ಬೆಂಕಿ ಅವಘಡ ಪ್ರಕರಣಗಳಿಂದಾಗಿ 1,441 ಇವಿ ಸ್ಕೂಟರ್‌ಗಳನ್ನು ಹಿಂಪಡೆದ ಓಲಾ ಎಲೆಕ್ಟ್ರಿಕ್

ಆಟೋ ಉದ್ಯಮದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ಇವಿ ಸ್ಕೂಟರ್ ಬೆಂಕಿ ಅವಘಡ ಪ್ರಕರಣಗಳು ಭವಿಷ್ಯದ ವಾಹನಗಳ ಸುರಕ್ಷತೆ ಕುರಿತಂತೆ ಗ್ರಾಹಕರಲ್ಲಿ ಅನುಮಾನ ಹುಟ್ಟುಹಾಕುವಂತೆ ಮಾಡಿದ್ದು, ಬೆಂಕಿ ಅವಘಡ ಪ್ರಕಣಗಳು ಹೆಚ್ಚಿದ ಪರಿಣಾಮ ಓಲಾ ಎಲೆಕ್ಟ್ರಿಕ್ ಕಂಪನಿಯು ಸಾವಿರ ಹೆಚ್ಚು ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಹಿಂಪಡೆಯುತ್ತಿದೆ.

ಬೆಂಕಿ ಅಪಘಡ ಪ್ರಕರಣಗಳಿಂದಾಗಿ 1,441 ಇವಿ ಸ್ಕೂಟರ್‌ಗಳನ್ನು ಹಿಂಪಡೆದ ಓಲಾ ಎಲೆಕ್ಟ್ರಿಕ್

ಎಲೆಕ್ಟ್ರಿಕ್ ಸ್ಕೂಟರ್‌ಗಳಲ್ಲಿ ಬೆಂಕಿ ಅವಘಡಗಳ ಹಿನ್ನೆಲೆಯಲ್ಲಿ ಓಲಾ ಎಲೆಕ್ಟ್ರಿಕ್ ಕಂಪನಿಯು ತನ್ನ 1,441 ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಹಿಂಪಡೆಯುತ್ತಿರುವುದಾಗಿ ಮಾಹಿತಿ ಹಂಚಿಕೊಂಡಿದ್ದು, ಬೆಂಕಿ ಅವಘಡಗಳಿಗೆ ಕಾರಣವಾಗಿರುವ ಅಂಶಗಳ ಬಗೆಗೆ ಶೀಘ್ರದಲ್ಲಿಯೇ ಮಾಹಿತಿ ಬಹಿರಂಗಪಡಿಸುವುದಾಗಿ ಹೇಳಿದೆ.

ಬೆಂಕಿ ಅಪಘಡ ಪ್ರಕರಣಗಳಿಂದಾಗಿ 1,441 ಇವಿ ಸ್ಕೂಟರ್‌ಗಳನ್ನು ಹಿಂಪಡೆದ ಓಲಾ ಎಲೆಕ್ಟ್ರಿಕ್

ಮಾರ್ಚ್ 26ರಂದು ಪುಣೆಯಲ್ಲಿ ನಡೆದ ಬೆಂಕಿ ಅವಘಡ ಪ್ರಕರಣಕ್ಕೆ ಸಂಭವಿಸಿದಂತೆ ತನಿಖೆ ನಡೆಸುತ್ತಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಎಸ್1 ಪ್ರೊ ಸ್ಕೂಟರ್‌ಗಳಲ್ಲಿ ಉಂಟಾದ ಬೆಂಕಿ ಅವಘಡಗಳಿಗ ನಿಖರ ಕಾರಣವನ್ನು ಶೀಘ್ರದಲ್ಲೇ ಬಹಿರಂಗಪಡಿಸುವುದಾಗಿ ಹೇಳಿಕೊಂಡಿದೆ.

ಬೆಂಕಿ ಅಪಘಡ ಪ್ರಕರಣಗಳಿಂದಾಗಿ 1,441 ಇವಿ ಸ್ಕೂಟರ್‌ಗಳನ್ನು ಹಿಂಪಡೆದ ಓಲಾ ಎಲೆಕ್ಟ್ರಿಕ್

ಇವಿ ಸ್ಕೂಟರ್‌ಗಳನ್ನು ಬೆಂಕಿಯಿಂದ ರಕ್ಷಿಸಲು ಪೂರ್ವಭಾವಿ ಕ್ರಮವಾಗಿ ಕಂಪನಿಯು ಬೆಂಕಿ ಅವಘಡ ಸಿಲುಕಿದ ಮಾದರಿಯ ಬ್ಯಾಚ್‌ನಲ್ಲಿ ತಯಾರಿಸಲಾದ ಎಲ್ಲಾ 1,441 ಸ್ಕೂಟರ್‌ಗಳನ್ನು ಹಿಂಪಡೆದಿದ್ದು, ಹಿಂಪಡೆಯಲಾದ ಸ್ಕೂಟರ್‌ಗಳಲ್ಲಿ ನಮ್ಮ ಸೇವಾ ಎಂಜಿನಿಯರ್‌ಗಳು ಪರಿಶೀಲಿಸುತ್ತಿದ್ದಾರೆ ಮತ್ತು ಬ್ಯಾಟರಿ ವ್ಯವಸ್ಥೆ, ಥರ್ಮಲ್ ಸಿಸ್ಟಮ್ ಜೊತೆಗೆ ಸುರಕ್ಷತಾ ವ್ಯವಸ್ಥೆಗಳನ್ನು ಕೂಲಂಕಷವಾಗಿ ಪರಿಶೀಲಿಸಲಿದ್ದಾರೆ ಎಂದು ಓಲಾ ಎಲೆಕ್ಟ್ರಿಕ್ ಸ್ಪಷ್ಟನೆ ನೀಡಿದೆ.

ಬೆಂಕಿ ಅಪಘಡ ಪ್ರಕರಣಗಳಿಂದಾಗಿ 1,441 ಇವಿ ಸ್ಕೂಟರ್‌ಗಳನ್ನು ಹಿಂಪಡೆದ ಓಲಾ ಎಲೆಕ್ಟ್ರಿಕ್

ಓಲಾ ಎಲೆಕ್ಟ್ರಿಕ್ ಪ್ರಕಾರ ತನ್ನ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬ್ಯಾಟರಿಗಳನ್ನು ಭಾರತೀಯ AIS 156 ಮಾನದಂಡಗಳನ್ನು ಮತ್ತು ಯುರೋಪಿಯನ್ ರಾಷ್ಟ್ರಗಳಲ್ಲಿ ಚಾಲ್ತಿಯಲ್ಲಿರುವ ECE 136 ಮಾನದಂಡವನ್ನು ಅನುಸರಿಸುತ್ತಿರುವುದಾಗಿ ಹೇಳಿಕೊಂಡಿದ್ದು, ಬ್ಯಾಟರಿ ಸುರಕ್ಷತೆಯಲ್ಲಿ ಗರಿಷ್ಠ ಪ್ರಮಾಣದ ಸುರಕ್ಷಾ ಮಾನದಂಡಗಳಿದ್ದರೂ ಘಟನೆಯು ಅಚ್ಚರಿ ತಂದಿದೆ ಎಂದಿದೆ.

ಬೆಂಕಿ ಅಪಘಡ ಪ್ರಕರಣಗಳಿಂದಾಗಿ 1,441 ಇವಿ ಸ್ಕೂಟರ್‌ಗಳನ್ನು ಹಿಂಪಡೆದ ಓಲಾ ಎಲೆಕ್ಟ್ರಿಕ್

ಹೀಗಾಗಿ ಘಟನೆ ಕುರಿತಂತೆ ತಜ್ಞರ ತಂಡದೊಂದಿಗೆ ಕುಲಂಕೂಶವಾಗಿ ಪರಿಶೀಲನೆ ನಡೆಸುತ್ತಿರುವಾಗಿ ಅಧಿೃತ ಮಾಹಿತಿ ಹಂಚಿಕೊಂಡಿರುವ ಓಲಾ ಕಂಪನಿಯು ಭವಿಷ್ಯ ಇಂತಹ ಘಟನೆ ಮರುಕಳಿಸದಂತೆ ಎಚ್ಚರವಹಿಸುವ ಭರವಸೆ ನೀಡಿದೆ.

ಬೆಂಕಿ ಅಪಘಡ ಪ್ರಕರಣಗಳಿಂದಾಗಿ 1,441 ಇವಿ ಸ್ಕೂಟರ್‌ಗಳನ್ನು ಹಿಂಪಡೆದ ಓಲಾ ಎಲೆಕ್ಟ್ರಿಕ್

ಇದಕ್ಕಾಗಿಯೇ ಮುಂಜಾಗ್ರತ ಕ್ರಮವಾಗಿ ಕಂಪನಿಯು ಅವಘಡದಲ್ಲಿ ಸಿಲುಕಿದ್ದ ಮಾದರಿ ನಿರ್ಮಾಣದ ಸಂದರ್ಭದಲ್ಲಿ ನಿರ್ಮಾಣಗೊಂಡಿದ್ದ ಸುಮಾರು 1,441 ಯುನಿಟ್‌ಗಳನ್ನು ಹಿಂಪಡೆದು ಪರಿಶೀಲನೆ ನಡೆಸುತ್ತಿದ್ದು, ಬಳಕೆದಾರರ ಸುರಕ್ಷತೆಗಾಗಿ ಅಗತ್ಯ ಕ್ರಮಗಳನ್ನು ಅಳವಡಿಸಿಕೊಳ್ಳುವುದಾಗಿ ಭರವಸೆ ನೀಡಿದೆ.

ಬೆಂಕಿ ಅಪಘಡ ಪ್ರಕರಣಗಳಿಂದಾಗಿ 1,441 ಇವಿ ಸ್ಕೂಟರ್‌ಗಳನ್ನು ಹಿಂಪಡೆದ ಓಲಾ ಎಲೆಕ್ಟ್ರಿಕ್

ಇನ್ನು ಓಲಾ ಎಲೆಕ್ಟ್ರಿಕ್ ಕಂಪನಿಯು ಸದ್ಯ ಎಸ್1 ಪ್ರೊ ಮಾದರಿಯನ್ನು ಮಾತ್ರವೇ ಉತ್ಪಾದನೆಗೊಳಿಸುತ್ತಿದ್ದು, ಎಸ್1 ಮಾದರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈಗಾಗಲೇ ಎಸ್1 ಮಾದರಿಗಾಗಿ ಬುಕಿಂಗ್ ಸಲ್ಲಿಸಿರುವ ಗ್ರಾಹಕರಿಗೆ ಕಂಪನಿಯು ಎಸ್1 ಬದಲಾಗಿ ಎಸ್1 ದರಯಲ್ಲಿಯೇ ಎಸ್1 ಪ್ರೊ ಮಾದರಿಯನ್ನೇ ವಿತರಣೆ ಮಾಡುತ್ತಿದ್ದು, ಕೆಲವು ಪ್ರೀಮಿಯಂ ಫೀಚರ್ಸ್‌ಗಳು, ಸಾಫ್ಟ್‌ವೇರ್ ಅಪ್‌ಡೇಟ್, ಅಧಿಕ ಮೈಲೇಜ್ ಬ್ಯಾಟರಿ ರೇಂಜ್ ಮಾತ್ರ ನೀಡಲಾಗಿಲ್ಲ.

ಬೆಂಕಿ ಅಪಘಡ ಪ್ರಕರಣಗಳಿಂದಾಗಿ 1,441 ಇವಿ ಸ್ಕೂಟರ್‌ಗಳನ್ನು ಹಿಂಪಡೆದ ಓಲಾ ಎಲೆಕ್ಟ್ರಿಕ್

ಎಸ್1 ಮಾದರಿಗಾಗಿ ಬುಕಿಂಗ್ ಮಾಡಿದ ಗ್ರಾಹಕರಿಗೆ ಕೇವಲ ಎಸ್1 ಪ್ರೊ ಮಾದರಿಯು ಸಾಮಾನ್ಯ ಆವೃತ್ತಿಯನ್ನು ವಿತರಣೆ ನೀಡಲಾಗುತ್ತಿದ್ದು, ಒಂದು ವೇಳೆ ಹೆಚ್ಚುವರಿ ಫೀಚರ್ಸ್ ಮತ್ತು ಅಧಿಕ ಮೈಲೇಜ್ ರೇಂಜ್ ಬಯಸಿದರೆ ಇನ್ನುಳಿದ ಹಣ ಪಾವತಿ ಮಾಡಿ ಹೈ ಎಂಡ್ ಮಾದರಿಗೆ ಉನ್ನತೀಕರಿಸಿಕೊಳ್ಳಬಹುದಾಗಿದೆ.

ಬೆಂಕಿ ಅಪಘಡ ಪ್ರಕರಣಗಳಿಂದಾಗಿ 1,441 ಇವಿ ಸ್ಕೂಟರ್‌ಗಳನ್ನು ಹಿಂಪಡೆದ ಓಲಾ ಎಲೆಕ್ಟ್ರಿಕ್

ಅತ್ಯತ್ತಮ ಕಾರ್ಯಕ್ಷಮತೆ, ಗರಿಷ್ಠ ಮೈಲೇಜ್, ಪ್ರೀಮಿಯಂ ಫೀಚರ್ಸ್ ಮತ್ತು ಬಜೆಟ್ ಬೆಲೆಯು ಹೊಸ ಸ್ಕೂಟರ್ ಆಯ್ಕೆ ಮೌಲ್ಯವನ್ನು ಹೆಚ್ಚಿಸಿದ್ದು, ಪ್ರತಿ ಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಬೆಂಕಿ ಅಪಘಡ ಪ್ರಕರಣಗಳಿಂದಾಗಿ 1,441 ಇವಿ ಸ್ಕೂಟರ್‌ಗಳನ್ನು ಹಿಂಪಡೆದ ಓಲಾ ಎಲೆಕ್ಟ್ರಿಕ್

ಹೊಸ ಎಸ್1 ವೆರಿಯೆಂಟ್‌‌ನಲ್ಲಿ ಓಲಾ ಕಂಪನಿಯು 2.98kWh ಮತ್ತು ಎಸ್1 ಪ್ರೊ ಮಾದರಿಯಲ್ಲಿ 3.97kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು, ಪ್ರತಿ ಚಾರ್ಜ್‌ಗೆ ಎಸ್1 ಮಾದರಿಯು ಗರಿಷ್ಠ 121 ಕಿ.ಮೀ ಮೈಲೇಜ್ ಹಿಂದಿರುಗಿಸಿದರೆ ಎಸ್1 ಪ್ರೊ ಮಾದರಿಯು ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಬೆಂಕಿ ಅಪಘಡ ಪ್ರಕರಣಗಳಿಂದಾಗಿ 1,441 ಇವಿ ಸ್ಕೂಟರ್‌ಗಳನ್ನು ಹಿಂಪಡೆದ ಓಲಾ ಎಲೆಕ್ಟ್ರಿಕ್

ಇದರಲ್ಲಿ ಎಸ್1 ಮಾದರಿಯು ಗಂಟೆಗೆ 90 ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ಪ್ರತಿ ಗಂಟೆಗೆ 115ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದು, ಎಸ್1 ಮಾದರಿಯಲ್ಲಿ ನಾರ್ಮಲ್ ಮತ್ತು ಸ್ಪೋರ್ಟ್ ರೈಡ್ ಮೋಡ್‌ಗಳಿದ್ದರೆ ಎಸ್1 ಪ್ರೊ ಮಾದರಿಯಲ್ಲಿ ನಾರ್ಮಲ್, ಸ್ಪೋರ್ಟ್ ಮತ್ತು ಹೈಪರ್ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ.

ಬೆಂಕಿ ಅಪಘಡ ಪ್ರಕರಣಗಳಿಂದಾಗಿ 1,441 ಇವಿ ಸ್ಕೂಟರ್‌ಗಳನ್ನು ಹಿಂಪಡೆದ ಓಲಾ ಎಲೆಕ್ಟ್ರಿಕ್

ಹಾಗೆಯೇ ಓಲಾ ಇವಿ ಸ್ಕೂಟರ್‌ಗಳು ಅತ್ಯುತ್ತಮ ವಿನ್ಯಾಸದೊಂದಿಗೆ ಗರಿಷ್ಠ ಮಟ್ಟದ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಸ್ಕೂಟರ್‌ಗಳಲ್ಲಿ ಟ್ವಿನ್ ಪಾಡ್ ಎಲ್ಇಡಿ ಸೆಟ್ಅಪ್, ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಕೌಂಟ್‌ರ್ಡ್ ಸೀಟ್, ಅಲಾಯ್ ವ್ಹೀಲ್, 36-ಲೀಟರ್ ಸಾಮರ್ಥ್ಯ ಅಂಡರ್ ಸೀಟ್ ಸ್ಪೋರೇಜ್, ರಿಯರ್ ಗ್ರ್ಯಾಬ್ ರೈಲ್ಸ್, ಫ್ರಂಟ್ ಸ್ಟೋರೇಜ್ ಪ್ಯಾಕೇಟ್, ಲಗೇಜ್ ಹುಕ್ ಮತ್ತು ಹತ್ತು ವಿವಿಧ ಬಣ್ಣಗಳ ಆಯ್ಕೆ ಹೊಂದಿದೆ.

ಬೆಂಕಿ ಅಪಘಡ ಪ್ರಕರಣಗಳಿಂದಾಗಿ 1,441 ಇವಿ ಸ್ಕೂಟರ್‌ಗಳನ್ನು ಹಿಂಪಡೆದ ಓಲಾ ಎಲೆಕ್ಟ್ರಿಕ್

ಹೊಸ ಸ್ಕೂಟರ್‌ಗಳು 1,859 ಎಂಎಂ ಉದ್ದ, 712 ಎಂಎಂ ಅಗಲ, 1,160 ಎಂಎಂ ಎತ್ತರ, 1,359 ಎಂಎಂ ವ್ಹೀಲ್ ಬೆಸ್, 792 ಎಂಎಂ ಸೀಟ್ ಹೈಟ್, 125 ಕೆ.ಜಿ ತೂಕ ಹೊಂದಿದ್ದು, ಮುಂಭಾಗದಲ್ಲಿ ಸಿಂಗಲ್ ಫೋರ್ಕ್ ಸಸ್ಫೆಷನ್ ಮತ್ತು ಹಿಂಬದಿಯಲ್ಲಿ ಮೊನೊ ಶಾಕ್ ಸಸ್ಷೆಷನ್‌ನೊಂದಿಗೆ ಎರಡು ಬದಿಯಲ್ಲೂ ಡಿಸ್ಕ್ ಬ್ರೇಕ್ ಜೋಡಣೆ ಹೊಂದಿವೆ.

ಬೆಂಕಿ ಅಪಘಡ ಪ್ರಕರಣಗಳಿಂದಾಗಿ 1,441 ಇವಿ ಸ್ಕೂಟರ್‌ಗಳನ್ನು ಹಿಂಪಡೆದ ಓಲಾ ಎಲೆಕ್ಟ್ರಿಕ್

ಜೊತೆಗೆ ಹೊಸ ಸ್ಕೂಟರ್‌ನಲ್ಲಿ 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಮತ್ತು ಶಟರ್‌ಪ್ರೂಫ್ ಸ್ಕ್ರೀನ್‌ನೊಂದಿಗೆ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆನ್ ಬೋರ್ಡ್ ನ್ಯಾನಿಗೇಷನ್‌ಗಾಗಿ ಇಸಿಮ್ ಇಂಟರ್‌ನೆಂಟ್ ಕನೆಕ್ಟಿವಿಟಿ, ಸ್ಮಾಟ್‌ಫೋರ್ಟ್ ಮೂಲಕ ವಿವಿಧ ತಾಂತ್ರಿಕ ಅಂಶಗಳನ್ನು ನಿಯಂತ್ರಿಸಲು ಕನೆಕ್ಟೆಡ್ ಫೀಚರ್ಸ್ ಸಹ ನೀಡಲಾಗಿದೆ.

Most Read Articles

Kannada
English summary
Ola electric recalls 1441 s1 pro electric scooters details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X