ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಓಲಾ ಎಲೆಕ್ಟ್ರಿಕ್

ಓಲಾ ಎಲೆಕ್ಟ್ರಿಕ್ ಕಂಪನಿಯು ತನ್ನ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳ ಉತ್ಪಾದನೆಯನ್ನು ತೀವ್ರಗೊಳಿಸುವ ಮೂಲಕ ನಿಗದಿತ ಅವಧಿಯಲ್ಲಿ ವಿತರಣೆ ಪ್ರಕ್ರಿಯೆ ಕೈಗೊಳ್ಳುತ್ತಿದ್ದು, ಕಂಪನಿಯು ಎಸ್1 ಮಾದರಿಗಿಂತಲೂ ಹೆಚ್ಚಿನ ಮಟ್ಟದಲ್ಲಿ ಎಸ್‍1 ಪ್ರೊ ಮಾದರಿಗಾಗಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಓಲಾ ಎಲೆಕ್ಟ್ರಿಕ್

ಎಸ್1 ಮಾದರಿಗಿಂತಲೂ ಹೆಚ್ಚು ಎಸ್1 ಪ್ರೊ ಮಾದರಿಗಾಗಿ ಹೆಚ್ಚಿನ ಬೇಡಿಕೆ ಹರಿದುಬಂದಿರುವುದರಿಂದ ಕಂಪನಿಯು ಮಹತ್ವದ ನಿರ್ಧಾರ ಪ್ರಕಟಿಸಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಎಸ್1 ಪ್ರೊ ಉತ್ಪಾದನೆಗೆ ಹೆಚ್ಚಿನ ಗಮನಹರಿಸಲು ತಾತ್ಕಾಲಿಕವಾಗಿ ಎಸ್1 ಮಾದರಿಯ ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ.

ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಓಲಾ ಎಲೆಕ್ಟ್ರಿಕ್

ಎಸ್1 ಪ್ರೊ ಮಾದರಿಗಾಗಿ ಹೆಚ್ಚುತ್ತಿರುವ ವಿತರಣೆ ಅವಧಿಯು ಸಹಜ ಸ್ಥಿತಿಯತ್ತ ಬಂದ ನಂತರವೇ ಎಸ್1 ಮಾದರಿಯ ಉತ್ಪಾದನೆಯನ್ನು ಪುನಾರಂಭಿಸಲು ನಿರ್ಧರಿಸಲಾಗಿದ್ದು, ಕಡಿಮೆ ಸಂಖ್ಯೆಯಲ್ಲಿರುವ ಎಸ್1 ಮಾದರಿಗಾಗಿ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ಎಸ್1 ಪ್ರೊ ಮಾದರಿಯನ್ನೇ ವಿತರಿಸಲು ನಿರ್ಧರಿಸಿದೆ.

ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಓಲಾ ಎಲೆಕ್ಟ್ರಿಕ್

ಎಸ್1 ಮಾದರಿಗಾಗಿ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ಎಸ್1 ಪ್ರೊ ಮಾದರಿಗಾಗಿ ಅಪ್‌ಗ್ರೆಡ್ ಮಾಡಿಕೊಳ್ಳುವ ಅವಕಾಶ ನೀಡಿದ್ದ ಕಂಪನಿಯು ಹೆಚ್ಚಿನ ಮಟ್ಟದ ಫೀಚರ್ಸ್‌ಗಳಿಗಾಗಿ ರೂ. 30 ಸಾವಿರ ಹೆಚ್ಚುವರಿಯಾಗಿ ಪಾವತಿಸುವಂತೆ ಗ್ರಾಹಕರಿಗೆ ಮಾಹಿತಿ ನೀಡಿತ್ತು.

ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಓಲಾ ಎಲೆಕ್ಟ್ರಿಕ್

ಓಲಾ ಕಂಪನಿಯ ಮಾಹಿತಿ ನೀಡಿದ ನಂತರ ಎಸ್1 ಮಾದರಿಗಾಗಿ ಬುಕ್ಕಿಂಗ್ ಸಲ್ಲಿಸಿದ್ದ ಹಲವು ಗ್ರಾಹಕರು ಎಸ್1 ಪ್ರೊ ಮಾದರಿಗಾಗಿ ಅಪ್‍ಗ್ರೆಡ್ ಮಾಡಿಕೊಂಡಿದ್ದು, ಇನ್ನು ಕೆಲವೇ ಸಂಖ್ಯೆಯ ಎಸ್1 ಗ್ರಾಹಕರಿಗೆ ಕಂಪನಿಯು ಪ್ರೀಮಿಯಂ ಫೀಚರ್ಸ್ ರಹಿತ ಎಸ್1 ಪ್ರೊ ಮಾದರಿಯನ್ನು ವಿತರಿಸಲು ಮುಂದಾಗಿದೆ.

ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಓಲಾ ಎಲೆಕ್ಟ್ರಿಕ್

ಎಸ್1 ಮಾದರಿಯನ್ನೇ ಖರೀದಿಸಲು ಸಿದ್ದವಾಗಿರುವ ಗ್ರಾಹಕರಿಗೆ ಓಲಾ ಕಂಪನಿಯ ಎಸ್1 ಪ್ರೊ ಮಾದರಿಯನ್ನು ವಿತರಣೆ ಮಾಡಿದರು ಸಹ ಅದರಲ್ಲಿರುವ ಹೆಚ್ಚುವರಿ ಪ್ರೀಮಿಯಂ ಫೀಚರ್ಸ್‌ಗಳನ್ನು ಬಳಕೆ ಮಾಡಲು ಸಾಧ್ಯವಿಲ್ಲ. ಕೇವಲ ಎಸ್1 ಬದಲಾಗಿ ಎಸ್1 ಪ್ರೊ ಮಾದರಿಯನ್ನು ವಿತರಣೆ ಮಾಡಿದರೂ ಹೆಚ್ಚುವರಿ ಮೈಲೇಜ್ ರೇಂಜ್, ಹೈ ಸ್ಪೀಡ್ ಫೀಚರ್ಸ್, ಕ್ರೂಸ್ ಕಂಟ್ರೊಲ್, ಹಿಲ್ ಹೋಲ್ಡ್ ಅಸಿಸ್ಟ್, ಹೈಪರ್ ಮೋಡ್‌ಗಳನ್ನು ಲಾಕ್ ಮಾಡಲಾಗಿರುತ್ತದೆ.

ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಓಲಾ ಎಲೆಕ್ಟ್ರಿಕ್

ಒಂದು ವೇಳೆ ಲಾಕ್ ಮಾಡಲಾಗಿರುವ ಫೀಚರ್ಸ್‌ಗಳನ್ನು ಬಳಕೆ ಮಾಡಿಕೊಳ್ಳುವ ಯೋಜನೆಯಿದ್ದರೆ ಗ್ರಾಹಕರು ಹೆಚ್ಚುವರಿ ದರ ಪಾವತಿಸಿ ಅನ್‌ಲಾಕ್ ಮಾಡಬಹುದಾಗಿದ್ದು, ಇಲ್ಲವಾದರೆ ಎಸ್1 ಮಾದರಿಯ ಬದಲಾಗಿ ಯಾವುದೇ ಹೆಚ್ಚುವರಿ ಫೀಚರ್ಸ್‌ಗಳಿಲ್ಲದ ಎಸ್1 ಪ್ರೊ ಮಾದರಿಯನ್ನು ಪಡೆಯಲು ಇದು ಉತ್ತಮ ಅವಕಾಶವಾಗಿದೆ.

ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಓಲಾ ಎಲೆಕ್ಟ್ರಿಕ್

ಇನ್ನು ಓಲಾ ಎಲೆಕ್ಟ್ರಿಕ್ ಕಂಪನಿಯು ಮೊದಲ ಹಂತವಾಗಿ ಬೆಂಗಳೂರು, ಚೆನ್ನೈ ಮುಂಬೈ ಮತ್ತು ಜೈಪುರ್‌ನಲ್ಲಿ ಸ್ಕೂಟರ್ ವಿತರಣೆ ಆರಂಭಿಸಿದ್ದು, ಎರಡನೇ ಹಂತದಲ್ಲಿ ಮುಂಬೈ, ಹೈದ್ರಾಬಾದ್, ಅಹಮದಾಬಾದ್, ಪುಣೆ ಮತ್ತು ವೈಜಾಗ್‌ನಲ್ಲಿ ಇವಿ ಸ್ಕೂಟರ್ ವಿತರಣೆಗೆ ಚಾಲನೆ ನೀಡಲಾಗುತ್ತಿದೆ.

ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಓಲಾ ಎಲೆಕ್ಟ್ರಿಕ್

ಓಲಾ ಹೊಸ ಎಸ್1 ಇವಿ ಸ್ಕೂಟರ್ ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 99,999 ಬೆಲೆ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ರೂ. 1,29,999 ಬೆಲೆ ಹೊಂದಿದ್ದು, ಅತ್ಯತ್ತಮ ಕಾರ್ಯಕ್ಷಮತೆ, ಗರಿಷ್ಠ ಮೈಲೇಜ್, ಪ್ರೀಮಿಯಂ ಫೀಚರ್ಸ್ ಮತ್ತು ಬಜೆಟ್ ಬೆಲೆಯು ಹೊಸ ಸ್ಕೂಟರ್ ಆಯ್ಕೆ ಮೌಲ್ಯವನ್ನು ಹೆಚ್ಚಿಸಿವೆ.

ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಓಲಾ ಎಲೆಕ್ಟ್ರಿಕ್

ಹೊಸ ಎಸ್1 ವೆರಿಯೆಂಟ್‌‌ನಲ್ಲಿ ಓಲಾ ಕಂಪನಿಯು 2.98kWh ಮತ್ತು ಎಸ್1 ಪ್ರೊ ಮಾದರಿಯಲ್ಲಿ 3.97kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು, ಪ್ರತಿ ಚಾರ್ಜ್‌ಗೆ ಎಸ್1 ಮಾದರಿಯು ಗರಿಷ್ಠ 121 ಕಿ.ಮೀ ಮೈಲೇಜ್ ಹಿಂದಿರುಗಿಸಿದರೆ ಎಸ್1 ಪ್ರೊ ಮಾದರಿಯು ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಓಲಾ ಎಲೆಕ್ಟ್ರಿಕ್

ಇದರಲ್ಲಿ ಎಸ್1 ಮಾದರಿಯು ಗಂಟೆಗೆ 90 ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ಪ್ರತಿ ಗಂಟೆಗೆ 115ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದು, ಎಸ್1 ಮಾದರಿಯಲ್ಲಿ ನಾರ್ಮಲ್ ಮತ್ತು ಸ್ಪೋರ್ಟ್ ರೈಡ್ ಮೋಡ್‌ಗಳಿದ್ದರೆ ಎಸ್1 ಪ್ರೊ ಮಾದರಿಯಲ್ಲಿ ನಾರ್ಮಲ್, ಸ್ಪೋರ್ಟ್ ಮತ್ತು ಹೈಪರ್ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ.

ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಓಲಾ ಎಲೆಕ್ಟ್ರಿಕ್

ಹಾಗೆಯೇ ಓಲಾ ಇವಿ ಸ್ಕೂಟರ್‌ಗಳು ಅತ್ಯುತ್ತಮ ವಿನ್ಯಾಸದೊಂದಿಗೆ ಗರಿಷ್ಠ ಮಟ್ಟದ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಸ್ಕೂಟರ್‌ಗಳಲ್ಲಿ ಟ್ವಿನ್ ಪಾಡ್ ಎಲ್ಇಡಿ ಸೆಟ್ಅಪ್, ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಕೌಂಟ್‌ರ್ಡ್ ಸೀಟ್, ಅಲಾಯ್ ವ್ಹೀಲ್, 36-ಲೀಟರ್ ಸಾಮರ್ಥ್ಯ ಅಂಡರ್ ಸೀಟ್ ಸ್ಪೋರೇಜ್, ರಿಯರ್ ಗ್ರ್ಯಾಬ್ ರೈಲ್ಸ್, ಫ್ರಂಟ್ ಸ್ಟೋರೇಜ್ ಪ್ಯಾಕೇಟ್, ಲಗೇಜ್ ಹುಕ್ ಮತ್ತು ಹತ್ತು ವಿವಿಧ ಬಣ್ಣಗಳ ಆಯ್ಕೆ ಹೊಂದಿದೆ.

ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಓಲಾ ಎಲೆಕ್ಟ್ರಿಕ್

ಹೊಸ ಸ್ಕೂಟರ್‌ಗಳು 1,859 ಎಂಎಂ ಉದ್ದ, 712 ಎಂಎಂ ಅಗಲ, 1,160 ಎಂಎಂ ಎತ್ತರ, 1,359 ಎಂಎಂ ವ್ಹೀಲ್ ಬೆಸ್, 792 ಎಂಎಂ ಸೀಟ್ ಹೈಟ್, 125 ಕೆ.ಜಿ ತೂಕ ಹೊಂದಿದ್ದು, ಮುಂಭಾಗದಲ್ಲಿ ಸಿಂಗಲ್ ಫೋರ್ಕ್ ಸಸ್ಫೆಷನ್ ಮತ್ತು ಹಿಂಬದಿಯಲ್ಲಿ ಮೊನೊ ಶಾಕ್ ಸಸ್ಷೆಷನ್‌ನೊಂದಿಗೆ ಎರಡು ಬದಿಯಲ್ಲೂ ಡಿಸ್ಕ್ ಬ್ರೇಕ್ ಜೋಡಣೆ ಹೊಂದಿವೆ.

ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಓಲಾ ಎಲೆಕ್ಟ್ರಿಕ್

ಜೊತೆಗೆ ಹೊಸ ಸ್ಕೂಟರ್‌ನಲ್ಲಿ 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಮತ್ತು ಶಟರ್‌ಪ್ರೂಫ್ ಸ್ಕ್ರೀನ್‌ನೊಂದಿಗೆ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆನ್ ಬೋರ್ಡ್ ನ್ಯಾನಿಗೇಷನ್‌ಗಾಗಿ ಇಸಿಮ್ ಇಂಟರ್‌ನೆಂಟ್ ಕನೆಕ್ಟಿವಿಟಿ, ಸ್ಮಾಟ್‌ಫೋರ್ಟ್ ಮೂಲಕ ವಿವಿಧ ತಾಂತ್ರಿಕ ಅಂಶಗಳನ್ನು ನಿಯಂತ್ರಿಸಲು ಕನೆಕ್ಟೆಡ್ ಫೀಚರ್ಸ್ ಸಹ ನೀಡಲಾಗಿದೆ.

Most Read Articles

Kannada
English summary
Ola electric has halted the production of the ola s1 electric scooter details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X