ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕ್
ರಾಯಲ್ ಎನ್ಫೀಲ್ಡ್ (Royal Enfield) ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದೆ. ಈ ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಬೈಕ್‌ಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಹೊಸ ಬೈಕ್‌ಗಳೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ವಿವಿಧ ವಿಭಾಗಗಳಲ್ಲಿ ರಾಯಲ್ ಎನ್‌ಫೀಲ್ಡ್ ಬ್ರ್ಯಾಂಡ್‌ನ ಉಪಸ್ಥಿತಿಯನ್ನು ಬಲಪಡಿಸಲು ಸಹಾಯವಾಗುತ್ತದೆ. ಮುಂದಿನ 2-3 ವರ್ಷಗಳವರೆಗೆ ಪ್ರತಿ 3 ತಿಂಗಳಿಗೊಮ್ಮೆ ಹೊಸ ಮೋಟಾರ್‌ಸೈಕಲ್ ಅನ್ನು ಬಿಡುಗಡೆ ಮಾಡುವುದಾಗಿ ರಾಯಲ್ ಎನ್‌ಫೀಲ್ಡ್ ಈಗಾಗಲೇ ಘೋಷಿಸಿದೆ. ರಾಯಲ್ ಎನ್ಫೀಲ್ಡ್ ಕಂಪನಿಯು ಮುಂದೆ ಬಿಡುಗಡೆಗೊಳಿಸುವ ಮಾದರಿಗಳಲ್ಲಿ ಹೊಸ ಹಂಟರ್ 350 ಕೂಡ ಒಳಗೊಂಡಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕ್ ಈ ವರ್ಷದ ಮಧ್ಯಂತರ ಅವಧಿಯಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.

ಈ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕ್ ಬ್ರ್ಯಾಂಡ್‌ನ 350ಸಿಸಿ ವಿಭಾಗದಲ್ಲಿ ಇರಿಸಲಾಗುತ್ತದೆ. ಇನ್ನು ಈ ಹೊಸ ಹಂಟರ್ 350 ಬೈಕನ್ನು ಬ್ರ್ಯಾಂಡ್‌ನ ಹೊಸ ಜೆ-ಪ್ಲಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತದೆ. ಈ ಹೊಸ ಬೈಕ್ ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

ಈ ಬೈಕ್ ಸ್ಫಾಟ್ ಟೆಸ್ಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ. ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕಿನ ವಿನ್ಯಾಸ, ಫೀಚರ್ ಮತ್ತು ಹೆಚ್ಚಿನ ಮಾಹಿತಿಗಳು ಬಹಿರಂಗವಾಗಿವೆ. ಸ್ಫಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಈ ಮಾದರಿಯು ಕ್ಲಾಸಿಕ್-ರೋಡ್‌ಸ್ಟರ್ ಲುಕ್ ಅನ್ನು ಹೊಂದಿದೆ.

ಈ ಬೈಕಿನ ವೃತಕಾರದ ಹೆಡ್‌ಲ್ಯಾಂಪ್, ಟೈಲ್‌ಲ್ಯಾಂಪ್ ಮತ್ತು ಟರ್ನ್ ಸಿಗ್ನಲ್ ಇಂಡಿಗೇಟರ್ ಗಳನ್ನು ಒಳಗೊಂಡಿವೆ. ಇದರ ವೃತ್ತಾಕಾರದ ಹೆಡ್‌ಲ್ಯಾಂಪ್ ಕ್ಲಸ್ಟರ್ ಸಂಯೋಜಿತ ಎಲ್ಇಡಿ ಡೇಟೈಮ್ ರನ್ನಿಂಗ್ ಲೈಟ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಸ್ಕಲಪಡಡ್ ಫ್ಯೂಯಲ್ ಟ್ಯಾಂಕ್, ಮೆತ್ತನೆಯ ಸ್ಪ್ಲಿಟ್-ಸೀಟುಗಳು, ವಿಶಾಲವಾದ ಹ್ಯಾಂಡಲ್‌ಬಾರ್, ಅಪ್-ಸ್ವಿಪ್ಟ್ ಎಕ್ಸಾಸ್ಟ್ ಮತ್ತು ಸೈಡ್ ಕವರ್‌ಗಳು ಮಿಟಿಯೊರ್ 350 ಬೈಕಿನಲ್ಲಿರುವಂತೆ ಇದೆ.

ಇನ್ನು ಈ ಹೊಸ ಹಂಟರ್ 350 ಬೈಕಿನಲ್ಲಿ ಸಣ್ಣ-ಸಿಂಗಲ್-ಪಾಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಇದರಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಅನ್ನು ಒಳಗೊಂಡಿರಲಿದೆ. ಮೊಬೈಲ್ ಅಪ್ಲಿಕೇಶನ್ ಮೂಲಕ ಸ್ಮಾರ್ಟ್‌ಫೋನ್‌ನೊಂದಿಗೆ ಒಮ್ಮೆ ಜೋಡಿಸಿದಾಗ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಒದಗಿಸಲು ಇದು ಸಣ್ಣ ಟಿಎಫ್‌ಟಿ ಡಿಸ್ ಪ್ಲೇಯನ್ನು ಒಳಗೊಂಡಿರುತ್ತದೆ.

ಇದು ಸ್ಪೀಡ್, ಒಡೋಮೀಟರ್, ಟ್ರಿಪ್ ಮೀಟರ್, ಫ್ಯೂಯಲ್ ಗೇಜ್ ಮತ್ತು ಇತರ ಟೆಲ್ಟೇಲ್ ಚಿಹ್ನೆಗಳಂತಹ ಉಳಿದ ವಿವರಗಳನ್ನು ಒದಗಿಸಲು ಮುಖ್ಯ ಕ್ಲಸ್ಟರ್ ಯುನಿಟ್ ಅನ್ನು ಕಾಯ್ದಿರಿಸಲಾಗುತ್ತದೆ. ಇನ್ನು ಈ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕಿನಲ್ಲಿ ಮಿಟಿಯೊರ್ 350 ಮಾದರಿಯಲ್ಲಿರುವ ಅದೇ ಎಂಜಿನ್ ಅನ್ನು ಅಳವಡಿಸಬಹುದು,

ಇದು ಹೊಸ ಎಸ್‌ಒಹೆಚ್‌ಸಿ 349ಸಿಸಿ ಸಿಂಗಲ್ ಸಿಲಿಂಡರ್ ಏರ್-ಆಯಿಲ್ ಕೂಲ್ಡ್ ಎಸ್‌ಒಹೆಚ್‌ಸಿ ಎಂಜಿನ್ ಆಗಿರುತ್ತದೆ. ಈ ಎಂಜಿನ್ 6100 ಆರ್‌ಪಿಎಂನಲ್ಲಿ 20.2 ಬಿಹೆಚ್‍ಪಿ ಪವರ್ ಮತ್ತು 4000 ಆರ್‌ಪಿಎಂನಲ್ಲಿ 27 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗುತ್ತದೆ.

ಇನ್ನು ಈ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಹಿಂಭಾಗದಲ್ಲಿ ಟ್ವಿನ್-ಶಾಕ್ ಸಸ್ಪೆಂಕ್ಷನ್ ಸೆಟಪ್ ಅನ್ನು ಒಳಗೊಂಡಿದೆ. ಇನ್ನು ಎರಡು ಕಡೆಯಲ್ಲಿ ಡಿಸ್ಕ್ ಬ್ರೇಕ್ ಅನ್ನು ನೀಡಿ, ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗುತ್ತದೆ.

ರಾಯಲ್ ಎನ್ಫೀಲ್ಡ್ ಕಂಪನಿಯು 2022ರ ಜನವರಿ ತಿಂಗಳ ಮಾರಾಟದ ವರದಿಯನ್ನು ಇತ್ತೀಚೆಗೆ ಬಹಿರಂಗಪಡಿಸಿದೆ. ಕಳೆದ ತಿಂಗಳು ರಾಯಲ್ ಎನ್ಫೀಲ್ಡ್ ಕಂಪನಿಯು 58,838 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಕಳೆದ ವರ್ಷ ಇದೇ ತಿಂಗಳಿನಲ್ಲಿ ರಾಯಲ್ ಎನ್ಫೀಲ್ಡ್ ಕಂಪನಿಯು 68,887 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.15 ರಷ್ಟು ಕುಸಿತವಾಗಿದೆ. ಕೊರೋನಾ ಮೂರನೇ ಅಲೆ ಪ್ರಾರಂಭ ಮತ್ತು ಸೆಮಿಕಂಡೆಕ್ಟರ್ ಚಿಪ್ ಕೊರತೆಯಿಂದ ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ. ಆದರೆ ರಾಯಲ್ ಎನ್ಫೀಲ್ಡ್ ಕಂಪನಿಯು ರಫ್ತಿನಲ್ಲಿ ಬಲವಾದ ಬೆಳವಣಿಗೆಯನ್ನು ಸಾಧಿಸಿದೆ. ಇದುವರೆಗೆ ಅತ್ಯಧಿಕ ಮಾಸಿಕ ರಫ್ತುಗಳನ್ನು ವರದಿ ಮಾಡಿದೆ,

ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು ಭರ್ಜರಿ ಬೇಡಿಕೆಯನ್ನು ಪಡೆದುಕೊಂಡಿದೆ. ಇನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾತ್ರ ರಾಯಲ್ ಎನ್ಫೀಲ್ಡ್ ಕಂಪನಿಯು 2022ರ ಜನವರಿ ತಿಂಗಳಿನಲ್ಲಿ 49,726 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇನ್ನು ಒಂದು ವರ್ಷದ ಹಿಂದೆ ಅದೇ ತಿಂಗಳಲ್ಲಿ 64,372 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೆ.23 ರಷ್ಟು ಕುಸಿತವಾಗಿದೆ.

ಒಟ್ಟಾರೆಯಾಗಿ ರಾಯಲ್ ಎನ್‌ಫೀಲ್ಡ್ ಕಂಪನಿಯ 350ಸಿಸಿ ವಿಭಾಗದ ಹಂಟರ್ ಬೈಕ್ ಹೊಸ ಮಾದರಿಯಾಗಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ ಬೈಕ್ ಈ ವರ್ಷದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಬಹುದುದೆಂದು ಎಂದು ನಿರೀಕ್ಷಿಸುತ್ತೇವೆ. ಈ ಹೊಸ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹೋಂಡಾ ಹೈನೆಸ್ ಸಿಬಿ 350 ಬೈಕಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications