Just In
Don't Miss!
- News
ಪಲ್ಲವಿ ಡೇ ಬಳಿಕ ಮತ್ತೊಬ್ಬ ಯುವ ರೂಪದರ್ಶಿ ಆತ್ಮಹತ್ಯೆ
- Sports
ಮಹಿಳಾ ಟಿ20 ಚಾಲೆಂಜ್: ವೆಲಾಸಿಟಿ ವಿರುದ್ಧ ಗೆದ್ದ ಟ್ರೈಲ್ಬ್ಲೇಜರ್ಸ್, ಆದ್ರೂ ಫೈನಲ್ ಮಿಸ್
- Finance
ಮೇ 26ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
ಬಾಲಕೃಷ್ಣ 107ನೇ ಸಿನಿಮಾದ ಟೈಟಲ್ 'ಜೈ ಬಾಲಯ್ಯ'
- Technology
ಸ್ಯಾಮ್ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ ಬಿಡುಗಡೆ! ವಿಶೇಷತೆ ಏನು?
- Lifestyle
ಕಿಚನ್ ಟಿಪ್ಸ್: ಫ್ರಿಡ್ಜ್ನಲ್ಲಿ ಆಹಾರಗಳನ್ನು ಹೀಗೆ ಇಟ್ಟರೆ ಆರೋಗ್ಯಕ್ಕೆ ಕುತ್ತು ಎಚ್ಚರ..!
- Education
Karnataka SSLC Revaluation 2022 : ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಗೂ ಮುನ್ನ 2022ರ ಕೆಟಿಎಂ ಆರ್‌ಸಿ 390 ಬೆಲೆ ಮಾಹಿತಿ ಬಹಿರಂಗ
ಕೆಟಿಎಂ(KTM) ಕಂಪನಿಯು ತನ್ನ ಹೊಸ ಆರ್‌ಸಿ 390 ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಬೈಕ್ ಬಿಡುಗಡೆಗೂ ಮುನ್ನ ಬೆಲೆ ಮಾಹಿತಿ ಬಹಿರಂಗವಾಗಿದೆ.

2022ರ ಆರ್‌ಸಿ 390 ಬೈಕ್ ಹಲವಾರು ಹೊಸ ನವೀಕರಣಗಳೊಂದಿಗೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸುತ್ತಿದ್ದು, ಹೊಸ ಬೈಕ್ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 3,13,922 ಬೆಲೆ ಪಡೆದುಕೊಂಡಿದೆ. ಹೊಸ ಬೈಕ್ ಕುರಿತಂತೆ ಕೆಟಿಎಂ ಇಂಡಿಯಾ ಈಗಾಗಲೇ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಹೊಸ ಬೈಕ್‌ಗಳ ಪಟ್ಟಿ ಪ್ರಕಟಿಸಿದ್ದು, 390 ಅಡ್ವೆಂಚರ್ ನಂತರ ಇದೀಗ ಆರ್‌ಸಿ 390 ಮಾದರಿಯನ್ನು ಬಿಡುಗಡೆ ಮಾಡುತ್ತಿದೆ.

ಹೊಸ ಆರ್‌ಸಿ 390 ಬೈಕ್ ಹಿಂದಿನ ಮಾದರಿಗಿಂತಲೂ ಹೆಚ್ಚು ತೀಕ್ಷ್ಣವಾದ ವಿನ್ಯಾಸವನ್ನು ಹೊಂದಿದ್ದು, ಮುಂಭಾಗದಲ್ಲಿ ಫೇರಿಂಗ್-ಮೌಂಟೆಡ್ ಟರ್ನ್-ಇಂಡಿಕೇಟರ್‌ಗಳ ಜೊತೆಗೆ ಹೊಸ ಹೆಡ್‌ಲ್ಯಾಂಪ್ ವಿನ್ಯಾಸವನ್ನು ನೀಡಲಾಗಿದೆ.

ಇದರ ಜೊತೆಗೆ ವಿಭಿನ್ನ ಇಂಧನ ಟ್ಯಾಂಕ್ ವಿನ್ಯಾಸ ಹೊಂದಿರುವ ಹೊಸ ಮೋಟಾರ್‌ಸೈಕಲ್ ಸ್ಪ್ಲಿಟ್-ಸೀಟ್ ಸೆಟಪ್ ಅನ್ನು ಸಹ ಪಡೆದುಕೊಂಡಿದ್ದು, 17-ಇಂಚಿನ ಅಲಾಯ್ ವ್ಹೀಲ್ ಗಳು ಹೊಸ ವಿನ್ಯಾಸದೊಂದಿಗೆ ಮೊದಲಿಗಿಂತಲೂ ಸಾಕಷ್ಟು ಹಗುರವಾಗಿರಲಿವೆ.

ನ್ಯೂ ಜನರೇಷನ್ ವೈಶಿಷ್ಟ್ಯತೆ ಹೊಂದಿರುವ ಕೆಟಿಎಂ ಆರ್‌ಸಿ 390 ಬೈಕ್ ಮಾದರಿಯು ಈ ಹಿಂದಿನ ಮಾದರಿಯಲ್ಲಿದ್ದ 373.2 ಸಿಸಿ, ಸಿಂಗಲ್ ಸಿಲಿಂಡರ್, ಲಿಕ್ವಿಡ್ ಕೂಲ್ಡ್, ಫ್ಯೂಯಲ್-ಇಂಜೆಕ್ಟ್ ಎಂಜಿನ್ ಹೊಂದಿದ್ದು, ಈ ಎಂಜಿನ್ 43.5 ಬಿಹೆಚ್‍ಪಿ ಪವರ್ ಮತ್ತು 37 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಹೊಸ ಬೈಕ್ ಮಾದರಿಯಲ್ಲಿ 6-ಸ್ಪೀಡ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದ್ದು, ಇದರೊಂದಿಗೆ ಹೊಸ ಬೈಕ್ ಪ್ರಯಾಣಕ್ಕೆ ಪೂರಕವಾಗಿ ಸ್ಲಿಪ್ಪರ್ ಮತ್ತು ಅಸಿಸ್ಟ್ ಕ್ಲಚ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತದೆ.

ಕೆಟಿಎಂ ಆರ್‌ಸಿ 390 ಬೈಕಿನಲ್ಲಿ ಸಸ್ಷೆಂಷನ್ ಸೆಟಪ್ ಬಗ್ಗೆ ಹೇಳುವುದಾದರೆ ಇದರ ಮುಂಭಾಗದಲ್ಲಿ ಫೋರ್ಕ್‌ಗೆ ಹೊಂದಾಣಿಕೆ ಮಾಡಬಹುದಾದ ಕಂಪ್ರೆಷನ್ ಮತ್ತು ರಿಬೌಂಡ್ ಡ್ಯಾಂಪಿಂಗ್ ಅನ್ನು ಒಳಗೊಂಡಿದ್ದು, ಹಿಂಭಾಗದಲ್ಲಿ ಪ್ರಿ-ಲೋಡ್ ಹೊಂದಾಣಿಕೆಯ ಸೆಟಪ್ ಅನ್ನು ಒಳಗೊಂಡಿರುತ್ತದೆ.

ಇದರೊಂದಿಗೆ ಪ್ರಮುಖವಾಗಿ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ ಮುಂಭಾಗದಲ್ಲಿ 320 ಎಂಎಂ ಮತ್ತು ಹಿಂಭಾಗದಲ್ಲಿ 230 ಎಂಎಂ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದ್ದು, ಇದರೊಂದಿಗೆ ಹೆಚ್ಚಿನ ಸುರಕ್ಷತೆಗಾಗಿ ಡ್ಯುಯಲ್-ಚಾನೆಲ್ ಬಾಷ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತದೆ.

ಇದು ಕಾರ್ನರ್ ಗಳಲ್ಲಿ ಅಥವಾ ಹೆಚ್ಚಿನ ವೇಗದಲ್ಲಿ ಬ್ರೇಕ್ ಮಾಡುವಾಗ ಅತ್ಯುತ್ತಮ ಸುರಕ್ಷತೆಯನ್ನು ಖಚಿತಪಡಿಸಲಿದ್ದು, ಆರ್‌ಸಿ 390 ಬೈಕಿನಲ್ಲಿ ಟ್ರಾಕ್ಷನ್ ಕಂಟ್ರೋಲ್, ಕಾರ್ನರ್ ಮಾಡುವ ಎಬಿಎಸ್ (ಡ್ಯುಯಲ್-ಚಾನೆಲ್, ಹೊಂದಾಣಿಕೆ) ಮತ್ತು ಹೊಂದಾಣಿಕೆ ಮಾಡಬಹುದಾದ ಕ್ಲಿಪ್-ಆನ್ ಹ್ಯಾಂಡಲ್‌ಬಾರ್‌ಗಳಂತಹ ಕೆಲವು ಹೊಸ ವೈಶಿಷ್ಟ್ಯಗಳನ್ನು ಪಡೆದುಕೊಳ್ಳಲಿವೆ.

ಬೈಕಿನ ಟಿಎಫ್‌ಟಿ ಇನ್ಸ್‌ಟ್ರೂಮೆಂಟ್ ಕ್ಲಸ್ಟರ್ (ಬ್ಲೂಟೂತ್-ಸಕ್ರಿಯಗೊಳಿಸಿದ ಸ್ಮಾರ್ಟ್‌ಫೋನ್ ಸಂಪರ್ಕದೊಂದಿಗೆ) ಬದಲಾಗದೆ ಮುಂದುವರಿಸಲಾಗಿದ್ದು, ಇಂಟರ್ನ್ಯಾಷನಲ್ ಆವೃತ್ತಿಯಂತೆಯೇ ಹೊಂದಾಣಿಕೆ ಮಾಡಬಹುದಾದ ಮುಂಭಾಗ ಸಸ್ಷೆಷನ್ ಕೂಡಾ ಲಭ್ಯವಿರವಿದೆ.

ಇನ್ನು ಕೆಟಿಎಂ ಕಂಪನಿಯು ವಿಶ್ವಾದ್ಯಂತ ತನ್ನ ಪ್ರಮುಖ ಬೈಕ್ ಸರಣಿ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಭಾರತದಲ್ಲಿ ಬಜಾಜ್ ಆಟೋ ಜೊತೆಗೂಡಿ ಚಾಕನ್ ಬೈಕ್ ಉತ್ಪಾದನಾ ಘಟಕದಲ್ಲಿ ಉತ್ಪಾದನೆ ಕೈಗೊಳ್ಳುತ್ತಿದೆ.

ಜೊತೆಗೆ ಮೇಕ್ ಇನ್ ಇಂಡಿಯಾ ಯೋಜನೆ ಅಡಿ ಭಾರತದಲ್ಲಿ ಉತ್ಪಾದನೆ ಮಾಡಿ ಪ್ರಮುಖ ಮಾರುಕಟ್ಟೆಗಳಿಗೆ ರಫ್ತು ಕೈಗೊಳ್ಳುತ್ತಿದ್ದು, ಹೊಸ ಆರ್‌ಸಿ 390 ಮಾದರಿಯು ಯುಎಸ್ ನಲ್ಲಿ ಭಾರತದಲ್ಲಿ ನಿರ್ಮಾಣವಾದ ಮಾದರಿಗಳೇ ರಫ್ತುಗೊಳ್ಳುವ ಸಾಧ್ಯತೆಗಳಿವೆ.

ಹೊಸ ವಿನ್ಯಾಸದ ನ್ಯೂ ಜನರೇಷನ್ ಆರ್‌ಸಿ ಬೈಕ್‌ಗಳು ಪ್ರಸ್ತುತ ತಲೆಮಾರಿಗೆ ಹೋಲಿಸಿದರೆ ಸಂಪೂರ್ಣವಾಗಿ ವಿಭಿನ್ನ ಶೈಲಿಯನ್ನು ಹೊಂದಿದೆ. ಈ ನ್ಯೂ ಜನರೇಷನ್ ಬೈಕ್‌ಗಳು ಮಾರಾಟದಲ್ಲಿ ಕೆಟಿಎಂ ಕಂಪನಿಗೆ ಹೆಚ್ಚಿನ ಲಾಭಾಂಶ ನೀಡಬಹುದಾಗಿದೆ.