ದಾಖಲೆ ಮಟ್ಟದ ಮಾರಾಟ ಕಂಡ ಹುಡುಗರ ಹಾಟ್ ಫೇವರೇಟ್ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್

ರಾಯಲ್ ಎನ್‌ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ಬೈಕ್ ಗಳು ಉತ್ತಮವಾಗಿ ಮಾರಾಟವಾಗುತ್ತಿದೆ. ಕಳೆದ ತಿಂಗಳು ಕೂಡ ಉತ್ತಮವಾಗಿ ಮಾರಾಟವಾಗುತ್ತಿದೆ.

ದಾಖಲೆ ಮಟ್ಟದ ಮಾರಾಟ ಕಂಡ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್

ಚೆನ್ನೈ ಮೂಲದ ಬೈಕ್ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ಕಳೆದ ತಿಂಗಳು ಭಾರತದಲ್ಲಿ ಕ್ಲಾಸಿಕ್ 350 ಮಾದರಿಯ 27,571 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಇನ್ನು ಕಳೆದ ವರ್ಷದ ಸೆಪ್ಟೆಂಬರ್‌ ತಿಂಗಳಿನಲ್ಲಿ ಕಂಪನಿಯು ಕೇವಲ 13,751 ಯೂನಿಟ್ ಬೈಕ್‌ಗಳನ್ನು ಮಾರಾಟ ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ವರ್ಷದಿಂದ ವರ್ಷದ ಮಾರಾಟದಲ್ಲಿ ಭಾರೀ ಬೆಳವಣಿಗೆಯನ್ನು ಸಾಧಿಸಿದೆ. ಇನ್ನು ಈ ತಿಂಗಳು ಹಬ್ಬದ ಸೀಸನ್ ಆಗಿರುವುದರಿಂದ ಹೆಚ್ಚಿನ ಮಾರಾಟವನ್ನು ಸಾಧಿಸಬಹುದು.

ದಾಖಲೆ ಮಟ್ಟದ ಮಾರಾಟ ಕಂಡ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್

ಈ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಉತ್ಪಾದನೆಯು 1 ಲಕ್ಷ ಮೈಲಿಗಲ್ಲನ್ನು ದಾಟಿದೆ. ಈ ಹೊಸ ಬೈಕ್ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿಯು ಮಾರಾಟವಾಗುತ್ತಿದೆ. ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಯುರೋಪ್, ದಕ್ಷಿಣ ಏಷ್ಯಾ, ದಕ್ಷಿಣ ಅಮೇರಿಕಾ, ಆಸ್ಟ್ರೇಲಿಯಾ, ಇತ್ಯಾದಿ ದೇಶಗಳಲ್ಲಿ ಮಾರಾಟವಾಗುತ್ತಿದೆ.

ದಾಖಲೆ ಮಟ್ಟದ ಮಾರಾಟ ಕಂಡ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್

ರಾಯಲ್ ಎನ್‌ಫೀಲ್ಡ್ ಈ ಮೈಲಿಗಲ್ಲನ್ನು ಬಹಳ ಹಿಂದೆಯೇ ಸಾಧಿಸುತ್ತಿತ್ತು, ಆದರೆ ಬಿಡಿ ಭಾಗಗಳ ಜಾಗತಿಕ ಕೊರತೆಯಿಂದ ತಡವಾಗಿದೆ. ಈ ಹೊಸ ಕ್ಲಾಸಿಕ್ 350 ಬೈಕಿಗೆ ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಹೊಂದಿದೆ. ಇದರ ಪರಿಣಾಮವಾಗಿ ಕಾಯುವ ಅವಧಿಯು ಹೆಚ್ಚಾಯ್ತು.

ದಾಖಲೆ ಮಟ್ಟದ ಮಾರಾಟ ಕಂಡ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್

ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಮಾದರಿಯು ರೆಡ್‌ಡಿಚ್, ಹಾಲ್ಕೈನ್, ಸಿಗ್ನಲ್ಸ್, ಡಾರ್ಕ್ ಮತ್ತು ಕ್ರೋಮ್ ಎಂಬ ಐದು ವೆರಿಯೆಂಟ್ ಗಳಲ್ಲಿ ಲಭ್ಯವಿದೆ, ಈ ಹೊಸ ಬೈಕ್ J1A ಪ್ಲಾಟ್‌ಫಾರ್ಮ್ ಅಡಿಯಲ್ಲಿ ತಯಾರಿಸಲಾಗಿದೆ.

ದಾಖಲೆ ಮಟ್ಟದ ಮಾರಾಟ ಕಂಡ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್

ಇನ್ನು ಈ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಕ್ರೋಮ್ ರೆಡ್, ಕ್ರೋಮ್ ಬ್ರೊಂಜ್, ಡಾರ್ಕ್ ಸ್ಟೆಲ್ತ್ ಬ್ಲ್ಯಾಕ್, ಡಾರ್ಕ್ ಗನ್‌ಮೆಟಲ್ ಗ್ರೇ, ಸಿಗ್ನಲ್ಸ್ ಮಾರ್ಷ್ ಗ್ರೇ, ಸಿಗ್ನಲ್ಸ್ ಸ್ಯಾಂಡ್ ಸ್ಟಾರ್ಮ, ಹಾಲ್ಸಿಯಾನ್ ಗ್ರೀನ್, ಹಾಲ್ಸಿಯಾನ್ ಬ್ಲ್ಯಾಕ್, ಹಾಲ್ಸಿಯಾನ್ ಗ್ರೇ, ರೆಡ್‌ಡಿಚ್ ಗ್ರೀನ್ ಮತ್ತು ರೆಡ್‌ಡಿಚ್ ಗ್ರೇ ಎಂಬ ಬಣ್ಣಗಳನ್ನು ಹೊಂದಿದೆ.

ದಾಖಲೆ ಮಟ್ಟದ ಮಾರಾಟ ಕಂಡ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್

ಈ ಬೈಕ್ ಮಾದರಿಯು ಮಿಟಿಯೊರ್ 350 ಮಾದರಿಯಿಂದಲೂ ಕೆಲವು ತಾಂತ್ರಿಕ ಅಂಶಗಳನ್ನು ಎರವಲು ಪಡೆದುಕೊಳ್ಳಲಾಗಿದೆ. 2021ರ ಕ್ಲಾಸಿಕ್ 350 ಬೈಕ್ ಮಾದರಿಯಲ್ಲಿ ಸಸ್ಷೆಂಷನ್ ಸೆಟಪ್ ಮತ್ತು ಬ್ರೇಕಿಂಗ್ ಸಿಸ್ಟಂ ಅನ್ನು ಸಂಪೂರ್ಣವಾಗಿ ಬದಲಾವಣೆಗೊಳಿಸಿದೆ, ಈ ಹೊಸ ಬೈಕಿನಲ್ಲಿ ಫ್ಯೂಲ್ ಗೇಜ್ ಮತ್ತು ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಪ್ರಮುಖ ಆಕರ್ಷಣೆಯಾಗಿದೆ.

ದಾಖಲೆ ಮಟ್ಟದ ಮಾರಾಟ ಕಂಡ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್

ಈ ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಕ್ಲಾಸಿಕ್ 350 ಬೈಕ್ ಮಾದರಿಯಲ್ಲಿ ಮಿಟಿಯೊರ್ 350 ಮಾದರಿಗಾಗಿ ಪರಿಚಯಿಸಿರುವ 349 ಸಿಸಿ SOHC ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 19.1 ಬಿಎಚ್‌ಪಿ ಪವರ್ ಮತ್ತು 28 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ,

ದಾಖಲೆ ಮಟ್ಟದ ಮಾರಾಟ ಕಂಡ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್

ಇನ್ನು ಈ ಹಿಂದಿನ ಮಾದರಿಗಳಲ್ಲಿ ಇದ್ದ ವೈಬ್ರೆಷನ್ ಪ್ರಮಾಣವು ಗಣನೀಯವಾಗಿ ಸುಧಾರಣೆಯಾಗಿದೆ. ಜೊತೆಗೆ ಎಲೆಕ್ಟ್ರಾನಿಕ್ಸ್ ಸೌಲಭ್ಯಗಳು ಬೈಕ್ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸಲಿದ್ದು, ಹೊಸ ಮಾದರಿಯ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಇದರ ಜೊತೆಗೆ ಎಲ್‌ಸಿಡಿ ಜೊತೆಗೆ ಪ್ರತ್ಯೇಕವಾದ ಫ್ಯೂಲ್ ಗೇಜ್ ಮತ್ತು ಟ್ರಿಪ್ಲರ್ ಮೀಟರ್ ನೀಡಲಾಗಿದ್ದು, ಮಿಟಿಯೊರ್ ಮಾದರಿಯಲ್ಲಿರುವಂತೆ ಪ್ರತ್ಯೇಕವಾದ ಟ್ವಿನ್ ಪಾಡ್ ನೀಡದೆ ಇಂಟ್ರಾಗ್ರೆಟೆಡ್ ಮಾಡಲಾಗಿದೆ.

ದಾಖಲೆ ಮಟ್ಟದ ಮಾರಾಟ ಕಂಡ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್

ಟಾಪ್ ಎಂಡ್ ಮಾದರಿಗಳಿಗಾಗಿ ಮಾತ್ರವೇ ಕಂಪನಿಯು ಟ್ರಿಪ್ಪರ್ ಮೀಟರ್ ಅನ್ನು ಜೋಡಣೆ ಮಾಡಿದ್ದು, ಈ ಸ್ಮಾರ್ಟ್ ಫೋನ್ ಕನೆಕ್ಟಿವಿಟಿ ಮೂಲಕ ಟರ್ನ್ ಬೈ ಟರ್ನ್ ನ್ಯಾವಿಗೇಷನ್ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಆದರೆ ಹೊಸ ಬೈಕಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು ಎಲ್ಇಡಿ ಹೆಡ್‌ಲ್ಯಾಂಪ್‌ಗಳ ಬದಲಾಗಿ ಹಾಲೊಜೆನ್ ಬಲ್ಬ್ ಬಳಕೆ ಮಾಡಿದೆ.

ದಾಖಲೆ ಮಟ್ಟದ ಮಾರಾಟ ಕಂಡ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್

ಇದರ ಹೆಡ್‌ಲ್ಯಾಂಪ್ ಮಾತ್ರವಲ್ಲ ಟೈಲ್ ಲ್ಯಾಂಪ್, ಟರ್ನ್ ಇಂಡಿಕೇಟರ್ ಹಾಲೊಜೆನ್ ಬಲ್ಬ್ ಸಹ ನೀಡಿದೆ, ಕಂಪನಿಯು ಹೊಸ ಬೈಕ್ ಮಾದರಿಯನ್ನು ಸಿಂಗಲ್ ಕ್ರೆಡಲ್ ಫ್ರೆಮ್ ಬದಲಾಗಿ ಡ್ಯುಯಲ್ ಡೌನ್ ಟ್ಯೂಬ್ ಚಾರ್ಸಿ‌ಯೊಂದಿಗೆ ಅಭಿವೃದ್ದಿಗೊಳಿಸಿದೆ. ಡಬಲ್ ಕ್ರೆಡ್ ಚಾರ್ಸಿಸ್ ಬದಲಾವಣೆಯಿಂದಾಗಿ ಬೈಕ್ ರೈಡಿಂಗ್ ದೂರದ ಪ್ರಯಾಣದಲ್ಲೂ ಉತ್ತಮ ಅನುಭವವನ್ನು ನೀಡುತ್ತದೆ.

ದಾಖಲೆ ಮಟ್ಟದ ಮಾರಾಟ ಕಂಡ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್

ಈ ಕ್ಲಾಸಿಕ್ 350 ಬೈಕ್ ಸಸ್ಪೆಂಕ್ಷನ್ 41 ಎಂಎಂ ಟೆಲಿಸ್ಕೊಪಿಕ್ ಫೋರ್ಕ್‌ನೊಂದಿಗೆ 170 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ. ಇನ್ನು ಇದರ , ಈ ಬ್ರೇಕಿಂಗ್ ಕೂಡ ಸಾಕಷ್ಟು ಸುಧಾರಿಸಿದೆ. ಇದು ಎರಡೂ ಕಡೆಗಳಲ್ಲಿ ಡಿಸ್ಕ್ ಬ್ರೇಕ್ ಅನ್ನು ನೀಡಲಾಗಿದೆ, ಇದರೊಂದಿಗೆ ಎಬಿಎಸ್‌ನೊಂದಿಗೆ ಸ್ಟ್ಯಾಂಡರ್ಡ್ ಆಗಿ ಹೊಂದಿದೆ. ಖರೀದಿದಾರರು ಆಯ್ಕೆ ಮಾಡಿದ ರೂಪಾಂತರವನ್ನು ಅವಲಂಬಿಸಿ ಸಿಂಗಲ್-ಚಾನೆಲ್ ಅಥವಾ ಡ್ಯುಯಲ್-ಚಾನೆಲ್ ಎಬಿಎಸ್ ಪಡೆಯುತ್ತಾರೆ

ದಾಖಲೆ ಮಟ್ಟದ ಮಾರಾಟ ಕಂಡ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್

ಒಟ್ಟಾರೆಯಾಗಿ, ಈ ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350ಹಳೆಯ ಮಾದರಿಗಿಂತ ದೊಡ್ಡ ಸುಧಾರಣೆಯಾಗಿದೆ.ಈ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಹೈನೆಸ್ ಸಿಬಿ350 ಮತ್ತು ಜಾವಾ ಬೈಕ್ ಗಳಿಗೆ ಪೈಪೋಟಿ ನೀಡುತ್ತಿದೆ.

Article Published On: Thursday, October 20, 2022, 20:05 [IST]
English summary
Royal enfield classic 350 sales growth in september 2022 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+