Just In
- 4 min ago
ಭಾರತೀಯ ಕಾರುಗಳಿಗೆ ವಿದೇಶಗಳಲ್ಲಿ ಬೇಡಿಕೆ ಹೆಚ್ಚಳ: ಮೇ ತಿಂಗಳಲ್ಲಿ ಅತಿ ಹೆಚ್ಚು ರಫ್ತಾಗಿರುವ ಕಾರುಗಳಿವು!
- 40 min ago
ಅತ್ಯಾಧುನಿಕ ಫೀಚರ್ಸ್ಗಳೊಂದಿಗೆ ಹೀರೋ ಪ್ಯಾಶನ್ ಎಕ್ಸ್ಟೆಕ್ ಬೈಕ್ ಬಿಡುಗಡೆ
- 1 hr ago
ಪ್ರಯಾಣಿಕ ಕಾರು ಮಾದರಿಗಳಿಗಾಗಿ 5 ಸ್ಟಾರ್ ರೇಟಿಂಗ್ ಹೊಂದಿರುವ ಟೈರ್ ಬಿಡುಗಡೆ ಮಾಡಿದ ಮೈಕೆಲಿನ್
- 3 hrs ago
ಬರೋಬ್ಬರಿ 40 ವೆರಿಯೆಂಟ್ಗಳನ್ನು ಹೊಂದಿರಲಿದೆ ಹೊಸ ಮಹೀಂದ್ರಾ ಸ್ಕಾರ್ಪಿಯೋ-ಎನ್
Don't Miss!
- Movies
ಗಾಯಕಿಗೆ ಅಸಹ್ಯಕರ ಚಿತ್ರ ಕಳಿಸಿದವರ ವಿರುದ್ಧ ದೂರು: ಗಾಯಕಿಯ ಖಾತೆಯೇ ಬ್ಲಾಕ್!
- News
ಭೂಕಂಪನ ಮಹಾಮಳೆಯ ಮುನ್ಸೂಚನೆಯಾ?... ಅವತ್ತು ಹಾಗೆಯೇ ಆಗಿತ್ತು!
- Technology
ಪೊಕೊ F4 5G V/S ಪೊಕೊ F3 GT: ಇವೆರಡರಲ್ಲಿ ಖರೀದಿಗೆ ಯಾವುದು ಬೆಸ್ಟ್?
- Sports
ENG vs NZ 2ನೇ ಟೆಸ್ಟ್: ನೆಲಕಚ್ಚಿದ್ದ ಇಂಗ್ಲೆಂಡ್ಗೆ ಬೈರ್ಸ್ಟೋ, ಓವರ್ಟನ್ ಆಸರೆ; 3ನೇ ದಿನದ ಲೈವ್ ಸ್ಕೋರ್
- Lifestyle
ಅಪಘಾತದಿಂದ ಕ್ಷಣಾರ್ಧದಲ್ಲಿ ಮಗುವಿನ ರಕ್ಷಿಸಿ, ತಾಯಿಯ ಮೊಬೈಲ್ ಪುಡಿ ಮಾಡಿದ ಸೈನಿಕ: ಸೈನಿಕನ ಕಾರ್ಯಕ್ಕೆ ನೆಟ್ಟಿಗರು ಫುಲ್ ಫಿದಾ
- Finance
ಪಿಎಂ ಕಿಸಾನ್ 12ನೇ ಕಂತು: ಶೀಘ್ರ ಈ ಕಾರ್ಯ ಮಾಡಿ
- Education
Vijayapura District Court Recruitment 2022 : 28 ಜವಾನ, ಆದೇಶ ಜಾರಿಕಾರ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ನಿಮ್ಮ ಮುಂದಿನ ಪ್ರವಾಸದ ಪಟ್ಟಿಯಲ್ಲಿ ಕರ್ನಾಟಕದ ಬಾದಾಮಿ ಯಾಕಿರಬೇಕು? ಇಲ್ಲಿದೆ ಕಾರಣ!
ಬೆಲೆ ಹೆಚ್ಚಳದೊಂದಿಗೆ ಎಸ್1 ಪ್ರೊ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಿದ ಓಲಾ ಎಲೆಕ್ಟ್ರಿಕ್
ಎಸ್1 ಪ್ರೊ ಮೂಲಕ ಇವಿ ಸ್ಕೂಟರ್ ಮೂಲಕ ಇವಿ ಸ್ಕೂಟರ್ ವಿಭಾಗದಲ್ಲಿ ಹಲವು ಹೊಸ ದಾಖಲೆಗಳನ್ನು ನಿರ್ಮಿಸುತ್ತಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಈಗಾಗಲೇ ಬುಕಿಂಗ್ ಮಾಡಿರುವ ಗ್ರಾಹಕರಿಗೆ ಮೂರನೇ ಹಂತದ ಖರೀದಿ ಪ್ರಕ್ರಿಯೆ ಆರಂಭಿಸಿದ್ದು, ಖರೀದಿ ವಿಂಡೋ ಆರಂಭಿಸುವುದೊಂದಿಗೆ ಸ್ಕೂಟರ್ ಬೆಲೆಯಲ್ಲಿ ಮೊದಲ ಬಾರಿಗೆ ಹೆಚ್ಚಳ ಮಾಡಿದೆ.

ಓಲಾ ಎಲೆಕ್ಟ್ರಿಕ್ ಕಂಪನಿಯು ಹೊಸ ಇವಿ ಸ್ಕೂಟರ್ ಮಾದರಿಗಾಗಿ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಬುಕಿಂಗ್ ಪಡೆದುಕೊಂಡಿದ್ದು, ಬುಕಿಂಗ್ ಆಧರಿಸಿ ವಿತರಣೆ ಪ್ರಕ್ರಿಯೆಯನ್ನು ತೀವ್ರಗೊಳಿಸಿದೆ. ಆರಂಭದಲ್ಲಿ ಉತ್ಪಾದನಾ ಪ್ರಕ್ರಿಯೆಯಲ್ಲಿ ಆದ ಗೊಂದಲಗಳಿಂದ ನಿಧಾನಗೊಂಡಿದ್ದ ವಿತರಣೆಯು ಇದೀಗ ವೇಗಪಡೆದುಕೊಂಡಿದ್ದು, ಕಂಪನಿಯು ಇದೀಗ ಬುಕಿಂಗ್ ಸಲ್ಲಿಸಿರುವ ಇನ್ನುಳಿದ ಗ್ರಾಹಕರಿಗೆ ಖರೀದಿಗೆ ಪ್ರಕ್ರಿಯೆಗೆ ಆಹ್ವಾನ ನೀಡಿದೆ.

ಬುಕಿಂಗ್ ಸಲ್ಲಿಸಿರುವ ಗ್ರಾಹಕರನ್ನು ಸಂಪರ್ಕಿಸಲಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಇವಿ ಖರೀದಿಗಾಗಿ ಮುಂದಿನ ಹಂತದ ಪ್ರಕ್ರಿಯೆಗಳಿಗೆ ಒಪ್ಪಿಗೆ ಪಡೆದುಕೊಳ್ಳಲಿದ್ದು, ಇದೀಗ ಖರೀದಿ ಪ್ರಕ್ರಿಯೆ ಒಪ್ಪಿಗೆ ಸೂಚಿಸುವ ಗ್ರಾಹಕರಿಗೆ ಮುಂದಿನ ಮೂರು ತಿಂಗಳ ಒಳಗಾಗಿ ವಿತರಣೆಯನ್ನು ಪೂರ್ಣಗೊಳಿಸಲಿದೆ.

ಇದರೊಂದಿಗೆ ಕಂಪನಿಯು ಹೊಸ ಎಸ್1 ಪ್ರೊ ಸ್ಕೂಟರ್ ಬೆಲೆಯನ್ನು ಎಕ್ಸ್‌ಶೋರೂಂ ಪ್ರಕಾರ ರೂ. 1.30 ಲಕ್ಷದಿಂದ ರೂ. 1.40 ಲಕ್ಷಕ್ಕೆ ಏರಿಕೆ ಮಾಡಿದ್ದು, ಹೊಸ ಸ್ಕೂಟರ್‌ಗಳಲ್ಲಿ ಕಂಪನಿಯು 2.0 ಕನೆಕ್ಟೆಡ್ ಸೌಲಭ್ಯಗಳನ್ನು ನೀಡಲು ಮುಂದಾಗಿದೆ.

ಕಳೆದ ಅಗಸ್ಟ್‌ನಲ್ಲಿ ಇವಿ ಸ್ಕೂಟರ್ ಬಿಡುಗಡೆಯ ನಂತರ ಮೊದಲ ಬಾರಿಗೆ ಬೆಲೆ ಹೆಚ್ಚಿಸಿರುವ ಕಂಪನಿಯು ಬಿಡಿಭಾಗಗಳ ವೆಚ್ಚ ನಿರ್ವಹಣೆ ಮತ್ತು ಹೆಚ್ಚುವರಿ ಫೀಚರ್ಸ್ ಸೇರ್ಪಡೆ ಮಾಡಿರುವ ಗ್ರಾಹಕರಿಗೆ ಹೊರೆಯಾದರೂ ಹೊಸ ಫೀಚರ್ಸ್ ರೈಡಿಂಗ್ ಅನುಭವ ಹೆಚ್ಚಿಸಲಿವೆ.

ಇನ್ನು ಇವಿ ಸ್ಕೂಟರ್ ಖರೀದಿದಾಗಿ ಓಲಾ ಕಂಪನಿಯು ಪ್ರಮುಖ ಬ್ಯಾಂಕ್‌ಗಳ ಪಾಲುದಾರಿಕೆಯೊಂದಿಗೆ ಗರಿಷ್ಠ ಸಾಲ ಸೌಲಭ್ಯದೊಂದಿಗೆ ಆಕರ್ಷಕ ಇಎಂಐ ಆಯ್ಕೆಗಳನ್ನು ನೀಡುತ್ತಿದ್ದು, ಓಲಾ ಫೈನಾನ್ಸಿಲ್ ಸರ್ವಿಸ್ ಮೂಲಕವೂ ಗ್ರಾಹಕರು ಹೊಸ ಸ್ಕೂಟರ್ ಖರೀದಿ ಮಾಡಬಹುದಾಗಿದೆ.

ಓಲಾ ಎಲೆಕ್ಟ್ರಿಕ್ ಕಂಪನಿಯು ಸದ್ಯಕ್ಕೆ ಎಸ್1 ಪ್ರೊ ಮಾದರಿಯನ್ನು ಮಾತ್ರವೇ ಉತ್ಪಾದನೆಗೊಳಿಸುತ್ತಿದ್ದು, ಎಸ್1 ಮಾದರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈಗಾಗಲೇ ಎಸ್1 ಮಾದರಿಗಾಗಿ ಬುಕಿಂಗ್ ಸಲ್ಲಿಸಿರುವ ಗ್ರಾಹಕರಿಗೆ ಕಂಪನಿಯು ಎಸ್1 ಬದಲಾಗಿ ಎಸ್1 ದರಯಲ್ಲಿಯೇ ಎಸ್1 ಪ್ರೊ ಮಾದರಿಯನ್ನೇ ವಿತರಣೆ ಮಾಡುತ್ತಿದ್ದು, ಕೆಲವು ಪ್ರೀಮಿಯಂ ಫೀಚರ್ಸ್‌ಗಳು, ಸಾಫ್ಟ್‌ವೇರ್ ಅಪ್‌ಡೇಟ್, ಅಧಿಕ ಮೈಲೇಜ್ ಬ್ಯಾಟರಿ ರೇಂಜ್ ಮಾತ್ರ ನೀಡಲಾಗಿಲ್ಲ.

ಒಂದು ವೇಳೆ ಎಸ್1 ಮಾದರಿಗಾಗಿ ಬುಕಿಂಗ್ ಮಾಡಿದ್ದರೂ ಅಂತಹ ಗ್ರಾಹಕರಿಗೆ ಕೇವಲ ಎಸ್1 ಪ್ರೊ ಮಾದರಿಯು ಸಾಮಾನ್ಯ ಆವೃತ್ತಿಯನ್ನು ವಿತರಣೆ ನೀಡಲಾಗುತ್ತಿದ್ದು, ಒಂದು ವೇಳೆ ಹೆಚ್ಚುವರಿ ಫೀಚರ್ಸ್ ಮತ್ತು ಅಧಿಕ ಮೈಲೇಜ್ ರೇಂಜ್ ಬಯಸಿದರೆ ಇನ್ನುಳಿದ ಹಣ ಪಾವತಿ ಮಾಡಿ ಹೈ ಎಂಡ್ ಮಾದರಿಗೆ ಉನ್ನತೀಕರಿಸಿಕೊಳ್ಳಬಹುದಾದ ಆಯ್ಕೆ ನೀಡಲಾಗಿದೆ.

ಈಗಾಗಲೇ ಎಸ್1 ಪ್ರೊ ಮಾದರಿಗಾಗಿ ಬುಕಿಂಗ್ ಮಾಡಿರುವ ಗ್ರಾಹಕರು ಕಂಪನಿಯು ನಿಗದಿಪಡಿಸಿರುವ ತಾಂತ್ರಿಕ ಅಂಶಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲವಾದರೂ ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ 2.0 ಸಾಫ್ಟ್‌ವೇರ್ ಅಪ್‌ಡೇಟ್ ಹೊಂದಿರುವ ಎಸ್1 ಪ್ರೊ ಮಾದರಿಯು ಇದೇ ಕಾರಣಕ್ಕೆ ತುಸು ದುಬಾರಿಯಾಗಿದೆ.

ಅತ್ಯತ್ತಮ ಕಾರ್ಯಕ್ಷಮತೆ, ಗರಿಷ್ಠ ಮೈಲೇಜ್, ಪ್ರೀಮಿಯಂ ಫೀಚರ್ಸ್ ಮತ್ತು ಬಜೆಟ್ ಬೆಲೆಯು ಹೊಸ ಸ್ಕೂಟರ್ ಆಯ್ಕೆ ಮೌಲ್ಯವನ್ನು ಹೆಚ್ಚಿಸಿದ್ದು, ಪ್ರತಿ ಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಹೊಸ ಎಸ್1 ವೆರಿಯೆಂಟ್‌ನಲ್ಲಿ ಓಲಾ ಕಂಪನಿಯು 2.98kWh ಮತ್ತು ಎಸ್1 ಪ್ರೊ ಮಾದರಿಯಲ್ಲಿ 3.97kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು, ಪ್ರತಿ ಚಾರ್ಜ್‌ಗೆ ಎಸ್1 ಮಾದರಿಯು ಗರಿಷ್ಠ 121 ಕಿ.ಮೀ ಮೈಲೇಜ್ ಹಿಂದಿರುಗಿಸಿದರೆ ಎಸ್1 ಪ್ರೊ ಮಾದರಿಯು ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಇದರಲ್ಲಿ ಎಸ್1 ಮಾದರಿಯು ಗಂಟೆಗೆ 90 ಕಿ.ಮೀ ಟಾಪ್ ಸ್ಪೀಡ್ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ಪ್ರತಿ ಗಂಟೆಗೆ 115ಕಿ.ಮೀ ಟಾಪ್ ಸ್ಪೀಡ್ ಹೊಂದಿದ್ದು, ಎಸ್1 ಮಾದರಿಯಲ್ಲಿ ನಾರ್ಮಲ್ ಮತ್ತು ಸ್ಪೋರ್ಟ್ ರೈಡ್ ಮೋಡ್‌ಗಳಿದ್ದರೆ ಎಸ್1 ಪ್ರೊ ಮಾದರಿಯಲ್ಲಿ ನಾರ್ಮಲ್, ಸ್ಪೋರ್ಟ್ ಮತ್ತು ಹೈಪರ್ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ.

ಹಾಗೆಯೇ ಓಲಾ ಇವಿ ಸ್ಕೂಟರ್‌ಗಳು ಅತ್ಯುತ್ತಮ ವಿನ್ಯಾಸದೊಂದಿಗೆ ಗರಿಷ್ಠ ಮಟ್ಟದ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಸ್ಕೂಟರ್‌ಗಳಲ್ಲಿ ಟ್ವಿನ್ ಪಾಡ್ ಎಲ್ಇಡಿ ಸೆಟ್ಅಪ್, ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಕೌಂಟ್‌ರ್ಡ್ ಸೀಟ್, ಅಲಾಯ್ ವ್ಹೀಲ್, 36-ಲೀಟರ್ ಸಾಮರ್ಥ್ಯ ಅಂಡರ್ ಸೀಟ್ ಸ್ಪೋರೇಜ್, ರಿಯರ್ ಗ್ರ್ಯಾಬ್ ರೈಲ್ಸ್, ಫ್ರಂಟ್ ಸ್ಟೋರೇಜ್ ಪ್ಯಾಕೇಟ್, ಲಗೇಜ್ ಹುಕ್ ಮತ್ತು ಹತ್ತು ವಿವಿಧ ಬಣ್ಣಗಳ ಆಯ್ಕೆ ಹೊಂದಿದೆ.

ಹೊಸ ಸ್ಕೂಟರ್‌ಗಳು 1,859 ಎಂಎಂ ಉದ್ದ, 712 ಎಂಎಂ ಅಗಲ, 1,160 ಎಂಎಂ ಎತ್ತರ, 1,359 ಎಂಎಂ ವ್ಹೀಲ್ ಬೆಸ್, 792 ಎಂಎಂ ಸೀಟ್ ಹೈಟ್, 125 ಕೆ.ಜಿ ತೂಕ ಹೊಂದಿದ್ದು, ಮುಂಭಾಗದಲ್ಲಿ ಸಿಂಗಲ್ ಫೋರ್ಕ್ ಸಸ್ಫೆಷನ್ ಮತ್ತು ಹಿಂಬದಿಯಲ್ಲಿ ಮೊನೊ ಶಾಕ್ ಸಸ್ಷೆಷನ್‌ನೊಂದಿಗೆ ಎರಡು ಬದಿಯಲ್ಲೂ ಡಿಸ್ಕ್ ಬ್ರೇಕ್ ಜೋಡಣೆ ಹೊಂದಿವೆ.

ಜೊತೆಗೆ ಹೊಸ ಸ್ಕೂಟರ್‌ನಲ್ಲಿ 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಮತ್ತು ಶಟರ್‌ಪ್ರೂಫ್ ಸ್ಕ್ರೀನ್‌ನೊಂದಿಗೆ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆನ್ ಬೋರ್ಡ್ ನ್ಯಾನಿಗೇಷನ್‌ಗಾಗಿ ಇಸಿಮ್ ಇಂಟರ್‌ನೆಂಟ್ ಕನೆಕ್ಟಿವಿಟಿ, ಸ್ಮಾಟ್‌ಫೋರ್ಟ್ ಮೂಲಕ ವಿವಿಧ ತಾಂತ್ರಿಕ ಅಂಶಗಳನ್ನು ನಿಯಂತ್ರಿಸಲು ಕನೆಕ್ಟೆಡ್ ಫೀಚರ್ಸ್ ಸಹ ನೀಡಲಾಗಿದೆ.