2021ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ Royal Enfield Himalayan ಬೈಕ್
ರಾಯಲ್ ಎನ್‌ಫೀಲ್ಡ್ ಭಾರತದಲ್ಲಿ ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರಾಂಡ್ ಗಳಲ್ಲಿ ಒಂದಾಗಿದೆ. ರಾಯಲ್ ಎನ್‌ಫೀಲ್ಡ್ ಬ್ರ್ಯಾಂಡ್ ರೆಟ್ರೊ-ಶೈಲಿಯ ಸ್ಟ್ರೀಟ್ ಬೈಕ್‌ಗಳಲ್ಲಿ ಪರಿಣತಿ ಹೊಂದಿದ್ದರೂ, ಅದರ ಪೋರ್ಟ್‌ಫೋಲಿಯೊದಲ್ಲಿ ಅಡ್ವೆಂಚರ್ ಬೈಕ್ ಅನ್ನು ಕೂಡ ಒಳಗೊಂಡಿದೆ.

ರಾಯಲ್ ಎನ್‌ಫೀಲ್ಡ್ ಹಿಮಾಲಯನ್(Royal Enfield Himalayan) ಬೈಕ್ ಭಾರತೀಯ ಮಾರುಕಟ್ಟೆಯ ಜನಪ್ರಿಯ ಅಡ್ವೆಂಚರ್-ಟೂರರ್ ಬೈಕ್‌ಗಳಲ್ಲಿ ಒಂದಾಗಿದೆ. ಇನ್ನು ಈ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಅತ್ಯಂತ ಅಗ್ಗದ ಅಡ್ವೆಂಚರ್ ಟೂರರ್ ಬೈಕ್‌ಗಳಲ್ಲಿ ಒಂದಾಗಿದೆ. ಅಲ್ಲದೇ ಇದು ಅತ್ಯಂತ ಸಮರ್ಥ ಬೈಕ್ ಆಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಅಡ್ವೆಂಚರ್ ಬೈಕ್‌ಗಳ ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಮಾದರಿಯ ಒಟ್ಟು 4,611 ಯುನಿಟ್‌ಗಳು ಮಾರಾಟವಾಗಿವೆ.

2020ರ ಡಿಸೆಂಬರ್ ತಿಂಗಳಲ್ಲಿ ಹಿಮಾಲಯನ್ ಮಾದರಿಯ 941 ಯುನಿಟ್‌ಗಳು ಮಾರಾಟವಾಗಿತ್ತು. ಹಿಮಾಲಯನ್ ಕಳೆದ ತಿಂಗಳು ಶೇ.390 ರಷ್ಟು ಮಾರಾಟದಲ್ಲಿ ವರ್ಷದಿಂದ ವರ್ಷಕ್ಕೆ ಬೆಳವಣಿಗೆಯನ್ನು ಸಾಧಿಸಿದೆ, ಭಾರತದ ಆಟೋಮೊಬೈಲ್ ಮಾರುಕಟ್ಟೆಯು ಇತ್ತೀಚಿನ ದಿನಗಳಲ್ಲಿ ಮಾರಾಟ ಕುಸಿತವನ್ನು ಅನುಭವಿಸುತ್ತಿರುವ ಹೊರತಾಗಿಯೂ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ತನ್ನ ಮಾರಾಟದ ಅಂಕಿಅಂಶಗಳನ್ನು ಹಸಿರು ಬಣ್ಣದಲ್ಲಿ ಇರಿಸಿಕೊಳ್ಳಲು ಯಶಸ್ವಿಯಾಗಿದೆ.

ಈ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ ಬಗ್ಗೆ ಹೇಳುವುದಾದರೆ, ಈ ಮಾದರಿಯು ಸ್ಟ್ಯಾಂಡರ್ಡ್, ಡ್ಯುಯಲ್ ಟೋನ್ ಮತ್ತು ಪೈನ್ ಗ್ರೀನ್ ಮತ್ತು ಗ್ರಾನೈಟ್ ಬ್ಲ್ಯಾಕ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಈ ಬೈಕಿನಲ್ಲಿ 'ಟ್ರಿಪ್ಪರ್ ನ್ಯಾವಿಗೇಷನ್' ಅನ್ನು ಸಹ ಒಳಗೊಂಡಿದೆ. ಹೊಸ ಸರಳ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಪಾಡ್ ಅನ್ನು ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ನೀಡಲಾಗಿದೆ.

ಈ ಟ್ರಿಪ್ಪರ್ ನ್ಯಾವಿಗೇಷನ್ ಸಿಸ್ಟಂ ಬೈಕ್ ರೈಡಿಂಗ್ ವೇಳೆ ಸವಾರನಿಗೆ ಹೆಚ್ಚು ಸಹಕಾರಿಯಾಗಿರುತ್ತದೆ. ಈ ರಾಯಲ್ ಎನ್‌ಫೀಲ್ಡ್ ಎಕ್ಸ್‌ಪ್ಲೊರ್ ಆ್ಯಂಡ್ ಪ್ಲ್ಯಾನ್ ರೈಡರ್ ಆ್ಯಪ್ ಮೂಲಕ ಟ್ರಿಪ್ರರ್ ಮೀಟರ್‌ಗೆ ಕನೆಕ್ಟ್ ಮಾಡಬಹುದಾಗಿದೆ. ಇದು ಟರ್ನ್ ಬೈ ಟರ್ನ್ ನ್ಯಾವಿಗೇಷನ್ ಸೇವೆಯನ್ನು ಒದಗಿಸುತ್ತದೆ.

ಈ ಹಿಮಾಲಯನ್ ಅಡ್ವೆಂಚರ್-ಟೂರರ್ ಬೈಕಿನಲ್ಲಿ ಅದೇ 411ಸಿಸಿ ಸಿಂಗಲ್-ಸಿಲಿಂಡರ್ ಎಸ್‌ಒಹೆಚ್‌ಸಿ ಏರ್-ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 24.3 ಬಿಹೆಚ್‍ಪಿ ಪವರ್ ಮತ್ತು 32 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

ಈ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ ಅನ್ನು ಅದರ ಹಿಂದಿನ ಮಾದರಿಗೆ ಹೋಲಿಸಿದರೆ, ಅದೇ ವಿನ್ಯಾಸ ಮತ್ತು ಸಿಲೂಯೆಟ್ ಅನ್ನು ಮುಂದಕ್ಕೆ ಸಾಗಿಸಿದ್ದು, ಆದರೆ ಕೆಲವು ಸಣ್ಣ ನವೀಕರಣಗಳಿವೆ. ಇವುಗಳಲ್ಲಿ ನವೀಕರಿಸಿದ ಸೀಟ್ ಸೇರಿವೆ. ಇದು ಈಗ ಉತ್ತಮ ಕಂಫರ್ಟ್ ಅನ್ನು ನೀಡುತ್ತದೆ. ವಿಶೇಷವಾಗಿ ಲಾಂಗ್ ರೈಡ್ ತೆರಳುವಾಗ ಇದು ಹೆಚ್ಚು ಸಹಕಾರಿಯಾಗಿರುತ್ತದೆ. ಇನ್ನು ನವೀಕರಿಸಿದ ಹಿಂಭಾಗದ ಕ್ಯಾರಿಯರ್ ಮತ್ತು ಮುಂಭಾಗ ಮೆಟಲ್ ಫ್ರೇಮ್ ಮತ್ತು ಹೊಸ ವಿಂಡ್‌ಸ್ಕ್ರೀನ್ ಸೇರ್ಪಡೆಯಾಗಿದೆ.

ಈ ಹಿಮಾಲಯನ್ ಆಫ್-ರೋಡರ್ ಹೊಸ ಪೈನ್ ಗ್ರೀನ್, ಗ್ರಾನೈಟ್ ಬ್ಲ್ಯಾಕ್ (ಡ್ಯುಯಲ್-ಟೋನ್ ವಿಥ್ ಮ್ಯಾಟ್ & ಗ್ಲೋಸ್ ಬ್ಲ್ಯಾಕ್) ಮತ್ತು ಮಿರಾಜ್ ಸಿಲ್ವರ್ ಬಣ್ಣಗಳ ಆಯ್ಕೆಯನ್ನು ಪಡೆದುಕೊಂಡಿದೆ. ಇದರೊಂದಿಗೆ ಪ್ರಸ್ತುತ ಇರುವ ಗ್ರೇವೆಲ್ ಗ್ರೇ, ರಾಕ್ ರೆಡ್ ಮತ್ತು ಲೇಕ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

ಹಿಮಾಲಯನ್ ಅಡ್ವೆಂಚರ್-ಟೂರರ್ ಬೈಕ್ ಸಸ್ಪಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 41ಎಂಎಂ ಟೆಲಿಸ್ಕೋಪಿಕ್ ಸೆಟಪ್ ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸೆಟಪ್ ಅನ್ನು ಹೊಂದಿದೆ. ಇನ್ನು ಪ್ರಮುಖವಾಗಿ ಇದರ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 300ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 240ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇನ್ನು ಸ್ಟ್ಯಾಂಡರ್ಡ್ ಆಗಿ 'ಸ್ವಿಚ್ ಮಾಡಬಹುದಾದ ಎಬಿಎಸ್' ಅನ್ನು ಹೊಂದಿದೆ.

ಇನ್ನು ರಾಯಲ್ ಎನ್‌ಫೀಲ್ಡ್ ಕಂಪನಿಯು 2021ರ ಡಿಸೆಂಬರ್ ತಿಂಗಳ ಮಾರಾಟದ ವರದಿಯನ್ನು ಇತ್ತೀಚೆಗೆ ಬಹಿರಂಗಪಡಿಸಿತು. ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ ಕಂಪನಿಯು 65,187 ಯುನಿಟ್‌ಗಳನ್ನು ಮಾರಾಟ ಮಾಡಿದೆ, 2020ರ ಡಿಸೆಂಬರ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 65,492 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.45 ರಷ್ಟು ಬೆಳವಣಿಗೆಯಾಗಿದೆ. 2019ರ ಡಿಸೆಂಬರ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 48,489 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು.

ಇದನ್ನು 2021ರ ಡಿಸೆಂಬರ್ ಮಾರಾಟಕ್ಕೆ ಹೋಲಿಸಿದರೆ ಗಮನಾರ್ಹ ಬೆಳವಣಿಗೆಯನ್ನು ಸಾಧಿಸಿದ್ದಾರೆ. ಕಳೆದ ತಿಂಗಳ ಕಂಪನಿಯು 8,552 ಯುನಿಟ್‌ಗಳನ್ನು ವಿದೇಶಕ್ಕೆ ರಫ್ಟು ಮಾಡಲಾಗಿದೆ. 2020ರ ಡಿಸೆಂಬರ್ ತಿಂಗಳಿನಲ್ಲಿ 3,503 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಇದನ್ನು ಕಳೆದ ತಿಂಗಳ ರಫ್ತಿಗೆ ಹೋಲಿಸಿದರೆ ಶೇ.144.13 ರಷ್ಟು ಹೆಚ್ಚಳವಾಗಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು 2021ರ ಏಪ್ರಿಲ್ ಮತ್ತು ಡಿಸೆಂಬರ್ ನಡುವೆ 60,898 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ,

ಇನ್ನು ಮುಂದಿನ ತಿಂಗಳುಗಳಲ್ಲಿ ರಾಯಲ್ ಎನ್‌ಫೀಲ್ಡ್ ಭಾರತೀಯ ಮಾರುಕಟ್ಟೆಗೆಯಲ್ಲಿ ಹೊಸ ಮಾದರಿಗಳನ್ನು ಪರಿಚಯಿಸಲಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ಈಗಾಗಲೇ ಬೈಕ್‌ಗಳ ಹೆಸರಿನ ಟ್ರೇಡ್‌ಮಾರ್ಕ್ ಅನ್ನು ನೋಂದಾಯಿಸಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳ ಬಗ್ಗೆ ಹೆಚ್ಚಿನ ವಿವರಗಳು ಮುಂದಿನ ದಿನಗಳಲ್ಲಿ ಬಹಿರಂಗವಾಗಲಿದೆ.


Click it and Unblock the Notifications