ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಅಡ್ವೆಂಚರ್ ಟೂರಿಂಗ್ ಬೈಕ್‌ಗಳಿವು...

ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಅಡ್ವೆಂಚರ್ ಟೂರಿಂಗ್ ಬೈಕ್‌ಗಳ ಬೇಡಿಕೆ ಹೆಚ್ಚಾಗುತ್ತಿದೆ. ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಆಗಮನದ ನಂತರ ಭಾರತೀಯ ಮಾರುಕಟ್ಟೆಯಲ್ಲಿ ಕೈಗೆಟುಕುವ ಅಡ್ವೆಂಚರ್ ಟೂರಿಂಗ್ ಬೈಕ್‌ಗಳ ವಿಭಾಗದಲ್ಲಿ ಹಲವಾರು ಮಾದರಿಗಳು ಎಂಟ್ರಿಯಾಗಿವೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಅಡ್ವೆಂಚರ್ ಟೂರಿಂಗ್ ಬೈಕ್‌ಗಳಿವು...

ಅಡ್ವೆಂಚರ್ ಟೂರಿಂಗ್ ಬೈಕ್ ವಿಭಾಗದಲ್ಲಿ ಹೀರೋ ಮೋಟೋಕಾರ್ಪ್, ಕೆಟಿಎಂ ಮತ್ತು ಸುಜುಕಿಯಿಂದ ಬಜೆಟ್ ಸ್ನೇಹಿ ಉತ್ಪನ್ನಗಳನ್ನು ಒಳಗೊಂಡಿದೆ. ಇದರಿಂದ ಅಡ್ವೆಂಚರ್ ಟೂರಿಂಗ್ ಬೈಕ್ ಪ್ರೀಯರಿಗೆ ಭಾರತೀಯ ಮಾರುಕಟ್ಟೆಯಲ್ಲಿ ಇಂದು ಅಡ್ವೆಂಚರ್ ಟೂರಿಂಗ್ ಬೈಕ್‌ಗಳ ಹೆಚ್ಚಿನ ಆಯ್ಕೆಗಳಿವೆ. ಇಂದು ನೀವು ಭಾರತದಲ್ಲಿ ಖರೀದಿಸಬಹುದಾದ ಅತ್ಯಂತ ಬಜೆಟ್ ಸ್ನೇಹಿ ಅಡ್ವೆಂಚರ್ ಬೈಕ್‌ಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಅಡ್ವೆಂಚರ್ ಟೂರಿಂಗ್ ಬೈಕ್‌ಗಳಿವು...

ಹೀರೋ ಎಕ್ಸ್‌ಪಲ್ಸ್ 200 4ವಿ (ರೂ.1,32,350)

ಈ ಹೀರೋ ಎಕ್ಸ್‌ಪಲ್ಸ್ 200 4ವಿ ಯಾವಾಗಲೂ ನೈಜ ಆಫ್-ರೋಡ್ ಸಾಮರ್ಥ್ಯ ಹೊಂದಿರುವ ಅತ್ಯಂತ ಸಮರ್ಥ ಎಂಟ್ರಿ ಲೆವೆಲ್ ಅಡ್ವೆಂಚರ್ ಬೈಕ್ ಆಗಿದೆ. ಹೀರೋ ಎಕ್ಸ್‌ಪಲ್ಸ್ 200 ಕಡಿಮೆ ತೂಕ ಮತ್ತು ವೇಗದ ಆಫ್-ರೋಡ್ ಸಾಮರ್ಥ್ಯದೊಂದಿಗೆ ಸಾಕಷ್ಟು ಜನಪ್ರಿಯ ಮಾದರಿಯಾಗಿದೆ. ಹೀರೋ ಎಕ್ಸ್‌ಪಲ್ಸ್ 200 4ವ್ಯಾಲ್ಸ್ ಹೊಸ ಮನವಿಯೊಂದಿಗೆ ಪರಿಚಯಿಸಲು ಸಣ್ಣ ನವೀಕರಣಗಳನ್ನು ನೀಡುತ್ತದೆ ಮತ್ತು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಅಡ್ವೆಂಚರ್ ಟೂರಿಂಗ್ ಬೈಕ್‌ಗಳಿವು...

ಅಲ್ಲದೇ ಕೈಗೆಟುಕುವ ಬೆಲೆಯನ್ನು ಹೊಂದಿರುವುದರಿಂದ ಭಾರತದ ಹೆಚ್ಚಿನ ಆಫ್-ರೋಡ್ ಪ್ರೇಮಿಗಳನ್ನು ಈ ಬೈಕ್ ಸೆಳದಿದೆ. ನವೀಕರಿಸಿದ ಎಂಜಿನ್‌ನ ನಾಲ್ಕು ವಾಲ್ವ್ ಸಿಲಿಂಡರ್ ಹೆಡ್ ಅನ್ನು ಒಳಗೊಂಡಿದೆ. ಹೊಸ ಹೀರೋ ಎಕ್ಸ್‌ಪಲ್ಸ್ 200 4 ವಾಲ್ವ್‌ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಈ ಹೀರೋ ಎಕ್ಸ್‌ಪಲ್ಸ್ 200 ಈಗ 200 ಸಿಸಿ, ನಾಲ್ಕು ವಾಲ್ವ್, ಆಯಿಲ್-ಕೂಲ್ಡ್ ಎಂಜಿನ್ ಹೊಂದಿದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಅಡ್ವೆಂಚರ್ ಟೂರಿಂಗ್ ಬೈಕ್‌ಗಳಿವು...

ಈ ಎಂಜಿನ್ 8,500 ಆರ್‌ಪಿಎಂನಲ್ಲಿ 19 ಬಿಎಚ್‌ಪಿ ಮತ್ತು 6,500 ಆರ್‌ಪಿಎಂನಲ್ಲಿ 17.35 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಗೇರ್ ಅನುಪಾತಗಳನ್ನು ಉತ್ತಮ ಟ್ರ್ಯಾಕ್ಟಬಿಲಿಟಿ ಮತ್ತು ವೇಗವರ್ಧನೆಗಾಗಿ ನವೀಕರಿಸಲಾಗಿದೆ ಮತ್ತು ಒಟ್ಟಾರೆ ಟಾರ್ನ್ ಮಿಷನ್ ಸುಧಾರಿಸಲಾಗಿದೆ. ಸ್ಟಾಕ್ ಹೀರೋ ಎಕ್ಸ್‌ಪಲ್ಸ್ 200 4ವಿ ದೀರ್ಘ ಸಸ್ಪೆಂಕ್ಷನ್ ಟ್ರ್ಯಾವೆಲ್ ಅನ್ನು ಹೊಂದಿದೆ. ಇದರ ಮುಂಭಾಗದಲ್ಲಿ 190 ಎಂಎಂ ಮತ್ತು ಹಿಂಭಾಗದಲ್ಲಿ 170 ಎಂಎಂ ಟ್ರ್ಯಾವೆಲ್ ಹೊಂದಿದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಅಡ್ವೆಂಚರ್ ಟೂರಿಂಗ್ ಬೈಕ್‌ಗಳಿವು...

ಈ ಅಡ್ವೆಂಚರ್ ಬೈಕಿನಲ್ಲಿ ಡ್ಯುಯಲ್-ಪರ್ಪಸ್ ಟೈರ್‌ಗಳು, 10-ಸ್ಟೆಪ್ ಹೊಂದಾಣಿಕೆ ಮಾಡಬಹುದಾದ ಮೊನೊ-ಶಾಕ್ ಸಸ್ಪೆಂಕ್ಷನ್, 825 ಎಂಎಂ ಪ್ರವೇಶಿಸಬಹುದಾದ ಸೀಟ್ ಎತ್ತರ ಮತ್ತು 220 ಎಂಎಂನ ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್ ಎಲ್ಲಾ ರೀತಿಯು ಈ ಬೈಕ್ ಯೋಗ್ಯವಾದ ಆಫ್-ರೋಡ್ ಸಾಮರ್ಥ್ಯವನ್ನು ಒದಗಿಸುತ್ತದೆ. ಈ ಎಕ್ಸ್‌ಪಲ್ಸ್ 200 ಬಂಗೀ ಹುಕ್‌ಗಳೊಂದಿಗೆ ಸ್ಟ್ಯಾಂಡರ್ಡ್ ಲಗೇಜ್ ಪ್ಲೇಟ್‌ನೊಂದಿಗೆ ಬ್ಯಾಗೇಜ್‌ನಲ್ಲಿ ಸಹ ಪ್ರಯಾಣಿಕರೊಂದಿಗೆ ಲಗೇಜ್ ಸಾಗಿಸಲು ಬರುತ್ತದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಅಡ್ವೆಂಚರ್ ಟೂರಿಂಗ್ ಬೈಕ್‌ಗಳಿವು...

ಹೋಂಡಾ ಸಿಬಿ200ಎಕ್ಸ್ (ರೂ.1,46,499)

ಈ ಬೈಕಿನ ಎರೋಗಾನಾಮಿಕ್ ಇಗ್ನಿಷನ್ ಕೀಯನ್ನು ಟ್ಯಾಂಕ್ ಮೇಲೆ ಇರಿಸಲಾಗಿದೆ. ಈ Honda ಸಿಬಿ200ಎಕ್ಸ್ ಬೈಕಿನಲ್ಲಿ ಎಂಜಿನ್ ಅನ್ನು ಹಾರ್ನೆಟ್ 2.0 ನಿಂದ ಎರವಲು ಪಡೆಯಲಾಗಿದೆ. ಈ ಬೈಕಿನಲ್ಲಿ 184 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 17 ಬಿಹೆಚ್‍ಪಿ ಪವರ್ ಮತ್ತು 16 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಅಡ್ವೆಂಚರ್ ಟೂರಿಂಗ್ ಬೈಕ್‌ಗಳಿವು...

ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ. ಇದರೊಂದಿಗೆ ಈ ಬೈಕಿನಲ್ಲಿ ಎಲೆಕ್ಟ್ರಾನಿಕ್ ರೈಡರ್ ಏಡ್‌ಗಳ ವಿಷಯದಲ್ಲಿ, ಸಿಬಿ200ಎಕ್ಸ್ ಕೇವಲ ಡ್ಯುಯಲ್-ಚಾನೆಲ್ ABS ಅನ್ನು ಹೊಂದಿದೆ. ಇನ್ನು ಈ ಅಡ್ವೆಂಚರ್ ಬೈಕಿನಲ್ಲಿ ಡೈಮೆಂಡ್ ಟೈಪ್ ಫ್ರೇಮ್ ಅನ್ನು ಹೊಂದಿದೆ. ಇದು ಈ ಅಡ್ವೆಂಚರ್ ಬೈಕನ್ನು ಉತ್ತಮ ನಿಯಂತ್ರಣ ಮತ್ತು ಕಾರ್ನರ್ ಗಳಲ್ಲಿ ಉತ್ತಮ ನಿಯಂತ್ರಣದಲ್ಲಿ ಸಾಗಲು ಸಹಕಾರಿಯಾಗಿರುತ್ತದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಅಡ್ವೆಂಚರ್ ಟೂರಿಂಗ್ ಬೈಕ್‌ಗಳಿವು...

ಹೊಸ ಹೋಂಡಾ ಸಿಬಿ200ಎಕ್ಸ್ ಅಡ್ವೆಂಚರ್ ಬೈಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಅಪ್ ಸೈಡ್ ಡೌನ್ ಯುಎಸ್ಡಿ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸೆಟಪ್ ಅನ್ನು ಹೊಂದಿರಬಹುದು. ಇನ್ನು ಈ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 276 ಎಂಎಂ ಪೆಟಲ್ ಡಿಸ್ಕ್ ಬ್ರೇಕ್ ಹಿಂಭಾಗದಲ್ಲಿ 220 ಎಂಎಂ ಪೆಟಲ್ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಅಡ್ವೆಂಚರ್ ಟೂರಿಂಗ್ ಬೈಕ್‌ಗಳಿವು...

ಸುಜುಕಿ ವಿ-ಸ್ಟ್ರೋಮ್ ಎಸ್ಎಕ್ಸ್ 250 (ರೂ.2,11,600)

ಸುಜುಕಿ ಕಂಪನಿಯು ವಿ-ಸ್ಟ್ರೋಮ್ 250 ಅಡ್ವೆಂಚರ್ ಬೈಕ್ ಅನ್ನು 2017 ರಿಂದ ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟ ಮಾಡುತ್ತಿದೆ. ಭಾರತದಲ್ಲಿ ಬಿಡುಗಡೆಗೊಂಡ ಹೊಸ ಸುಜುಕಿ ವಿ-ಸ್ಟ್ರೋಮ್ ಎಸ್ಎಕ್ಸ್ 250 ಬೈಕ್ ಯೆಲ್ಲೋ, ಆರೇಂಜ್ ಮತ್ತು ಬ್ಲ್ಯಾಕ್ ಎಂಬ ಮೂರು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಅಡ್ವೆಂಚರ್ ಟೂರಿಂಗ್ ಬೈಕ್‌ಗಳಿವು...

ಸುಜುಕಿ ವಿ-ಸ್ಟ್ರೋಮ್ ಎಸ್ಎಕ್ಸ್ 250 ಬೈಕಿನಲ್ಲಿ ಜಿಕ್ಸರ್ ಮಾದರಿಯಲ್ಲಿರುವ ಅದೇ 249 ಸಿಸಿ, ಸಿಂಗಲ್-ಸಿಲಿಂಡರ್, ಆಯಿಲ್-ಕೂಲ್ಡ್ SOHC ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 29.5 ಬಿಹೆಚ್‍ಪಿ ಪವರ್ ಮತ್ತು 22.2 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಅಡ್ವೆಂಚರ್ ಟೂರಿಂಗ್ ಬೈಕ್‌ಗಳಿವು...

ಹೊಸ ಸುಜುಕಿ ವಿ-ಸ್ಟ್ರೋಮ್ ಎಸ್ಎಕ್ಸ್ 250 ಅಡ್ವೆಂಚರ್ ಬೈಕ್ 2,180 ಎಂಎಂ ಉದ್ದ, 880 ಅಗಲ ಮತ್ತು 1,355 ಎಂಎಂ ಎತ್ತರವನ್ನು ಹೊಂದಿದೆ. ಇನ್ನು ಈ ಬೈಕ್ 1,440 ಎಂಎಂ ವ್ಹೀಲ್‌ಬೇಸ್ ಅನ್ನು ಹೊಂದಿದೆ. ಈ ಬೈಕಿನ 835 ಸೀಟ್ ಎತ್ತರವನ್ನು ಹೊಂದಿದೆ. ಸಾಫ್ಟ್ ರೋಡರ್ 205 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹೊಂದಿದೆ. ಹೊಸ ಸುಜುಕಿ ವಿ-ಸ್ಟ್ರೋಮ್ ಎಸ್ಎಕ್ಸ್ 250 ಬಹು-ಉಪಯುಕ್ತ ಮೋಟಾರ್‌ಸೈಕಲ್ ಆಗಿದ್ದು ಅದು ಒರಟಾದ ಭೂಪ್ರದೇಶಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಬಲ್ಲದು. ಮೋಟಾರ್‌ಸೈಕಲ್ ದೈನಂದಿನ ಪ್ರಯಾಣಕ್ಕೂ ಬಳಸಲು ಉತ್ತಮವಾಗಿದೆ ಮತ್ತು ಕೆಲವು ಮೈಲ್ಡ್ ಆಫ್-ರೋಡಿಂಗ್ ಮತ್ತು ದೂರದ ಹೆದ್ದಾರಿಯಲ್ಲಿ ಪ್ರಯಾಣಿಸಲು ಸೂಕ್ತ ಬೈಕ್ ಆಗಿದೆ,

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಅಡ್ವೆಂಚರ್ ಟೂರಿಂಗ್ ಬೈಕ್‌ಗಳಿವು...

ಯಜ್ಡಿ ಅಡ್ವೆಂಚರ್ (ರೂ.2,09,900 - ರೂ.2,18,900)

ಈ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಡೊಪ್ಪೆಲ್‌ಗ್ಯಾಂಗರ್ ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಬಳಸುತ್ತದೆ, ಯೆಜ್ಡಿ ಅಡ್ವೆಂಚರ್ ತನ್ನ 334cc, ಸಿಂಗಲ್-ಸಿಲಿಂಡರ್ ಮೋಟರ್‌ನಿಂದ 29.7 ಬಿಹೆಚ್‍ಪಿ ಪವರ್ ಮತ್ತು 29.9 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಅಡ್ವೆಂಚರ್ ಟೂರಿಂಗ್ ಬೈಕ್‌ಗಳಿವು...

ವೈಶಿಷ್ಟ್ಯಗಳ ಪಟ್ಟಿಯು ಸಹ ಪ್ರತಿಸ್ಪರ್ಧಿಗಳಿಗೆ ಸಮನಾಗಿರುತ್ತದೆ ಮತ್ತು ಯೆಜ್ಡಿ ಅಡ್ವೆಂಚರ್ ಎಲ್ಇಡಿ ಲೈಟಿಂಗ್ ಅನ್ನು ಬಳಸುತ್ತದೆ, ಬ್ಲೂಟೂತ್ ಸಂಪರ್ಕದೊಂದಿಗೆ ಸಂಪೂರ್ಣ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ಡ್ಯುಯಲ್-ಚಾನೆಲ್ ಎಬಿಎಸ್. ಅನ್ನು ಹೊಂದಿದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಅಡ್ವೆಂಚರ್ ಟೂರಿಂಗ್ ಬೈಕ್‌ಗಳಿವು...

ರಾಯಲ್ ಎನ್‌ಫೀಲ್ಡ್ ಹಿಮಾಲಯನ್ (ರೂ.2,14,519 - ರೂ.2,22,159)

ರಾಯಲ್ ಎನ್‌ಫೀಲ್ಡ್ ಭಾರತದಲ್ಲಿ ಅತಿದೊಡ್ಡ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರಾಂಡ್ ಗಳಲ್ಲಿ ಒಂದಾಗಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ರೆಟ್ರೊ-ಶೈಲಿಯ ಸ್ಟ್ರೀಟ್ ಬೈಕ್‌ಗಳಲ್ಲಿ ಪರಿಣತಿ ಹೊಂದಿದ್ದರೂ, ಅದರ ಪೋರ್ಟ್‌ಫೋಲಿಯೊದಲ್ಲಿ ಅಡ್ವೆಂಚರ್ ಬೈಕ್ ಅನ್ನು ಹೊಂದಿದೆ. ಈ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ ಭಾರತೀಯ ಮಾರುಕಟ್ಟೆಯ ಜನಪ್ರಿಯ ಅಡ್ವೆಂಚರ್-ಟೂರರ್ ಬೈಕ್‌ಗಳಲ್ಲಿ ಒಂದಾಗಿದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಅಡ್ವೆಂಚರ್ ಟೂರಿಂಗ್ ಬೈಕ್‌ಗಳಿವು...

ಈ ಬೈಕಿನಲ್ಲಿ 'ಟ್ರಿಪ್ಪರ್ ನ್ಯಾವಿಗೇಷನ್' ಅನ್ನು ಸಹ ಒಳಗೊಂಡಿದೆ. ಹೊಸ ಸರಳ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಪಾಡ್ ಅನ್ನು ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಒಳಗೊಂಡಿದೆ. ಇದರಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಸಿಸ್ಟಂ ಬೈಕ್ ರೈಡಿಂಗ್ ವೇಳೆ ಸವಾರನಿಗೆ ಸಾಕಷ್ಟು ಸಹಕಾರಿಯಾಗಿರುತ್ತದೆ. ಈ ರಾಯಲ್ ಎನ್‌ಫೀಲ್ಡ್ ಎಕ್ಸ್‌ಪ್ಲೊರ್ ಆ್ಯಂಡ್ ಪ್ಲ್ಯಾನ್ ರೈಡರ್ ಆ್ಯಪ್ ಮೂಲಕ ಟ್ರಿಪ್ರರ್ ಮೀಟರ್‌ಗೆ ಕನೆಕ್ಟ್ ಮಾಡಬಹುದಾಗಿದೆ. ಇದು ಟರ್ನ್ ಬೈ ಟರ್ನ್ ನ್ಯಾವಿಗೇಷನ್ ಸೇವೆಯನ್ನು ಒದಗಿಸುತ್ತದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಅಡ್ವೆಂಚರ್ ಟೂರಿಂಗ್ ಬೈಕ್‌ಗಳಿವು...

ಈ ಹಿಮಾಲಯನ್ ಅಡ್ವೆಂಚರ್-ಟೂರರ್ ಬೈಕಿನಲ್ಲಿ ಅದೇ 411ಸಿಸಿ ಸಿಂಗಲ್-ಸಿಲಿಂಡರ್ ಎಸ್‌ಒಹೆಚ್‌ಸಿ ಏರ್-ಕೂಲ್ಡ್ ಎಂಜಿನ್ ಅನ್ನು ಆಳವಡಿಸಲಾಗಿದೆ. ಈ ಎಂಜಿನ್ 24.3 ಬಿಹೆಚ್‍ಪಿ ಪವರ್ ಮತ್ತು 32 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ ನೊಂದಿಗೆ ಜೋಡಿಸಲಾಗಿದೆ.

ಭಾರತದಲ್ಲಿ ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗುತ್ತಿರುವ ಅಡ್ವೆಂಚರ್ ಟೂರಿಂಗ್ ಬೈಕ್‌ಗಳಿವು...

ಈ ಹೊಸ ಹಿಮಾಲಯನ್ ಅಡ್ವೆಂಚರ್-ಟೂರರ್ ಬೈಕ್ ಸಸ್ಪಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 41ಎಂಎಂ ಟೆಲಿಸ್ಕೋಪಿಕ್ ಸೆಟಪ್ ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸೆಟಪ್ ಅನ್ನು ಹೊಂದಿದೆ. ಇನ್ನು ಇದರ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 300ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 240ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇನ್ನು ಸ್ಟ್ಯಾಂಡರ್ಡ್ ಆಗಿ 'ಸ್ವಿಚ್ ಮಾಡಬಹುದಾದ ಎಬಿಎಸ್' ಅನ್ನು ಹೊಂದಿದೆ.

Most Read Articles

Kannada
English summary
Pocket friendly adventure touring bikes that you can buy in india details
Story first published: Thursday, June 23, 2022, 17:53 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X