Just In
- 26 min ago
ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ನವೀಕೃತ ಮಾರುತಿ ಆಲ್ಟೊ ಕೆ10 ಸಿಎನ್ಜಿ
- 49 min ago
ಪೊಲೀಸರಿಗ್ಯಾಕೆ ಬುಲೆಟ್ ಪ್ರೂಫ್ ವಾಹನವಿಲ್ಲ: ಗಣ್ಯರಿಗಿರುವ ಭದ್ರತೆ ಆರಕ್ಷಕರಿಗಿಲ್ಲವೇ? ಕಾರಣ ಇಲ್ಲಿದೆ...
- 1 hr ago
ಕಡಿಮೆ ಮೊತ್ತಕ್ಕೆ ಲೀಸ್ಗೆ ಸಿಗಲಿದೆ ಫೋಕ್ಸ್ವ್ಯಾಗನ್ ವರ್ಟಸ್ ಕಾರು
- 3 hrs ago
ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಥಾರ್ 5 ಡೋರ್ ವರ್ಷನ್
Don't Miss!
- News
ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದದ್ದು ತಪ್ಪು: ಆದರೆ..
- Sports
Anil Kumble: ಪಂಜಾಬ್ ಕಿಂಗ್ಸ್ ಕೋಚ್ ಸ್ಥಾನದಿಂದ ಕನ್ನಡಿಗ ಕುಂಬ್ಳೆ ಔಟ್; ಬೇರೆ ಕೋಚ್ ಆಯ್ಕೆ!
- Technology
ಲೆನೊವೊ ಲೀಜನ್ Y70 ಸ್ಮಾರ್ಟ್ಫೋನ್ ಬಿಡುಗಡೆ!..68W ವೇಗದ ಚಾರ್ಜಿಂಗ್!
- Education
Karnataka High Court Recruitment 2022 : 129 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ವಂಡರ್ಲಾ ಬೆಂಗಳೂರಿನಲ್ಲಿರುವ ವಿಶಿಷ್ಟ ಅಮ್ಯೂಸ್ಮೆಂಟ್ ಪಾರ್ಕ್ ಆಗಿದೆ.
- Finance
ಫೋನ್ ಪೇ, ಗೂಗಲ್ ಪೇ, ಭೀಮ್ App ಬಳಕೆಗೆ ಪೇಮೆಂಟ್ ಶುಲ್ಕ?
- Movies
ಅಪ್ಪು- ದರ್ಶನ್ ಸ್ನೇಹದ ಬಗ್ಗೆ ಹೇಳಿದ ರಾಘಣ್ಣ!
- Lifestyle
ಕಾಲಿನಲ್ಲಿ ಈ 10 ಲಕ್ಷಣಗಳು ಕಂಡು ಬಂದರೆ ಹುಷಾರು! ಮಧುಮೇಹ ತುಂಬಾ ಹೆಚ್ಚಿದೆ ಎಂದು ಸೂಚಿಸುವ ಲಕ್ಷಣಗಳಿವು
ಮಾರ್ಚ್ ತಿಂಗಳ ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್ 650 ಟ್ವಿನ್ ಬೈಕ್‌ಗಳು
ಭಾರತೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದೆ. ಈ ರಾಯಲ್ ಎನ್‌ಫೀಲ್ಡ್ ಕಂಪನಿಯ ಇಂಟರ್‌ಸೆಪ್ಟರ್ 650 (Interceptor 650) ಮತ್ತು ಕಾಂಟಿನೆಂಟಲ್ ಜಿಟಿ650 (Continental GT 650) ಎಂಬ ಟ್ವಿನ್ ಬೈಕ್‌ಗಳು ಬಾರತೀಯ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ.

2022ರ ಮಾರ್ಚ್ ತಿಂಗಳು ರಾಯಲ್ ಎನ್ಫೀಲ್ಡ್ ಇಂಟರ್ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಮಾದರಿಗಳ ಒಟ್ಟು 1,226 ಯುನಿಟ್‌ಗಳು ಮಾರಾಟವಾಗಿವೆ. 2021ರ ಮಾರ್ಚ್ ತಿಂಗಳಲ್ಲಿ ಟ್ವಿನ್ ಬೈಕ್‌ಗಳ 378 ಯೂನಿಟ್‌ಗಳು ಮಾರಾಟವಾಗಿತ್ತು, ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.224.34 ರಷ್ಟು ಮಾರಾಟದ ಬೆಳವಣಿಗೆಯನ್ನು ಸಾಧಿಸಿದೆ. ಇನ್ನು 2022ರ ಫೆಬ್ರವರಿ ತಿಂಗಳಿನಲ್ಲಿ ಈ ಎರಡು ಮೋಟಾರ್‌ಸೈಕಲ್‌ಗಳ 2,469 ಯೂನಿಟ್‌ಗಳನ್ನು ಭಾರತದಲ್ಲಿ ಮಾರಾಟ ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ 50.34 ಪ್ರತಿಶತದಷ್ಟು ತಿಂಗಳ ಮಾರಾಟದ ಕುಸಿತವನ್ನು ಕಂಡಿದೆ.

ಭಾರತದಲ್ಲಿ ಇತ್ತೀಚಿಗೆ ರಾಯಲ್ ಎನ್‌ಫೀಲ್ಡ್ ಪ್ರತಿಸ್ಪರ್ಧಿಗಳಾದಯೆ ಯಜ್ಡಿ ಬೈಕ್‌ಗಳು ಬಿಡುಗಡೆಯಾಗಿವೆ. ಇದರಿಂದ ರಾಯಲ್ ಎನ್‌ಫೀಲ್ಡ್ ಮಾರಾಟದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ರಾಯಲ್ ಎನ್ಫೀಲ್ಡ್ ಕಂಪನಿಯು ಈ 650 ಟ್ವಿನ್ ಬೈಕ್‌ಗಳನ್ನು ಭಾರತದಲ್ಲಿ ಮೊದಲು ಬಿಡುಗಡೆಗೊಳಿಸಲಾಯಿತು. ಕಳೆದ ವರ್ಷದ ಮಾರ್ಚ್ ತಿಂಗಳಿನಲ್ಲಿ 2021ರ ಮಾದರಿಯಾಗಿ ಹೊಸ ನವೀಕರಣಗಳೊಂದಿಗೆ ಬಿಡುಗಡೆಗೊಳಿಸಿತ್ತು.

ಈ ರಾಯಲ್ ಎನ್ಫೀಲ್ಡ್ ಇಂಟರ್ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಬೈಕ್‌ಗಳು ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡಿತ್ತು. ಈ ಎರಡು ಟ್ವಿನ್ ಬೈಕ್‌ಗಳ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 41 ಎಂಎಂ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಟ್ವಿನ್-ಗ್ಯಾಸ್ ಚಾರ್ಜ್ಡ್ ಶಾಕ್ ಗಳು 5-ಹಂತದ ಹೊಂದಾಣಿಕೆಯೊಂದಿಗೆ ಪ್ರಿ-ಲೋಡ್ ಡ್ಯಾಂಪಿಂಗ್‌ಗಾಗಿ ನಿರ್ವಹಿಸುತ್ತವೆ.

ಪ್ರಮುಖವಾಗಿ ಇಂಟರ್‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಬೈಕ್‌ಗಳ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 320 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಹೆಚ್ಚಿನ ಸುರಕ್ಷತೆಗಾಗಿ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.

ಈ ರಾಯಲ್ ಎನ್ಫೀಲ್ಡ್ ಇಂಟರ್ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಬೈಕ್‌ಗಳಲ್ಲಿ ಹಿಂದಿನ ಮಾದರಿಗಳಲ್ಲಿರುವ ಅದೇ, 649ಸಿಸಿ ಪ್ಯಾರಲಲ್ ಟ್ವಿನ್ ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 7,250 ಆರ್‌ಪಿಎಂನಲ್ಲಿ 47 ಬಿಹೆಚ್‌ಪಿ ಪವರ್ ಮತ್ತು 5,250 ಆರ್‌ಪಿಎಂನಲ್ಲಿ 52 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಈ ಟ್ವಿನ್ ಬೈಕ್‌ಗಳಲ್ಲಿ 18 ಇಂಚಿನ ಸ್ಪೋಕ್ಡ್ ವ್ಹೀಲ್ ಗಳನ್ನು ಹೊಂದಿವೆ. ಎರಡು ಬೈಕ್‌ಗಳ ವಿನ್ಯಾಸವು ಬದಲಾಗದೆ ಉಳಿದಿದೆ. ಇದು ಒಂದೇ ಮಾದರಿಯ ಹೆಡ್‌ಲ್ಯಾಂಪ್‌ಗಳು, ಟೈಲ್‌ಲ್ಯಾಂಪ್‌ಗಳು, ಟ್ವಿನ್ ಎಕ್ಸಾಸ್ಟ್ ಸೆಟಪ್, ಸಿಂಗಲ್-ಪೀಸ್ ಫ್ಲಾಟ್ ಸೀಟ್ ಮತ್ತು ಹೆಚ್ಚಿನದನ್ನು ಕೂಡ ಒಳಗೊಂಡಿದೆ.

ಈ ಹೊಸ ಇಂಟರ್‍ಸೆಪ್ಟರ್ 650 ಬೈಕ್ ಉತ್ತಮ ಸೀಟಿಂಗ್ ಪೊಷಿಷನ್ ಅನ್ನು ಹೊಂದಿದೆ. ಇನ್ನು ಕಾಂಟಿನೆಂಟಲ್ ಜಿಟಿ 650 ಅದರ ಉದ್ದವಾದ ಟ್ಯಾಂಕ್ ವಿನ್ಯಾಸ ಮತ್ತು ಕ್ಲಿಪ್-ಆನ್ ಹ್ಯಾಂಡಲ್‌ಬಾರ್‌ಗಳೊಂದಿಗೆ ಹೆಚ್ಚು ಅಗ್ರೇಸಿವ್ ಲುಕ್ ನಿಂದ ಕೂಡಿದೆ.ಇನ್ನು ರಾಯಲ್ ಎನ್ಫೀಲ್ಡ್ ಇಂಟರ್ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ650 ಬೈಕ್‌ಗಳಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಅನ್ನು ನೀಡಲಾಗಿಲ್ಲ. ಆದರೆ ಕಸ್ಟಮೈಸ್ ಮಾಡಲು ಆಯ್ಕೆಯನ್ನು ಸಹ ಕಂಪನಿ ನೀಡಿದೆ.

ರಾಯಲ್ ಎನ್ಫೀಲ್ಡ್ ಕಂಪನಿಯು 2022ರ ಮಾರ್ಚ್ ತಿಂಗಳ ಮಾರಾಟದ ವರದಿಯನ್ನು ಇತ್ತೀಚೆಗೆ ಬಹಿರಂಗಪಡಿಸಿತ್ತು. ಕಳೆದ ತಿಂಗಳು ರಾಯಲ್ ಎನ್ಫೀಲ್ಡ್ ಕಂಪನಿಯು ಒಟ್ಟು 59,160 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಕಳೆದ ವರ್ಷದ ಮಾರ್ಚ್ ತಿಂಗಳಿನಲ್ಲಿ ರಾಯಲ್ ಎನ್ಫೀಲ್ಡ್ ಕಂಪನಿಯು 66,058 ಯುನಿಟ್‌ಗಳನ್ನು ಮಾರಾಟಗೊಳಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಸುಮಾರು ಶೇಕಡಾ 2.39 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಇನ್ನು ದೇಶಿಯ ಮಾರುಕಟ್ಟೆಯಲ್ಲಿ ರಾಯಲ್ ಎನ್ಫೀಲ್ಡ್ ಕಂಪನಿಯು 58,477 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಆದರೆ ಕಳೆದ ವರ್ಷದ ಮಾರ್ಚ್ ತಿಂಗಳಿನಲ್ಲಿ 60,173 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ದೇಶಿಯ ಮಾರುಕಟ್ಟೆಯ ಮಾರಾಟದಲ್ಲಿ ಶೇಕಡಾ 3 ರಷ್ಟು ಕುಸಿತವನ್ನು ಕಂಡಿದೆ. ರಫ್ತು ವಿಭಾಗದಲ್ಲಿ, ಕಳೆದ ತಿಂಗಳಿನಲ್ಲಿ ರಾಯಲ್ ಎನ್ಫೀಲ್ಡ್ ಕಂಪನಿಯು 9,200 ಯುನಿಟ್‌ಗಳನ್ನು ರಫ್ತು ಮಾಡಿದೆ. 2021ರ ಮಾರ್ಚ್ ತಿಂಗಳಿನಲ್ಲಿ 5,885 ಯುನಿಟ್‌ಗಳನ್ನು ರಫ್ತು ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ರಫ್ತಿಗೆ ಹೋಲಿಸಿದರೆ ಶೇಕಡಾ 56 ರಷ್ಟು ಏರಿಕೆಯಾಗಿದೆ.

ರಾಯಲ್ ಎನ್‌ಫೀಲ್ಡ್ ತನ್ನ ಉತ್ಪನ್ನಗಳಿಗೆ ಬಲವಾದ ಬೇಡಿಕೆ ಮತ್ತು ಪೂರೈಕೆ ಸರಪಳಿಯ ನಿರ್ಬಂಧಗಳನ್ನು ಕ್ರಮೇಣ ಸರಾಗಗೊಳಿಸುವ ಮೂಲಕ ದೇಶೀಯ ಮಾರುಕಟ್ಟೆಯಲ್ಲಿ ಚೇತರಿಕೆಯ ಹಾದಿಯಲ್ಲಿದೆ ಎಂದು ಹೇಳಿದೆ. ರಾಯಲ್ ಎನ್ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ. ಈ ವರ್ಷ ರಾಯಲ್ ಎನ್ಫೀಲ್ಡ್ ಕಂಪನಿಯು ಹೊಸ ಬೈಕ್‌ಗಳನ್ನು ಬಿಡುಗಡೆಗೊಳಿಸಲಿದೆ. ಭಾರತದಲ್ಲಿ ರಾಯಲ್ ಎನ್‌ಫೀಲ್ಡ್ ಬೈಕ್‌ಗಳಿಗೆ ದೊಡ್ಡ ಅಭಿಮಾನಿ ವರ್ಗವಿದೆ. ಈ ರಾಯಲ್ ಎನ್ಫೀಲ್ಡ್ ಕಂಪನಿಯು 350ಸಿಸಿಯಿಂದ 650ಸಿಸಿ ವರೆಗಿನ ಬೈಕ್‌ಗಳನ್ನು ಬಿಡುಗಡೆಗೊಳಿಸಲಿವೆ. ಶೀಘ್ರದಲ್ಲೇ ಈ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು ಬಿಡುಗಡೆಯಗಲಿವೆ.

ರಾಯಲ್ ಎನ್ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಬೈಕ್‌ಗಳನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಬೈಕ್‌ಗಳೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ವಿವಿಧ ವಿಭಾಗಗಳಲ್ಲಿ ರಾಯಲ್ ಎನ್‌ಫೀಲ್ಡ್ ಬ್ರ್ಯಾಂಡ್‌ನ ಉಪಸ್ಥಿತಿಯನ್ನು ಬಲಪಡಿಸಲು ನೆರವಾಗುತ್ತದೆ,