೆಂಬರ್‌ನಲ್ಲಿ ನಡೆದ 2019 ಇಂಡಿಯಾ ಬೈಕ್ ವೀಕ್ (ಐಬಿಡಬ್ಲ್ಯು) ನಲ್ಲಿ ಪ್ರದರ್ಶಿಸಲಾಗಿತ್ತು.

ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಂಡ ಹಸ್ಕ್​ವರ್ನಾ ಸ್ವಾರ್ಟ್‌ಪಿಲೆನ್ 250, ವಿಟ್‌ಪಿಲೆನ್ 250

ಹಸ್ಕ್​ವರ್ನಾ ಕಂಪನಿಯು ಈ ಬೈಕ್ ಗಳನ್ನು ಭಾರತದಲ್ಲಿ ಕೆಟಿಎಂ ಶೋರೂಂಗಳ ಮೂಲಕ ಮಾರಾಟ ಮಾಡಲಾಗುತ್ತದೆ. ಈ ಹಸ್ಕ್​ವರ್ನಾ ಸ್ವಾರ್ಟ್‌ಪಿಲೆನ್ 250 ಬೈಕ್ ನಿಯೋ-ರೆಟ್ರೊ ಸ್ಕ್ರ್ಯಾಂಬ್ಲರ್ ವಿನ್ಯಾಸವನ್ನು ಹೊಂದಿದೆ. ವಿಟ್‌ಪಿಲೆನ್ 250 ಬೈಕ್ ಕೆಫೆ ರೇಸರ್ ಸ್ಟೈಲಿಂಗ್ ಅನ್ನು ಒಳಗೊಂಡಿದೆ.

ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಂಡ ಹಸ್ಕ್​ವರ್ನಾ ಸ್ವಾರ್ಟ್‌ಪಿಲೆನ್ 250, ವಿಟ್‌ಪಿಲೆನ್ 250

ವಿಶೇಷವೆಂದರೆ ಹಸ್ಕ್​ವರ್ನಾದ ಸ್ವಾರ್ಟ್‍‍ಪಿಲೆನ್ 250 ಹಾಗೂ ವಿಟ್‍‍ಪಿಲೆನ್ 250 ಬೈಕ್‍‍ಗಳನ್ನು ಕೆಟಿಎಂ ಡ್ಯೂಕ್ 250 ಬೈಕಿನ ಆಧಾರದ ಮೇಲೆ ತಯಾರಿಸಲಾಗಿದೆ. ಈ ಎರಡೂ ಬೈಕ್‍‍ಗಳಲ್ಲಿ ಡ್ಯೂಕ್ 250 ಬೈಕಿನಲ್ಲಿರುವಂತಹ ಬಿಡಿಭಾಗ ಹಾಗೂ ಎಂಜಿನ್‍‍ಗಳನ್ನು ಅಳವಡಿಸಲಾಗಿದೆ.

ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಂಡ ಹಸ್ಕ್​ವರ್ನಾ ಸ್ವಾರ್ಟ್‌ಪಿಲೆನ್ 250, ವಿಟ್‌ಪಿಲೆನ್ 250

ಇದರ ಜೊತೆಗೆ ಎರಡು ಬೈಕ್‍‍ಗಳು ಕೆಟಿಎಂ ಬೈಕ್‍‍ಗಳಂತೆ ವಿಶಿಷ್ಟವಾದ ಡಿಸೈನ್ ಫೀಚರ್‍‍ಗಳನ್ನು ಹೊಂದಿವೆ. ಸ್ವಾರ್ಟ್‍‍ಪಿಲೆನ್ 250 ಬೈಕ್ ಸ್ಕ್ರಾಂಬ್ಲರ್‍‍ನಂತಿದ್ದರೆ, ವಿಟ್‍‍ಪಿಲೆನ್ ಕೆಫೆ ರೇಜರ್ ಬೈಕಿನಂತಿದೆ. ಸ್ವಾರ್ಟ್‍‍ಪಿಲೆನ್ 250 ಬೈಕಿನಲ್ಲಿ ಡ್ಯುಯಲ್ ಪರ್ಪಸ್ ಟಯರ್‍‍ಗಳನ್ನು ಅಳವಡಿಸಲಾಗಿದೆ.

ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಂಡ ಹಸ್ಕ್​ವರ್ನಾ ಸ್ವಾರ್ಟ್‌ಪಿಲೆನ್ 250, ವಿಟ್‌ಪಿಲೆನ್ 250

ವಿಭಿನ್ನವಾದ ಕೆಫೆ ರೇಜರ್ ಬೈಕ್ ಆದ ವಿಟ್‍‍ಪಿಲೆನ್ 250 ಬೈಕ್, ಹ್ಯಾಂಡಲ್‍‍ಬಾರ್ ಮೇಲೆ ಕ್ಲಿಪ್ ಹಾಗೂ ಮುಂಭಾಗಕ್ಕೆ ಬಾಗಿರುವ ಸೀಟಿಂಗ್ ಸಿಸ್ಟಂಗಳನ್ನು ಹೊಂದಿದೆ. ಈ ಬೈಕ್‍‍ಗಳಲ್ಲಿ ಕೆಟಿ‍ಎಂ ಡ್ಯೂಕ್ 250 ಬೈಕಿನಲ್ಲಿರುವಂತಹ 248.76 ಸಿಸಿಯ ಸಿಂಗಲ್ ಸಿಲಿಂಡರ್ ಎಂಜಿನ್ ಅಳವಡಿಸಲಾಗಿದೆ.

ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಂಡ ಹಸ್ಕ್​ವರ್ನಾ ಸ್ವಾರ್ಟ್‌ಪಿಲೆನ್ 250, ವಿಟ್‌ಪಿಲೆನ್ 250

ಈ ಎಂಜಿನ್ 29.63 ಬಿ‍‍ಹೆಚ್‍‍ಪಿ ಪವರ್ ಹಾಗೂ 24 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಬೈಕ್‍‍ಗಳಲ್ಲಿ ಕೆಟಿಎಂ ಬೈಕ್‍‍ಗಳಲ್ಲಿರುವಂತಹ ಟ್ರೆಲ್ಲಿಸ್ ಫ್ರೇಂ ಸಿಸ್ಟಂ ನೀಡಲಾಗಿದೆ. ಈ ಸಿಸ್ಟಂನಿಂದಾಗಿ ಬೈಕಿನ ಲುಕ್ ಹೆಚ್ಚುವುದರ ಜೊತೆಗೆ ಹ್ಯಾಂಡ್ಲಿಂಗ್ ಹೆಚ್ಚು ಸಹಕಾರಿಯಾಗಿದೆ.

ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಂಡ ಹಸ್ಕ್​ವರ್ನಾ ಸ್ವಾರ್ಟ್‌ಪಿಲೆನ್ 250, ವಿಟ್‌ಪಿಲೆನ್ 250

ಹಸ್ಕ್​ವರ್ನಾ ಸ್ವಾರ್ಟ್‌ಪಿಲೆನ್ 250 ಹಾಗೂ ವಿಟ್‌ಪಿಲೆನ್ 250 ಬೈಕ್‌ಗಳ ಸಸ್ಪೆಂಷನ್‍‍ಗಳ ಬಗ್ಗೆ ಹೇಳುವುದಾದರೆ, ಈ ಬೈಕ್‍‍ಗಳ ಮುಂಭಾಗದಲ್ಲಿ 43 ಎಂಎಂ ಡಬ್ಲ್ಯುಪಿ ಅಪೆಕ್ಸ್ ಅಪ್‍‍ಸೈಡ್ ಡೌನ್ ಫೋರ್ಕ್ ಹಾಗೂ ಹಿಂಭಾಗದಲ್ಲಿ ಡಬ್ಲ್ಯುಪಿ ಅಪೆಕ್ಸ್ ಮೊನೊ ಶಾಕ್ ಅಬ್ಸರ್ವರ್‍‍ಗಳನ್ನು ನೀಡಲಾಗಿದೆ.

ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಂಡ ಹಸ್ಕ್​ವರ್ನಾ ಸ್ವಾರ್ಟ್‌ಪಿಲೆನ್ 250, ವಿಟ್‌ಪಿಲೆನ್ 250

ಇನ್ನು ಪ್ರಮುಖವಾಗಿ ಬ್ರೇಕಿಂಗ್ ಸಿಸ್ಟಂಗಳ ಬಗ್ಗೆ ಹೇಳುವುದಾದರೆ, ಈ ಬೈಕ್‌ಗಳ ಮುಂಭಾಗದಲ್ಲಿ 320 ಎಂಎಂನ ಡಿಸ್ಕ್ ಬ್ರೇಕ್ ಹಾಗೂ ಹಿಂಭಾಗದಲ್ಲಿ 230 ಎಂಎಂನ ಡಿಸ್ಕ್ ಬ್ರೇಕ್‍‍ಗಳಿವೆ. ಬಾಷ್ ಕಂಪನಿಯ ಡ್ಯುಯಲ್ ಚಾನೆಲ್ ಎಬಿ‍ಎಸ್ ಬ್ರೇಕಿಂಗ್ ಟೆಕ್ನಾಲಜಿಯನ್ನು ಈ ಬೈಕ್‍‍ಗಳಲ್ಲಿ ಅಳವಡಿಸಲಾಗಿದೆ.

ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಂಡ ಹಸ್ಕ್​ವರ್ನಾ ಸ್ವಾರ್ಟ್‌ಪಿಲೆನ್ 250, ವಿಟ್‌ಪಿಲೆನ್ 250

ಇನ್ನು ಸ್ವೀಡಿಷ್ ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹಸ್ಕ್​ವರ್ನಾ(Husqvarna) ಎಲೆಕ್ಟ್ರಿಕ್ ವಿಭಾಗಕ್ಕೂ ಕಾಲಿಟ್ಟಿದೆ. ಹಸ್ಕ್​ವರ್ನಾ ತನ್ನ ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಭಾರತೀಯ ಮಾರುಕಟ್ಟೆಯಲ್ಲಿಯು ಬಿಡುಗಡೆಯಾಗಲಿವೆ. ಹಸ್ಕ್​ವರ್ನಾ ಕಂಪನಿಯು ಈ ವರ್ಷ ಮೇ ತಿಂಗಳಲ್ಲಿ ವೆಕ್ಟೋರ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಮೊದಲು ಅನಾವರಣಗೊಳಿಸಿದರು, ಇದರ ಕೆಲವು ವಾರಗಳ ಹಿಂದೆ ಏಪ್ರಿಲ್‌ನಲ್ಲಿ ಇ-ಪಿಲೆನ್ ಕಾನ್ಸೆಪ್ಟ್ ಎಲೆಕ್ಟ್ರಿಕ್ ಬೈಕ್ ಅನ್ನು ಅನಾವರಣಗೊಳಿಸಿದ್ದರು. ಹಸ್ಕ್​ವರ್ನಾ ತನ್ನ ಮೊದಲ ಬ್ಯಾಟರಿ ಚಾಲಿತ ಬೈಕ್ ಮತ್ತು ಸ್ಕೂಟರ್ ಅನ್ನು ಮೊದಲ ಬಾರಿಗೆ ಅಧಿಕೃತವಾಗಿ ಪ್ರದರ್ಶಿಸಿದೆ.

ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಂಡ ಹಸ್ಕ್​ವರ್ನಾ ಸ್ವಾರ್ಟ್‌ಪಿಲೆನ್ 250, ವಿಟ್‌ಪಿಲೆನ್ 250

ಮ್ಯೂನಿಚ್ ಜರ್ಮನಿಯಲ್ಲಿ ನಡೆದ 2021ರ IAA ಇಂಟರ್ನ್ಯಾಷನಲ್ ಮೋಟಾರ್ ಶೋನಲ್ಲಿ ಈ ವೆಕ್ಟೋರ್ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಇ-ಪಿಲೆನ್ ಕಾನ್ಸೆಪ್ಟ್ ಎಲೆಕ್ಟ್ರಿಕ್ ಬೈಕ್ ಅನ್ನು ಹಸ್ಕ್​ವರ್ನಾ ಕಂಪನಿಯು ಪ್ರದರ್ಶಿಸಿದೆ. ಇದರಲ್ಲಿ ಹಸ್ಕ್​ವರ್ನಾ ವೆಕ್ಟೋರ್ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಹೇಳುವುದಾದರೆ, ಇದು ಸಾಂಪ್ರದಾಯಿಕ ಸ್ಕೂಟರ್‌ಗಳಿಗೆ ಹೋಲಿಸಿದರೆ ವಿಭಿನ್ನ ವಿನ್ಯಾಸವನ್ನು ಹೊಂದಿದ್ದರೂ, ವೆಕ್ಟೋರ್ ಸ್ಕೂಟರ್ ಕಾನೆಪ್ಟ್ ರೇಜರ್-ಶಾರ್ಪ್ ಬಾಡಿ ಪ್ಯಾನಲ್‌ಗಳೊಂದಿಗೆ ಗೋಚರಿಸುವಂತೆ ತೀಕ್ಷ್ಣವಾದ ವಿನ್ಯಾಸವನ್ನು ಪಡೆಯುತ್ತದೆ. ಇದನ್ನು ಕೆಟಿಎಂ ಒಡೆತನದ 'ಕಿಸ್ಕಾ' ವಿನ್ಯಾಸ ಸ್ಟುಡಿಯೋ ವಿನ್ಯಾಸಗೊಳಿಸಿದೆ.

ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಗೊಂಡ ಹಸ್ಕ್​ವರ್ನಾ ಸ್ವಾರ್ಟ್‌ಪಿಲೆನ್ 250, ವಿಟ್‌ಪಿಲೆನ್ 250

ಇದು ಬಜಾಜ್‌ನ ಚೇತಕ್ ಎಲೆಕ್ಟ್ರಿಕ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ ಮತ್ತು ಇದೇ ರೀತಿಯ ವಿಶೇಷಣಗಳು ಮತ್ತು ಕಾರ್ಯಕ್ಷಮತೆಯ ಅಂಕಿಅಂಶಗಳನ್ನು ಒಳಗೊಂಡಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಚೇತಕ್ 3.8kW ಮೋಟಾರ್‌ನೊಂದಿಗೆ ತೆಗೆಯಲಾಗದ 3kWh IP67 ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್‌ ಅನ್ನು ಹೊಂದಿರುತ್ತದೆ,

Most Read Articles

Kannada
English summary
New husqvarna svartpilen 250 and vitpilen 250 bikes get new colours details
Story first published: Thursday, September 29, 2022, 19:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X