Just In
- 1 min ago
ರೈಲು ಚಾಲನೆಗೆ ಇಬ್ಬರು ಲೋಕೋ ಪೈಲಟ್ಗಳನ್ನು ಏಕೆ ನೇಮಿಸುತ್ತಾರೆ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ
- 1 hr ago
ಆಕರ್ಷಕದ ವಿನ್ಯಾಸದಲ್ಲಿ ಹ್ಯುಂಡೈ ಐಯಾನಿಕ್ ಎಲೆಕ್ಟ್ರಿಕ್ ಕಾರು ಅನಾವರಣ
- 1 hr ago
ಮಳೆಯಲ್ಲಿ ಬೈಕ್ ಚಾಲನೆ ಮಾಡುವ ಸವಾರರು ಸುರಕ್ಷಿತವಾಗಿರಲು ಈ ಟಿಪ್ಸ್ ಫಾಲೋ ಮಾಡಿ
- 2 hrs ago
ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆನ್ಯೂ ಎನ್-ಲೈನ್
Don't Miss!
- Movies
ಸುನೇತ್ರಾ ಪಂಡಿತ್: ಆಕ್ಸಿಡೆಂಟ್ ಬಳಿಕ ನಟನೆಗೆ ಮರಳಿದ ಸುನೇತ್ರಾ ಪಂಡಿತ್
- News
ಗ್ರಾಮೀಣ ರಸ್ತೆ ದುರಸ್ತಿ; ಎನ್ಎಚ್ಎಐ ಅಧಿಕಾರಿಗಳ ವಿರುದ್ಧ ಗೋಪಾಲಯ್ಯ ಗರಂ
- Finance
ಡಾಲರ್ ಎದುರು ಮತ್ತೆ ಸಾರ್ವಕಾಲಿತ ಕುಸಿತ ಕಂಡ ರೂಪಾಯಿ
- Sports
Ind vs Eng 5ನೇ ಟೆಸ್ಟ್: ತನ್ನ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಹನುಮ ವಿಹಾರಿ ಹೇಳಿದ್ದೇನು?
- Technology
ಅಮೆಜಾನ್ ಫ್ಯಾಬ್ ಫೋನ್ಸ್ ಫೆಸ್ಟ್ ಸೇಲ್ನಲ್ಲಿ ಈ ಫೋನ್ಗಳಿಗೆ ಬಿಗ್ ಆಫರ್!
- Lifestyle
ಫಸ್ಟ್ ಟೈಮ್ ಪ್ರೆಗ್ನೆನ್ಸಿ?ನೀವು ತಿಳಿಯಲೇಬೇಕಾದ ಸಂಗತಿಗಳಿವು
- Education
Kolar District Court Recruitment 2022 : 32 ಜವಾನ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ದೇವಿ ಮೂಕಾಂಬಿಕೆಯ ದೈವಿಕ ಸನ್ನಿಧಿಯ ಸ್ಥಳ - ಕೊಲ್ಲೂರು
ಫೆಬ್ರವರಿ ತಿಂಗಳ ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್ 650 ಟ್ವಿನ್ ಬೈಕ್‌ಗಳು
ಭಾರತೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದೆ. ಈ ರಾಯಲ್ ಎನ್‌ಫೀಲ್ಡ್ ಕಂಪನಿಯ ಇಂಟರ್‌ಸೆಪ್ಟರ್ 650 (Interceptor 650) ಮತ್ತು ಕಾಂಟಿನೆಂಟಲ್ ಜಿಟಿ650 (Continental GT 650) ಬೈಕ್‌ಗಳು ಬಾರತೀಯ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ.

ಕಳೆದ ತಿಂಗಳು ರಾಯಲ್ ಎನ್ಫೀಲ್ಡ್ ಇಂಟರ್ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಮಾದರಿಗಳ 2,469 ಯುನಿಟ್‌ಗಳು ಮಾರಾಟವಾಗಿವೆ. 2021ರ ಫೆಬ್ರವರಿ ತಿಂಗಳಲ್ಲಿ ಟ್ವಿನ್ ಬೈಕ್‌ಗಳ 284 ಯೂನಿಟ್‌ಗಳು ಮಾರಾಟವಾಗಿತ್ತು, ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.769.37 ರಷ್ಟು ಮಾರಾಟದ ಬೆಳವಣಿಗೆಯನ್ನು ಸಾಧಿಸಿದೆ. ಇನ್ನು 2022ರ ಜನವರಿ ತಿಂಗಳಿನಲ್ಲಿ ಈ ಎರಡು ಮೋಟಾರ್‌ಸೈಕಲ್‌ಗಳ 1,238 ಯೂನಿಟ್‌ಗಳನ್ನು ಭಾರತದಲ್ಲಿ ಮಾರಾಟ ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ 99.43 ಪ್ರತಿಶತದಷ್ಟು ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ.

ಭಾರತದಲ್ಲಿ ಇತ್ತೀಚಿಗೆ ರಾಯಲ್ ಎನ್‌ಫೀಲ್ಡ್ ಪ್ರತಿಸ್ಪರ್ಧಿಗಳಾದಯೆ ಯಜ್ಡಿ ಬೈಕ್‌ಗಳು ಬಿಡುಗಡೆಯಾಗಿವೆ. ಇದರಿಂದ ರಾಯಲ್ ಎನ್‌ಫೀಲ್ಡ್ ಮಾರಾಟದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ರಾಯಲ್ ಎನ್ಫೀಲ್ಡ್ ಕಂಪನಿಯು ಈ 650 ಟ್ವಿನ್ ಬೈಕ್‌ಗಳನ್ನು ಭಾರತದಲ್ಲಿ ಮೊದಲು ಬಿಡುಗಡೆಗೊಳಿಸಲಾಯಿತು.

ಕಳೆದ ವರ್ಷದ ಮಾರ್ಚ್ ತಿಂಗಳಿನಲ್ಲಿ 2021ರ ಮಾದರಿಯಾಗಿ ಹೊಸ ನವೀಕರಣಗಳೊಂದಿಗೆ ಬಿಡುಗಡೆಗೊಳಿಸಿತ್ತು. 2021ರ ರಾಯಲ್ ಎನ್ಫೀಲ್ಡ್ ಇಂಟರ್ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಬೈಕ್‌ಗಳು ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡಿತ್ತು.

ಈ ರಾಯಲ್ ಎನ್ಫೀಲ್ಡ್ ಇಂಟರ್ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಬೈಕ್‌ಗಳಲ್ಲಿ ಹಿಂದಿನ ಮಾದರಿಗಳಲ್ಲಿ ಇದ್ದ ಅದೇ, 649ಸಿಸಿ ಪ್ಯಾರಲಲ್ ಟ್ವಿನ್ ಸಿಲಿಂಡರ್ ಎಂಜಿನ್ ಅನ್ನು ಹೊಂದಿದ್ದು, ಈ ಎಂಜಿನ್ 7,250 ಆರ್‌ಪಿಎಂನಲ್ಲಿ 47 ಬಿಹೆಚ್‌ಪಿ ಪವರ್ ಮತ್ತು 5,250 ಆರ್‌ಪಿಎಂನಲ್ಲಿ 52 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಈ ರಾಯಲ್ ಎನ್‌ಫೀಲ್ಡ್ ಎರಡು ಟ್ವಿನ್ ಬೈಕ್‌ಗಳ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 41 ಎಂಎಂ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಟ್ವಿನ್-ಗ್ಯಾಸ್ ಚಾರ್ಜ್ಡ್ ಶಾಕ್ ಗಳು 5-ಹಂತದ ಹೊಂದಾಣಿಕೆಯೊಂದಿಗೆ ಪ್ರಿ-ಲೋಡ್ ಡ್ಯಾಂಪಿಂಗ್‌ಗಾಗಿ ನಿರ್ವಹಿಸುತ್ತವೆ.

ಈ ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಬೈಕ್‌ಗಳ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 320 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಹೆಚ್ಚಿನ ಸುರಕ್ಷತೆಗಾಗಿ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.

ಈ ಬೈಕ್‌ಗಳಲ್ಲಿ 18 ಇಂಚಿನ ಸ್ಪೋಕ್ಡ್ ವ್ಹೀಲ್ ಗಳನ್ನು ಹೊಂದಿವೆ. ಎರಡು ಬೈಕ್‌ಗಳ ವಿನ್ಯಾಸವು ಬದಲಾಗದೆ ಉಳಿದಿದೆ. ಇದು ಒಂದೇ ಮಾದರಿಯ ಹೆಡ್‌ಲ್ಯಾಂಪ್‌ಗಳು, ಟೈಲ್‌ಲ್ಯಾಂಪ್‌ಗಳು, ಟ್ವಿನ್ ಎಕ್ಸಾಸ್ಟ್ ಸೆಟಪ್, ಸಿಂಗಲ್-ಪೀಸ್ ಫ್ಲಾಟ್ ಸೀಟ್ ಮತ್ತು ಹೆಚ್ಚಿನದನ್ನು ಕೂಡ ಒಳಗೊಂಡಿದೆ.

ಈ ಹೊಸ ಇಂಟರ್‍ಸೆಪ್ಟರ್ 650 ಬೈಕ್ ಉತ್ತಮ ಸೀಟಿಂಗ್ ಪೊಷಿಷನ್ ಅನ್ನು ಹೊಂದಿದೆ. ಇನ್ನು ಕಾಂಟಿನೆಂಟಲ್ ಜಿಟಿ 650 ಅದರ ಉದ್ದವಾದ ಟ್ಯಾಂಕ್ ವಿನ್ಯಾಸ ಮತ್ತು ಕ್ಲಿಪ್-ಆನ್ ಹ್ಯಾಂಡಲ್‌ಬಾರ್‌ಗಳೊಂದಿಗೆ ಹೆಚ್ಚು ಅಗ್ರೇಸಿವ್ ಲುಕ್ ನಿಂದ ಕೂಡಿದೆ.ಇನ್ನು ರಾಯಲ್ ಎನ್ಫೀಲ್ಡ್ ಇಂಟರ್ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಬೈಕ್‌ಗಳಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಅನ್ನು ನೀಡಲಾಗಿಲ್ಲ. ಆದರೆ ಕಸ್ಟಮೈಸ್ ಮಾಡಲು ಒಂದು ಆಯ್ಕೆಯನ್ನು ಸಹ ಕಂಪನಿಯು ಒದಗಿಸಿದೆ.

ರಾಯಲ್ ಎನ್ಫೀಲ್ಡ್ ಕಂಪನಿಯು 2022ರ ಫೆಬ್ರವರಿ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ತಿಂಗಳು ರಾಯಲ್ ಎನ್ಫೀಲ್ಡ್ ಕಂಪನಿಯು 59,160 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಕಳೆದ ವರ್ಷದ ಫೆಬ್ರವರಿ ತಿಂಗಳಿನಲ್ಲಿ ರಾಯಲ್ ಎನ್ಫೀಲ್ಡ್ ಕಂಪನಿಯು 69,659 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇಕಡಾ 15 ರಷ್ಟು ಕುಸಿತವನ್ನು ದಾಖಲಿಸಿದೆ.ಕಂಪನಿಯ ಪ್ರಕಾರ, ಸೆಮಿಕಂಡಕ್ಟರ್ ಚಿಪ್‌ಗಳ ಕೊರತೆಯಿಂದಾಗಿ ಪೂರೈಕೆ ಸರಪಳಿಯ ನಿರ್ಬಂಧಗಳು ತಿಂಗಳ ಅವಧಿಯಲ್ಲಿ ಮುಂದುವರಿದವು ಮತ್ತು ರಾಯಲ್ ಎನ್‌ಫೀಲ್ಡ್ ಅದನ್ನು ಪರಿಹರಿಸಲು ತನ್ನ ಪೂರೈಕೆದಾರ ಪರಿಸರ ವ್ಯವಸ್ಥೆಯೊಂದಿಗೆ ಕೆಲಸ ಮಾಡುತ್ತಿದೆ.

2022ರ ಫೆಬ್ರವರಿ ತಿಂಗಳಿನಲ್ಲಿ 7,025 ಯೂನಿಟ್‌ಗಳ ರಫ್ತುಗಳೊಂದಿಗೆ, ರಫ್ತುಗಳಲ್ಲಿ ಕಂಪನಿಯು ಶೇಕಡಾ 55 ರಷ್ಟು ಬೆಳವಣಿಗೆಯನ್ನ ಸಾಧಿಸಿ ರಾಯಲ್ ಎನ್‌ಫೀಲ್ಡ್‌ನ ಅಂತರರಾಷ್ಟ್ರೀಯ ಮಾರಾಟದಲ್ಲಿ ಉತ್ತಮ ಪ್ರಗತಿಯನ್ನು ಮುಂದುವರೆಸಿದೆ. ಕಳೆದ ತಿಂಗಳು ರಾಯಲ್ ಎನ್ಫೀಲ್ಡ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ 53,135 ಯುನಿಟ್‌ಗಳನ್ನು ಮಾರಾಟಗೊಳಿಸಿದೆ. ಕಳೆದ ವರ್ಷದ ಫೆಬ್ರವರಿ ತಿಂಗಳಿನಲ್ಲಿ 65,114 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ದೇಶೀಯ ಮಾರುಕಟ್ಟೆಯ ಮಾರಾಟವು ವರ್ಷದಿಂದ ವರ್ಷಕ್ಕೆ ಶೇ.20 ರಷ್ಟು ಕುಸಿತವನ್ನು ಕಂಡಿದೆ.

ಇನ್ನು ರಾಯಲ್ ಎನ್ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಬೈಕ್‌ಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ಬೈಕ್‌ಗಳೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ವಿವಿಧ ವಿಭಾಗಗಳಲ್ಲಿ ರಾಯಲ್ ಎನ್‌ಫೀಲ್ಡ್ ಬ್ರ್ಯಾಂಡ್‌ನ ಉಪಸ್ಥಿತಿಯನ್ನು ಬಲಪಡಿಸಲು ನೆರವಾಗುತ್ತದೆ,