ಪ್ರತಿ ಚಾರ್ಜ್‌ಗೆ 200 ಕಿ.ಮೀ ಮೈಲೇಜ್ ನೀಡುವ ಇವಿ ಬೈಕ್ ನಿರ್ಮಿಸಿದ ಬೆಂಗಳೂರಿನ ಒಬೆನ್ ಇವಿ

ಮಾರುಕಟ್ಟೆಯಲ್ಲಿನ ಬೇಡಿಕೆ ಆಧರಿಸಿ ಎಲೆಕ್ಟ್ರಿಕ್ ಸ್ಟಾರ್ಟ್ಅಪ್ ವಾಹನ ಉತ್ಪಾದನಾ ಕಂಪನಿಗಳು ವಿವಿಧ ಮಾದರಿಯ ಇವಿ ಮೂಲಕ ಗ್ರಾಹಕರನ್ನು ಸೆಳೆಯುತ್ತಿದ್ದು, ನಮ್ಮ ಬೆಂಗಳೂರು ಮೂಲದ ಒಬೆನ್ ಇವಿ ಕಂಪನಿಯು ಕೂಡಾ ಆಕರ್ಷಕವಾದ ಇವಿ ಬೈಕ್ ಮಾದರಿಯೊಂದನ್ನು ಅಭಿವೃದ್ದಿಗೊಳಿಸಿದೆ.

ಪ್ರತಿ ಚಾರ್ಜ್‌ಗೆ 200 ಕಿ.ಮೀ ಮೈಲೇಜ್ ನೀಡುವ ಇವಿ ಬೈಕ್ ನಿರ್ಮಿಸಿದ ಬೆಂಗಳೂರಿನ ಒಬೆನ್ ಇವಿ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಗೊಳಿಸುವಲ್ಲಿ ಸ್ಟಾರ್ಟ್ಅಪ್ ಕಂಪನಿಗಳು ಯಶಸ್ವಿಯಾಗುತ್ತಿವೆ.

ದುಬಾರಿ ಇಂಧನ ದರ ಮತ್ತು ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಯಾಗಿ ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಪ್ರೋತ್ಸಾಹ ಯೋಜನೆಗಳನ್ನು ಜಾರಿಗೆ ತಂದಿದ್ದು, ಹೊಸ ಯೋಜನೆಗಳಿಂದಾಗಿ ಕಳೆದ ಎರಡು ವರ್ಷದಿಂದ ಇವಿ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆಯಾಗಿದೆ.

ಪ್ರತಿ ಚಾರ್ಜ್‌ಗೆ 200 ಕಿ.ಮೀ ಮೈಲೇಜ್ ನೀಡುವ ಇವಿ ಬೈಕ್ ನಿರ್ಮಿಸಿದ ಬೆಂಗಳೂರಿನ ಒಬೆನ್ ಇವಿ

ಇವಿ ವಾಹನಗಳಿಗೆ ಉತ್ತಮ ಬೇಡಿಕೆ ಹರಿದುಬರುತ್ತಿರುವುದರಿಂದ ನಮ್ಮ ಬೆಂಗಳೂರು ಮೂಲದ ಒಬೆನ್ ಇವಿ(OBEN EV) ಗ್ರಾಹಕರ ಬೇಡಿಕೆಯೆಂತೆ ಹೊಸ ವೈಶಿಷ್ಟ್ಯತೆಯ ಹೈ ಸ್ಪೀಡ್ ಇವಿ ಬೈಕ್ ಮಾದರಿಯನ್ನು ಅಭಿವೃದ್ದಿಗೊಳಿಸಿದೆ. ಒಬೆನ್ ಇವಿ ಬೈಕ್ ಮಾದರಿಯು ಮಾರುಕಟ್ಟೆಯಲ್ಲಿರುವ ಇತರೆ ಇವಿ ದ್ವಿಚಕ್ರ ವಾಹನ ಮಾದರಿಗಳಿಂತಲೂ ಅತ್ಯುತ್ತಮ ತಾಂತ್ರಿಕ ಅಂಶಗಳೊಂದಿಗೆ ಹೈ ಸ್ಪೀಡ್ ಮತ್ತು ಅಧಿಕ ಮೈಲೇಜ್ ಖಾತ್ರಿಪಡಿಸುತ್ತದೆ.

ಪ್ರತಿ ಚಾರ್ಜ್‌ಗೆ 200 ಕಿ.ಮೀ ಮೈಲೇಜ್ ನೀಡುವ ಇವಿ ಬೈಕ್ ನಿರ್ಮಿಸಿದ ಬೆಂಗಳೂರಿನ ಒಬೆನ್ ಇವಿ

ಮಾಹಿತಿಗಳ ಪ್ರಕಾರ, ಹೊಸ ಒಬೆನ್ ಇವಿ ಬೈಕ್ ಮಾದರಿಯು ಪ್ರತಿ ಗಂಟೆಗೆ ಗರಿಷ್ಠ 100 ಕಿ.ಮೀ ಟಾಪ್ ಸ್ಪೀಡ್ ಹೊಂದಿದ್ದು, ಪ್ರತಿ ಚಾರ್ಜ್‌ಗೆ 200 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ. ಆದರೆ ಹೊಸ ಬೈಕ್ ಮಾದರಿಯ ಬ್ಯಾಟರಿ ಮಾಹಿತಿ ಲಭ್ಯವಾಗಿಲ್ಲವಾದರೂ ಫಾಸ್ಟ್ ಚಾರ್ಜಿಂಗ್ ವೈಶಿಷ್ಟ್ಯತೆಯೊಂದಿಗೆ ಕೇವಲ 2 ಗಂಟೆಗಳಲ್ಲಿ ಪೂರ್ತಿ ಚಾರ್ಜ್ ಆಗಲಿದೆ.

ಪ್ರತಿ ಚಾರ್ಜ್‌ಗೆ 200 ಕಿ.ಮೀ ಮೈಲೇಜ್ ನೀಡುವ ಇವಿ ಬೈಕ್ ನಿರ್ಮಿಸಿದ ಬೆಂಗಳೂರಿನ ಒಬೆನ್ ಇವಿ

ವಿಶೇಷವೆಂದರೆ ಹೊಸ ಒಬೆನ್ ಇವಿ ಬೈಕ್ ಮಾದರಿಯು ನಮ್ಮ ಬೆಂಗಳೂರಿನಲ್ಲಿಯೇ ಸಿದ್ದವಾಗುತ್ತಿದ್ದು, ಬೆಂಗಳೂರಿನ ನಿವಾಸಿಗಳಾದ ದಿನಕರ್ ಮತ್ತು ಮಧುಮತಿ ಅಗರವಾಲ್ ಎನ್ನುವ ದಂಪತಿಯು ಈ ಹೊಸ ಇವಿ ಬೈಕ್ ಮಾದರಿಯನ್ನು ನಿರ್ಮಾಣ ಮಾಡಿದ್ದಾರೆ.

ಪ್ರತಿ ಚಾರ್ಜ್‌ಗೆ 200 ಕಿ.ಮೀ ಮೈಲೇಜ್ ನೀಡುವ ಇವಿ ಬೈಕ್ ನಿರ್ಮಿಸಿದ ಬೆಂಗಳೂರಿನ ಒಬೆನ್ ಇವಿ

ಮೆಕ್ಯಾನಿಕಲ್ ವೃತ್ತಿ ಹಿನ್ನಲೆ ಹೊಂದಿರುವ ದಿನಕರ್ ಮತ್ತು ಮಧುಮತಿ ಅಗರವಾಲ್ ದಂಪತಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆ ಆಧರಿಸಿ ಒಬೆನ್ ಇವಿ ಬೈಕ್ ಮಾದರಿಯನ್ನು ನಿರ್ಮಾಣ ಮಾಡಿದ್ದು, ಬೈಕ್ ಅನಾವರಣ ಹೊರತಾಗಿ ಯಾವುದೇ ಹೆಚ್ಚುವರಿ ತಾಂತ್ರಿಕ ಮಾಹಿತಿ ಹಂಚಿಕೊಂಡಿಲ್ಲ. ಸದ್ಯ ಪೋಟೋಟೈಪ್ ಮಾದರಿಯೊಂದಿಗೆ ವಿವಿಧ ಹಂತದ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಹೊಸ ಇವಿ ಬೈಕ್ ಮಾದರಿಯ ನಿರ್ಮಾಣಕ್ಕಾಗಿ ಸಂಪೂರ್ಣವಾಗಿ ಸ್ಥಳೀಯ ನಿರ್ಮಾಣದ ಬಿಡಿಭಾಗಗಳನ್ನೇ ಬಳಕೆ ಮಾಡಲಾಗಿದೆ.

ಪ್ರತಿ ಚಾರ್ಜ್‌ಗೆ 200 ಕಿ.ಮೀ ಮೈಲೇಜ್ ನೀಡುವ ಇವಿ ಬೈಕ್ ನಿರ್ಮಿಸಿದ ಬೆಂಗಳೂರಿನ ಒಬೆನ್ ಇವಿ

ಜೊತೆಗೆ ಹೊಸ ಇವಿ ಬೈಕ್ ಮಾದರಿಯ ರೈಡಿಂಗ್ ಸುಲಭಗೊಳಿಸಲು ಕನೆಕ್ಟೆಡ್ ಫೀಚರ್ಸ್ ನೀಡಲಾಗಿದ್ದು, ಹೊಸ ಬೈಕಿನಲ್ಲಿ ಸ್ಮಾರ್ಟ್ ಕನೆಕ್ಟ್ ಮೂಲಕ ಹಲವಾರು ತಾಂತ್ರಿಕ ಅಂಶಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಸುಲಭವಾಗಿ ಪಡೆಯಬಹುದಾಗಿದೆ.

ಪ್ರತಿ ಚಾರ್ಜ್‌ಗೆ 200 ಕಿ.ಮೀ ಮೈಲೇಜ್ ನೀಡುವ ಇವಿ ಬೈಕ್ ನಿರ್ಮಿಸಿದ ಬೆಂಗಳೂರಿನ ಒಬೆನ್ ಇವಿ

ಈ ಮೂಲಕ ಹೊಸ ಬೈಕ್ ಮಾದರಿಯು ಸಾಂಪ್ರಾದಾಯಿಕ ವಾಹನಗಳಿಂದ ಇವಿ ವಾಹನಗಳತ್ತ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, ಹೊಸ ಬೈಕ್ ಮಾದರಿಯು ಮುಂದಿನ ಕೆಲವು ದಿನಗಳಲ್ಲಿ ಮತ್ತಷ್ಟು ಹೊಸ ವೈಶಿಷ್ಟ್ಯತೆಗಳೊಂದಿಗೆ ಸುಧಾರಣೆಗೊಳ್ಳಲಿದೆ.

ಪ್ರತಿ ಚಾರ್ಜ್‌ಗೆ 200 ಕಿ.ಮೀ ಮೈಲೇಜ್ ನೀಡುವ ಇವಿ ಬೈಕ್ ನಿರ್ಮಿಸಿದ ಬೆಂಗಳೂರಿನ ಒಬೆನ್ ಇವಿ

ಒಬೆನ್ ಇವಿ ಕಂಪನಿಯು ಹೊಸ ಬೈಕ್ ಮಾದರಿಯನ್ನು ಇನ್ನಷ್ಟು ಹೊಸ ವೈಶಿಷ್ಟ್ಯತೆಗಳೊಂದಿಗೆ ಉತ್ಪಾದನಾ ಮಾದರಿಯನ್ನು ಶೀಘ್ರದಲ್ಲೇ ಅನಾವರಣಗೊಳಿಸಲಿದ್ದು, ಹೊಸ ಇವಿ ಬೈಕ್ ಮಾದರಿಯು ಈ ವರ್ಷದ ಮಧ್ಯಂತರದಲ್ಲಿ ಮಾರುಕಟ್ಟೆ ಪ್ರವೇಶಿಸಲಿದೆ.

ಪ್ರತಿ ಚಾರ್ಜ್‌ಗೆ 200 ಕಿ.ಮೀ ಮೈಲೇಜ್ ನೀಡುವ ಇವಿ ಬೈಕ್ ನಿರ್ಮಿಸಿದ ಬೆಂಗಳೂರಿನ ಒಬೆನ್ ಇವಿ

250 ಸಿಸಿ ಬೈಕ್ ಮಾದರಿಗಳ ಮಾದರಿಯ ಬಾಡಿ ಶೈಲಿ ಹೊಂದಿರುವ ಒಬೆನ್ ಇವಿ ಬೈಕ್ ಮಾದರಿಯು ಅತ್ಯುತ್ತಮ ಎಲೆಕ್ಟ್ರಿಕ್ ಮೋಟಾರ್ ಹೊಂದಿದ್ದು, ಕೇವಲ 3 ಸೆಕೆಂಡ್‌ಗಳಲ್ಲಿ ಸೊನ್ನೆಯಿಂದ 40 ಕಿ.ಮೀ ವೇಗಪಡೆದುಕೊಳ್ಳುವುದರ ಜೊತೆಗೆ ಕ್ವಿಕ್ ಆಕ್ಸೆರೇಷನ್ ಮೂಲಕ ಯುವ ಗ್ರಾಹಕರ ಹಾಟ್ ಫೇವರಿಟ್ ಆಗಲಿದೆ.

ಪ್ರತಿ ಚಾರ್ಜ್‌ಗೆ 200 ಕಿ.ಮೀ ಮೈಲೇಜ್ ನೀಡುವ ಇವಿ ಬೈಕ್ ನಿರ್ಮಿಸಿದ ಬೆಂಗಳೂರಿನ ಒಬೆನ್ ಇವಿ

ಹೊಸ ಬೈಕ್ ಮಾದರಿಗಾಗಿ ಸದ್ಯ ಯಾವುದೇ ಸ್ವತಂತ್ರ ಉತ್ಪಾದನಾ ಸೌಲಭ್ಯ ಹೊಂದಿರದ ಒಬೆನ್ ಇವಿ ಕಂಪನಿಯು ಉತ್ಪಾದನಾ ಸೌಲಭ್ಯಕ್ಕಾಗಿ ಶೀಘ್ರದಲ್ಲೇ ಹೊಸ ಯೋಜನೆಯನ್ನು ಪ್ರಕಟಿಸಬಹುದಾಗಿದ್ದು, ಹೊಸ ಬೈಕ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 1.30 ಲಕ್ಷದಿಂದ ರೂ. 1.50 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದೆ.

Most Read Articles

Kannada
English summary
Oben ev electric bike with a top speed of 100km and 200km range details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X