Just In
- 56 min ago
ಮನಕಲುಕುವ ಘಟನೆ: ಮೃತ ತಾಯಿಯನ್ನು 80 ಕಿ.ಮೀ ಬೈಕ್ನಲ್ಲೇ ಸಾಗಿಸಿದ ಮಗ
- 1 hr ago
ಹೊಸ ಆಫ್-ರೋಡರ್ ಆರ್ಜೆಡ್ಆರ್ ಪ್ರೊ ಆರ್ ಸ್ಪೋರ್ಟ್ ಬಿಡುಗಡೆ ಮಾಡಿದ ಪೋಲಾರಿಸ್ ಇಂಡಿಯಾ
- 4 hrs ago
ಫೋರ್ಡ್ ಇಂಡಿಯಾದ ಸನಂದ್ ಕಾರ್ಖಾನೆ ಟಾಟಾ ಮೋಟಾರ್ಸ್ ತೆಕ್ಕೆಗೆ: 726 ಕೋಟಿ ರೂ.ಗೆ ಖರೀದಿ
- 4 hrs ago
ಜುಲೈ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಟಾಟಾ ಕಾರುಗಳು...
Don't Miss!
- Finance
4 ತಿಂಗಳಲ್ಲೇ ಭಾರಿ ಏರಿಕೆ ಕಂಡ ಸೆನ್ಸೆಕ್ಸ್: ಆಟೋ, ಪವರ್ ಸ್ಟಾಕ್ ಬಲ
- Movies
ಕಾಫಿ ನಾಡು ಚಂದು ಕಾಪಿ ಹೊಡೆದ 'ನಾಗಿಣಿ 2' ನಮ್ರತಾ: ವಿಡಿಯೋ ವೈರಲ್
- News
ಆದಾಯ ತೆರಿಗೆ ರಿಟರ್ನ್ ಇ-ಪರಿಶೀಲನೆ ಕಡ್ಡಾಯ: ಇ-ಪರಿಶೀಲನೆಗೆ ಮಾಡುವುದು ಹೀಗೆ
- Technology
ಇದೇ ತಿಂಗಳು 5G ಸೇವೆ ಬರಲಿದೆ ಅಂತಾ ನಿರೀಕ್ಷಿಸುತ್ತಿದ್ದೀರಾ?..ಈ ಸುದ್ದಿಯನ್ನೊಮ್ಮೆ ಗಮನಿಸಿ!
- Sports
CWG 2022: ಬ್ಯಾಡ್ಮಿಂಟನ್ಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ, ಸಿಂಗಲ್ಸ್ನಲ್ಲಿ ಚಾಂಪಿಯನ್ ಆದ ಲಕ್ಷ್ಯಸೇನ್
- Lifestyle
ಬೆಚ್ಚಗಾಗಲು ಬಳಸುವ ರೂಮ್ ಹೀಟರ್ ಎಷ್ಟು ಅಪಾಯಕಾರಿ ಗೊತ್ತಾ?
- Travel
ಭಾರತದಲ್ಲಿರುವ ಕೆಲವು ಸ್ಥಳಗಳು ಅಸ್ತಮಾ ರೋಗಿಗಳಿಗೆ ಸಲ್ಪ ಮಟ್ಟದಲ್ಲಿ ಅಪಾಯಕಾರಿಯಾಗಬಹುದು!
- Education
CSB Recruitment 2022 : 66 ಸೈಂಟಿಸ್ಟ್-ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬಿಡುಗಡೆಗೆ ಸಿದ್ದವಾಗಿರುವ ಒಕಿ 90 ಇವಿ ಸ್ಕೂಟರ್ ಟೀಸರ್ ಚಿತ್ರ ಹಂಚಿಕೊಂಡ ಒಕಿನಾವ
ಒಕಿನಾವ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಇವಿ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದು, ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಪ್ರಮುಖ ಪ್ರತಿಸ್ಪರ್ಧಿ ಮಾದರಿಗಳಿಗೆ ಪೈಪೋಟಿಯಾಗಿ ಮತ್ತೊಂದು ಹೊಸ ಇವಿ ಸ್ಕೂಟರ್ ಮಾದರಿಯೊಂದನ್ನು ಬಿಡುಗಡೆ ಮಾಡುತ್ತಿದೆ.

ಇವಿ ವಾಹನ ಮಾರುಕಟ್ಟೆಯಲ್ಲಿ ಈಗಾಗಲೇ ಪ್ರಮುಖ ಇವಿ ಸ್ಕೂಟರ್ ಪರಿಚಯಿಸುವ ಮೂಲಕ ಉತ್ತಮ ಬೇಡಿಕೆ ಪಡೆದುಕೊಂಡಿರುವ ಒಕಿನಾವ ಕಂಪನಿಯು ಶೀಘ್ರದಲ್ಲಿಯೇ ಒಕಿ 90 ಎನ್ನುವ ಹೊಸ ಇವಿ ಸ್ಕೂಟರ್ ಮಾದರಿಯನ್ನು ಪರಿಚಯಿಸುತ್ತಿದ್ದು, ಹೊಸ ಸ್ಕೂಟರ್ ಬಿಡುಗಡೆಗೂ ಮುನ್ನ ಹೆಡ್ಲ್ಯಾಂಪ್ ಟೀಸರ್ ಚಿತ್ರವನ್ನು ಹಂಚಿಕೊಂಡಿದೆ.

ಹೊಸ ಇವಿ ಸ್ಕೂಟರ್ ಕಾರ್ಯಕ್ಷಮತೆ ಕುರಿತಾಗಿ ಈಗಾಗಲೇ ಹಲವು ಬಾರಿ ರೋಡ್ ಟೆಸ್ಟಿಂಗ್ ಕೈಗೊಂಡಿರುವ ಒಕಿನಾವ ಕಂಪನಿಯು ಈ ತಿಂಗಳ ಕೊನೆಯಲ್ಲಿ ಬಿಡುಗಡೆ ಮಾಡುವ ಸಾಧ್ಯತೆಗಳಿದ್ದು, ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿರುವ ಹೊಸ ಸ್ಕೂಟರ್ ಹೈಸ್ಪೀಡ್ ಮಾದರಿಯಾಗಿ ಬಿಡುಗಡೆಯಾಗಲಿದೆ.

ಹೊಸ ಸ್ಕೂಟರ್ನ ವಿನ್ಯಾಸವು ತನ್ನ ಭಲಿಷ್ಯದ ಮೋಟಾರ್ಸೈಕಲ್ನಿಂದ ಪ್ರೇರಿತವಾಗಿದೆ ಎಂದು ಕಂಪನಿ ಹೇಳಿಕೊಂಡಿದ್ದು, ಇದರಿಂದ ಹೊಸ ಸ್ಕೂಟರ್ ಚಾಲನೆಯ ಅನುಭವವು ಮೋಟಾರ್ಸೈಕಲ್ನಂತೆಯೇ ಇರಲಿದೆ ಎನ್ನಬಹುದು. ಜೊತೆಗೆ ಹೊಸ ಸ್ಕೂಟರ್ ಮಾದರಿಯು ಪ್ರತಿ ಗಂಟೆಗೆ ಗರಿಷ್ಠ 80 ಕಿ.ಮೀ ಟಾಪ್ ಸ್ಪೀಡ್ ಹೊಂದಿರಲಿದೆ ಎನ್ನಲಾಗಿದ್ದು, ಹೈಸ್ಪೀಡ್ ಜೊತೆಗೆ ಮೈಲೇಜ್ನಲ್ಲೂ ಹೊಸ ಸ್ಕೂಟರ್ ಗಮನಸೆಳೆಯಲಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಪ್ಯಾಕ್ ಹೊಂದಿರುವ ಹೊಸ ಸ್ಕೂಟರ್ ಮಾದರಿಯು ಪ್ರತಿ ಚಾರ್ಜ್ಗೆ ಕನಿಷ್ಠ 150 ಕಿ.ಮೀ ಮೈಲೇಜ್ ನೀಡುವ ಸಾಧ್ಯತೆಗಳಿದ್ದು, ವಿವಿಧ ರೈಡ್ ಮೋಡ್ ಆಧರಿಸಿ ಕನಿಷ್ಠ 120 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಹಾಗೆಯೇ ಹೊಸ ಎಲೆಕ್ಟ್ರಿಕ್ ಸ್ಕೂಟರ್ನಲ್ಲಿ ದೊಡ್ಡ ಫ್ರಂಟ್ ಕೌಲ್, ಎಲ್ಇಡಿ ಹೆಡ್ಲೈಟ್, ಇಂಟಿಗ್ರೇಟೆಡ್ ಎಲ್ಇಡಿ ಡಿಆರ್ಎಲ್ಗಳು, ಕ್ರೋಮ್ ರಿಯರ್ ವ್ಯೂ ಮಿರರ್, ಎಲ್ಇಡಿ ಟರ್ನ್ ಇಂಡಿಕೇಟರ್ ಮತ್ತು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹೊಂದಿರಲಿದೆ.

ಇದಲ್ಲದೆ ಹೊಸ ಸ್ಕೂಟರ್ ಸ್ಟೆಪ್-ಅಪ್ ಸೀಟ್, ದೊಡ್ಡ ಗ್ರಾಬ್ ರೈಲ್, ಅಲಾಯ್ ಚಕ್ರಗಳು ಮತ್ತು ಎಲ್ಇಡಿ ಟೈಲ್ ಲೈಟ್ ಅನ್ನು ಸಹ ಪಡೆದುಕೊಳ್ಳಲಿದ್ದು, ಅರಾಮದಾಯ ಚಾಲನೆಯ ಅನುಭವಕ್ಕಾಗಿ ಎಲ್ಇಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಮತ್ತು ಇ-ಸಿಮ್ ಸಂಪರ್ಕ ವೈಶಿಷ್ಟ್ಯವನ್ನು ಹೊಂದಿದೆ. ಇದು ಸ್ಮಾರ್ಟ್ಫೋನ್ ಅಪ್ಲಿಕೇಶನ್ ಮೂಲಕ ಸ್ಕೂಟರ್ನ ಶ್ರೇಣಿ, ಸವಾರಿ ಅಭ್ಯಾಸವನ್ನ, ನ್ಯಾವಿಗೇಷನ್ ಮತ್ತು ಚಾರ್ಜಿಂಗ್ ಸ್ಟೇಷನ್ ಕುರಿತು ಮಾಹಿತಿ ಒದಗಿಸುತ್ತದೆ.

ಹೀಗಾಗಿ ಹೊಸ ಸ್ಕೂಟರ್ ಮಾದರಿಯು ಅತ್ಯುತ್ತಮ ಬ್ಯಾಟರಿ ಪ್ಯಾಕ್, ಪ್ರೀಮಿಯಂ ಫೀಚರ್ಸ್ ಜೊತೆಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುವ ಎಲ್ಲಾ ಸಾಧ್ಯತೆಗಳಿದ್ದು, ಹೊಸ ಸ್ಕೂಟರ್ ಮಾದರಿಯು ಎಕ್ಸ್ಶೋರೂಂ ಪ್ರಕಾರ ರೂ. 90 ಸಾವಿರದಿಂದ ರೂ. 1.10 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ನೀರಿಕ್ಷೆಯಿದೆ.

ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿವಿಧ ವಾಹನ ಉತ್ಪಾದನಾ ಕಂಪನಿಗಳು ಗ್ರಾಹಕರ ಬೇಡಿಕೆ ಪೂರೈಸಲು ಉತ್ಪಾದನಾ ಪ್ರಮಾಣವನ್ನು ದ್ವಿಗುಣಗೊಳಿಸುತ್ತಿದ್ದು, ಒಕಿನಾವ ಕೂಡಾ ತನ್ನ ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ಗಳ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಲು ಹೊಸ ಯೋಜನೆಗೆ ಚಾಲನೆ ನೀಡಿದೆ.

ಎಲೆಕ್ಟ್ರಿಕ್ ವಾಹನಗಳ ಮಾರಾಟ ಆರಂಭಿಸಿದ ಏಳು ವರ್ಷಗಳ ಅವಧಿಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿರುವ ಒಕಿನಾವ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಹೊಸ ಯೋಜನೆಗೆ ಪೂರಕವಾಗಿ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಲು ರಾಜಸ್ತಾನದ ಗಡಿಭಾಗದಲ್ಲಿರುವ ಭಿವಾಡಿಯಲ್ಲಿನ ಉತ್ಪಾದನಾ ಘಟಕವನ್ನು ವಿಸ್ತರಿಸಿದೆ.

ವಿಸ್ತರಿತ ವಾಹನ ಉತ್ಪಾದನಾ ಘಟಕದ ಮೂಲಕ ವಾರ್ಷಿಕವಾಗಿ 1.80 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಬೈಕ್ ಮಾದರಿಗಳನ್ನು ಉತ್ಪಾದನೆಗೊಳಿಸಲು ಯೋಜಿಸಿರುವ ಒಕಿನಾವ ಕಂಪನಿಯು ಹೊಸ ಘಟಕದ ನಿರ್ಮಾಣಕ್ಕಾಗಿ ಹೊಸದಾಗಿ ರೂ.150 ಕೋಟಿ ಹೂಡಿಕೆ ಮಾಡಿದೆ.

ಒಕಿನಾವ ಕಂಪನಿಯ ಹೊಸ ಯೋಜನೆಗಾಗಿ ಪ್ರಮುಖ ಕಂಪನಿಗಳು ಭಾರೀ ಪ್ರಮಾಣದ ಬಂಡವಾಳ ಹೂಡಿಕೆ ಮಾಡಿದ್ದು, ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಒಕಿನಾವ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಬೈಕ್ಗಳನ್ನು ಮಾರುಕಟ್ಟೆಗೆ ಪರಿಚಯಿಸಲು ಹೊಸ ಬಂಡವಾಳ ಹೂಡಿಕೆಯು ಸಾಕಷ್ಟು ಸಹಕಾರಿಯಾಗಿದೆ.

ಬಜೆಟ್ ಬೆಲೆಯಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿರುವ ಒಕಿನಾವ ಕಂಪನಿಯು ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ ಒಕಿ 90, ಒಕಿ100 ಇವಿ ಬೈಕ್ ಸೇರಿದಂತೆ ಒಟ್ಟು ನಾಲ್ಕು ಹೊಸ ಇವಿ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಒಕಿನಾವ ಕಂಪನಿಯು ಕಂಪನಿಯು ಸದ್ಯ ಗ್ರಾಹಕರ ಬೇಡಿಕೆಯೆಂತೆ ಪ್ರೈಸ್, ಆರ್30, ಲೈಟ್, ರಿಡ್ಜ್ ಪ್ಲಸ್, ಪ್ರೈಸ್ ಪ್ರೊ ಮತ್ತು ಐ-ಪ್ರೈಸ್ ಪ್ರೊ ಪ್ಲಸ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಭವಿಷ್ಯ ಯೋಜನೆಗಳಲ್ಲಿರುವ ಒಕಿ 90, ಒಕಿ100 ಸೇರಿದಂತೆ ಒಂದು ಮ್ಯಾಕ್ಸಿ ಸ್ಕೂಟರ್ ಮತ್ತು ಎರಡು ಹೈ ಸ್ಪೀಡ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಬಿಡುಗಡೆಗಾಗಿ ಸಿದ್ದವಾಗುತ್ತಿವೆ.