Just In
- 1 hr ago
ಭಾರತದಲ್ಲಿ ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳ ಬಿಡುಗಡೆಗೆ ಸಿದ್ದವಾದ ಎಲೆಕ್ಟ್ರಾನ್ ಇವಿ
- 14 hrs ago
ಆಕರ್ಷಕ ವಿನ್ಯಾಸದ 2022ರ ಹ್ಯುಂಡೈ ಟ್ಯೂಸಾನ್ ಎಸ್ಯುವಿಯ ವಿಶೇಷತೆಗಳು
- 15 hrs ago
ಪಾಸ್ಫೋರ್ಟ್ ಪ್ರಯೋಜನಗಳೇನು? ಏಕೆ ವಿವಿಧ ಬಣ್ಣಗಳಲ್ಲಿ ಲಭ್ಯವಿರುತ್ತವೆ ನೋಡಿ..
- 16 hrs ago
ಬ್ರೇಕ್ ಫೇಲ್ ಆದಾಗ ಕೇವಲ 8 ಸೆಕೆಂಡುಗಳಲ್ಲಿ ಕಾರು ನಿಲ್ಲಿಸುವುದು ಹೇಗೆ? ಇಲ್ಲಿದೆ ಉಪಯುಕ್ತ ಸಲಹೆ
Don't Miss!
- News
UIDAI ಹೊಸ ಸುತ್ತೋಲೆ: ಸರ್ಕಾರಿ ಸವಲತ್ತು, ಸಬ್ಸಿಡಿ ಪಡೆಯಲು ಆಧಾರ್ ಕಡ್ಡಾಯ
- Travel
ವಿಶ್ವದ ಅತ್ಯಂತ ತೇವವಾದ ಸ್ಥಳಗಳು: ಭೂಮಿಯ ಮೇಲಿನ ಮಳೆಯ ಸ್ಥಳಗಳ ಪಟ್ಟಿ
- Education
UGC Scholarship : ಯುಜಿಸಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
- Movies
ಮಗಳಿಗೆ ದುಬಾರಿ ಗಿಫ್ಟ್ ಕೊಟ್ಟ ನಟ ದುನಿಯಾ ವಿಜಯ್!
- Lifestyle
ಶನಿದೋಷ ನಿವಾರಣೆ ಹಾಗೂ ಸಂಪತ್ತು ವೃದ್ಧಿಗೆ ಕೃಷ್ಣ ಜನ್ಮಾಷ್ಟಮಿಗೆ ಮಾಡಿ ಈ ವಿಶೇಷ ಪರಿಹಾರ
- Technology
ಧಮಾಕಾ ಕೊಡುಗೆ!..ಭರ್ಜರಿ ಡಿಸ್ಕೌಂಟ್ನಲ್ಲಿ ಹೊಸ ಸ್ಮಾರ್ಟ್ಟಿವಿ ನಿಮ್ಮದಾಗಿಸಿಕೊಳ್ಳಿ!
- Finance
ಆಗಸ್ಟ್ 17: ಭಾರತದ ಮೆಟ್ರೋ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು
- Sports
ಮ್ಯಾಂಚೆಸ್ಟರ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಖರೀದಿಸುತ್ತೇನೆ ಎಂದ ಎಲಾನ್ ಮಸ್ಕ್!
ಹೊಸ ಇವಿ ವಾಹನ ಉತ್ಪಾದನೆಗಾಗಿ ರೂ. 500 ಕೋಟಿ ಹೂಡಿಕೆಗೆ ಸಿದ್ದವಾದ ಒಕಿನಾವ ಆಟೋಟೆಕ್
ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಒಕಿನಾವ ಕಂಪನಿಯು ಶೀಘ್ರದಲ್ಲಿಯೇ ತನ್ನ ಮೂರನೇ ಉತ್ಪಾದನಾ ಘಟಕ ತೆರೆಯುವ ಯೋಜನೆಯಲ್ಲಿದ್ದು, ಹೊಸ ವಾಹನ ಉತ್ಪಾದನಾ ಘಟಕದ ಮೇಲೆ ಭಾರೀ ಪ್ರಮಾಣದ ಹೂಡಿಕೆಗೆ ಸಿದ್ದವಾಗುತ್ತಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿವಿಧ ವಾಹನ ಉತ್ಪಾದನಾ ಕಂಪನಿಗಳು ಗ್ರಾಹಕರ ಬೇಡಿಕೆ ಪೂರೈಸಲು ಉತ್ಪಾದನಾ ಪ್ರಮಾಣವನ್ನು ದ್ವಿಗುಣಗೊಳಿಸುತ್ತಿದ್ದು, ಒಕಿನಾವ ಕೂಡಾ ತನ್ನ ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ಗಳ ಉತ್ಪಾದನಾ ಪ್ರಮಾಣ ಹೆಚ್ಚಿಸಲು ಹೊಸ ಯೋಜನೆಗೆ ಚಾಲನೆ ನೀಡಿದೆ.

ಎಲೆಕ್ಟ್ರಿಕ್ ವಾಹನ ಮಾರಾಟ ಆರಂಭಿಸಿದ ಏಳು ವರ್ಷಗಳ ಅವಧಿಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿರುವ ಒಕಿನಾವ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಹೊಸ ಯೋಜನೆಗೆ ಪೂರಕವಾಗಿ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಲು ರಾಜಸ್ತಾನದ ಗಡಿಭಾಗದಲ್ಲಿರುವ ಭಿವಾಡಿಯಲ್ಲಿನ ಉತ್ಪಾದನಾ ಘಟಕವನ್ನು ವಿಸ್ತರಿಸಿದೆ.

ವಿಸ್ತರಿತ ವಾಹನ ಉತ್ಪಾದನಾ ಘಟಕದ ಮೂಲಕ ವಾರ್ಷಿಕವಾಗಿ 1.80 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಬೈಕ್ ಮಾದರಿಗಳನ್ನು ಉತ್ಪಾದನೆಗೊಳಿಸಲು ಯೋಜಿಸಿರುವ ಒಕಿನಾವ ಕಂಪನಿಯು ಹೊಸ ಘಟಕದ ನಿರ್ಮಾಣಕ್ಕಾಗಿ ಹೊಸದಾಗಿ ರೂ. 150 ಕೋಟಿ ಹೂಡಿಕೆ ಮಾಡಿದೆ.

ಮೊದಲ ಘಟಕವನ್ನು ಆಳ್ವಾರ್ನಲ್ಲಿ ಮತ್ತು ಎರಡನೇ ಘಟಕವನ್ನು ಭಿವಾಡಿಯಲ್ಲಿ ನಿರ್ಮಾಣ ಮಾಡಿರುವ ಒಕಿನಾವ ಕಂಪನಿಯು ಇದೀಗ ಮೂರನೇ ಘಟಕ ನಿರ್ಮಾಣಕ್ಕೆ ಸಿದ್ದವಾಗುತ್ತಿದ್ದು, ಮೂರನೇ ಘಟಕದ ನಿರ್ಮಾಣಕ್ಕಾಗಿ ಕಂಪನಿಯು ಸುಮಾರು ರೂ. 500 ಕೋಟಿ ಹೂಡಿಕೆಗೆ ಮುಂದಾಗಿದೆ.

ಮೂರನೇ ಘಟಕದ ಮೂಲಕ ಕಂಪನಿಯು ವಾರ್ಷಿಕವಾಗಿ 1 ಮಿಲಿಯನ್(10 ಲಕ್ಷ) ಯುನಿಟ್ ಉತ್ಪಾದಿಸುವ ಗುರಿಹೊಂದಿದ್ದು, ಶೀಘ್ರದಲ್ಲೇ ಮೂರನೇ ಘಟಕ ನಿರ್ಮಾಣ ಯೋಜನೆಯ ಕುರಿತಾಗಿ ಮಾಹಿತಿ ಹಂಚಿಕೊಳ್ಳಲಿದೆ.

ಒಕಿನಾವ ಕಂಪನಿಯ ಹೊಸ ಯೋಜನೆಗಾಗಿ ಪ್ರಮುಖ ಕಂಪನಿಗಳು ಭಾರೀ ಪ್ರಮಾಣದ ಬಂಡವಾಳ ಹೂಡಿಕೆ ಮಾಡುತ್ತಿದ್ದು, ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಒಕಿನಾವ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಬೈಕ್ಗಳನ್ನು ಮಾರುಕಟ್ಟೆಗೆ ಪರಿಚಯಿಸಲು ಹೊಸ ಬಂಡವಾಳ ಹೂಡಿಕೆಯು ಸಾಕಷ್ಟು ಸಹಕಾರಿಯಾಗಿದೆ.

ಬಜೆಟ್ ಬೆಲೆಯಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿರುವ ಒಕಿನಾವ ಕಂಪನಿಯು ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ ಒಕಿ100 ಇವಿ ಬೈಕ್ ಸೇರಿದಂತೆ ಒಟ್ಟು ನಾಲ್ಕು ಹೊಸ ಇವಿ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಹೊಸ ವಾಹನಗಳ ಜೊತೆಗೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಳನ್ನು ಸಹ ಗ್ರಾಹಕರ ಬೇಡಿಕೆಯೆಂತೆ ಹೊಸ ಫೀಚರ್ಸ್ಗಳೊಂದಿಗೆ ಉನ್ನತೀಕರಿಸುತ್ತಿರುವ ಒಕಿನಾವ ಕಂಪನಿಯು ತಂತ್ರಜ್ಞಾನ ಬಳಕೆಯನ್ನು ಸುಧಾರಣೆಗೊಳಿಸುತ್ತಿದೆ.

ಒಕಿನಾವ ಕಂಪನಿಯು ಕಂಪನಿಯು ಸದ್ಯ ಗ್ರಾಹಕರ ಬೇಡಿಕೆಯೆಂತೆ ಪ್ರೈಸ್, ಆರ್30, ಲೈಟ್, ರಿಡ್ಜ್ ಪ್ಲಸ್, ಪ್ರೈಸ್ ಪ್ರೊ ಮತ್ತು ಐ-ಪ್ರೈಸ್ ಪ್ರೊ ಪ್ಲಸ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಭವಿಷ್ಯ ಯೋಜನೆಗಳಲ್ಲಿರುವ ಒಕಿ100 ಸೇರಿದಂತೆ ಒಂದು ಮ್ಯಾಕ್ಸಿ ಸ್ಕೂಟರ್ ಮತ್ತು ಎರಡು ಹೈ ಸ್ಪೀಡ್ ಎಲೆಕ್ಟ್ರಿಕ್ ಮಾದರಿಗಳನ್ನು ಬಿಡುಗಡೆಗಾಗಿ ಸಿದ್ದವಾಗುತ್ತಿವೆ.

ಎಲೆಕ್ಟ್ರಿಕ್ ವಾಹನಗಳ ನಿರ್ಮಾಣದ ಜೊತೆಗೆ ಬ್ಯಾಟರಿ ನಿರ್ಮಾಣ ಕೇಂದ್ರದ ಮೇಲೂ ಹೂಡಿಕೆಗೆ ಸಿದ್ದವಾಗುತ್ತಿದ್ದು, ಒಕಿನಾವ ಕಂಪನಿಯು ಇದುವರೆಗೆ ಬರೋಬ್ಬರಿ 1.30 ಲಕ್ಷಕ್ಕೂ ಹೆಚ್ಚು ಯುನಿಟ್ ಇವಿ ಸ್ಕೂಟರ್ಗಳನ್ನು ಮಾರಾಟ ಮಾಡಿ ಹೊಸ ದಾಖಲೆ ನಿರ್ಮಿಸಿದೆ.

ಇಂಧನ ದರ ಹೆಚ್ಚಳ ನಂತರ ಎಲೆಕ್ಟ್ರಿಕ್ ವಾಹನ ಮಾದರಿಗಳ ವಿಚಾರಣೆಯು ಕೂಡಾ ತಿಂಗಳಿನಿಂದ ತಿಂಗಳಿಗೆ ಸಾಕಷ್ಟು ಹೆಚ್ಚಳವಾಗಿದ್ದು, ಹೆಚ್ಚಿನ ಮಟ್ಟದ ಮೈಲೇಜ್ ಹೊಂದಿರುವ ಇವಿ ವಾಹನಗಳ ಖರೀದಿಗೆ ಆಸಕ್ತಿ ತೋರುತ್ತಿದ್ದಾರೆ.

ಹೀಗಾಗಿ ಗ್ರಾಹಕರ ಬೇಡಿಕೆ ಆಧಾರಿಸಿ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಇವಿ ಬೈಕ್ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿರುವ ಒಕಿನಾವ ಕಂಪನಿಯು ಮುಂದಿನ ಐದು ತಿಂಗಳ ಅವಧಿಯಲ್ಲಿ ಒಕಿ100 ಇವಿ ಬೈಕ್ ಅಥವಾ ಮ್ಯಾಕ್ಸಿ ಸ್ಕೂಟರ್ ಬಿಡುಗಡೆ ಮಾಡುವುದು ಖಚಿತವಾಗಿದೆ.

ಒಕಿ100 ಇವಿ ಬೈಕಿನ ಟೀಸರ್ ಹೊರತುಪಡಿಸಿ ಯಾವುದೇ ತಾಂತ್ರಿಕ ಅಂಶಗಳನ್ನು ಹಂಚಿಕೊಳ್ಳದ ಒಕಿನಾವ ಕಂಪನಿಯು ಬಜೆಟ್ ಬೆಲೆಯಲ್ಲಿ ಉತ್ತಮ ಬ್ಯಾಟರಿ ಪ್ಯಾಕ್ನೊಂದಿಗೆ ಬಿಡುಗಡೆಯ ಸುಳಿವು ನೀಡಿದ್ದು, 150 ಸಿಸಿ ಸಾಮರ್ಥ್ಯದ ಸಾಮಾನ್ಯ ಬೈಕ್ಗಳಿಗೆ ಸಮನಾಗಿರುವ ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯು ರಿವೋಲ್ಟ್ ಎಲೆಕ್ಟ್ರಿಕ್ ಬೈಕ್ ಮಾದರಿಗೆ ಪೈಪೋಟಿ ನೀಡಲಿದೆ.

ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯು ಪ್ರತಿ ಚಾರ್ಜ್ಗೆ ಬ್ಯಾಟರಿ ರೇಂಜ್ ಆಧಾರದ ಮೇಲೆ 140ಕಿ.ಮೀ ನಿಂದ 170 ಕಿ.ಮೀ ಮೈಲೇಜ್ ಹಿಂದಿರುಗಿಸಬಹುದಾಗಿದೆ ಎನ್ನಲಾಗಿದ್ದು, ಹೊಸ ಬೈಕ್ ಬೆಲೆಯನ್ನು ಎಕ್ಸ್ಶೋರೂಂ ಪ್ರಕಾರ ರೂ.1 ಲಕ್ಷದಿಂದ ರೂ.1.20 ಲಕ್ಷ ಬೆಲೆ ಅಂತರದೊಳಗೆ ಬಿಡುಗಡೆ ಮಾಡಲಾಗುತ್ತಿದೆ.

ಮ್ಯಾಕ್ಸಿ ಇವಿ ಸ್ಕೂಟರ್ ಮಾದರಿಯು ಸಹ ಒಕಿನಾವ ಸ್ಕೂಟರ್ ಮಾರಾಟಕ್ಕೆ ಹೊಸ ತಿರುವು ನೀಡಲಿದ್ದು, ಸದ್ಯ ವಿವಿಧ ಹಂತದ ಟೆಸ್ಟಿಂಗ್ ನಡೆಸುತ್ತಿರುವ ಹೊಸ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಇತರೆ ಇವಿ ಸ್ಕೂಟರ್ಗಳಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳೊಂದಿಗೆ ಆಕರ್ಷಕ ಬೆಲೆಯಲ್ಲಿ ಬಿಡುಗಡೆಗೆ ಸಿದ್ದವಾಗುತ್ತಿದೆ.