Just In
- 2 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 2 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 3 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 3 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Movies Puttakkana Makkalu:ಈ ಬಾರಿ ಸಹನಾ ಹೊಗಳಿದ ಅಭಿಮಾನಿಗಳು: ಪುಟ್ಟಕ್ಕನ ನಡವಳಿಕೆಗೆ ಫ್ಯಾನ್ಸ್ ಬೇಸರ
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀಘ್ರದಲ್ಲಿಯೇ ಪ್ರತಿ ಚಾರ್ಜ್ಗೆ 150ಕಿ.ಮೀ ಮೈಲೇಜ್ ಪ್ರೇರಿತ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಒಕಿನಾವ
ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಒಕಿನಾವ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಇವಿ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದು, ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಪ್ರಮುಖ ಪ್ರತಿಸ್ಪರ್ಧಿ ಮಾದರಿಗಳಿಗೆ ಪೈಪೋಟಿ ಹೊಸ ಇವಿ ಸ್ಕೂಟರ್ ಮಾದರಿಯೊಂದನ್ನು ಬಿಡುಗಡೆ ಮಾಡುವ ಸುಳಿವು ನೀಡಿದೆ.
ಇವಿ ವಾಹನ ಮಾರುಕಟ್ಟೆಯಲ್ಲಿ ಈಗಾಗಲೇ ಪ್ರಮುಖ ಇವಿ ಸ್ಕೂಟರ್ ಪರಿಚಯಿಸಿ ಉತ್ತಮ ಬೇಡಿಕೆ ಪಡೆದುಕೊಂಡಿರುವ ಒಕಿನಾವ ಕಂಪನಿಯು ಶೀಘ್ರದಲ್ಲಿಯೇ 'ಒಕಿ 90' ಎನ್ನುವ ಹೊಸ ಇವಿ ಸ್ಕೂಟರ್ ಮಾದರಿಯನ್ನು ಪರಿಚಯಿಸುತ್ತಿದ್ದು, ಹೊಸ ಸ್ಕೂಟರ್ ಮಾದರಿಯು ಪ್ರತಿ ಚಾರ್ಜ್ಗೆ ಕನಿಷ್ಠ 150 ಕಿ.ಮೀ ಮೈಲೇಜ್ ನೀಡುವ ಬಗೆಗೆ ಕಂಪನಿಯು ಸುಳಿವು ನೀಡಿದೆ.
ಹೊಸ ಇವಿ ಸ್ಕೂಟರ್ ಕಾರ್ಯಕ್ಷಮತೆ ಕುರಿತಾಗಿ ಈಗಾಗಲೇ ಹಲವು ಬಾರಿ ರೋಡ್ ಟೆಸ್ಟಿಂಗ್ ಕೈಗೊಂಡಿರುವ ಒಕಿನಾವ ಕಂಪನಿಯು ಮಾರ್ಚ್ ಕೊನೆಯಲ್ಲಿ ಬಿಡುಗಡೆ ಮಾಡುವ ಸಾಧ್ಯತೆಗಳಿದ್ದು, ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿರುವ ಹೊಸ ಸ್ಕೂಟರ್ ಹೈಸ್ಪೀಡ್ ಮಾದರಿಯಾಗಿ ಬಿಡುಗಡೆಯಾಗಲಿದೆ.
ಹೊಸ ಸ್ಕೂಟರ್ನ ವಿನ್ಯಾಸವು ಮೋಟಾರ್ಸೈಕಲ್ನಿಂದ ಪ್ರೇರಿತವಾಗಿದೆ ಎಂದು ಕಂಪನಿ ಹೇಳಿಕೊಂಡಿದ್ದು, ಇದರಿಂದ ಹೊಸ ಸ್ಕೂಟರ್ ಚಾಲನೆಯ ಅನುಭವವು ಮೋಟಾರ್ಸೈಕಲ್ನಂತೆಯೇ ಇರಲಿದೆ ಎನ್ನಬಹುದು. ಜೊತೆಗೆ ಹೊಸ ಸ್ಕೂಟರ್ ಮಾದರಿಯು ಪ್ರತಿ ಗಂಟೆಗೆ ಗರಿಷ್ಠ 80 ಕಿ.ಮೀ ಟಾಪ್ ಸ್ಪೀಡ್ ಹೊಂದಿರಲಿದೆ ಎನ್ನಲಾಗಿದ್ದು, ಹೈಸ್ಪೀಡ್ ಜೊತೆಗೆ ಮೈಲೇಜ್ನಲ್ಲೂ ಹೊಸ ಸ್ಕೂಟರ್ ಗಮನಸೆಳೆಯಲಿದೆ.
ಹಾಗೆಯೇ ಹೊಸ ಎಲೆಕ್ಟ್ರಿಕ್ ಸ್ಕೂಟರ್ ದೊಡ್ಡ ಫ್ರಂಟ್ ಕೌಲ್, ಎಲ್ಇಡಿ ಹೆಡ್ಲೈಟ್, ಇಂಟಿಗ್ರೇಟೆಡ್ ಎಲ್ಇಡಿ ಡಿಆರ್ಎಲ್ಗಳು, ಕ್ರೋಮ್ ರಿಯರ್ ವ್ಯೂ ಮಿರರ್, ಎಲ್ಇಡಿ ಟರ್ನ್ ಇಂಡಿಕೇಟರ್ ಮತ್ತು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹೊಂದಿರಲಿದೆ.
ಇದಲ್ಲದೆ ಹೊಸ ಸ್ಕೂಟರ್ ಸ್ಟೆಪ್-ಅಪ್ ಸೀಟ್, ದೊಡ್ಡ ಗ್ರಾಬ್ ರೈಲ್, ಅಲಾಯ್ ಚಕ್ರಗಳು ಮತ್ತು ಎಲ್ಇಡಿ ಟೈಲ್ ಲೈಟ್ ಅನ್ನು ಸಹ ಪಡೆದುಕೊಳ್ಳಲಿದ್ದು, ಅರಾಮದಾಯ ಚಾಲನೆಯ ಅನುಭವಕ್ಕಾಗಿ ಎಲ್ಇಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಮತ್ತು ಇ-ಸಿಮ್ ಸಂಪರ್ಕ ವೈಶಿಷ್ಟ್ಯವನ್ನು ಹೊಂದಿದೆ. ಇದು ಸ್ಮಾರ್ಟ್ಫೋನ್ ಅಪ್ಲಿಕೇಶನ್ ಮೂಲಕ ಸ್ಕೂಟರ್ನ ಶ್ರೇಣಿ, ಸವಾರಿ ಅಭ್ಯಾಸವನ್ನ, ನ್ಯಾವಿಗೇಷನ್ ಮತ್ತು ಚಾರ್ಜಿಂಗ್ ಸ್ಟೇಷನ್ ಕುರಿತು ಮಾಹಿತಿ ಒದಗಿಸುತ್ತದೆ.
ಹೀಗಾಗಿ ಹೊಸ ಸ್ಕೂಟರ್ ಮಾದರಿಯು ಅತ್ಯುತ್ತಮ ಬ್ಯಾಟರಿ ಪ್ಯಾಕ್, ಪ್ರೀಮಿಯಂ ಫೀಚರ್ಸ್ ಜೊತೆಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುವ ಎಲ್ಲಾ ಸಾಧ್ಯತೆಗಳಿದ್ದು, ಹೊಸ ಸ್ಕೂಟರ್ ಮಾದರಿಯು ಎಕ್ಸ್ಶೋರೂಂ ಪ್ರಕಾರ ರೂ. 90 ಸಾವಿರದಿಂದ ರೂ. 1.10 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ನೀರಿಕ್ಷೆಯಿದೆ.
ಹೀಗಾಗಿ ಹೊಸ ಸ್ಕೂಟರ್ ಮಾದರಿಯು ಅತ್ಯುತ್ತಮ ಬ್ಯಾಟರಿ ಪ್ಯಾಕ್, ಪ್ರೀಮಿಯಂ ಫೀಚರ್ಸ್ ಜೊತೆಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುವ ಎಲ್ಲಾ ಸಾಧ್ಯತೆಗಳಿದ್ದು, ಹೊಸ ಸ್ಕೂಟರ್ ಮಾದರಿಯು ಎಕ್ಸ್ಶೋರೂಂ ಪ್ರಕಾರ ರೂ. 90 ಸಾವಿರದಿಂದ ರೂ. 1.10 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ನೀರಿಕ್ಷೆಯಿದೆ.
ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿವಿಧ ವಾಹನ ಉತ್ಪಾದನಾ ಕಂಪನಿಗಳು ಗ್ರಾಹಕರ ಬೇಡಿಕೆ ಪೂರೈಸಲು ಉತ್ಪಾದನಾ ಪ್ರಮಾಣವನ್ನು ದ್ವಿಗುಣಗೊಳಿಸುತ್ತಿದ್ದು, ಒಕಿನಾವ ಕೂಡಾ ತನ್ನ ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ಗಳ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಲು ಹೊಸ ಯೋಜನೆಗೆ ಚಾಲನೆ ನೀಡಿದೆ.
ಎಲೆಕ್ಟ್ರಿಕ್ ವಾಹನಗಳ ಮಾರಾಟ ಆರಂಭಿಸಿದ ಏಳು ವರ್ಷಗಳ ಅವಧಿಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿರುವ ಒಕಿನಾವ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಹೊಸ ಯೋಜನೆಗೆ ಪೂರಕವಾಗಿ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಲು ರಾಜಸ್ತಾನದ ಗಡಿಭಾಗದಲ್ಲಿರುವ ಭಿವಾಡಿಯಲ್ಲಿನ ಉತ್ಪಾದನಾ ಘಟಕವನ್ನು ವಿಸ್ತರಿಸಿದೆ.
ವಿಸ್ತರಿತ ವಾಹನ ಉತ್ಪಾದನಾ ಘಟಕದ ಮೂಲಕ ವಾರ್ಷಿಕವಾಗಿ 1.80 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಬೈಕ್ ಮಾದರಿಗಳನ್ನು ಉತ್ಪಾದನೆಗೊಳಿಸಲು ಯೋಜಿಸಿರುವ ಒಕಿನಾವ ಕಂಪನಿಯು ಹೊಸ ಘಟಕದ ನಿರ್ಮಾಣಕ್ಕಾಗಿ ಹೊಸದಾಗಿ ರೂ.150 ಕೋಟಿ ಹೂಡಿಕೆ ಮಾಡಿದೆ.
ಒಕಿನಾವ ಕಂಪನಿಯ ಹೊಸ ಯೋಜನೆಗಾಗಿ ಪ್ರಮುಖ ಕಂಪನಿಗಳು ಭಾರೀ ಪ್ರಮಾಣದ ಬಂಡವಾಳ ಹೂಡಿಕೆ ಮಾಡಿದ್ದು, ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಒಕಿನಾವ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಬೈಕ್ಗಳನ್ನು ಮಾರುಕಟ್ಟೆಗೆ ಪರಿಚಯಿಸಲು ಹೊಸ ಬಂಡವಾಳ ಹೂಡಿಕೆಯು ಸಾಕಷ್ಟು ಸಹಕಾರಿಯಾಗಿದೆ.
ಬಜೆಟ್ ಬೆಲೆಯಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿರುವ ಒಕಿನಾವ ಕಂಪನಿಯು ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ ಒಕಿ 90, ಒಕಿ100 ಇವಿ ಬೈಕ್ ಸೇರಿದಂತೆ ಒಟ್ಟು ನಾಲ್ಕು ಹೊಸ ಇವಿ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.
ಒಕಿನಾವ ಕಂಪನಿಯು ಕಂಪನಿಯು ಸದ್ಯ ಗ್ರಾಹಕರ ಬೇಡಿಕೆಯೆಂತೆ ಪ್ರೈಸ್, ಆರ್30, ಲೈಟ್, ರಿಡ್ಜ್ ಪ್ಲಸ್, ಪ್ರೈಸ್ ಪ್ರೊ ಮತ್ತು ಐ-ಪ್ರೈಸ್ ಪ್ರೊ ಪ್ಲಸ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಭವಿಷ್ಯ ಯೋಜನೆಗಳಲ್ಲಿರುವ ಒಕಿ 90, ಒಕಿ100 ಸೇರಿದಂತೆ ಒಂದು ಮ್ಯಾಕ್ಸಿ ಸ್ಕೂಟರ್ ಮತ್ತು ಎರಡು ಹೈ ಸ್ಪೀಡ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಬಿಡುಗಡೆಗಾಗಿ ಸಿದ್ದವಾಗುತ್ತಿವೆ.