ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಎಸ್1 ಇವಿ ಸ್ಕೂಟರ್ ವಿತರಣೆ ಆರಂಭಿಸಿದ ಓಲಾ ಎಲೆಕ್ಟ್ರಿಕ್

ಓಲಾ ಎಲೆಕ್ಟ್ರಿಕ್ ಕಂಪನಿಯ ತನ್ನ ಬಹುನೀರಿಕ್ಷಿತ ಎಸ್1 ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಗೆ ಅಧಿಕೃತ ಚಾಲನೆ ನೀಡಿದ್ದು, ಸ್ಕೂಟರ್ ವಿತರಣೆ ಆರಂಭವಾದ ಮೊದಲ ದಿನವೇ ಸಾವಿರಾರು ಗ್ರಾಹಕರು ಸ್ಕೂಟರ್ ಪಡದುಕೊಂಡಿದ್ದಾರೆ.

ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಎಸ್1 ಇವಿ ಸ್ಕೂಟರ್ ವಿತರಣೆ ಆರಂಭಿಸಿ ಓಲಾ ಎಲೆಕ್ಟ್ರಿಕ್

ಹೊಸ ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಾಗಿ ಓಲಾ ಎಲೆಕ್ಟ್ರಿಕ್ ಕಂಪನಿಯು ಸುಮಾರು 20 ಸಾವಿರಕ್ಕೂ ಹೆಚ್ಚು ಬುಕಿಂಗ್ ಪಡೆದುಕೊಂಡಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಬುಕಿಂಗ್ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದೆ.

ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಎಸ್1 ಇವಿ ಸ್ಕೂಟರ್ ವಿತರಣೆ ಆರಂಭಿಸಿ ಓಲಾ ಎಲೆಕ್ಟ್ರಿಕ್

ಬಜೆಟ್ ಬೆಲೆಯೊಂದಿಗೆ ಅತ್ಯುತ್ತಮ ಫೀಚರ್ಸ್ ಹೊಂದಿರುವ ಹೊಸ ಎಸ್1 ಇವಿ ಸ್ಕೂಟರ್ ಮಾದರಿಯು ಓಲಾ ಎಲೆಕ್ಟ್ರಿಕ್ ಕಂಪನಿಗೆ ಹೆಚ್ಚಿನ ಬೇಡಿಕೆ ತಂದುಕೊಡುವ ನೀರಿಕ್ಷೆಯಿದ್ದು, ಗ್ರಾಹಕರ ಬೇಡಿಕೆಯೆಂತೆ ಅಗತ್ಯ ತಾಂತ್ರಿಕ ಸೌಲಭ್ಯಗಳೊಂದಿಗೆ ಅಭಿವೃದ್ದಿಗೊಂಡಿದೆ.

ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಎಸ್1 ಇವಿ ಸ್ಕೂಟರ್ ವಿತರಣೆ ಆರಂಭಿಸಿ ಓಲಾ ಎಲೆಕ್ಟ್ರಿಕ್

ಹೊಸ ತಂತ್ರಜ್ಞಾನ ಪ್ರೇರಿತ ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 99,999 ಬೆಲೆ ಹೊಂದಿದ್ದು, ನಿಗದಿತ ಸಂಖ್ಯೆಯ ಯುನಿಟ್ ಮಾರಾಟದ ನಂತರ ಬೆಲೆ ಹೆಚ್ಚಿಸುವುದಾಗಿ ಕಂಪನಿಯು ಮಾಹಿತಿ ನೀಡಿದೆ.

ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಎಸ್1 ಇವಿ ಸ್ಕೂಟರ್ ವಿತರಣೆ ಆರಂಭಿಸಿ ಓಲಾ ಎಲೆಕ್ಟ್ರಿಕ್

2021ರ ಅಗಸ್ಟ್ 15ರಂದೇ ಬಿಡುಗಡೆಯಾಗಿದ್ದ ಎಸ್1 ಮಾದರಿಯನ್ನು ಕಂಪನಿಯು ಕಾರಣಾಂತರಗಳಿಂದ ವಿತರಣೆ ಮಾಡಿರಲಿಲ್ಲ. ತದನಂತರ ಕೆಲವು ಹೊಸ ಬದಲಾವಣೆಗಳೊಂದಿಗೆ ಅಭಿವೃದ್ದಿಗೊಳಿಸುವ ಮೂಲಕ ಇದೀಗ ಮತ್ತೆ ಮರುಬಿಡುಗಡೆ ಮಾಡಿದೆ.

ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಎಸ್1 ಇವಿ ಸ್ಕೂಟರ್ ವಿತರಣೆ ಆರಂಭಿಸಿ ಓಲಾ ಎಲೆಕ್ಟ್ರಿಕ್

ಹೊಸ ಎಸ್1 ಇವಿ ಸ್ಕೂಟರ್ ಬೆಲೆಯು ಕೆಲವು ರಾಜ್ಯಗಳಲ್ಲಿ ಸಬ್ಸಡಿ ಆಧರಿಸಿ ತುಸು ಹೆಚ್ಚಳವಾಗಲಿದ್ದು, ಹೊಸ ಇವಿ ಸ್ಕೂಟರ್ ಖರೀದಿಗಾಗಿ ಕಂಪನಿಯು ರೂ. 499 ಮುಂಗಡ ಹಣದೊಂದಿಗೆ ಬುಕಿಂಗ್ ಮಾಡಬಹುದಾಗಿದೆ. ಓಲಾ ಎಲೆಕ್ಟ್ರಿಕ್‌ನ ಅಧಿಕೃತ ವೆಬ್‌ಸೈಟ್‌ (https://book.olaelectric.com/) ಮೂಲಕ ಸ್ಕೂಟರ್ ಅನ್ನು ಬುಕ್ ಮಾಡಬಹುದಾಗಿದ್ದು, ಉತ್ಪಾದನೆ ಹೆಚ್ಚಿರುವುದರಿಂದ ಕಡಿಮೆ ಅವಧಿಯಲ್ಲಿ ವಿತರಣೆಯಾಗಲಿದೆ.

ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಎಸ್1 ಇವಿ ಸ್ಕೂಟರ್ ವಿತರಣೆ ಆರಂಭಿಸಿ ಓಲಾ ಎಲೆಕ್ಟ್ರಿಕ್

ಹೊಸ ಎಸ್1 ಇವಿ ಸ್ಕೂಟರ್ ಖರೀದಿಗಾಗಿ ರೂ. 2,999 ಗಳಗೆ ಲಭ್ಯವಿರುವ ಇಎಂಐನೊಂದಿಗೆ ಸಾಲ-ಸೌಲಭ್ಯಗಳು ಲಭ್ಯವಿದ್ದು, ಓಲಾ ಕಂಪನಿಯೊಂದಿನ ಪಾಲುದಾರಿಕೆ ಬ್ಯಾಂಕ್‌ಗಳಿಂದಲೂ ಸುಲಭ ಹಣಕಾಸು ಸೌಲಭ್ಯಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಎಸ್1 ಇವಿ ಸ್ಕೂಟರ್ ವಿತರಣೆ ಆರಂಭಿಸಿ ಓಲಾ ಎಲೆಕ್ಟ್ರಿಕ್

ಹೊಸ ಇವಿ ಸ್ಕೂಟರ್ ಖರೀದಿಸುವ ಗ್ರಾಹಕರು ಪೂರ್ಣ ಮೊತ್ತದೊಂದಿಗೆ ಇಲ್ಲವೆ ವಿವಿಧ ಹಣಕಾಸು ಸೌಲಭ್ಯಗಳೊಂದಿಗೆ ಆಯ್ಕೆ ಮಾಡಿಕೊಳ್ಳಬಹುದಾಗಿದ್ದು, ಇವೆಡರ ಜೊತೆಗೆ ಕಂಪನಿಯು ತನ್ನದೇ ಆದ ಓಲಾ ಫೈನಾನ್ಸ್ ಮೂಲಕವೂ ವಿವಿಧ ಹಣಕಾಸು ಸೇವೆಗಳನ್ನು ಒದಗಿಸುತ್ತದೆ.

ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಎಸ್1 ಇವಿ ಸ್ಕೂಟರ್ ವಿತರಣೆ ಆರಂಭಿಸಿ ಓಲಾ ಎಲೆಕ್ಟ್ರಿಕ್

ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು 3KWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಮೂಲಕ ARAI ಪ್ರಮಾಣೀಕೃತ 131 ಕಿಮೀ ಮೈಲೇಜ್ ಹಿಂದಿರುಗಿಸಲಿದೆ. ಇದು ಇಕೋ ಮೋಡ್‌ನಲ್ಲಿ ಗರಿಷ್ಠ 128 ಕಿಮೀ, 101 ಕಿ.ಮೀ ನಾರ್ಮಲ್ ಮೋಡ್‌ನಲ್ಲಿ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಕನಿಷ್ಠ 90 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಎಸ್1 ಇವಿ ಸ್ಕೂಟರ್ ವಿತರಣೆ ಆರಂಭಿಸಿ ಓಲಾ ಎಲೆಕ್ಟ್ರಿಕ್

ಓಲಾ ಎಲೆಕ್ಟ್ರಿಕ್ ಪ್ರಕಾರ, ಎಸ್1 ಮಾದರಿಯ ಗರಿಷ್ಠ ವೇಗವು 95 ಕಿ.ಮೀ ಆಗಿದ್ದು, ಈ ಕಾರಣದಿಂದಾಗಿ ಈ ಸ್ಕೂಟರ್ ಅನ್ನು ಹೆದ್ದಾರಿಗಳಲ್ಲಿಯೂ ಸುಲಭವಾಗಿ ಓಡಿಸಬಹುದಾಗಿದೆ. ಜೊತೆಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಐದು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದ್ದು, ಗ್ರಾಹಕರು ರೆಡ್, ಜೆಟ್ ಬ್ಲಾಕ್, ಬ್ರೊಸಲಿನ್ ವೈಟ್, ನಿಯೋ ಮಿಂಟ್, ಲಿಕ್ವಿಡ್ ಸಿಲ್ವರ್ ಬಣ್ಣಗಳಲ್ಲಿ ಖರೀದಿಸಬಹುದಾಗಿದೆ.

ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಎಸ್1 ಇವಿ ಸ್ಕೂಟರ್ ವಿತರಣೆ ಆರಂಭಿಸಿ ಓಲಾ ಎಲೆಕ್ಟ್ರಿಕ್

ಇನ್ನು ಭಾರತದಲ್ಲಿ ಇವಿ ವಾಹನಗಳಿಗೆ ಉತ್ತಮ ಮಾರುಕಟ್ಟೆಯಿದ್ದರೂ ಬೆಲೆ ಹೆಚ್ಚಳ ಕಾರಣಕ್ಕೆ ಗ್ರಾಹಕರು ಹೊಸ ಇವಿ ವಾಹನ ಖರೀದಿಯಿಂದ ಹಿಂದೆ ಸರಿಯುತ್ತಿದ್ದಾರೆ. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಇವಿ ಬ್ಯಾಟರಿ ಸಂಪನ್ಮೂಲ ಲಭ್ಯತೆಯಲ್ಲಿ ಬೆಲೆ ಹೆಚ್ಚಳವು ಅನಿವಾರ್ಯವಾಗಿದ್ದು, ಇದು ಮುಂಬರುವ ದಿನಗಳಲ್ಲಿ ಸುಧಾರಿಸುವ ಸಾಧ್ಯತೆಗಳಿವೆ.

ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಎಸ್1 ಇವಿ ಸ್ಕೂಟರ್ ವಿತರಣೆ ಆರಂಭಿಸಿ ಓಲಾ ಎಲೆಕ್ಟ್ರಿಕ್

ಹೊಸ ಎಲೆಕ್ಟ್ರಿಕ್ ವಾಹನಗಳ ಮುಖ್ಯ ತಾಂತ್ರಿಕ ಅಂಶವಾಗಿರುವ ಬ್ಯಾಟರಿ ಪ್ಯಾಕ್‌ ಖರೀದಿಸಲು ದೇಶಿಯ ಮಾರುಕಟ್ಟೆಯಲ್ಲಿನ ಬಹುತೇಕ ವಾಹನ ತಯಾರಕ ಕಂಪನಿಗಳು ವಿದೇಶಿ ಮಾರುಕಟ್ಟೆಗಳನ್ನು ಅವಲಂಬಿಸಿದ್ದು, ಇದೇ ಕಾರಣಕ್ಕೆ ಇವಿ ವಾಹನಗಳ ಬೆಲೆಗಳನ್ನು ಸಾಮಾನ್ಯ ವಾಹನಗಳ ಬೆಲೆ ಮಟ್ಟಕ್ಕೆ ಇಳಿಕೆ ಮಾಡಲು ಸಾಧ್ಯವಾಗುತ್ತಿಲ್ಲ.

ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಎಸ್1 ಇವಿ ಸ್ಕೂಟರ್ ವಿತರಣೆ ಆರಂಭಿಸಿ ಓಲಾ ಎಲೆಕ್ಟ್ರಿಕ್

ಈ ನಿಟ್ಟಿನಲ್ಲಿ ಮಹತ್ವದ ಯೋಜನೆ ರೂಪಿಸಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಮುಂಬರುವ ಕೆಲವೇ ತಿಂಗಳಿನಲ್ಲಿ ಭಾರತದಲ್ಲಿಯೇ ಉತ್ಪಾದನೆ ಮಾಡಲಾದ ಲಿಥೀಯಂ ಅಯಾನ್ ಬ್ಯಾಟರಿ ಬಳಕೆಗೆ ಸಿದ್ದವಾಗುತ್ತಿದೆ.

ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಎಸ್1 ಇವಿ ಸ್ಕೂಟರ್ ವಿತರಣೆ ಆರಂಭಿಸಿ ಓಲಾ ಎಲೆಕ್ಟ್ರಿಕ್

ಒಂದು ವೇಳೆ ಭಾರತದಲ್ಲಿಯೇ ಉತ್ಪಾದನೆಯಾದ ಲಿಥೀಯಂ ಅಯಾನ್ ಬ್ಯಾಟರಿ ಪ್ಯಾಕ್ ಬಳಕೆ ಮಾಡಿದ್ದಲ್ಲಿ ಇವಿ ಸ್ಕೂಟರ್‌ಗಳ ಬೆಲೆಯನ್ನು ಶೇ.25 ರಿಂದ ಶೇ.30 ಇಳಿಕೆ ಮಾಡಬಹುದು ಎನ್ನಲಾಗಿದ್ದು, ಈ ನಿಟ್ಟಿನಲ್ಲಿ ಓಲಾ ಕಂಪನಿಯು ಭಾರತದಲ್ಲಿ ಇವಿ ಬ್ಯಾಟರಿ ಉತ್ಪಾದನೆಗಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ.

ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಎಸ್1 ಇವಿ ಸ್ಕೂಟರ್ ವಿತರಣೆ ಆರಂಭಿಸಿ ಓಲಾ ಎಲೆಕ್ಟ್ರಿಕ್

ದೇಶಿಯ ಮಾರುಕಟ್ಟೆಯಲ್ಲಿ ಉತ್ಪಾದಿತ ಬ್ಯಾಟರಿ ಅಲಭ್ಯತೆಯೇ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ಧಿಗೆ ಅಡ್ಡಿಯಾಗುತ್ತಿದ್ದು, ಓಲಾ ತನ್ನ ಸ್ಥಾವರದಲ್ಲಿ ತಯಾರಿಸಿದ ಬ್ಯಾಟರಿ ಪ್ಯಾಕ್ ಅನ್ನು ಪ್ರಮುಖ ದ್ವಿಚಕ್ರ ವಾಹನಗಳಲ್ಲಿ ಬಳಸಲು ಸಿದ್ದವಾಗುತ್ತಿದೆ.

Most Read Articles

Kannada
English summary
Ola news s1 electric scooter delivery starts
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X