Just In
- 21 min ago
ಇಂದಿನಿಂದ ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಟೆಸ್ಟ್ ಡ್ರೈವ್ ಆರಂಭಿಸಿದ ಮಹೀಂದ್ರಾ
- 1 hr ago
ಬೈಕ್ ನೀಡಿದ್ದ ಮೊದಲ ದಿನವೇ ಕಣ್ಮರೆಯಾಗಿದ್ದ ಧೋನಿ: ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ ಶ್ರೀನಿವಾಸನ್
- 1 hr ago
ನೀವು ಖರೀದಿಸಬಹುದಾದ ಅತ್ಯುತ್ತಮ ಸೆಕೆಂಡ್ ಹ್ಯಾಂಡ್ ಆಟೋಮ್ಯಾಟಿಕ್ ಹ್ಯಾಚ್ಬ್ಯಾಕ್ ಕಾರುಗಳಿವು...
- 2 hrs ago
ಮ್ಯಾಗ್ನೈಟ್ ಕಾರು ಮಾದರಿಯಲ್ಲಿ ಪ್ರಮುಖ ವೆರಿಯೆಂಟ್ಗಳನ್ನು ತೆಗೆದುಹಾಕಿದ ನಿಸ್ಸಾನ್
Don't Miss!
- News
ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
- Finance
ಎಲ್ಐಸಿ ಷೇರು ಖರೀದಿಸಲು ಮೋತಿಲಾಲ್ ಓಸ್ವಾಲ್ ಸಲಹೆ
- Sports
ಆತನನ್ನು ಹೊರಗಿಟ್ಟ ಕಾರಣಕ್ಕೆ ಭಾರತ ಬೆಲೆ ತೆರಬೇಕಾಗಿದೆ: ದ್ರಾವಿಡ್ ನಿರ್ಧಾರದ ಬಗ್ಗೆ ಕನೆರಿಯಾ ಕಿಡಿ
- Technology
ಸಾರ್ವಜನಿಕರೇ ನಿಮ್ಮ ಮನೆ ಮೇಲೆ ಮೊಬೈಲ್ ಟವರ್ ಹಾಕಿಸುವ ಮುನ್ನ ಎಚ್ಚರ?
- Lifestyle
ಮಾನ್ಸೂನ್ ಸಮಯದಲ್ಲಿ ಜೀರ್ಣಕ್ರಿಯೆ ಸುಧಾರಿಸಲು ಇಂಥಾ ಆಹಾರಗಳಿಂದ ದೂರವಿರಿ
- Movies
ಪುನೀತ್ ಕೊನೆಯ ಸಿನಿಮಾ 'ಜೇಮ್ಸ್' ನಿರ್ಮಾಪಕ ಆಸ್ಪತ್ರೆಗೆ ದಾಖಲು: ಹೇಗಿದೆ ಸ್ಥಿತಿ?
- Education
AIFD Recruitment 2022 : 5 ಪ್ಯಾಧ್ಯಾಪಕ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
ಮಾರ್ಚ್ 24ರಂದು ಬಿಡುಗಡೆಯಾಗಲಿದೆ ಒಕಿನಾವ ನಿರ್ಮಾಣದ ಹೊಸ ಒಕಿ 90 ಇವಿ ಸ್ಕೂಟರ್
ಒಕಿನಾವ ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಯು ತನ್ನ ಬಹುನೀರಿಕ್ಷಿತ ಒಕಿ 90 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಹೊಸ ಸ್ಕೂಟರ್ ಮಾದರಿಯು ಇದೇ ತಿಂಗಳು 24ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ.

ಇವಿ ವಾಹನ ಮಾರುಕಟ್ಟೆಯಲ್ಲಿ ಈಗಾಗಲೇ ಪ್ರಮುಖ ಇವಿ ಸ್ಕೂಟರ್ ಪರಿಚಯಿಸುವ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಒಕಿನಾವ ಕಂಪನಿಯು ಇದೀಗ ಹೊಸ ತಂತ್ರಜ್ಞಾನ ಪ್ರೇರಿತ ಒಕಿ 90 ಹೊಸ ಇವಿ ಸ್ಕೂಟರ್ ಮಾದರಿಯನ್ನು ಪರಿಚಯಿಸುತ್ತಿದ್ದು, ಹೊಸ ಸ್ಕೂಟರ್ ಬಿಡುಗಡೆಗೂ ಮುನ್ನ ಟೀಸರ್ ಚಿತ್ರವನ್ನು ಹಂಚಿಕೊಂಡಿದೆ.

ಹೊಸ ಇವಿ ಸ್ಕೂಟರ್ ಕಾರ್ಯಕ್ಷಮತೆ ಕುರಿತಾಗಿ ಈಗಾಗಲೇ ಹಲವು ಬಾರಿ ರೋಡ್ ಟೆಸ್ಟಿಂಗ್ ಕೈಗೊಂಡಿರುವ ಒಕಿನಾವ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ವೈಶಿಷ್ಟ್ಯತೆಗಳನ್ನು ಅಳವಡಿಸಿದ್ದು, ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿರುವ ಹೊಸ ಸ್ಕೂಟರ್ ಹೈಸ್ಪೀಡ್ ಮಾದರಿಯಾಗಿ ಬಿಡುಗಡೆಯಾಗಲಿದೆ.

ಹೊಸ ಸ್ಕೂಟರ್‌ನ ವಿನ್ಯಾಸವು ತನ್ನ ಭಲಿಷ್ಯದ ಮೋಟಾರ್‌ಸೈಕಲ್‌ನಿಂದ ಪ್ರೇರಿತವಾಗಿದೆ ಎಂದು ಕಂಪನಿ ಹೇಳಿಕೊಂಡಿದ್ದು, ಇದರಿಂದ ಹೊಸ ಸ್ಕೂಟರ್ ಚಾಲನೆಯ ಅನುಭವವು ಮೋಟಾರ್‌ಸೈಕಲ್‌ನಂತೆಯೇ ಇರಲಿದೆ ಎನ್ನಬಹುದು. ಜೊತೆಗೆ ಹೊಸ ಸ್ಕೂಟರ್ ಮಾದರಿಯು ಪ್ರತಿ ಗಂಟೆಗೆ ಗರಿಷ್ಠ 80 ಕಿ.ಮೀ ಟಾಪ್ ಸ್ಪೀಡ್ ಹೊಂದಿರಲಿದೆ ಎನ್ನಲಾಗಿದ್ದು, ಹೈಸ್ಪೀಡ್ ಜೊತೆಗೆ ಮೈಲೇಜ್‌ನಲ್ಲೂ ಹೊಸ ಸ್ಕೂಟರ್ ಗಮನಸೆಳೆಯಲಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಪ್ಯಾಕ್ ಹೊಂದಿರುವ ಹೊಸ ಸ್ಕೂಟರ್ ಮಾದರಿಯು ಪ್ರತಿ ಚಾರ್ಜ್‌ಗೆ ಕನಿಷ್ಠ 150 ಕಿ.ಮೀ ಮೈಲೇಜ್ ನೀಡಬಹುದಾಗಿದ್ದು, ವಿವಿಧ ರೈಡ್ ಮೋಡ್ ಆಧರಿಸಿ ಕನಿಷ್ಠ 120 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಹಾಗೆಯೇ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ದೊಡ್ಡ ಫ್ರಂಟ್ ಕೌಲ್, ಎಲ್ಇಡಿ ಹೆಡ್ಲೈಟ್, ಇಂಟಿಗ್ರೇಟೆಡ್ ಎಲ್ಇಡಿ ಡಿಆರ್‌ಎಲ್‌ಗಳು, ಕ್ರೋಮ್ ರಿಯರ್ ವ್ಯೂ ಮಿರರ್, ಎಲ್ಇಡಿ ಟರ್ನ್ ಇಂಡಿಕೇಟರ್ ಮತ್ತು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹೊಂದಿರಲಿದೆ.

ಇದಲ್ಲದೆ ಹೊಸ ಸ್ಕೂಟರ್ ಸ್ಟೆಪ್-ಅಪ್ ಸೀಟ್, ದೊಡ್ಡ ಗ್ರಾಬ್ ರೈಲ್, ಅಲಾಯ್ ಚಕ್ರಗಳು ಮತ್ತು ಎಲ್ಇಡಿ ಟೈಲ್ ಲೈಟ್ ಅನ್ನು ಸಹ ಪಡೆದುಕೊಳ್ಳಲಿದ್ದು, ಅರಾಮದಾಯ ಚಾಲನೆಯ ಅನುಭವಕ್ಕಾಗಿ ಎಲ್ಇಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಮತ್ತು ಇ-ಸಿಮ್ ಸಂಪರ್ಕ ವೈಶಿಷ್ಟ್ಯವನ್ನು ಹೊಂದಿದೆ.

ಇದು ಸ್ಮಾರ್ಟ್‌ಫೋನ್ ಅಪ್ಲಿಕೇಶನ್ ಮೂಲಕ ಸ್ಕೂಟರ್‌ನ ಶ್ರೇಣಿ, ಸವಾರಿ ಅಭ್ಯಾಸ, ನ್ಯಾವಿಗೇಷನ್ ಮತ್ತು ಚಾರ್ಜಿಂಗ್ ಸ್ಟೇಷನ್ ಕುರಿತು ಮಾಹಿತಿ ಒದಗಿಸಲಿದ್ದು, ಈ ಮೂಲಕ ಅತ್ಯುತ್ತಮ ಬ್ಯಾಟರಿ ಪ್ಯಾಕ್, ಪ್ರೀಮಿಯಂ ಫೀಚರ್ಸ್ ಜೊತೆಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುವ ಎಲ್ಲಾ ಸಾಧ್ಯತೆಗಳಿವೆ.

ಇನ್ನು ಹೊಸ ಸ್ಕೂಟರ್ ಮಾದರಿಯು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಎಕ್ಸ್‌ಶೋರೂಂ ಪ್ರಕಾರ ರೂ. 90 ಸಾವಿರದಿಂದ ರೂ. 1.10 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ನೀರಿಕ್ಷೆಯಿದ್ದು, ಹೊಸ ಸ್ಕೂಟರ್ ಇತ್ತೀಚೆಗೆ ಮಾರುಕಟ್ಟೆ ಪ್ರವೇಶಿಸಿರುವ ಓಲಾ ಎಸ್1 ಪ್ರೊ ಮತ್ತು ಎಥರ್ 450ಎಕ್ಸ್ ಮಾದರಿಗಳಿಗೆ ಉತ್ತಮ ಪೈಪೋಟಿಯಾಗಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿವಿಧ ವಾಹನ ಉತ್ಪಾದನಾ ಕಂಪನಿಗಳು ಗ್ರಾಹಕರ ಬೇಡಿಕೆ ಪೂರೈಸಲು ಉತ್ಪಾದನಾ ಪ್ರಮಾಣವನ್ನು ದ್ವಿಗುಣಗೊಳಿಸುತ್ತಿದ್ದು, ಒಕಿನಾವ ಕಂಪನಿಯು ಕೂಡಾ ತನ್ನ ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್‌ಗಳ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಲು ಹೊಸ ಯೋಜನೆಗೆ ಚಾಲನೆ ನೀಡಿದೆ.

ಎಲೆಕ್ಟ್ರಿಕ್ ವಾಹನಗಳ ಮಾರಾಟ ಆರಂಭಿಸಿದ ಏಳು ವರ್ಷಗಳ ಅವಧಿಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿರುವ ಒಕಿನಾವ ಕಂಪನಿಯ ಶೀಘ್ರದಲ್ಲೇ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಹೊಸ ಯೋಜನೆಗೆ ಪೂರಕವಾಗಿ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಲು ರಾಜಸ್ತಾನದ ಗಡಿಭಾಗದಲ್ಲಿರುವ ಭಿವಾಡಿಯಲ್ಲಿನ ಉತ್ಪಾದನಾ ಘಟಕ ವಿಸ್ತರಿಸಿದೆ.

ವಿಸ್ತರಿತ ವಾಹನ ಉತ್ಪಾದನಾ ಘಟಕದ ಮೂಲಕ ವಾರ್ಷಿಕವಾಗಿ 1.80 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಬೈಕ್ ಮಾದರಿಗಳನ್ನು ಉತ್ಪಾದನೆಗೊಳಿಸಲು ಯೋಜಿಸಿರುವ ಒಕಿನಾವ ಕಂಪನಿಯು ಹೊಸ ಘಟಕದ ನಿರ್ಮಾಣಕ್ಕಾಗಿ ಹೊಸದಾಗಿ ರೂ.150 ಕೋಟಿ ಬಂಡವಾಳ ಹೂಡಿಕೆ ಮಾಡಿದೆ.

ಒಕಿನಾವ ಕಂಪನಿಯ ಹೊಸ ಯೋಜನೆಗಾಗಿ ಪ್ರಮುಖ ಕಂಪನಿಗಳು ಭಾರೀ ಪ್ರಮಾಣದ ಬಂಡವಾಳ ಹೂಡಿಕೆ ಮಾಡಿದ್ದು, ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಒಕಿನಾವ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಬೈಕ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಲು ಹೊಸ ಬಂಡವಾಳ ಹೂಡಿಕೆಯು ಸಾಕಷ್ಟು ಸಹಕಾರಿಯಾಗಿದೆ.

ಬಜೆಟ್ ಬೆಲೆಯಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿರುವ ಒಕಿನಾವ ಕಂಪನಿಯು ಮುಂಬರುವ ದಿನಗಳಲ್ಲಿ ಒಕಿ 90 ಸೇರಿದಂತೆ ನಾಲ್ಕು ಹೊಸ ಇವಿ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.