ಇಂದಿನಿಂದ ಎಸ್1 ಇವಿ ಸ್ಕೂಟರ್ ವಿತರಣೆ ಚಾಲನೆ ನೀಡಿದ ಓಲಾ ಎಲೆಕ್ಟ್ರಿಕ್
ಓಲಾ ಎಲೆಕ್ಟ್ರಿಕ್ ಕಂಪನಿಯು ತನ್ನ ಹೊಸ ಎಸ್1 ಇವಿ ಸ್ಕೂಟರ್ ವಿತರಣೆಯನ್ನು ಆರಂಭಿಸಲು ಸಜ್ಜಾಗಿದ್ದು, ಹೊಸ ಸ್ಕೂಟರ್ ಮಾದರಿಗಾಗಿ ಈಗಾಗಲೇ 10 ಸಾವಿರಕ್ಕಿಂತಲೂ ಹೆಚ್ಚು ಗ್ರಾಹಕರು ಮೊದಲ ಹಂತದ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ.

ಹೊಸ ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗಾಗಿ ಮೊದಲ ಹಂತದಲ್ಲಿ ಹಣ ಪಾವತಿಸಿರುವ ಗ್ರಾಹಕರಿಗೆ ಕಂಪನಿಯು ಹಂತ-ಹಂತವಾಗಿ ವಿತರಣೆ ಕೈಗೊಳ್ಳಲಿದ್ದು, ಉತ್ಪಾದನೆ ಹೆಚ್ಚಿರುವ ಕಾರಣ ಮುಂದಿನ ಕೆಲವೇ ದಿನಗಳಲ್ಲಿ ನಿಗದಿತ ಅವಧಿಯಲ್ಲಿ ಇವಿ ಸ್ಕೂಟರ್ ವಿತರಿಸುವ ಭರವಸೆ ನೀಡಿದೆ.

ಓಲಾ ಎಲೆಕ್ಟ್ರಿಕ್ ಕಂಪನಿಯು ಎಸ್1 ಪ್ರೊ ನಂತರ ಇದೀಗ ಎಸ್1 ಮಾದರಿಯ ಮಾರಾಟಕ್ಕೆ ಅಧಿಕೃತ ಚಾಲನೆ ನೀಡುತ್ತಿದ್ದು, ಹೊಸ ಸ್ಕೂಟರ್‌ಗೆ ಖರೀದಿ ವಿಂಡೋ ಆರಂಭವಾದ ನಂತರ ಹೊಸ ಇವಿ ಸ್ಕೂಟರ್ ಖರೀದಿಗೆ ಭರ್ಜರಿ ಬೇಡಿಕೆ ಹರಿದುಬರುತ್ತಿದೆ.

ಬಜೆಟ್ ಬೆಲೆಯೊಂದಿಗೆ ಅತ್ಯುತ್ತಮ ಫೀಚರ್ಸ್ ಹೊಂದಿರುವ ಹೊಸ ಎಸ್1 ಇವಿ ಸ್ಕೂಟರ್ ಮಾದರಿಯು ಓಲಾ ಎಲೆಕ್ಟ್ರಿಕ್ ಕಂಪನಿಗೆ ಹೆಚ್ಚಿನ ಬೇಡಿಕೆ ತಂದುಕೊಡುವ ನೀರಿಕ್ಷೆಯಿದ್ದು, ಗ್ರಾಹಕರ ಬೇಡಿಕೆಯೆಂತೆ ಅಗತ್ಯ ತಾಂತ್ರಿಕ ಸೌಲಭ್ಯಗಳೊಂದಿಗೆ ಅಭಿವೃದ್ದಿಗೊಂಡಿದೆ.

ಹೊಸ ತಂತ್ರಜ್ಞಾನ ಪ್ರೇರಿತ ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 99,999 ಬೆಲೆ ಹೊಂದಿದ್ದು, ನಿಗದಿತ ಸಂಖ್ಯೆಯ ಯುನಿಟ್ ಮಾರಾಟದ ನಂತರ ಬೆಲೆ ಹೆಚ್ಚಿಸುವುದಾಗಿ ಕಂಪನಿಯು ಮಾಹಿತಿ ನೀಡಿದೆ.

ಕಳೆದ ವರ್ಷ ಅಗಸ್ಟ್ 15ರಂದೇ ಬಿಡುಗಡೆಯಾಗಿದ್ದ ಎಸ್1 ಮಾದರಿಯನ್ನು ಕಂಪನಿಯು ಕಾರಣಾಂತರಗಳಿಂದ ವಿತರಣೆ ಮಾಡಿರಲಿಲ್ಲ. ತದನಂತರ ಕೆಲವು ಹೊಸ ಬದಲಾವಣೆಗಳೊಂದಿಗೆ ಅಭಿವೃದ್ದಿಗೊಳಿಸುವ ಮೂಲಕ ಇದೀಗ ಮತ್ತೆ ಮರುಬಿಡುಗಡೆ ಮಾಡಿದೆ.

ಎಸ್1 ಇವಿ ಸ್ಕೂಟರ್ ಬೆಲೆಯು ಕೆಲವು ರಾಜ್ಯಗಳಲ್ಲಿ ಸಬ್ಸಡಿ ಆಧರಿಸಿ ತುಸು ಹೆಚ್ಚಳವಾಗಲಿದ್ದು, ಹೊಸ ಇವಿ ಸ್ಕೂಟರ್ ಖರೀದಿಗಾಗಿ ಕಂಪನಿಯು ರೂ. 499 ಮುಂಗಡ ಹಣದೊಂದಿಗೆ ಬುಕಿಂಗ್ ಮಾಡಬಹುದಾಗಿದೆ. ಓಲಾ ಎಲೆಕ್ಟ್ರಿಕ್‌ನ ಅಧಿಕೃತ ವೆಬ್‌ಸೈಟ್ (https://book.olaelectric.com/) ಮೂಲಕ ಸ್ಕೂಟರ್ ಅನ್ನು ಬುಕ್ ಮಾಡಬಹುದಾಗಿದ್ದು, ಉತ್ಪಾದನೆ ಹೆಚ್ಚಿರುವುದರಿಂದ ವಿತರಣೆಗೆ ಹೆಚ್ಚಿನ ಸಮಯ ಕಾಯಬೇಕಿಲ್ಲ.

ಹೊಸ ಎಸ್1 ಇವಿ ಸ್ಕೂಟರ್ ಖರೀದಿಗಾಗಿ ರೂ. 2,999 ಗಳಗೆ ಲಭ್ಯವಿರುವ ಇಎಂಐನೊಂದಿಗೆ ಸಾಲ-ಸೌಲಭ್ಯಗಳು ಲಭ್ಯವಿದ್ದು, ಓಲಾ ಕಂಪನಿಯೊಂದಿನ ಪಾಲುದಾರಿಕೆ ಬ್ಯಾಂಕ್‌ಗಳಿಂದಲೂ ಸುಲಭ ಹಣಕಾಸು ಸೌಲಭ್ಯಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಹೊಸ ಇವಿ ಸ್ಕೂಟರ್ ಖರೀದಿಸುವ ಗ್ರಾಹಕರು ಪೂರ್ಣ ಮೊತ್ತದೊಂದಿಗೆ ಇಲ್ಲವೆ ವಿವಿಧ ಹಣಕಾಸು ಸೌಲಭ್ಯಗಳೊಂದಿಗೆ ಆಯ್ಕೆ ಮಾಡಿಕೊಳ್ಳಬಹುದಾಗಿದ್ದು, ಇವೆಡರ ಜೊತೆಗೆ ಕಂಪನಿಯು ತನ್ನದೇ ಆದ ಓಲಾ ಫೈನಾನ್ಸ್ ಮೂಲಕವೂ ವಿವಿಧ ಹಣಕಾಸು ಸೇವೆಗಳನ್ನು ಒದಗಿಸುತ್ತದೆ.

ಎಸ್1 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು 3KWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಮೂಲಕ ARAI ಪ್ರಮಾಣೀಕೃತ 131 ಕಿಮೀ ಮೈಲೇಜ್ ಹಿಂದಿರುಗಿಸಲಿದೆ.

ಇದು ಇಕೋ ಮೋಡ್‌ನಲ್ಲಿ ಗರಿಷ್ಠ 128 ಕಿಮೀ, 101 ಕಿ.ಮೀ ನಾರ್ಮಲ್ ಮೋಡ್‌ನಲ್ಲಿ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಕನಿಷ್ಠ 90 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಓಲಾ ಪ್ರಕಾರ, ಎಸ್1 ಮಾದರಿಯ ಗರಿಷ್ಠ ವೇಗವು 95 ಕಿ.ಮೀ ಆಗಿದ್ದು, ಈ ಕಾರಣದಿಂದಾಗಿ ಈ ಸ್ಕೂಟರ್ ಅನ್ನು ಹೆದ್ದಾರಿಗಳಲ್ಲಿಯೂ ಸುಲಭವಾಗಿ ಓಡಿಸಬಹುದಾಗಿದೆ.

ಜೊತೆಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಐದು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದ್ದು, ಗ್ರಾಹಕರು ರೆಡ್, ಜೆಟ್ ಬ್ಲಾಕ್, ಬ್ರೊಸಲಿನ್ ವೈಟ್, ನಿಯೋ ಮಿಂಟ್, ಲಿಕ್ವಿಡ್ ಸಿಲ್ವರ್ ಬಣ್ಣಗಳಲ್ಲಿ ಖರೀದಿಸಬಹುದಾಗಿದೆ.


Click it and Unblock the Notifications








