ತಾಂತ್ರಿಕ ದೋಷ: ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಓಲಾ ಎಲೆಕ್ಟ್ರಿಕ್ ಕಂಪನಿಯು ತನ್ನ ಇವಿ ಸ್ಕೂಟರ್ ವಿತರಣೆಯನ್ನು ಈಗಾಗಲೇ ಆರಂಭಿಸಿದ್ದು, ಹಲವಾರು ಹೊಸ ನೀರಿಕ್ಷೆಗಳನ್ನು ಹುಟ್ಟುಹಾಕಿದ್ದ ಇವಿ ಸ್ಕೂಟರ್‌ಗಳ ಕಾರ್ಯಕ್ಷಮತೆ ಮತ್ತು ಗುಣಮಟ್ಟದ ಕುರಿತಾಗಿ ಗ್ರಾಹಕರಿಂದ ಅಸಮಾಧಾನ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿಯೇ ಓಲಾ ಕಂಪನಿಗೆ ಹಿನ್ನಡೆ ಉಂಟುಮಾಡಬಹುದಾದ ಮತ್ತೊಂದು ಅಹಿತಕರ ಘಟನೆ ನಡೆದಿದೆ.

ತಾಂತ್ರಿಕ ದೋಷ: ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಹೌದು, ಇತ್ತೀಚೆಗಷ್ಟೇ ವಿತರಣೆಗೊಂಡ ಓಲಾ ಎಸ್1 ಪ್ರೊ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯೊಂದು ಬೆಂಕಿ ಅವಘಡದಲ್ಲಿ ಸುಟ್ಟು ಕರಲಾಗಿದ್ದು, ನೋಡನೋಡುತ್ತಿದ್ದಂತೆ ಸ್ಕೂಟರಿನ ಬ್ಯಾಟರಿ ವಿಭಾಗದಲ್ಲಿ ಕಾಣಿಸಿಕೊಂಡ ಬೆಂಕಿಯು ಸಂಪೂರ್ಣವಾಗಿ ಸ್ಕೂಟರ್ ಆವರಿಸಿಕೊಂಡು ಆತಂಕ ಸೃಷ್ಠಿಸಿದೆ.

ತಾಂತ್ರಿಕ ದೋಷ: ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಅದೃಷ್ಟವಶಾತ್ ಸ್ಕೂಟರಿನಲ್ಲಿದ್ದ ರೈಡರ್ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಸ್ಕೂಟರ್ ಅನ್ನು ರಸ್ತೆ ಬದಿ ನಿಲ್ಲಿಸಿ ಪ್ರಾಣಾಪಾಯದಿಂದ ಪಾರಾಗಿದ್ದು, ಪುಣೆ ನಗರದಲ್ಲಿ ನಡೆದ ಈ ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

ತಾಂತ್ರಿಕ ದೋಷ: ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಬೆಂಕಿ ಅವಘಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗಳ ಗುಣಮಟ್ಟ ಮತ್ತು ಸುರಕ್ಷತೆ ಕುರಿತಂತೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿದ್ದು, ಘಟನೆಯಿಂದ ಎಚ್ಚೆತ್ತುಕೊಂಡಿರುವ ಓಲಾ ಕಂಪನಿಯು ಘಟನೆ ಕುರಿತು ಪ್ರತಿಕ್ರಿಯೆಸಿದೆ.

ತಾಂತ್ರಿಕ ದೋಷ: ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಘಟನೆ ಕುರಿತು ವಿಷಾದ ವ್ಯಕ್ತಪಡಿಸಿರುವ ಓಲಾ ಎಲೆಕ್ಟ್ರಿಕ್ ಮುಖ್ಯಸ್ಥ ಭಾವೀಶ್ ಅಗರ್‌ವಾಲ್ ಅವರು ಪ್ರಯಾಣಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆಯಾಗಿದ್ದು, ಘಟನೆ ಕುರಿತು ಕೂಲಂಕುಶವಾಗಿ ಪರಿಶೀಲಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದಿದ್ದಾರೆ.

ತಾಂತ್ರಿಕ ದೋಷ: ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಜೊತೆಗೆ ಘಟನೆ ಬಗೆಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿ ಹಂಚಿಕೊಳ್ಳುವುದಾಗಿ ಅಧಿಕೃತ ಪ್ರಕಟಣೆ ಹೊರಡಿಸಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಪ್ರಯಾಣಿಕರ ಸುರಕ್ಷತೆಗಾಗಿ ಎಲ್ಲಾ ಹಂತದಲ್ಲೂ ಸುರಕ್ಷತೆಯೊಂದಿಗೆ ಉತ್ಪನ್ನಗಳ ಉತ್ಪಾದನೆ ಮಾಡಿರುವುದಾಗಿ ಮಾಹಿತಿ ನೀಡಿದ್ದು, ಇಂತಹ ಘಟನೆ ಮರುಕಳಿಸದಂತೆ ಎಚ್ಚರವಹಿಸುವ ಭರವಸೆ ನೀಡಿದೆ.

ಇನ್ನು ಓಲಾ ಎಲೆಕ್ಟ್ರಿಕ್ ಕಂಪನಿಯು ಸದ್ಯ ಎಸ್1 ಪ್ರೊ ಮಾದರಿಯನ್ನು ಮಾತ್ರವೇ ಉತ್ಪಾದನೆಗೊಳಿಸುತ್ತಿದ್ದು, ಎಸ್1 ಮಾದರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈಗಾಗಲೇ ಎಸ್1 ಮಾದರಿಗಾಗಿ ಬುಕಿಂಗ್ ಸಲ್ಲಿಸಿರುವ ಗ್ರಾಹಕರಿಗೆ ಕಂಪನಿಯು ಎಸ್1 ಬದಲಾಗಿ ಎಸ್1 ದರಯಲ್ಲಿಯೇ ಎಸ್1 ಪ್ರೊ ಮಾದರಿಯನ್ನೇ ವಿತರಣೆ ಮಾಡುತ್ತಿದ್ದು, ಕೆಲವು ಪ್ರೀಮಿಯಂ ಫೀಚರ್ಸ್‌ಗಳು, ಸಾಫ್ಟ್‌ವೇರ್ ಅಪ್‌ಡೇಟ್, ಅಧಿಕ ಮೈಲೇಜ್ ಬ್ಯಾಟರಿ ರೇಂಜ್ ನೀಡಲಾಗಿಲ್ಲ.

ತಾಂತ್ರಿಕ ದೋಷ: ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಎಸ್1 ಮಾದರಿಗಾಗಿ ಬುಕಿಂಗ್ ಮಾಡಿದ ಗ್ರಾಹಕರಿಗೆ ಕೇವಲ ಎಸ್1 ಪ್ರೊ ಮಾದರಿಯು ಸಾಮಾನ್ಯ ಆವೃತ್ತಿಯನ್ನು ವಿತರಣೆ ನೀಡಲಾಗುತ್ತಿದ್ದು, ಒಂದು ವೇಳೆ ಹೆಚ್ಚುವರಿ ಫೀಚರ್ಸ್ ಮತ್ತು ಅಧಿಕ ಮೈಲೇಜ್ ರೇಂಜ್ ಬಯಸಿದರೆ ಇನ್ನುಳಿದ ಹಣ ಪಾವತಿ ಮಾಡಿ ಹೈ ಎಂಡ್ ಮಾದರಿಗೆ ಉನ್ನತೀಕರಿಸಿಕೊಳ್ಳಬಹುದು.

ತಾಂತ್ರಿಕ ದೋಷ: ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಈಗಾಗಲೇ ಎಸ್1 ಪ್ರೊ ಮಾದರಿಗಾಗಿ ಬುಕಿಂಗ್ ಮಾಡಿರುವ ಗ್ರಾಹಕರು ಕಂಪನಿಯು ನಿಗದಿಪಡಿಸಿರುವ ತಾಂತ್ರಿಕ ಅಂಶಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲವಾದರೂ ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ 2.0 ಸಾಫ್ಟ್‌ವೇರ್ ಅಪ್‌ಡೇಟ್ ಹೊಂದಿರುವ ಎಸ್1 ಪ್ರೊ ಮಾದರಿಯು ತುಸು ದುಬಾರಿಯಾಗಲಿದೆ.

ತಾಂತ್ರಿಕ ದೋಷ: ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಅತ್ಯತ್ತಮ ಕಾರ್ಯಕ್ಷಮತೆ, ಗರಿಷ್ಠ ಮೈಲೇಜ್, ಪ್ರೀಮಿಯಂ ಫೀಚರ್ಸ್ ಮತ್ತು ಬಜೆಟ್ ಬೆಲೆಯು ಹೊಸ ಸ್ಕೂಟರ್ ಆಯ್ಕೆ ಮೌಲ್ಯವನ್ನು ಹೆಚ್ಚಿಸಿದ್ದು, ಪ್ರತಿ ಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ತಾಂತ್ರಿಕ ದೋಷ: ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಹೊಸ ಎಸ್1 ವೆರಿಯೆಂಟ್‌‌ನಲ್ಲಿ ಓಲಾ ಕಂಪನಿಯು 2.98kWh ಮತ್ತು ಎಸ್1 ಪ್ರೊ ಮಾದರಿಯಲ್ಲಿ 3.97kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು, ಪ್ರತಿ ಚಾರ್ಜ್‌ಗೆ ಎಸ್1 ಮಾದರಿಯು ಗರಿಷ್ಠ 121 ಕಿ.ಮೀ ಮೈಲೇಜ್ ಹಿಂದಿರುಗಿಸಿದರೆ ಎಸ್1 ಪ್ರೊ ಮಾದರಿಯು ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ತಾಂತ್ರಿಕ ದೋಷ: ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಇದರಲ್ಲಿ ಎಸ್1 ಮಾದರಿಯು ಗಂಟೆಗೆ 90 ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ಪ್ರತಿ ಗಂಟೆಗೆ 115ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದು, ಎಸ್1 ಮಾದರಿಯಲ್ಲಿ ನಾರ್ಮಲ್ ಮತ್ತು ಸ್ಪೋರ್ಟ್ ರೈಡ್ ಮೋಡ್‌ಗಳಿದ್ದರೆ ಎಸ್1 ಪ್ರೊ ಮಾದರಿಯಲ್ಲಿ ನಾರ್ಮಲ್, ಸ್ಪೋರ್ಟ್ ಮತ್ತು ಹೈಪರ್ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ.

ತಾಂತ್ರಿಕ ದೋಷ: ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಹಾಗೆಯೇ ಓಲಾ ಇವಿ ಸ್ಕೂಟರ್‌ಗಳು ಅತ್ಯುತ್ತಮ ವಿನ್ಯಾಸದೊಂದಿಗೆ ಗರಿಷ್ಠ ಮಟ್ಟದ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಸ್ಕೂಟರ್‌ಗಳಲ್ಲಿ ಟ್ವಿನ್ ಪಾಡ್ ಎಲ್ಇಡಿ ಸೆಟ್ಅಪ್, ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಕೌಂಟ್‌ರ್ಡ್ ಸೀಟ್, ಅಲಾಯ್ ವ್ಹೀಲ್, 36-ಲೀಟರ್ ಸಾಮರ್ಥ್ಯ ಅಂಡರ್ ಸೀಟ್ ಸ್ಪೋರೇಜ್, ರಿಯರ್ ಗ್ರ್ಯಾಬ್ ರೈಲ್ಸ್, ಫ್ರಂಟ್ ಸ್ಟೋರೇಜ್ ಪ್ಯಾಕೇಟ್, ಲಗೇಜ್ ಹುಕ್ ಮತ್ತು ಹತ್ತು ವಿವಿಧ ಬಣ್ಣಗಳ ಆಯ್ಕೆ ಹೊಂದಿದೆ.

ತಾಂತ್ರಿಕ ದೋಷ: ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಹೊಸ ಸ್ಕೂಟರ್‌ಗಳು 1,859 ಎಂಎಂ ಉದ್ದ, 712 ಎಂಎಂ ಅಗಲ, 1,160 ಎಂಎಂ ಎತ್ತರ, 1,359 ಎಂಎಂ ವ್ಹೀಲ್ ಬೆಸ್, 792 ಎಂಎಂ ಸೀಟ್ ಹೈಟ್, 125 ಕೆ.ಜಿ ತೂಕ ಹೊಂದಿದ್ದು, ಮುಂಭಾಗದಲ್ಲಿ ಸಿಂಗಲ್ ಫೋರ್ಕ್ ಸಸ್ಫೆಷನ್ ಮತ್ತು ಹಿಂಬದಿಯಲ್ಲಿ ಮೊನೊ ಶಾಕ್ ಸಸ್ಷೆಷನ್‌ನೊಂದಿಗೆ ಎರಡು ಬದಿಯಲ್ಲೂ ಡಿಸ್ಕ್ ಬ್ರೇಕ್ ಜೋಡಣೆ ಹೊಂದಿವೆ.

ತಾಂತ್ರಿಕ ದೋಷ: ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಜೊತೆಗೆ ಹೊಸ ಸ್ಕೂಟರ್‌ನಲ್ಲಿ 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಮತ್ತು ಶಟರ್‌ಪ್ರೂಫ್ ಸ್ಕ್ರೀನ್‌ನೊಂದಿಗೆ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆನ್ ಬೋರ್ಡ್ ನ್ಯಾನಿಗೇಷನ್‌ಗಾಗಿ ಇಸಿಮ್ ಇಂಟರ್‌ನೆಂಟ್ ಕನೆಕ್ಟಿವಿಟಿ, ಸ್ಮಾಟ್‌ಫೋರ್ಟ್ ಮೂಲಕ ವಿವಿಧ ತಾಂತ್ರಿಕ ಅಂಶಗಳನ್ನು ನಿಯಂತ್ರಿಸಲು ಕನೆಕ್ಟೆಡ್ ಫೀಚರ್ಸ್ ಸಹ ನೀಡಲಾಗಿದೆ.

More from DriveSpark

Article Published On: Monday, March 28, 2022, 11:44 [IST]
English summary
Ola s1 electric scooter catches fire in pune details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+