Just In
Don't Miss!
- Sports
ವಿಂಡೀಸ್ ಪ್ರವಾಸದಲ್ಲಿ ಹಿರಿಯ ಆಟಗಾರರಿಗೆ ವಿಶ್ರಾಂತಿ, ಸಂಜು ಸ್ಯಾಮ್ಸನ್ಗೆ ಸಿಗಲಿದೆ ಮತ್ತೊಂದು ಅವಕಾಶ?
- News
ಅಮೃತ್ ನಗರೋತ್ಥಾನ ಯೋಜನೆಯಡಿ ಬೆಂಗಳೂರು ಪೂರ್ವ ವಲಯಕ್ಕೆ 450 ಕೋಟಿ ಮಂಜೂರು
- Movies
ಹಿಂದಿಗೆ ಹೋಗುತ್ತಿದೆ ಏಳು ವರ್ಷ ಹಳೆಯ ಕನ್ನಡ ಸಿನಿಮಾ: ಅಕ್ಷಯ್-ಶಾಹಿದ್ ನಡುವೆ ಪೈಪೋಟಿ!
- Finance
ಸರ್ವೀಸ್ ಚಾರ್ಜ್ ಬಗ್ಗೆ ಗ್ರಾಹಕರು ದೂರು ನೀಡುವುದು ಹೇಗೆ?
- Lifestyle
ಯಾರೂ ಇಲ್ಲದಿದ್ದಾಗ ಪುರುಷ ಈ ರೀತಿ ವಿಲಕ್ಷಣವಾಗಿ ವರ್ತಿಸುತ್ತಾನೆ, ಗೊತ್ತಾ? ಇದನ್ನು ಓದಿದ್ರೆ ನೀವು ಶಾಕ್ ಆಗೋದು ಪಕ್ಕಾ!
- Technology
ಜಬ್ರೋನಿಕ್ಸ್ ಡ್ರಿಪ್ ಸ್ಮಾರ್ಟ್ವಾಚ್ ಬಿಡುಗಡೆ! ಲಾಂಗ್ ಬ್ಯಾಟರಿ ಬ್ಯಾಕ್ಅಪ್ ವಿಶೇಷ!
- Education
Karnataka Second PUC Results 2022 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಯ ಪ್ರತಿಗಳು ಜು.6ರಿಂದ ಲಭ್ಯ
- Travel
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
ಕೈಗೆಟುಕುವ ದರ, ಆಕರ್ಷಕ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕ್
ರಾಯಲ್ ಎನ್ಫೀಲ್ಡ್ (Royal Enfield) ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದೆ. ಈ ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಬೈಕ್‌ಗಳನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ.

ಹೊಸ ಬೈಕ್‌ಗಳೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ವಿವಿಧ ವಿಭಾಗಗಳಲ್ಲಿ ರಾಯಲ್ ಎನ್‌ಫೀಲ್ಡ್ ಬ್ರ್ಯಾಂಡ್‌ನ ಉಪಸ್ಥಿತಿಯನ್ನು ಬಲಪಡಿಸಲು ಸಹಾಯವಾಗುತ್ತದೆ. ಹೊಸ 350 ಸಿಸಿ, 450 ಸಿಸಿ ಮತ್ತು 650 ಸಿಸಿ ಮಾದರಿಗಳು ಸ್ಪಾಟ್ ಟೆಸ್ಟ್ ನಡೆಸುವ ವೇಳೆ ಸ್ಪೈ ಚಿತ್ರಗಳು ಬಹಿರಂಗವಾಗಿವೆ. ರಾಯಲ್ ಎನ್ಫೀಲ್ಡ್ ಕಂಪನಿಯು ಮುಂದೆ ಬಡುಗಡೆಗೊಳಿಸುವ ಮಾದರಿಗಳಲ್ಲಿ ಹೊಸ ಹಂಟರ್ 350 ಕೂಡ ಒಳಗೊಂಡಿದೆ. ಇದೀಗ ಈ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕಿಗೆ ಸಂಬಂಧಿಸಿದ ವಿವರಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ.

ಮುಂಬರುವ ರಾಯಲ್ ಎನ್‌ಫೀಲ್ಡ್ ಹಂಟರ್ ಬಗ್ಗೆ ಸೋರಿಕೆಯಾದ ಮಾಹಿತಿಯು ಚಿತ್ರಗಳು, ಬೆಲೆ ಮತ್ತು ಇತರ ನಿರ್ಣಾಯಕ ಮಾಹಿತಿಯನ್ನು ಬಹಿರಂಗಪಡಿಸಿದೆ. ಈ ಬೈಕಿಹೆ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸುವ ಚಿತ್ರಗಳು ಬಹಿರಂಗವಾಗಿತ್ತು. ಇತ್ತೀಚಿನ ಸೋರಿಕೆಯಾದ ಚಿತ್ರಗಳು ಮುಂಬರುವ ರಾಯಲ್ ಎನ್‌ಫೀಲ್ಡ್ ಮೋಟಾರ್‌ಸೈಕಲ್ ಬಗ್ಗೆ ಹೆಚ್ಚಿನದನ್ನು ಬಹಿರಂಗಪಡಿಸುತ್ತವೆ.

ಇತ್ತೀಚಿನ ಚಿತ್ರಗಳಲ್ಲಿ, ಮುಂಬರುವ ರಾಯಲ್ ಎನ್‌ಫೀಲ್ಡ್ ಹಂಟರ್ ಅದರ ಟಿಯರ್-ಡ್ರಾಪ್ ಆಕಾರದ ಇಂಧನ ಟ್ಯಾಂಕ್, ಉದ್ದವಾದ ಸಿಂಗಲ್-ಪೀಸ್ ಸೀಟ್, ವೃತ್ತಾಕಾರದ ಹೆಡ್‌ಲ್ಯಾಂಪ್‌ಗಳು, ಟರ್ನ್ ಇಂಡಿಕೇಟರ್‌ಗಳು, ರಿಯರ್-ವ್ಯೂ ಮಿರರ್‌ಗಳು ಮತ್ತು ಸ್ವಲ್ಪ ಎತ್ತರದ ಸ್ಕ್ರ್ಯಾಂಬ್ಲರ್ ಮಾದರಿಯ ಮೋಟಾರ್‌ಸೈಕಲ್ ಆಗಿರುತ್ತದೆ ಎಂಬುದು ಸ್ಪಷ್ಟವಾಗಿದೆ.

ಮುಂಬರುವ ರಾಯಲ್ ಎನ್‌ಫೀಲ್ಡ್ ಹಂಟರ್ ರಾಯಲ್ ಎನ್‌ಫೀಲ್ಡ್ ಜೆ-ಪ್ಲಾಟ್‌ಫಾರ್ಮ್ ಮತ್ತು ಸ್ಕ್ರಾಂಬ್ಲರ್ ತರಹದ ಸ್ಟೈಲಿಂಗ್ ಅನ್ನು ಆಧರಿಸಿದೆ, ಮುಂಬರುವ ರಾಯಲ್ ಎನ್‌ಫೀಲ್ಡ್ ಹಂಟರ್ ರಾಯಲ್ ಎನ್‌ಫೀಲ್ಡ್ ಮೋಟಾರ್‌ಸೈಕಲ್‌ಗಳಲ್ಲಿ ಅತ್ಯಂತ ಹಗುರವಾಗಿದೆ ಮತ್ತು ಮಿಟಿಯೊರ್ ಮತ್ತು ಕ್ಲಾಸಿಕ್‌ನಂತೆಯೇ ಅದೇ 349 ಸಿಸಿ ಪವರ್‌ಟ್ರೇನ್ ಅನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಮುಂಬರುವ ರಾಯಲ್ ಎನ್‌ಫೀಲ್ಡ್ ಹಂಟರ್ 20.2 ಬಿಹೆಚ್‌ಪಿ ಪವರ್ ಮತ್ತು 27 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಆದರೆ ರಾಯಲ್ ಎನ್‌ಫೀಲ್ಡ್ 5-ಸ್ಪೀಡ್ ಗೇರ್‌ಬಾಕ್ಸ್‌ನ ಗೇರ್ ಅನುಪಾತಕ್ಕೆ ಮೋಟಾರ್‌ಸೈಕಲ್‌ನ ಪಾತ್ರಕ್ಕೆ ಸರಿಹೊಂದುವಂತೆ ಯಾವುದೇ ಬದಲಾವಣೆಗಳನ್ನು ಮಾಡಿದೆಯೇ ಎಂದು ನಮಗೆ ಖಚಿತವಾಗಿಲ್ಲ.

ಇದರ ಜೊತೆಗೆ, ಮುಂಬರುವ ರಾಯಲ್ ಎನ್‌ಫೀಲ್ಡ್ ಹಂಟರ್ ಅನ್ನು 'J1C1' ಮತ್ತು 'J1C2' ಎಂಬ ಕೋಡ್ ನೇಮ್ ನಲ್ಲಿ ಎರಡು ರೂಪಾಂತರಗಳಲ್ಲಿ ನೀಡಲಾಗುವುದು ಎಂದು ಸೋರಿಕೆಯಾದ ಮಾಹಿತಿಯು ಬಹಿರಂಗಪಡಿಸುತ್ತದೆ. ಈ ಎರಡು ಮಾದರಿಗಳಲ್ಲಿ, 'J1C1' ಹೆಚ್ಚಿನ ವೈಶಿಷ್ಟ್ಯಗಳನ್ನು ಹೊಂದಿದೆ, ಆದರೆ 'J1C2' ಪುನರಾವರ್ತನೆಯು ಬೆಲೆಗಳನ್ನು ಅತ್ಯಂತ ಸ್ಪರ್ಧಾತ್ಮಕವಾಗಿಸಲು ಕನಿಷ್ಠ ವೈಶಿಷ್ಟ್ಯಗಳೊಂದಿಗೆ ಬರುತ್ತದೆ.

ಬಿಡುಗಡೆಯಾದಾಗ, ರಾಯಲ್ ಎನ್‌ಫೀಲ್ಡ್ ಮುಂಬರುವ ಹಂಟರ್ ಮೋಟಾರ್‌ಸೈಕಲ್‌ನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.1.30 ಲಕ್ಷದಿಂದ 1.40 ಲಕ್ಷವಾಗಿರುತ್ತದೆ ಎಂದು ನಿರೀಕ್ಷಿಸುತ್ತೇವೆ. ಈ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಈ ಮಾದರಿಯು ಕ್ಲಾಸಿಕ್-ರೋಡ್‌ಸ್ಟರ್ ಲುಕ್ ಅನ್ನು ಹೊಂದಿದೆ.

ಇನ್ನು ಈ ಹೊಸ ಹಂಟರ್ 350 ಬೈಕಿನಲ್ಲಿ ಸಣ್ಣ-ಸಿಂಗಲ್-ಪಾಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಇದರಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಅನ್ನು ಒಳಗೊಂಡಿರಲಿದೆ. ಮೊಬೈಲ್ ಅಪ್ಲಿಕೇಶನ್ ಮೂಲಕ ಸ್ಮಾರ್ಟ್‌ಫೋನ್‌ನೊಂದಿಗೆ ಒಮ್ಮೆ ಜೋಡಿಸಿದಾಗ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಒದಗಿಸಲು ಇದು ಸಣ್ಣ ಟಿಎಫ್‌ಟಿ ಡಿಸ್ ಪ್ಲೇಯನ್ನು ಕೂಡ ಹೊಂದಿದೆ. ಇದು ಸ್ಪೀಡ್, ಒಡೋಮೀಟರ್, ಟ್ರಿಪ್ ಮೀಟರ್, ಫ್ಯೂಯಲ್ ಗೇಜ್ ಮತ್ತು ಇತರ ಟೆಲ್ಟೇಲ್ ಚಿಹ್ನೆಗಳಂತಹ ಉಳಿದ ವಿವರಗಳನ್ನು ಒದಗಿಸಲು ಮುಖ್ಯ ಕ್ಲಸ್ಟರ್ ಯುನಿಟ್ ಹೊಂದಿರುತ್ತದೆ.

ಇನ್ನು ಈ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಹಿಂಭಾಗದಲ್ಲಿ ಟ್ವಿನ್-ಶಾಕ್ ಸಸ್ಪೆಂಕ್ಷನ್ ಸೆಟಪ್ ಅನ್ನು ಒಳಗೊಂಡಿದೆ. ಇನ್ನು ಪ್ರಮುಖವಾಗಿ ಸುರಕ್ಷತೆಗಾಗಿ ಎರಡು ಕಡೆಯಲ್ಲಿ ಡಿಸ್ಕ್ ಬ್ರೇಕ್ ಅನ್ನು ನೀಡಿ, ಇದರೊಂದಿಗೆ ಹೆಚ್ಚಿನ ಸುರಕ್ಷತೆಗಾಗಿ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗುತ್ತದೆ.

ರಾಯಲ್ ಎನ್ಫೀಲ್ಡ್ ಕಂಪನಿಯು 2022ರ ಮೇ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ತಿಂಗಳು ರಾಯಲ್ ಎನ್ಫೀಲ್ಡ್ ಕಂಪನಿಯು 63,643 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. 2021ರ ಮೇ ತಿಂಗಳಿನಲ್ಲಿ 27,294 ಮೋಟಾರ್‌ಸೈಕಲ್‌ಗಳನ್ನು ರಾಯಲ್ ಎನ್ಫೀಲ್ಡ್ ಕಂಪನಿಯು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇಕಡಾ 133 ರಷ್ಟು ಗಮನಾರ್ಹ ಬೆಳವಣಿಗೆಯನ್ನು ದಾಖಲಿಸಿದೆ. ತನ್ನ ಅಂತರಾಷ್ಟ್ರೀಯ ಬೆಳವಣಿಗೆಯ ವೇಗವನ್ನು ಮುಂದುವರೆಸುತ್ತಾ, ಕಂಪನಿಯು ತನ್ನ ಅತಿ ಹೆಚ್ಚು ಮೋಟಾರ್ ಸೈಕಲ್‌ಗಳನ್ನು ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ 10,118 ಯುನಿಟ್‌ಗಳನ್ನು ಮಾರಾಟ ಮಾಡಿತು. ಇದು ವರ್ಷದಿಂದ ವರ್ಷಕ್ಕೆ 40 ಪ್ರತಿಶತದಷ್ಟು ಬೆಳವಣಿಗೆಯನ್ನು ಸಾಧಿಸುತ್ತಿದೆ.

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ
ಒಟ್ಟಾರೆಯಾಗಿ ರಾಯಲ್ ಎನ್‌ಫೀಲ್ಡ್ ಕಂಪನಿಯ 350ಸಿಸಿ ವಿಭಾಗದ ಹಂಟರ್ ಬೈಕ್ ಹೊಸ ಮಾದರಿಯಾಗಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ ಬೈಕ್ ಮುಂದಿನ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಬಹುದುದೆಂದು ಎಂದು ನಿರೀಕ್ಷಿಸುತ್ತೇವೆ. ಈ ಹೊಸ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹೋಂಡಾ ಹೈನೆಸ್ ಸಿಬಿ 350 ಬೈಕಿಗೆ ಪೈಪೋಟಿ ನೀಡುತ್ತದೆ.