ಫೆಬ್ರವರಿ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.15 ರಷ್ಟು ಕುಸಿತ ಕಂಡ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು 2022ರ ಫೆಬ್ರವರಿ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ ಕಂಪನಿಯು 59,160 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

ಫೆಬ್ರವರಿ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.15 ರಷ್ಟು ಕುಸಿತ ಕಂಡ ರಾಯಲ್ ಎನ್‌ಫೀಲ್ಡ್

ಕಳೆದ ವರ್ಷದ ಫೆಬ್ರವರಿ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 69,659 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇಕಡಾ 15 ರಷ್ಟು ಕುಸಿತವನ್ನು ದಾಖಲಿಸಿದೆ.ಕಂಪನಿಯ ಪ್ರಕಾರ, ಸೆಮಿಕಂಡಕ್ಟರ್ ಚಿಪ್‌ಗಳ ಕೊರತೆಯಿಂದಾಗಿ ಪೂರೈಕೆ ಸರಪಳಿಯ ನಿರ್ಬಂಧಗಳು ತಿಂಗಳ ಅವಧಿಯಲ್ಲಿ ಮುಂದುವರಿದವು ಮತ್ತು ರಾಯಲ್ ಎನ್‌ಫೀಲ್ಡ್ ಅದನ್ನು ಪರಿಹರಿಸಲು ತನ್ನ ಪೂರೈಕೆದಾರ ಪರಿಸರ ವ್ಯವಸ್ಥೆಯೊಂದಿಗೆ ಕೆಲಸ ಮಾಡುತ್ತಿದೆ.

ಫೆಬ್ರವರಿ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.15 ರಷ್ಟು ಕುಸಿತ ಕಂಡ ರಾಯಲ್ ಎನ್‌ಫೀಲ್ಡ್

2022ರ ಫೆಬ್ರವರಿ ತಿಂಗಳಿನಲ್ಲಿ 7,025 ಯೂನಿಟ್‌ಗಳ ರಫ್ತುಗಳೊಂದಿಗೆ, ರಫ್ತುಗಳಲ್ಲಿ ಕಂಪನಿಯು ಶೇಕಡಾ 55 ರಷ್ಟು ಬೆಳವಣಿಗೆಯನ್ನ ಸಾಧಿಸಿ ರಾಯಲ್ ಎನ್‌ಫೀಲ್ಡ್‌ನ ಅಂತರರಾಷ್ಟ್ರೀಯ ಮಾರಾಟದಲ್ಲಿ ಉತ್ತಮ ಪ್ರಗತಿಯನ್ನು ಮುಂದುವರೆಸಿದೆ.

ಫೆಬ್ರವರಿ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.15 ರಷ್ಟು ಕುಸಿತ ಕಂಡ ರಾಯಲ್ ಎನ್‌ಫೀಲ್ಡ್

ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ 53,135 ಯುನಿಟ್‌ಗಳನ್ನು ಮಾರಾಟಗೊಳಿಸಿದೆ. ಕಳೆದ ವರ್ಷದ ಫೆಬ್ರವರಿ ತಿಂಗಳಿನಲ್ಲಿ 65,114 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ದೇಶೀಯ ಮಾರುಕಟ್ಟೆಯ ಮಾರಾಟವು ವರ್ಷದಿಂದ ವರ್ಷಕ್ಕೆ ಶೇ.20 ರಷ್ಟು ಕುಸಿತವನ್ನು ಕಂಡಿದೆ.

ಫೆಬ್ರವರಿ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.15 ರಷ್ಟು ಕುಸಿತ ಕಂಡ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ತನ್ನ ಮಾದರಿಗಳ ಸರಣಿಯನ್ನು ಹೊಸ ಭೌಗೋಳಿಕ ಪ್ರದೇಶಗಳಿಗೆ ವಿಸ್ತರಿಸುವುದರಿಂದ ಸಾಗರೋತ್ತರ ಮಾರುಕಟ್ಟೆಗಳು ಕೇಂದ್ರೀಕೃತ ಪ್ರದೇಶವಾಗಿ ಉಳಿದಿವೆ. 2021 ರಲ್ಲಿ ಭಾರತ ಮತ್ತು ಥೈಲ್ಯಾಂಡ್‌ನಲ್ಲಿ ಬಿಡುಗಡೆಯಾದ ನಂತರ ಹೊಸ ಕ್ಲಾಸಿಕ್ 350 ಅನ್ನು ಫಿಲಿಪೈನ್ಸ್, ಕೊರಿಯಾ, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಮತ್ತು ಯುಕೆಯಲ್ಲಿ ಬಿಡುಗಡೆ ಮಾಡಲಾಗಿದೆ.

ಫೆಬ್ರವರಿ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.15 ರಷ್ಟು ಕುಸಿತ ಕಂಡ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ನಗರ-ಕೇಂದ್ರಿತ ಆವೃತ್ತಿಯಾದ ಹೊಸ ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 411 ಅನ್ನು ಬಿಡುಗಡೆ ಮಾಡಲು ಸಹ ಸಿದ್ಧವಾಗುತ್ತಿದೆ. ಮಾರ್ಚ್ 2022 ರಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿರುವ ರಾಯಲ್ ಎನ್‌ಫೀಲ್ಡ್ ಹಿಮಾಲಯನ್, ಮುಂದಿನ ತಿಂಗಳುಗಳಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಲಿದೆ.

ಫೆಬ್ರವರಿ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.15 ರಷ್ಟು ಕುಸಿತ ಕಂಡ ರಾಯಲ್ ಎನ್‌ಫೀಲ್ಡ್

2021 ರಲ್ಲಿ ಭಾರತ ಮತ್ತು ಥೈಲ್ಯಾಂಡ್‌ನಲ್ಲಿ ಬಿಡುಗಡೆಯಾದ ನಂತರ. ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಭರ್ಜರಿ ಬೇಡಿಕೆಯನ್ನು ಪಡೆಯುತ್ತಿದೆ. ಇನ್ನು ರಾಯಲ್ ಎನ್‌ಫೀಲ್ಡ್ (Royal Enfield) ಬೈಕ್‌ಗಳನ್ನು ಖರೀದಿಸಲು ಬಯಸುವ ಗ್ರಾಹಕರಿಗೆ ದ್ವಿಚಕ್ರ ವಾಹನ ಸಾಲವನ್ನು ನೀಡಲು L&T ಫೈನಾನ್ಸ್‌ನೊಂದಿಗೆ ಕೈಜೋಡಿಸಿದೆ.

ಫೆಬ್ರವರಿ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.15 ರಷ್ಟು ಕುಸಿತ ಕಂಡ ರಾಯಲ್ ಎನ್‌ಫೀಲ್ಡ್

"ವೆಲ್‌ಕಮ್ 2022" ಎಂಬ ಯೋಜನೆಯ ಅಡಿಯಲ್ಲಿ ಆಕರ್ಷಕ ಬಡ್ಡಿ ದರಗಳಲ್ಲಿ (ಶೇ. 7.99 ರಿಂದ) ಮೂರು ನಿಮಿಷಗಳಲ್ಲಿ ತೊಂದರೆ-ಮುಕ್ತ, ತ್ವರಿತ ಸಾಲದ ಅನುಮೋದನೆಗಳನ್ನು ನೀಡುತ್ತದೆ. ಈ ಯೋಜನೆಯು 4 ವರ್ಷಗಳ ಮರುಪಾವತಿಯ ಮೇಲೆ ರಾಯಲ್ ಎನ್‌ಫೀಲ್ಡ್ ಬೈಕಿನ ಒಟ್ಟು ವೆಚ್ಚದ ಶೇಕಡಾ 90 ರಷ್ಟು ಹಣವನ್ನು ನೀಡುತ್ತದೆ, ಇದು ಗ್ರಾಹಕರಿಗೆ ಹೆಚ್ಚುವರಿ ಪ್ರಯೋಜನವಾಗಿ ಕಾರ್ಯನಿರ್ವಹಿಸುತ್ತದೆ ಎಂಬುದು ಕೂಡ ಗಮನಾರ್ಹ ಅಂಶವಾಗಿದೆ.

ಫೆಬ್ರವರಿ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.15 ರಷ್ಟು ಕುಸಿತ ಕಂಡ ರಾಯಲ್ ಎನ್‌ಫೀಲ್ಡ್

ಈ ಯೋಜನೆಯನ್ನು ಪಡೆದುಕೊಳ್ಳಲು, ಗ್ರಾಹಕರು ತಮ್ಮ ರಾಯಲ್ ಎನ್‌ಫೀಲ್ಡ್ ಡೀಲರ್‌ಶಿಪ್ ಅಥವಾ L&T ಫೈನಾನ್ಸ್ ಶಾಖೆಗೆ ಭೇಟಿ ನೀಡಬಹುದು. ಅಲ್ಲದೇ ಆನ್ ಲೈನ್ ಮೂಲಕ L&T Finance ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ಫೆಬ್ರವರಿ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.15 ರಷ್ಟು ಕುಸಿತ ಕಂಡ ರಾಯಲ್ ಎನ್‌ಫೀಲ್ಡ್

ಇನ್ನು ರಾಯಲ್ ಎನ್‌ಫೀಲ್ಡ್‌ನ ಮಾದರಿ ಶ್ರೇಣಿಯು ಎಲ್ಲಾ-ಹೊಸ ಕ್ಲಾಸಿಕ್ 350, ಮಿಟಿಯೊರ್ 350, ಇಂಟರ್‌ಸೆಪ್ಟರ್ 650, ಕಾಂಟಿನೆಂಟಲ್ GT 650, ಹಿಮಾಲಯನ್ ಮತ್ತು ಬುಲೆಟ್ 350 ಅನ್ನು ಒಳಗೊಂಡಿದೆ. L&T ಫೈನಾನ್ಸ್ ಜೊತೆಗಿನ ಸಂಬಂಧವನ್ನು ರಾಯಲ್ ಎನ್‌ಫೀಲ್ಡ್ ಮೋಟಾರ್‌ಸೈಕಲ್ ಲೈನ್-ಅಪ್‌ನಾದ್ಯಂತ ನೀಡಲಾಗುವುದು.

ಫೆಬ್ರವರಿ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.15 ರಷ್ಟು ಕುಸಿತ ಕಂಡ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ. ಈ ವರ್ಷ ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಬೈಕ್‌ಗಳನ್ನು ಬಿಡುಗಡೆಗೊಳಿಸಲಿದೆ. ಭಾರತದಲ್ಲಿ ರಾಯಲ್ ಎನ್‌ಫೀಲ್ಡ್ ಬೈಕ್‌ಗಳಿಗೆ ದೊಡ್ಡ ಅಭಿಮಾನಿ ವರ್ಗವಿದೆ. ಈ ರಾಯಲ್ ಎನ್‌ಫೀಲ್ಡ್ ಕಂಪನಿಯು 350ಸಿಸಿಯಿಂದ 650ಸಿಸಿ ವರೆಗಿನ ಬೈಕ್‌ಗಳನ್ನು ಬಿಡುಗಡೆಗೊಳಿಸಲಿವೆ. ಶೀಘ್ರದಲ್ಲೇ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು ಬಿಡುಗಡೆಯಗಲಿವೆ.

ಫೆಬ್ರವರಿ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಶೇ.15 ರಷ್ಟು ಕುಸಿತ ಕಂಡ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಇತ್ತೀಚೆಗೆ ಸ್ಕ್ರ್ಯಾಮ್, ಶಾಟ್‌ಗನ್, ಹಂಟರ್, ಫ್ಲೈಯಿಂಗ್ ಫ್ಲಿಯಾ, ಶೆರ್ಪಾ ಮತ್ತು ರೋಡ್ಸ್ಟರ್ ಸೇರಿದಂತೆ ಮುಂಬರುವ ಮಾದರಿಗಳಿಗಾಗಿ ಅನೇಕ ನೇಮ್‌ಪ್ಲೇಟ್‌ಗಳನ್ನು ಟ್ರೇಡ್‌ಮಾರ್ಕ್ ಮಾಡಿದೆ. ಈ ವರ್ಷ ಹಲವಾರು ನವೀಕರಣಗಳನೊಂದಿಗೆ ತಮ್ಮ ಜನಪ್ರಿಯ ಮಾದರಿಗಳನ್ನು ಪರಿಚಯಿಸುತ್ತದೆ. ಇದರಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತದಲ್ಲಿ ನ್ಯೂ ಜನರೇಷನ್ ಬುಲೆಟ್ 350 ಅನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.

Article Published On: Wednesday, March 2, 2022, 15:28 [IST]
English summary
Royal enfield february 2022 sales down 15 percent details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+