Just In
Don't Miss!
- News
ಪಲ್ಲವಿ ಡೇ ಬಳಿಕ ಮತ್ತೊಬ್ಬ ಯುವ ರೂಪದರ್ಶಿ ಆತ್ಮಹತ್ಯೆ
- Sports
ಮಹಿಳಾ ಟಿ20 ಚಾಲೆಂಜ್: ವೆಲಾಸಿಟಿ ವಿರುದ್ಧ ಗೆದ್ದ ಟ್ರೈಲ್ಬ್ಲೇಜರ್ಸ್, ಆದ್ರೂ ಫೈನಲ್ ಮಿಸ್
- Finance
ಮೇ 26ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
ಬಾಲಕೃಷ್ಣ 107ನೇ ಸಿನಿಮಾದ ಟೈಟಲ್ 'ಜೈ ಬಾಲಯ್ಯ'
- Technology
ಸ್ಯಾಮ್ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್ಫೋನ್ ಬಿಡುಗಡೆ! ವಿಶೇಷತೆ ಏನು?
- Lifestyle
ಕಿಚನ್ ಟಿಪ್ಸ್: ಫ್ರಿಡ್ಜ್ನಲ್ಲಿ ಆಹಾರಗಳನ್ನು ಹೀಗೆ ಇಟ್ಟರೆ ಆರೋಗ್ಯಕ್ಕೆ ಕುತ್ತು ಎಚ್ಚರ..!
- Education
Karnataka SSLC Revaluation 2022 : ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಹೂಡಿಕೆಯೊಂದಿಗೆ ಎರಡನೇ ಇವಿ ವಾಹನ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿದ ಒಕಿನಾವ
ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿವಿಧ ವಾಹನ ಉತ್ಪಾದನಾ ಕಂಪನಿಗಳು ಗ್ರಾಹಕರ ಬೇಡಿಕೆ ಪೂರೈಸಲು ಉತ್ಪಾದನಾ ಪ್ರಮಾಣವನ್ನು ದ್ವಿಗುಣಗೊಳಿಸುತ್ತಿದ್ದು, ಒಕಿನಾವ ಕೂಡಾ ತನ್ನ ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್‌ಗಳ ಉತ್ಪಾದನಾ ಪ್ರಮಾಣ ಹೆಚ್ಚಿಸಲು ಹೊಸ ಯೋಜನೆಗೆ ಚಾಲನೆ ನೀಡಿದೆ.

ಎಲೆಕ್ಟ್ರಿಕ್ ವಾಹನ ಮಾರಾಟ ಆರಂಭಿಸಿದ ಏಳು ವರ್ಷಗಳ ಅವಧಿಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿರುವ ಒಕಿನಾವ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಹೊಸ ಯೋಜನೆಗೆ ಪೂರಕವಾಗಿ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಲು ರಾಜಸ್ತಾನದ ಗಡಿಭಾಗದಲ್ಲಿರುವ ಭಿವಾಡಿಯಲ್ಲಿನ ಉತ್ಪಾದನಾ ಘಟಕವನ್ನು ವಿಸ್ತರಿಸಿದೆ.

ವಿಸ್ತರಿತ ವಾಹನ ಉತ್ಪಾದನಾ ಘಟಕದ ಮೂಲಕ ವಾರ್ಷಿಕವಾಗಿ 1.80 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಬೈಕ್ ಮಾದರಿಗಳನ್ನು ಉತ್ಪಾದನೆಗೊಳಿಸಲು ಯೋಜಿಸಿರುವ ಒಕಿನಾವ ಕಂಪನಿಯು ಹೊಸ ಘಟಕದ ನಿರ್ಮಾಣಕ್ಕಾಗಿ ಹೊಸದಾಗಿ ರೂ.150 ಕೋಟಿ ಹೂಡಿಕೆ ಮಾಡಿದೆ.

ಒಕಿನಾವ ಕಂಪನಿಯ ಹೊಸ ಯೋಜನೆಗಾಗಿ ಪ್ರಮುಖ ಕಂಪನಿಗಳು ಭಾರೀ ಪ್ರಮಾಣದ ಬಂಡವಾಳ ಹೂಡಿಕೆ ಮಾಡಿದ್ದು, ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಒಕಿನಾವ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಬೈಕ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಲು ಹೊಸ ಬಂಡವಾಳ ಹೂಡಿಕೆಯು ಸಾಕಷ್ಟು ಸಹಕಾರಿಯಾಗಿದೆ.

ಬಜೆಟ್ ಬೆಲೆಯಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿರುವ ಒಕಿನಾವ ಕಂಪನಿಯು ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ ಒಕಿ100 ಇವಿ ಬೈಕ್ ಸೇರಿದಂತೆ ಒಟ್ಟು ನಾಲ್ಕು ಹೊಸ ಇವಿ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಹೊಸ ವಾಹನಗಳ ಜೊತೆಗೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಳನ್ನು ಸಹ ಗ್ರಾಹಕರ ಬೇಡಿಕೆಯೆಂತೆ ಹೊಸ ಫೀಚರ್ಸ್‌ಗಳೊಂದಿಗೆ ಉನ್ನತೀಕರಿಸುತ್ತಿರುವ ಒಕಿನಾವ ಕಂಪನಿಯು ತಂತ್ರಜ್ಞಾನ ಬಳಕೆಯನ್ನು ಸುಧಾರಣೆಗೊಳಿಸುತ್ತಿದೆ.

ಒಕಿನಾವ ಕಂಪನಿಯು ಕಂಪನಿಯು ಸದ್ಯ ಗ್ರಾಹಕರ ಬೇಡಿಕೆಯೆಂತೆ ಪ್ರೈಸ್, ಆರ್30, ಲೈಟ್, ರಿಡ್ಜ್ ಪ್ಲಸ್, ಪ್ರೈಸ್ ಪ್ರೊ ಮತ್ತು ಐ-ಪ್ರೈಸ್ ಪ್ರೊ ಪ್ಲಸ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಭವಿಷ್ಯ ಯೋಜನೆಗಳಲ್ಲಿರುವ ಒಕಿ100 ಸೇರಿದಂತೆ ಒಂದು ಮ್ಯಾಕ್ಸಿ ಸ್ಕೂಟರ್ ಮತ್ತು ಎರಡು ಹೈ ಸ್ಪೀಡ್ ಎಲೆಕ್ಟ್ರಿಕ್ ಮಾದರಿಗಳನ್ನು ಬಿಡುಗಡೆಗಾಗಿ ಸಿದ್ದವಾಗುತ್ತಿವೆ.

ಎಲೆಕ್ಟ್ರಿಕ್ ವಾಹನಗಳ ನಿರ್ಮಾಣದ ಜೊತೆಗೆ ಬ್ಯಾಟರಿ ನಿರ್ಮಾಣ ಕೇಂದ್ರದ ಮೇಲೂ ಹೂಡಿಕೆಗೆ ಸಿದ್ದವಾಗುತ್ತಿದ್ದು, ಒಕಿನಾವ ಕಂಪನಿಯು ಇದುವರೆಗೆ ಬರೋಬ್ಬರಿ 1.30 ಲಕ್ಷಕ್ಕೂ ಹೆಚ್ಚು ಯುನಿಟ್ ಇವಿ ಸ್ಕೂಟರ್‌ಗಳನ್ನು ಮಾರಾಟ ಮಾಡಿ ಹೊಸ ದಾಖಲೆ ನಿರ್ಮಿಸಿದೆ.

ಇಂಧನ ದರ ಹೆಚ್ಚಳ ನಂತರ ಎಲೆಕ್ಟ್ರಿಕ್ ವಾಹನ ಮಾದರಿಗಳ ವಿಚಾರಣೆಯು ಕೂಡಾ ತಿಂಗಳಿನಿಂದ ತಿಂಗಳಿಗೆ ಸಾಕಷ್ಟು ಹೆಚ್ಚಳವಾಗಿದ್ದು, ಹೆಚ್ಚಿನ ಮಟ್ಟದ ಮೈಲೇಜ್ ಹೊಂದಿರುವ ಇವಿ ವಾಹನಗಳ ಖರೀದಿಗೆ ಆಸಕ್ತಿ ತೋರುತ್ತಿದ್ದಾರೆ.

ಹೀಗಾಗಿ ಗ್ರಾಹಕರ ಬೇಡಿಕೆ ಆಧಾರಿಸಿ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಇವಿ ಬೈಕ್ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿರುವ ಒಕಿನಾವ ಕಂಪನಿಯು ಮುಂದಿನ ಐದು ತಿಂಗಳ ಅವಧಿಯಲ್ಲಿ ಒಕಿ100 ಇವಿ ಬೈಕ್ ಅಥವಾ ಮ್ಯಾಕ್ಸಿ ಸ್ಕೂಟರ್ ಬಿಡುಗಡೆ ಮಾಡುವುದು ಖಚಿತವಾಗಿದೆ.

ಒಕಿ100 ಇವಿ ಬೈಕಿನ ಟೀಸರ್ ಹೊರತುಪಡಿಸಿ ಯಾವುದೇ ತಾಂತ್ರಿಕ ಅಂಶಗಳನ್ನು ಹಂಚಿಕೊಳ್ಳದ ಒಕಿನಾವ ಕಂಪನಿಯು ಬಜೆಟ್ ಬೆಲೆಯಲ್ಲಿ ಉತ್ತಮ ಬ್ಯಾಟರಿ ಪ್ಯಾಕ್‌ನೊಂದಿಗೆ ಬಿಡುಗಡೆಯ ಸುಳಿವು ನೀಡಿದ್ದು, 150 ಸಿಸಿ ಸಾಮರ್ಥ್ಯದ ಸಾಮಾನ್ಯ ಬೈಕ್‌ಗಳಿಗೆ ಸಮನಾಗಿರುವ ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯು ರಿವೋಲ್ಟ್ ಎಲೆಕ್ಟ್ರಿಕ್ ಬೈಕ್ ಮಾದರಿಗೆ ಪೈಪೋಟಿ ನೀಡಲಿದೆ.

ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯು ಪ್ರತಿ ಚಾರ್ಜ್‌ಗೆ ಬ್ಯಾಟರಿ ರೇಂಜ್ ಆಧಾರದ ಮೇಲೆ 140ಕಿ.ಮೀ ನಿಂದ 170 ಕಿ.ಮೀ ಮೈಲೇಜ್ ಹಿಂದಿರುಗಿಸಬಹುದಾಗಿದೆ ಎನ್ನಲಾಗಿದ್ದು, ಹೊಸ ಬೈಕ್ ಬೆಲೆಯನ್ನು ಎಕ್ಸ್‌ಶೋರೂಂ ಪ್ರಕಾರ ರೂ.1 ಲಕ್ಷದಿಂದ ರೂ.1.20 ಲಕ್ಷ ಬೆಲೆ ಅಂತರದೊಳಗೆ ಬಿಡುಗಡೆ ಮಾಡಲಾಗುತ್ತಿದೆ.

ಮ್ಯಾಕ್ಸಿ ಇವಿ ಸ್ಕೂಟರ್ ಮಾದರಿಯು ಸಹ ಒಕಿನಾವ ಸ್ಕೂಟರ್ ಮಾರಾಟಕ್ಕೆ ಹೊಸ ತಿರುವು ನೀಡಲಿದ್ದು, ಸದ್ಯ ವಿವಿಧ ಹಂತದ ಟೆಸ್ಟಿಂಗ್ ನಡೆಸುತ್ತಿರುವ ಹೊಸ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಇತರೆ ಇವಿ ಸ್ಕೂಟರ್‌ಗಳಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಆಕರ್ಷಕ ಬೆಲೆಯಲ್ಲಿ ಬಿಡುಗಡೆಗೆ ಸಿದ್ದವಾಗುತ್ತಿದೆ.

ಜೊತೆಗೆ ಹೊಸ ಇವಿ ದ್ವಿಚಕ್ರ ವಾಹನ ಮಾದರಿಗಳ ನಿರ್ಮಾಣಕ್ಕೆ ಸ್ಥಳೀಯವಾಗಿ ಅಭಿವೃದ್ದಿಪಡಿಸಲಾದ ಗರಿಷ್ಠ ಬಿಡಿಭಾಗಗಳನ್ನು ಪಡೆದುಕೊಂಡಿರುವುದು ಸಹ ಉತ್ತಮ ಬೆಲೆ ನಿರ್ಧಾರಕ್ಕೆ ಸಹಕಾರಿಯಾಗಲಿದ್ದು, ಮುಂಬರುವ ಜೂನ್ ಹೊತ್ತಿಗೆ ಹೊಸ ಇವಿ ಬೈಕ್ ಅಥವಾ ಮ್ಯಾಕ್ಸಿ ಸ್ಕೂಟರ್ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆಗಳಿವೆ.