ಗ್ರಾಹಕರ ಬೇಡಿಕೆಯೆಂತೆ ದಿನಂಪ್ರತಿ ಒಂದು ಸಾವಿರ ಇವಿ ಸ್ಕೂಟರ್ ಉತ್ಪಾದನೆ ಆರಂಭಿಸಿದ ಓಲಾ ಎಲೆಕ್ಟ್ರಿಕ್

ಓಲಾ ಎಲೆಕ್ಟ್ರಿಕ್(Ola Electric) ಕಂಪನಿಯು ತನ್ನ ಬಹುನೀರಿಕ್ಷಿತ ಎಸ್1 ಮತ್ತು ಎಸ್1 ಪ್ರೊ ಇವಿ ಸ್ಕೂಟರ್‌ಗಳ ವಿತರಣೆಯನ್ನು ದೇಶಾದ್ಯಂತ ಅಧಿಕೃತ ಚಾಲನೆ ನೀಡಿದ್ದು, ಮೊದಲ ಹಂತದಲ್ಲಿ ಬೆಂಗಳೂರು ಮತ್ತು ಚೆನ್ನೈ ನಂತರ ಇದೀಗ ಇತರೆ ನಗರಗಳಲ್ಲೂ ಕಂಪನಿಯು ಇವಿ ಸ್ಕೂಟರ್ ವಿತರಣೆಯನ್ನು ತೀವ್ರಗೊಳಿಸಿದೆ.

ಗ್ರಾಹಕರ ಬೇಡಿಕೆಯೆಂತೆ ದಿನಂಪ್ರತಿ ಒಂದು ಸಾವಿರ ಇವಿ ಸ್ಕೂಟರ್ ಆರಂಭಿಸಿದ ಓಲಾ ಎಲೆಕ್ಟ್ರಿಕ್

ಪ್ರಸ್ತುತ ಮಾರುಕಟ್ಟೆಯಲ್ಲಿನ ಇತರೆ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಿರುವ ಓಲಾ ಎಸ್1 ಮತ್ತು ಎಸ್1 ಪ್ರೊ ಇವಿ ಸ್ಕೂಟರ್ ಮಾದರಿಗಳು ಒಂದು ಲಕ್ಷಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಂಡಿದ್ದು, ಸ್ಕೂಟರ್ ಬಿಡುಗಡೆಯ ನಂತರ ಇದೀಗ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ದೇಶದ ಪ್ರಮುಖ ನಗರಗಳಲ್ಲಿ ವಿತರಣೆಯನ್ನು ಆರಂಭಿಸಿದೆ.

ಗ್ರಾಹಕರ ಬೇಡಿಕೆಯೆಂತೆ ದಿನಂಪ್ರತಿ ಒಂದು ಸಾವಿರ ಇವಿ ಸ್ಕೂಟರ್ ಆರಂಭಿಸಿದ ಓಲಾ ಎಲೆಕ್ಟ್ರಿಕ್

ಗ್ರಾಹಕರ ಬೇಡಿಕೆಯೆಂತೆ ನಿಗದಿತ ಅವಧಿಯಲ್ಲಿ ಸ್ಕೂಟರ್ ವಿತರಣೆ ಮಾಡುವುದಾಗಿ ಭರವಸೆ ನೀಡಿರುವ ಓಲಾ ಕಂಪನಿಯು ತನ್ನ ಹೊಸ ವಾಹನ ಉತ್ಪಾದನಾ ಘಟಕದಲ್ಲಿ ಪೂರ್ಣ ಪ್ರಮಾಣದ ಉತ್ಪಾದನಾ ಪ್ರಕ್ರಿಯೆಯನ್ನು ಆರಂಭಿಸಿದ್ದು, ದಿನಂಪ್ರತಿ ಒಂದು ಸಾವಿರ ಸ್ಕೂಟರ್ ಉತ್ಪಾದನೆ ಮಾಡುತ್ತಿರುವುದಾಗಿ ಕಂಪನಿಯು ಮಾಹಿತಿ ಹಂಚಿಕೊಂಡಿದೆ.

ಗ್ರಾಹಕರ ಬೇಡಿಕೆಯೆಂತೆ ದಿನಂಪ್ರತಿ ಒಂದು ಸಾವಿರ ಇವಿ ಸ್ಕೂಟರ್ ಆರಂಭಿಸಿದ ಓಲಾ ಎಲೆಕ್ಟ್ರಿಕ್

ಮುಂದಿನ ಎರಡು ವರ್ಷಗಳಲ್ಲಿ ವಾರ್ಷಿಕವಾಗಿ 20 ಲಕ್ಷ ಸ್ಕೂಟರ್ ಉತ್ಪಾದನಾ ಗುರಿಹೊಂದಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಹಂತ-ಹಂತವಾಗಿ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸುತ್ತಿದ್ದು, ತಮಿಳುನಾಡಿನ ಹೊಸೂರಿನಲ್ಲಿರುವ ಓಲಾ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕವು ಇಂಡಸ್ಟ್ರಿ 4.0 ತತ್ವದ ಆಧಾರದ ಮೇಲೆ ಅಭಿವೃದ್ದಿಗೊಂಡಿದೆ

ಗ್ರಾಹಕರ ಬೇಡಿಕೆಯೆಂತೆ ದಿನಂಪ್ರತಿ ಒಂದು ಸಾವಿರ ಇವಿ ಸ್ಕೂಟರ್ ಆರಂಭಿಸಿದ ಓಲಾ ಎಲೆಕ್ಟ್ರಿಕ್

ಓಲಾ ಹೊಸ ವಾಹನ ಉತ್ಪಾದನಾ ಘಟಕವು ಬರೋಬ್ಬರಿ 500 ಎಕರೆ ವ್ಯಾಪ್ತಿ ಹೊಂದಿದ್ದು, ಹೊಸ ವಾಹನ ಉತ್ಪಾದನಾ ಘಟಕದಲ್ಲಿ ವಾರ್ಷಿಕವಾಗಿ 20 ಲಕ್ಷ ಎಲೆಕ್ಟ್ರಿಕ್ ಸ್ಕೂಟರ್‌ಗಳು ಉತ್ಪಾದನೆಯಾಗಲಿವೆ.

ಗ್ರಾಹಕರ ಬೇಡಿಕೆಯೆಂತೆ ದಿನಂಪ್ರತಿ ಒಂದು ಸಾವಿರ ಇವಿ ಸ್ಕೂಟರ್ ಆರಂಭಿಸಿದ ಓಲಾ ಎಲೆಕ್ಟ್ರಿಕ್

'ಮೇಕ್ ಇನ್ ಇಂಡಿಯಾ ಫಾರ್ ವರ್ಲ್ಡ್' ಅಭಿಯಾನದಡಿ ಭಾರತದಲ್ಲೇ ಉತ್ಪಾದಿಸಿ ಜಾಗತಿಕ ಮಾರುಕಟ್ಟೆಗಳಿಗೆ ರಫ್ತು ಮಾಡುವ ಯೋಜನೆ ಹೊಂದಿರುವ ಓಲಾ ಕಂಪನಿಯು ಹೊಸ ಇವಿ ಸ್ಕೂಟರ್ ಮಾದರಿಯನ್ನು ಭಾರತದಲ್ಲಿ ಮಾತ್ರವಲ್ಲ ಲ್ಯಾಟಿನ್ ಅಮೆರಿಕ, ಆಫ್ರಿಕಾ ರಾಷ್ಟ್ರಗಳಲ್ಲೂ ಮಾರಾಟ ಮಾಡಲಿದೆ.

ಗ್ರಾಹಕರ ಬೇಡಿಕೆಯೆಂತೆ ದಿನಂಪ್ರತಿ ಒಂದು ಸಾವಿರ ಇವಿ ಸ್ಕೂಟರ್ ಆರಂಭಿಸಿದ ಓಲಾ ಎಲೆಕ್ಟ್ರಿಕ್

ಮತ್ತೊಂದು ವಿಶೇಷವೆಂದರೆ ಹೊಸ ಉತ್ಪಾದನಾ ಘಟಕದ ಉತ್ಪಾದನಾ ವಿಭಾಗದಲ್ಲಿ ಓಲಾ ಕಂಪನಿಯು ಮಹಿಳೆಯರಿಗೆ ಹೆಚ್ಚಿನ ಮಟ್ಟದ ಉದ್ಯೋಗ ಅವಕಾಶಗಳನ್ನು ಕಲ್ಪಿಸಿದ್ದು, ಸುಮಾರು 10 ಸಾವಿರ ಮಹಿಳಾ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ.

ಗ್ರಾಹಕರ ಬೇಡಿಕೆಯೆಂತೆ ದಿನಂಪ್ರತಿ ಒಂದು ಸಾವಿರ ಇವಿ ಸ್ಕೂಟರ್ ಆರಂಭಿಸಿದ ಓಲಾ ಎಲೆಕ್ಟ್ರಿಕ್

ಹೊಸ ವಾಹನ ಉತ್ಪಾದನಾ ಘಟಕದಲ್ಲಿ ಮಹಿಳಾ ಉದ್ಯೋಗಿಗಳು ಈಗಾಗಲೇ ಕಾರ್ಯನಿರ್ವಹಣೆ ಆರಂಭಿಸಿದ್ದು, ಆಧುನಿಕ ವಾಹನ ಉತ್ಪಾದನಾ ಘಟಕದಲ್ಲಿ ಸಾವಿರಾರು ಉದ್ಯೋಗಗಳ ಜೊತೆಗೆ ವಾಹನಗಳ ಬಿಡಿಭಾಗಗಳ ಅಸೆಂಬಲ್ ಪ್ರಕ್ರಿಯೆಯಲ್ಲಿ ಸುಮಾರು 5 ಸಾವಿರ ರೋಬೋಟ್‌ಗಳನ್ನು ಸಹ ಹೊಸ ಘಟಕದಲ್ಲಿ ನಿಯೋಜಿಸಲಾಗುತ್ತಿದೆ.

ಗ್ರಾಹಕರ ಬೇಡಿಕೆಯೆಂತೆ ದಿನಂಪ್ರತಿ ಒಂದು ಸಾವಿರ ಇವಿ ಸ್ಕೂಟರ್ ಆರಂಭಿಸಿದ ಓಲಾ ಎಲೆಕ್ಟ್ರಿಕ್

ಓಲಾ ಎಲೆಕ್ಟ್ರಿಕ್ ಕಂಪನಿಯು ಹೊಸ ಘಟಕದ ಮೇಲೆ ಆರಂಭಿಕವಾಗಿ ರೂ. 2,400 ಕೋಟಿ ಬಂಡವಾಳ ಹೂಡಿಕೆ ಮಾಡಿದ್ದು, ಕಂಪನಿಯು ಇವಿ ಸ್ಕೂಟರ್ ಮಾರಾಟ ಆರಂಭಿಸಿದ ಮೊದಲ ಹಂತದಲ್ಲಿಯೇ ಸುಮಾರು ರೂ. 1,110 ಕೋಟಿ ಮೌಲ್ಯದ ಸ್ಕೂಟರ್ ಮಾರಾಟ ವ್ಯವಹಾರ ಕೈಗೊಂಡಿದೆ.

ಗ್ರಾಹಕರ ಬೇಡಿಕೆಯೆಂತೆ ದಿನಂಪ್ರತಿ ಒಂದು ಸಾವಿರ ಇವಿ ಸ್ಕೂಟರ್ ಆರಂಭಿಸಿದ ಓಲಾ ಎಲೆಕ್ಟ್ರಿಕ್

ಇನ್ನು ಓಲಾ ಹೊಸ ಎಸ್1 ಇವಿ ಸ್ಕೂಟರ್ ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 99,999 ಬೆಲೆ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ರೂ. 1,29,999 ಬೆಲೆ ಹೊಂದಿದ್ದು, ಅತ್ಯತ್ತಮ ಕಾರ್ಯಕ್ಷಮತೆ, ಗರಿಷ್ಠ ಮೈಲೇಜ್, ಪ್ರೀಮಿಯಂ ಫೀಚರ್ಸ್ ಮತ್ತು ಬಜೆಟ್ ಬೆಲೆಯು ಹೊಸ ಸ್ಕೂಟರ್ ಆಯ್ಕೆ ಮೌಲ್ಯವನ್ನು ಹೆಚ್ಚಿಸಿವೆ.

ಗ್ರಾಹಕರ ಬೇಡಿಕೆಯೆಂತೆ ದಿನಂಪ್ರತಿ ಒಂದು ಸಾವಿರ ಇವಿ ಸ್ಕೂಟರ್ ಆರಂಭಿಸಿದ ಓಲಾ ಎಲೆಕ್ಟ್ರಿಕ್

ಹೊಸ ಎಸ್1 ವೆರಿಯೆಂಟ್‌‌ನಲ್ಲಿ ಓಲಾ ಕಂಪನಿಯು 2.98kWh ಮತ್ತು ಎಸ್1 ಪ್ರೊ ಮಾದರಿಯಲ್ಲಿ 3.97kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು, ಪ್ರತಿ ಚಾರ್ಜ್‌ಗೆ ಎಸ್1 ಮಾದರಿಯು ಗರಿಷ್ಠ 121 ಕಿ.ಮೀ ಮೈಲೇಜ್ ಹಿಂದಿರುಗಿಸಿದರೆ ಎಸ್1 ಪ್ರೊ ಮಾದರಿಯು ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಗ್ರಾಹಕರ ಬೇಡಿಕೆಯೆಂತೆ ದಿನಂಪ್ರತಿ ಒಂದು ಸಾವಿರ ಇವಿ ಸ್ಕೂಟರ್ ಆರಂಭಿಸಿದ ಓಲಾ ಎಲೆಕ್ಟ್ರಿಕ್

ಇದರಲ್ಲಿ ಎಸ್1 ಮಾದರಿಯು ಗಂಟೆಗೆ 90 ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ಪ್ರತಿ ಗಂಟೆಗೆ 115ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದು, ಎಸ್1 ಮಾದರಿಯಲ್ಲಿ ನಾರ್ಮಲ್ ಮತ್ತು ಸ್ಪೋರ್ಟ್ ರೈಡ್ ಮೋಡ್‌ಗಳಿದ್ದರೆ ಎಸ್1 ಪ್ರೊ ಮಾದರಿಯಲ್ಲಿ ನಾರ್ಮಲ್, ಸ್ಪೋರ್ಟ್ ಮತ್ತು ಹೈಪರ್ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ.

ಗ್ರಾಹಕರ ಬೇಡಿಕೆಯೆಂತೆ ದಿನಂಪ್ರತಿ ಒಂದು ಸಾವಿರ ಇವಿ ಸ್ಕೂಟರ್ ಆರಂಭಿಸಿದ ಓಲಾ ಎಲೆಕ್ಟ್ರಿಕ್

ಹಾಗೆಯೇ ಓಲಾ ಇವಿ ಸ್ಕೂಟರ್‌ಗಳು ಅತ್ಯುತ್ತಮ ವಿನ್ಯಾಸದೊಂದಿಗೆ ಗರಿಷ್ಠ ಮಟ್ಟದ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಸ್ಕೂಟರ್‌ಗಳಲ್ಲಿ ಟ್ವಿನ್ ಪಾಡ್ ಎಲ್ಇಡಿ ಸೆಟ್ಅಪ್, ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಕೌಂಟ್‌ರ್ಡ್ ಸೀಟ್, ಅಲಾಯ್ ವ್ಹೀಲ್, 36-ಲೀಟರ್ ಸಾಮರ್ಥ್ಯ ಅಂಡರ್ ಸೀಟ್ ಸ್ಪೋರೇಜ್, ರಿಯರ್ ಗ್ರ್ಯಾಬ್ ರೈಲ್ಸ್, ಫ್ರಂಟ್ ಸ್ಟೋರೇಜ್ ಪ್ಯಾಕೇಟ್, ಲಗೇಜ್ ಹುಕ್ ಮತ್ತು ಹತ್ತು ವಿವಿಧ ಬಣ್ಣಗಳ ಆಯ್ಕೆ ಹೊಂದಿದೆ.

ಗ್ರಾಹಕರ ಬೇಡಿಕೆಯೆಂತೆ ದಿನಂಪ್ರತಿ ಒಂದು ಸಾವಿರ ಇವಿ ಸ್ಕೂಟರ್ ಆರಂಭಿಸಿದ ಓಲಾ ಎಲೆಕ್ಟ್ರಿಕ್

ಜೊತೆಗೆ ಹೊಸ ಸ್ಕೂಟರ್‌ನಲ್ಲಿ 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಮತ್ತು ಶಟರ್‌ಪ್ರೂಫ್ ಸ್ಕ್ರೀನ್‌ನೊಂದಿಗೆ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆನ್ ಬೋರ್ಡ್ ನ್ಯಾನಿಗೇಷನ್‌ಗಾಗಿ ಇಸಿಮ್ ಇಂಟರ್‌ನೆಂಟ್ ಕನೆಕ್ಟಿವಿಟಿ, ಸ್ಮಾಟ್‌ಫೋರ್ಟ್ ಮೂಲಕ ವಿವಿಧ ತಾಂತ್ರಿಕ ಅಂಶಗಳನ್ನು ನಿಯಂತ್ರಿಸಲು ಕನೆಕ್ಟೆಡ್ ಫೀಚರ್ಸ್ ಸಹ ನೀಡಲಾಗಿದೆ.

More from DriveSpark

Article Published On: Friday, January 7, 2022, 13:38 [IST]
English summary
Ola electric scooter production update details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+