Just In
- 14 min ago
ಸಂಚಾರಿ ನಿಯಮ ಉಲ್ಲಂಘನೆ ದಂಡ ಪಾವತಿಸಿದ್ರೆ 50% ರಿಯಾಯಿತಿ: ರಾಜ್ಯ ಸರ್ಕಾರ ಆದೇಶ
- 1 hr ago
6 ಏರ್ಬ್ಯಾಗ್ ಜೊತೆ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಸಿಗುವ ಟಾಪ್ 5 ಕಾರುಗಳು
- 2 hrs ago
ಎಲೆಕ್ಟ್ರಿಕ್ ಬಳಿಕ ಸಿಎನ್ಜಿ ಕಾರುಗಳ ವಿಭಾಗದಲ್ಲೂ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ ಟಾಟಾ
- 2 hrs ago
ಹೊಸ ಮಹೀಂದ್ರಾ ಎಲೆಕ್ಟ್ರಿಕ್ XUV700 ಟೀಸರ್ ಬಿಡುಗಡೆ... ಫೆ.10 ರಂದು BE ಸರಣಿ SUV ಗಳ ಪ್ರದರ್ಶನ
Don't Miss!
- News
ಶ್ರೀರಾಮುಲು-ಸಂತೋಷ್ ಲಾಡ್ ಆಲಿಂಗನ: ಬಳ್ಳಾರಿಯಲ್ಲಿ ಜನಾರ್ಧನ ರೆಡ್ಡಿಯನ್ನು ಹಣಿಯಲು ಹೊಸ ತಂತ್ರ?
- Technology
ಭಾರತಕ್ಕೆ ಎಂಟ್ರಿ ಕೊಟ್ಟ ಒಪ್ಪೋ ರೆನೋ 8T 5G! ಕ್ಯಾಮೆರಾ ಹೇಗಿದೆ? ವಿಶೇಷತೆ ಏನು?
- Finance
Union Budget: ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ ಠೇವಣಿ ಮಿತಿ ಏರಿಕೆ
- Lifestyle
ಗಂಡಾಗಿ ಬದಲಾಗಿದ್ದ ಮಂಗಳಮುಖಿ ಜಿಹಾದ್ ಈಗ ಗರ್ಭಿಣಿ: 8 ತಿಂಗಳ ಗರ್ಭಿಣಿ ಈ ಜಿಹಾದ್
- Sports
ಗದ್ದೆಯೇ ಕ್ರಿಕೆಟ್ ಮೈದಾನ: ಶುಭಮನ್ ಗಿಲ್ ವಿಕೆಟ್ ಪಡೆದವರಿಗೆ ಸಿಗ್ತಿತ್ತು 100 ರುಪಾಯಿ ಬಹುಮಾನ
- Movies
ನಟ ಪ್ರೇಮ್ ಭೇಟಿ ವೇಳೆ ನಿರ್ಮಾಪಕರ ಮನೆಯಲ್ಲಿ ಕಾಣಿಸಿಕೊಂಡ ನಾಗರಹಾವು!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಪ್ರತಿ ಚಾರ್ಜ್‌ಗೆ 140 ಕಿ.ಮೀ ಮೈಲೇಜ್ ಪ್ರೇರಿತ ಪ್ಯೂರ್ ಎಥ್ರಿಸ್ಟ್ 350 ಇವಿ ಬೈಕ್ ಬಿಡುಗಡೆ
ಪ್ಯೂರ್ ಇವಿ ಕಂಪನಿಯು ಮಾರುಕಟ್ಟೆಯಲ್ಲಿ ಈಗಾಗಲೇ ಹಲವಾರು ಇವಿ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಕಂಪನಿಯು ಇದೀಗ ಮಾರುಕಟ್ಟೆಯಲ್ಲಿನ ಬೇಡಿಕೆ ಆಧರಿಸಿ ಹೊಸ ಎಥ್ರಿಸ್ಟ್ 350 ಇವಿ ಬಿಡುಗಡೆ ಮಾಡಿದೆ.
Recommended Video
ಎಥ್ರಿಸ್ಟ್ 350 ಇವಿ ಬೈಕ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 1.54 ಲಕ್ಷ ಬೆಲೆ ಹೊಂದಿದ್ದು, ಹೊಸ ಬೈಕ್ ಮಾದರಿಯು ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿದೆ.

ಭಾರತದಲ್ಲಿ ಇವಿ ವಾಹನಗಳ ಬೇಡಿಕೆ ಹೆಚ್ಚುತ್ತಿರುವುದರಿಂದ ವಿವಿಧ ವಾಹನ ಉತ್ಪಾದನಾ ಕಂಪನಿಗಳು ಹೊಸ ಮಾದರಿಯ ಇವಿ ವಾಹನಗಳನ್ನು ಬಿಡುಗಡೆ ಮಾಡುತ್ತಿದ್ದು, ಹೈದ್ರಾಬಾದ್ ಮೂಲದ ಪ್ಯೂರ್ ಇವಿ ಕಂಪನಿಯು ಇದೀಗ ತನ್ನ ಬಹುನೀರಿಕ್ಷಿತ ಎಥ್ರಿಸ್ಟ್ 350 ಇವಿ ಬೈಕ್ ಬಿಡುಗಡೆ ಮಾಡಿದೆ.

ಮೇಕ್ ಇನ್ ಇಂಡಿಯಾ ಉಪಕ್ರಮದಡಿಯಲ್ಲಿ ಪ್ಯೂರ್ ಇವಿ ಕಂಪನಿಯು ಎಥ್ರಿಸ್ಟ್ 350 ಮೋಟಾರ್‌ಸೈಕಲ್ ಅನ್ನು ಬಿಡುಗಡೆ ಮಾಡಿದ್ದು, ಹೊಸ ಬೈಕ್ ಮಾದರಿಯನ್ನು ಹೈದರಾಬಾದ್‌ನಲ್ಲಿರುವ ಕಂಪನಿಯ ತಂತ್ರಜ್ಞಾನ ಮತ್ತು ಅಭಿವೃದ್ಧಿ ಕೇಂದ್ರದಲ್ಲಿ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಲಾಗಿದೆ.

ಭಾರತೀಯ ಗ್ರಾಹಕರ ನಿರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಈಗಾಗಲೇ ಹಲವು ಇವಿ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಿರುವ ಪ್ಯೂರ್ ಇವಿ ಕಂಪನಿಯು ಇದೀಗ ಅಸ್ತಿತ್ವದಲ್ಲಿರುವ 150 ಸಿಸಿ ಪ್ರೀಮಿಯಂ ಬೈಕ್ ಮಾದರಿಗಳಿಗೆ ಪೈಪೋಟಿಗಾಗಿ ಹೊಸ ಇವಿ ಬೈಕ್ ಬಿಡುಗಡೆಗೊಳಿಸಿದೆ.

ಎಥ್ರಿಸ್ಟ್ 350 ಇವಿ ಬೈಕ್ ಮಾದರಿಯು ದೇಶಾದ್ಯಂತ ಲಭ್ಯವಿರುವ 100ಕ್ಕೂ ಹೆಚ್ಚು ಡೀಲರ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಹೊಸ ಬೈಕಿನಲ್ಲಿ ಕಂಪನಿಯು ಎಲ್ಇಡಿ ಹೆಡ್‌ಲೈಟ್, ಎಲ್ಇಡಿ ಟೈಲ್‌ಲೈಟ್, ಡಿಆರ್‌ಎಲ್ ಮತ್ತು ಟರ್ನ್ ಸಿಗ್ನಲ್ ಸೌಲಭ್ಯಗಳಿವೆ.

ಇದರೊಂದಿಗೆ ಕಂಪನಿಯು ಹೊಸ ಎಲೆಕ್ಟ್ರಿಕ್ ಬೈಕ್‌ನಲ್ಲಿ 7-ಇಂಚಿನ ಎಲ್ಇಡಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಜೊತೆಗೆ ಸ್ಪೀಡೋಮೀಟರ್, ಓಡೋಮೀಟರ್ ಎರಡನ್ನೂ ಡಿಜಿಟಲ್ ಆಗಿ ಇರಿಸಿದೆ.

ಎಥ್ರಿಸ್ಟ್ 350 ಇವಿ ಬೈಕ್ ಮಾದರಿಯಲ್ಲಿ ಕಂಪನಿಯು 3.5 kWh ಬ್ಯಾಟರಿ ಪ್ಯಾಕ್ ಜೋಡಣೆ ಮಾಡಲಿದ್ದು, ಹೊಸ ಬ್ಯಾಟರಿ ಪ್ಯಾಕ್ ಅನ್ನು ಕಂಪನಿಯೇ ಅಭಿವೃದ್ಧಿಪಡಿಸಿದೆ. ಈ ಮೂಲಕ ಹೊಸ ಎಲೆಕ್ಟ್ರಿಕ್ ಬೈಕ್ ಪ್ರತಿ ಚಾರ್ಜ್‌ಗೆ ಗರಿಷ್ಠ 140 ಕಿ.ಮೀ ವ್ಯಾಪ್ತಿಯನ್ನು ನೀಡುತ್ತದೆ.

ಹಾಗೆಯೇ ಹೊಸ ಬೈಕ್ ಮಾದರಿಯು ಗಂಟೆಗೆ 85 ಕಿಮೀ ವೇಗವನ್ನು ಹೊಂದಿದ್ದು, 85 ಕಿಮೀ / ಗಂ ವೇಗದಲ್ಲಿಯೂ ಬ್ಯಾಟರಿ ಸ್ಥಿರವಾಗಿ ಉಳಿಯುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ ಎಂದು ಕಂಪನಿಯು ಹೇಳಿಕೊಂಡಿದೆ.

ಹೊಸ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಹಬ್-ಮೌಂಟೆಡ್ ಎಲೆಕ್ಟ್ರಿಕ್ ಮೋಟರ್ ಅನ್ನು ಬಳಸಲಾಗಿದ್ದು, ಈ ಮೋಟಾರ್‌ನೊಂದಿಗೆ ಹೊಸ ಬೈಕ್ ಮಾದರಿಯು 60 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಕೇವಲ 4.4 ಸೆಕೆಂಡುಗಳಲ್ಲಿ ಸೊನ್ನೆಯಿಂದ 40 ಕಿಮೀ ವೇಗ ಪಡೆದುಕೊಳ್ಳುತ್ತದೆ.

ಹಾಗೆಯೇ 7.4 ಸೆಕೆಂಡುಗಳಲ್ಲಿ ಸೊನ್ನೆಯಿಂದ 60 ಕಿಮೀ, 11.6 ಸೆಕೆಂಡುಗಳಲ್ಲಿ ಸೊನ್ನೆಯಿಂದ 85 ಕಿಮೀ ಟಾಪ್ ಸ್ಪೀಡ್ ಸಾಧಿಸಲಿದ್ದು, ಬ್ರೇಕಿಂಗ್ ಸೌಲಭ್ಯಕ್ಕಾಗಿ ಮುಂಭಾಗ ಮತ್ತು ಹಿಂಭಾಗದ ಚಕ್ರಗಳಲ್ಲಿ 220 ಎಂಎಂ ಡಿಸ್ಕ್ ಬ್ರೇಕ್‌ಗಳೊಂದಿಗೆ ಆಕರ್ಷಕ ಮಿಶ್ರಲೋಹದ ಚಕ್ರಗಳನ್ನು ಪಡೆದುಕೊಂಡಿದೆ.

ಎಥ್ರಿಸ್ಟ್ 350 ಮಾದರಿಯಲ್ಲಿ ಟ್ಯೂಬ್‌ಲೆಸ್ ಟೈರ್‌ಗಳನ್ನು ನೀಡಲಾಗಿದ್ದು, ಅದೇ ಸಮಯದಲ್ಲಿ ಸಸ್ಷೆಂಷನ್ ಸೌಲಭ್ಯಕ್ಕಾಗಿ ಮುಂಭಾಗ ಮತ್ತು ಹಿಂಭಾಗದಲ್ಲಿ ಹೈಡ್ರಾಲಿಕ್ ಡ್ಯುಯಲ್ ಸಸ್ಪೆಂಷನ್ ನೀಡಲಾಗಿದೆ.

ಹೊಸ ಇವಿ ಬೈಕ್ ಮಾದರಿಯು ಸಾಮಾನ್ಯ ಬೈಕ್‌ಗಳಿಂತೆ ಉತ್ತಮ ಆಸನ ಸೌಲಭ್ಯ ಹೊಂದಿದ್ದು, 2,040 ಎಂಎಂ ಉದ್ದ, 1375 ಎಂಎಂ ವೀಲ್ಹ್‌ಬೇಸ್, 180 ಎಂಎಂ ಗ್ರೌಂಡ್ ಕ್ಲಿಯರೆನ್ಸ್, 770 ಎಂಎಂ ಸೀಟ್ ಎತ್ತರ ಮತ್ತು 120 ಕೆಜಿ ತೂಕ ಪಡೆದುಕೊಂಡಿದೆ.

ಜೊತಗೆ ಕಂಪನಿಯು ಆಂತರಿಕವಾಗಿ ಅಭಿವೃದ್ಧಿಪಡಿಸಿದ ಬ್ಯಾಟರಿ ಪ್ಯಾಕ್‌ಗಾಗಿ ಅತ್ಯುತ್ತಮವಾದ 5 ವರ್ಷ ಅಥವಾ 50,000 ಕಿ.ಮೀ ವ್ಯಾಪ್ತಿಯ ವಾರಂಟಿಯನ್ನು ಸಹ ಒದಗಿಸಲಿದ್ದು, ಗರಿಷ್ಠ ವಾರಂಟಿಯು ಬ್ಯಾಟರಿ ಪ್ಯಾಕ್‌ನ ವಿಶ್ವಾಸವನ್ನು ತೋರಿಸುತ್ತದೆ.

ಇನ್ನು ಪ್ಯೂರ್ ಇವಿ ಕಂಪನಿಯು ಹೊಸ ಉತ್ಪನ್ನದೊಂದಿಗೆ ದೇಶಾದ್ಯಂತ ಪ್ರಮುಖ ನಗರಗಳು ಮತ್ತು ಪಟ್ಟಣಗಳಲ್ಲಿ ತನ್ನ ಮಾರಾಟ ಪ್ರಮಾಣವನ್ನು ವಿಸ್ತರಿಸಲಿದ್ದು, ಇದಲ್ಲದೆ ಕಂಪನಿಯು ಈಗಾಗಲೇ ತನ್ನ ಉತ್ಪನ್ನಗಳನ್ನು ದಕ್ಷಿಣ ಏಷ್ಯಾದ ದೇಶಗಳಿಗೆ ರಫ್ತು ಮಾಡುತ್ತಿದೆ.

ಮುಂಬರುವ ದಿನಗಳಲ್ಲಿ ಹೊಸ ಉತ್ಪನ್ನಗಳೊಂದಿಗೆ ಕಂಪನಿಯು ದಕ್ಷಿಣ ಅಮೆರಿಕಾ ಮತ್ತು ಆಫ್ರಿಕನ್ ಮಾರುಕಟ್ಟೆಗಳಿಗೆ ರಫ್ತು ಮಾಡಲು ಯೋಜಿಸುತ್ತಿದ್ದು, ಪ್ರಸ್ತುತ 150ಸಿಸಿ ಮೋಟಾರ್‌ಸೈಕಲ್‌ಗಳೊಂದಿಗೆ ಸ್ಪರ್ಧಾತ್ಮಕ ಕಾರ್ಯಕ್ಷಮತೆಯನ್ನು ಸಾಧಿಸಲು ಹೊಸ ಎಥ್ರಿಸ್ಟ್ 350 ಸಹಕಾರಿಯಾಗಲಿದೆ.