Just In
- 11 hrs ago
ಮಂಗಳೂರಿನಲ್ಲಿರುವ ಒಕಿನಾವ ಇವಿ ಸ್ಕೂಟರ್ ಮಾರಾಟ ಮಳಿಗೆಯಲ್ಲಿ ಅಗ್ನಿ ಅವಘಡ
- 12 hrs ago
ಮ್ಯೂಸಿಕಲ್ ಸ್ಕೂಟರ್ನ ವಿಡಿಯೋ ಹಂಚಿಕೊಂಡು "ಭಾರತದಲ್ಲಿ ಮಾತ್ರ" ಎಂದ ಆನಂದ್ ಮಹೀಂದ್ರಾ
- 14 hrs ago
ಕೋಟಿ ಬೆಲೆಯ ಮರ್ಸಿಡಿಸ್ ಜಿಎಲ್ಎಸ್ ಎಸ್ಯುವಿ ಖರೀದಿಸಿದ ನಟ ವರುಣ್ ಧವನ್
- 16 hrs ago
ಮೇ ತಿಂಗಳಿನಲ್ಲಿ 10 ಸಾವಿರಕ್ಕೂ ಹೆಚ್ಚು ಮಾರಾಟ ದಾಖಲಿಸಿದ 8 ಮಾರುತಿ ಸುಜುಕಿ ಕಾರುಗಳು
Don't Miss!
- News
ಬಿಬಿಎಂಪಿ ವಾರ್ಡ್ ಮರುವಿಂಗಡಣೆ; ವೆಬ್ಸೈಟ್ನಲ್ಲಿ ಸಿಗಲಿದೆ ಪೂರ್ಣ ಮಾಹಿತಿ
- Lifestyle
Today RashiBhavishya: ಶನಿವಾರದ ದಿನ ಭವಿಷ್ಯ: ವೃಷಭ, ಕುಂಭ, ಮೀನ ರಾಶಿಯ ಉದ್ಯೋಗಿಗಳು ಕಚೇರಿ ಕೆಲಸದ ಮೇಲೆ ಗಮನಹರಿಸಿ
- Sports
ENG vs NZ: ನ್ಯೂಜಿಲೆಂಡ್ ವಿರುದ್ಧ ಸತತ 2ನೇ ಶತಕ ದಾಖಲಿಸಿದ ಜಾನಿ ಬೈಸ್ಟ್ರೋವ್
- Finance
ಈ 220 ಉದ್ಯೋಗಿಗಳಿಗೆ ವಾರ್ಷಿಕ 1 ಕೋಟಿ ರು ಸಂಬಳ, ಯಾವ್ದು ಕಂಪನಿ?
- Movies
ಕಾರ್ತಿಕ್ ಆರ್ಯನ್ಗೆ ಕೋಟಿಗಟ್ಟಲೆ ಮೌಲ್ಯದ ಕಾರು ಉಡುಗೊರೆ ನೀಡಿದ ನಿರ್ಮಾಪಕ!
- Education
CLAT 2022 Result : ಕ್ಲಾಟ್ ಪರೀಕ್ಷೆಯ ಫಲಿತಾಂಶ ಶೀಘ್ರದಲ್ಲಿ ಪ್ರಕಟ
- Technology
60,000ರೂ.ಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಲ್ಯಾಪ್ಟಾಪ್ಗಳು!
- Travel
ನಿಮ್ಮ ಮುಂದಿನ ಪ್ರವಾಸದ ಪಟ್ಟಿಯಲ್ಲಿ ಕರ್ನಾಟಕದ ಬಾದಾಮಿ ಯಾಕಿರಬೇಕು? ಇಲ್ಲಿದೆ ಕಾರಣ!
ಇವಿ ಸ್ಕೂಟರ್ ಉತ್ಪಾದನೆಯಲ್ಲಿ ಓಲಾ ಎಲೆಕ್ಟ್ರಿಕ್ ಹೊಸ ಮೈಲಿಗಲ್ಲು
ಓಲಾ ಎಲೆಕ್ಟ್ರಿಕ್ ಕಂಪನಿಯು ತನ್ನ ಹೊಸ ಎಸ್1 ಪ್ರೊ ಮಾದರಿಯ ಮೂಲಕ ಇವಿ ಸ್ಕೂಟರ್ ವಿಭಾಗದಲ್ಲಿ ಹಲವು ಹೊಸ ದಾಖಲೆಗಳನ್ನು ನಿರ್ಮಿಸುತ್ತಿದ್ದು, ಕಂಪನಿಯು ಇದೀಗ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.

ಇವಿ ಸ್ಕೂಟರ್ ಬಿಡುಗಡೆಗಾಗಿ ಬುಕಿಂಗ್ ಆರಂಭಿಸಿದ ದಿನದಿಂದಲೇ ದಾಖಲೆಗಳ ಮೇಲೆ ದಾಖಲೆಗಳನ್ನು ನಿರ್ಮಿಸುತ್ತಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಇದೀಗ ಅತಿ ಕಡಿಮೆ ಅವಧಿಯಲ್ಲಿ ಬರೋಬ್ಬರಿ 50 ಸಾವಿರ ಯುನಿಟ್ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಗುರಿ ತಲುಪಿದೆ. ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮೈಲೇಜ್ ಪ್ರೇರಣೆ ಹೊಂದಿರುವ ಓಲಾ ಇವಿ ಸ್ಕೂಟರ್‌ಗಳು ಅತಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಮಟ್ಟದ ಗ್ರಾಹಕರ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಗ್ರಾಹಕರ ಬೇಡಿಕೆಯೆಂತೆ ನಿಗದಿತ ಅವಧಿಯಲ್ಲಿ ಸ್ಕೂಟರ್ ವಿತರಣೆ ಮಾಡುವುದಾಗಿ ಭರವಸೆ ನೀಡಿರುವ ಓಲಾ ಕಂಪನಿಯು ತನ್ನ ಹೊಸ ವಾಹನ ಉತ್ಪಾದನಾ ಘಟಕದಲ್ಲಿ ಪೂರ್ಣ ಪ್ರಮಾಣದ ಉತ್ಪಾದನಾ ಪ್ರಕ್ರಿಯೆಯನ್ನು ಆರಂಭಿಸಿದ್ದು, ದಿನಂಪ್ರತಿ ಒಂದು ಸಾವಿರ ಸ್ಕೂಟರ್ ಉತ್ಪಾದನೆ ಮಾಡುತ್ತಿದೆ.

ಮುಂದಿನ ಎರಡು ವರ್ಷಗಳಲ್ಲಿ ವಾರ್ಷಿಕವಾಗಿ 20 ಲಕ್ಷ ಸ್ಕೂಟರ್ ಉತ್ಪಾದನಾ ಗುರಿಹೊಂದಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಹಂತ-ಹಂತವಾಗಿ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುತ್ತಿದ್ದು, ತಮಿಳುನಾಡಿನ ಹೊಸೂರಿನಲ್ಲಿರುವ ಓಲಾ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕವು ಇಂಡಸ್ಟ್ರಿ 4.0 ತತ್ವದ ಆಧಾರದ ಮೇಲೆ ಅಭಿವೃದ್ದಿಗೊಂಡಿದೆ.

ಓಲಾ ಹೊಸ ವಾಹನ ಉತ್ಪಾದನಾ ಘಟಕವು ಬರೋಬ್ಬರಿ 500 ಎಕರೆ ವ್ಯಾಪ್ತಿ ಹೊಂದಿದ್ದು, ಹೊಸ ವಾಹನ ಉತ್ಪಾದನಾ ಘಟಕದಲ್ಲಿ ವಾರ್ಷಿಕವಾಗಿ 20 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್‌ಗಳು ಉತ್ಪಾದನೆಯಾಗಲಿವೆ. 'ಮೇಕ್ ಇನ್ ಇಂಡಿಯಾ ಫಾರ್ ವರ್ಲ್ಡ್' ಅಭಿಯಾನದಡಿ ಭಾರತದಲ್ಲೇ ಉತ್ಪಾದಿಸಿ ಜಾಗತಿಕ ಮಾರುಕಟ್ಟೆಗಳಿಗೆ ರಫ್ತು ಮಾಡುವ ಯೋಜನೆ ಹೊಂದಿರುವ ಓಲಾ ಕಂಪನಿಯು ಹೊಸ ಇವಿ ಸ್ಕೂಟರ್ ಮಾದರಿಯನ್ನು ಭಾರತದಲ್ಲಿ ಮಾತ್ರವಲ್ಲ ಲ್ಯಾಟಿನ್ ಅಮೆರಿಕ, ಆಫ್ರಿಕಾ ರಾಷ್ಟ್ರಗಳಲ್ಲೂ ಮಾರಾಟ ಆರಂಭಿಸುವ ಯೋಜನೆಯಲ್ಲಿದೆ.

ಓಲಾ ಹೊಸ ಎಸ್1 ಇವಿ ಸ್ಕೂಟರ್ ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 99,999 ಬೆಲೆ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ರೂ. 1,29,999 ಬೆಲೆ ಹೊಂದಿದ್ದು, ಅತ್ಯತ್ತಮ ಕಾರ್ಯಕ್ಷಮತೆ, ಗರಿಷ್ಠ ಮೈಲೇಜ್, ಪ್ರೀಮಿಯಂ ಫೀಚರ್ಸ್ ಮತ್ತು ಬಜೆಟ್ ಬೆಲೆಯು ಹೊಸ ಸ್ಕೂಟರ್ ಆಯ್ಕೆ ಮೌಲ್ಯವನ್ನು ಹೆಚ್ಚಿಸಿವೆ.

ಹೊಸ ಎಸ್1 ವೆರಿಯೆಂಟ್‌ನಲ್ಲಿ ಓಲಾ ಕಂಪನಿಯು 2.98kWh ಮತ್ತು ಎಸ್1 ಪ್ರೊ ಮಾದರಿಯಲ್ಲಿ 3.97kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು, ಪ್ರತಿ ಚಾರ್ಜ್‌ಗೆ ಎಸ್1 ಮಾದರಿಯು ಗರಿಷ್ಠ 121 ಕಿ.ಮೀ ಮೈಲೇಜ್ ಹಿಂದಿರುಗಿಸಿದರೆ ಎಸ್1 ಪ್ರೊ ಮಾದರಿಯು ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಎಸ್1 ಮತ್ತು ಎಸ್1 ಪ್ರೊ ಮಾದರಿಗಳಲ್ಲಿ ದುಬಾರಿ ಬೆಲೆಯ ಎಸ್1 ಪ್ರೊ ಮಾದರಿಯೇ ಹೆಚ್ಚಿನ ಬೇಡಿಕೆ ಹೊಂದಿದ್ದು, ಈ ಹಿನ್ನಲೆಯಲ್ಲಿ ಕಂಪನಿಯು ಸದ್ಯ ಬುಕ್ಕಿಂಗ್ ಸ್ವಿಕರಿಸಿರುವ ಗ್ರಾಹಕರಿಗೆ ಮಾತ್ರ ಎಸ್1 ಮಾದರಿಯನ್ನು ವಿತರಣೆ ಪೂರ್ಣಗೊಳಿಸಿದ ನಂತರ ಪೂರ್ಣ ಪ್ರಮಾಣದಲ್ಲಿ ಎಸ್1 ಪ್ರೊ ಉತ್ಪಾದನೆ ಮಾಡಲು ನಿರ್ಧರಿಸಿದೆ.

ಪೂರ್ಣ ಪ್ರಮಾಣದಲ್ಲಿ ಎಸ್1 ಪ್ರೊ ಮಾದರಿಯ ಉತ್ಪಾದನೆಯ ಆರಂಭದ ನಂತರ ದಾಖಲಾಗುವ ಎಸ್1 ಮಾದರಿಗಾಗಿ ಬುಕ್ಕಿಂಗ್ ಸಲ್ಲಿಸುವ ಗ್ರಾಹಕರಿಗೂ ಎಸ್1 ಪ್ರೊ ಮಾದರಿಯನ್ನೇ ವಿತರಣೆ ಮಾಡುವುದಾಗಿ ಹೇಳಿಕೊಂಡಿರುವ ಓಲಾ ಕಂಪನಿಯು ಫೀಚರ್ಸ್‌ಗಳನ್ನು ಮಾತ್ರ ಎಸ್1 ಮಾದರಿಯಲ್ಲಿರುವಂತೆಯೇ ನೀಡಲು ನಿರ್ಧರಿಸಿದೆ.

ಎಸ್1 ಮಾದರಿಗಾಗಿ ಬುಕ್ಕಿಂಗ್ ಮಾಡಿ ಎಸ್1 ಪ್ರೊ ಪಡೆದುಕೊಳ್ಳಿರುವ ಗ್ರಾಹಕರಿಗೆ ಸಾಮಾನ್ಯ ಫೀಚರ್ಸ್‌ಗಳಿರಲಿದ್ದು, ಎಸ್1 ಪ್ರೊ ಮಾದರಿಯಲ್ಲಿರುವಂತೆ ಹೆಚ್ಚಿನ ಮಟ್ಟದ ಮೈಲೇಜ್ ರೇಂಜ್, ಹೈಪರ್ ರೈಡಿಂಗ್ ಮೋಡ್, ಕನೆಕ್ಟೆಡ್ ಟೆಕ್ನಾಲಜಿ ಸೌಲಭ್ಯಗಳು ಬೇಕಿದ್ದಲ್ಲಿ ಹೆಚ್ಚುವರಿಯಾಗಿ ರೂ.30 ಸಾವಿರ ಪಾವತಿ ಮಾಡಬೇಕಾಗುತ್ತದೆ.

ರೂ.30 ಸಾವಿರ ಹಣ ಪಾವತಿ ನಂತರ ನಿಮ್ಮ ಸ್ಕೂಟರ್‌ನಲ್ಲಿರುವ ಪ್ರೀಮಿಯಂ ಫೀಚರ್ಸ್‌ಗಳನ್ನು ಅನ್‌ಲಾಕ್ ಮಾಡಲಿದ್ದು, ಒಂದು ವೇಳೆ ಪ್ರೀಮಿಯಂ ಫೀಚರ್ಸ್‌ಗಳು ಬೇಡವಾದಲ್ಲಿ ಎಸ್1 ಪ್ರೊ ಮಾದರಿಯನ್ನೇ ಎಸ್1 ಮಾದರಿಯಂತೆಯೇ ಬಳಕೆ ಮಾಡಬಹುದಾಗಿದೆ.

ಇದರಲ್ಲಿ ಎಸ್1 ಮಾದರಿಯು ಗಂಟೆಗೆ 90 ಕಿ.ಮೀ ಟಾಪ್ ಸ್ಪೀಡ್ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ಪ್ರತಿ ಗಂಟೆಗೆ 115ಕಿ.ಮೀ ಟಾಪ್ ಸ್ಪೀಡ್ ಹೊಂದಿದ್ದು, ಎಸ್1 ಮಾದರಿಯಲ್ಲಿ ನಾರ್ಮಲ್ ಮತ್ತು ಸ್ಪೋರ್ಟ್ ರೈಡ್ ಮೋಡ್‌ಗಳಿದ್ದರೆ ಎಸ್1 ಪ್ರೊ ಮಾದರಿಯಲ್ಲಿ ನಾರ್ಮಲ್, ಸ್ಪೋರ್ಟ್ ಮತ್ತು ಹೈಪರ್ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ.

ಹಾಗೆಯೇ ಓಲಾ ಇವಿ ಸ್ಕೂಟರ್‌ಗಳು ಅತ್ಯುತ್ತಮ ವಿನ್ಯಾಸದೊಂದಿಗೆ ಗರಿಷ್ಠ ಮಟ್ಟದ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಸ್ಕೂಟರ್‌ಗಳಲ್ಲಿ ಟ್ವಿನ್ ಪಾಡ್ ಎಲ್ಇಡಿ ಸೆಟ್ಅಪ್, ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಕೌಂಟ್‌ರ್ಡ್ ಸೀಟ್, ಅಲಾಯ್ ವ್ಹೀಲ್, 36-ಲೀಟರ್ ಸಾಮರ್ಥ್ಯ ಅಂಡರ್ ಸೀಟ್ ಸ್ಪೋರೇಜ್, ರಿಯರ್ ಗ್ರ್ಯಾಬ್ ರೈಲ್ಸ್, ಫ್ರಂಟ್ ಸ್ಟೋರೇಜ್ ಪ್ಯಾಕೇಟ್, ಲಗೇಜ್ ಹುಕ್ ಮತ್ತು ಹತ್ತು ವಿವಿಧ ಬಣ್ಣಗಳ ಆಯ್ಕೆ ಹೊಂದಿದೆ.

ಜೊತೆಗೆ ಹೊಸ ಸ್ಕೂಟರ್‌ನಲ್ಲಿ 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಮತ್ತು ಶಟರ್‌ಪ್ರೂಫ್ ಸ್ಕ್ರೀನ್‌ನೊಂದಿಗೆ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆನ್ ಬೋರ್ಡ್ ನ್ಯಾನಿಗೇಷನ್‌ಗಾಗಿ ಇಸಿಮ್ ಇಂಟರ್‌ನೆಂಟ್ ಕನೆಕ್ಟಿವಿಟಿ, ಸ್ಮಾಟ್‌ಫೋರ್ಟ್ ಮೂಲಕ ವಿವಿಧ ತಾಂತ್ರಿಕ ಅಂಶಗಳನ್ನು ನಿಯಂತ್ರಿಸಲು ಕನೆಕ್ಟೆಡ್ ಫೀಚರ್ಸ್ ಸಹ ನೀಡಲಾಗಿದೆ.