ಹೊಸ ವರ್ಷದ ಆರಂಭದಲ್ಲೇ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ Royal Enfield

ರಾಯಲ್ ಎನ್‌ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು 2022ರ ಜನವರಿ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ ಕಂಪನಿಯು 58,838 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

ಹೊಸ ವರ್ಷದ ಆರಂಭದಲ್ಲೇ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ Royal Enfield

ಕಳೆದ ವರ್ಷ ಇದೇ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 68,887 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.15 ರಷ್ಟು ಕುಸಿತವಾಗಿದೆ. ಕೊರೋನಾ ಮೂರನೇ ಅಲೆ ಪ್ರಾರಂಭ ಮತ್ತು ಸೆಮಿಕಂಡೆಕ್ಟರ್ ಚಿಪ್ ಕೊರತೆಯಿಂದ ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ. ಆದರೆ ರಾಯಲ್ ಎನ್‌ಫೀಲ್ಡ್ ಕಂಪನಿಯು ರಫ್ತಿನಲ್ಲಿ ಬಲವಾದ ಬೆಳವಣಿಗೆಯನ್ನು ಸಾಧಿಸಿದೆ. ಇದುವರೆಗೆ ಅತ್ಯಧಿಕ ಮಾಸಿಕ ರಫ್ತುಗಳನ್ನು ವರದಿ ಮಾಡಿದೆ, ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು ಭರ್ಜರಿ ಬೇಡಿಕೆಯನ್ನು ಪಡೆದುಕೊಂಡಿದೆ.

ಹೊಸ ವರ್ಷದ ಆರಂಭದಲ್ಲೇ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ Royal Enfield

ಇನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾತ್ರ ರಾಯಲ್ ಎನ್‌ಫೀಲ್ಡ್ ಕಂಪನಿಯು 2022ರ ಜನವರಿ ತಿಂಗಳಿನಲ್ಲಿ 49,726 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇನ್ನು ಒಂದು ವರ್ಷದ ಹಿಂದೆ ಅದೇ ತಿಂಗಳಲ್ಲಿ 64,372 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೆ.23 ರಷ್ಟು ಕುಸಿತವಾಗಿದೆ.

ಹೊಸ ವರ್ಷದ ಆರಂಭದಲ್ಲೇ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ Royal Enfield

ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ ಕಂಪನಿಯು 9,112 ಯುನಿಟ್‌ಗಳನ್ನು ರಫ್ತು ಮಾಡಿದೆ. ಇನ್ನು ಒಂದು ವರ್ಷದ ಹಿಂದೆ ಇದೇ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 4,515ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ, ಇದನ್ನು ಕಳೆದ ವರ್ಷದ ರಫ್ತಿಗೆ ಹೋಲಿಸಿದರೆ ಶೇ.102 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ,

ಹೊಸ ವರ್ಷದ ಆರಂಭದಲ್ಲೇ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ Royal Enfield

ಏಪ್ರಿಲ್ 2021 ರಿಂದ ಜನವರಿ 2022 ರ ಅವಧಿಯಲ್ಲಿ, ರಾಯಲ್ ಎನ್‌ಫೀಲ್ಡ್‌ನ ಒಟ್ಟಾರೆ ಮಾರಾಟದ ಪ್ರಮಾಣವು ಸಮತಟ್ಟಾಗಿದೆ, ಈ ಅವಧಿಯಲ್ಲಿ 4,75,431 ಮೋಟಾರ್‌ಸೈಕಲ್‌ಗಳನ್ನು ಮಾರಾಟಗೊಳಿಸಿವೆ. ಒಂದು ವರ್ಷದ ಹಿಂದೆ ಇದೇ ಅವಧಿಯಲ್ಲಿ 4,76,633 ಯುನಿಟ್‌ಗಳಿಗೆ ಹೋಲಿಸಿದರೆ. ಈ ಅವಧಿಯಲ್ಲಿ ದೇಶೀಯ ಮಾರುಕಟ್ಟೆಯ ಮಾರಾಟವು ಶೇಕಡಾ 8 ರಷ್ಟು ಕುಸಿದಿದೆ,

ಹೊಸ ವರ್ಷದ ಆರಂಭದಲ್ಲೇ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ Royal Enfield

ರಫ್ತಿನಲ್ಲಿ, 2020 ದಿಂದ ಏಪ್ರಿಲ್ ತಿಂಗಳಿನಿಂದ 2021ರ ಜನವರಿ ಅವಧಿಯಲ್ಲಿ ಕೇವಲ 28,192 ಮೋಟಾರ್‌ಸೈಕಲ್‌ಗಳಿಂದ 2021 ರ ಜನವರಿಯಿಂದ 2022 ರ ಅವಧಿಯಲ್ಲಿ 64,807 ಮೋಟಾರ್‌ಸೈಕಲ್‌ಗಳಿಗೆ ಶೇಕಡಾ 130 ರಷ್ಟು ಬೃಹತ್ ಪ್ರಮಾಣದಲ್ಲಿ ಬೆಳೆದಿದೆ.

ಹೊಸ ವರ್ಷದ ಆರಂಭದಲ್ಲೇ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ Royal Enfield

ರಾಯಲ್ ಎನ್‌ಫೀಲ್ಡ್‌ನ ಹೆಚ್ಚು ಮಾರಾಟವಾಗುವ ಕ್ಲಾಸಿಕ್ 350 ಅನ್ನು ಜಾಗತಿಕ ಮಾರುಕಟ್ಟೆಗಳಲ್ಲಿ ಬಿಡುಗಡೆಗೊಳಿಸಲಾಗಿದೆ, ಈ ಮಾದರಿಯನ್ನು ಫಿಲಿಪೈನ್ಸ್, ಕೊರಿಯಾ, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಮತ್ತು ಯುಕೆಯಲ್ಲಿ ಬಿಡುಗಡೆ ಮಾಡಲಾಗುವುದು. 2021 ರಲ್ಲಿ ಭಾರತ ಮತ್ತು ಥೈಲ್ಯಾಂಡ್‌ನಲ್ಲಿ ಬಿಡುಗಡೆಯಾದ ನಂತರ. ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಭರ್ಜರಿ ಬೇಡಿಕೆಯನ್ನು ಪಡೆಯುತ್ತಿದೆ.

ಹೊಸ ವರ್ಷದ ಆರಂಭದಲ್ಲೇ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ Royal Enfield

ಇನ್ನು ರಾಯಲ್ ಎನ್‌ಫೀಲ್ಡ್ (Royal Enfield) ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದೆ. ಈ ರಾಯಲ್ ಎನ್‌ಫೀಲ್ಡ್ ಬೈಕ್‌ಗಳನ್ನು ಖರೀದಿಸಲು ಬಯಸುವ ಗ್ರಾಹಕರಿಗೆ ದ್ವಿಚಕ್ರ ವಾಹನ ಸಾಲವನ್ನು ನೀಡಲು L&T ಫೈನಾನ್ಸ್‌ನೊಂದಿಗೆ ಕೈಜೋಡಿಸಿದೆ.

ಹೊಸ ವರ್ಷದ ಆರಂಭದಲ್ಲೇ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ Royal Enfield

"ವೆಲ್‌ಕಮ್ 2022" ಎಂಬ ಯೋಜನೆಯ ಅಡಿಯಲ್ಲಿ ಆಕರ್ಷಕ ಬಡ್ಡಿ ದರಗಳಲ್ಲಿ (ಶೇ. 7.99 ರಿಂದ) ಮೂರು ನಿಮಿಷಗಳಲ್ಲಿ ತೊಂದರೆ-ಮುಕ್ತ, ತ್ವರಿತ ಸಾಲದ ಅನುಮೋದನೆಗಳನ್ನು ನೀಡುತ್ತದೆ. ಈ ಯೋಜನೆಯು 4 ವರ್ಷಗಳ ಮರುಪಾವತಿಯ ಮೇಲೆ ರಾಯಲ್ ಎನ್‌ಫೀಲ್ಡ್ ಬೈಕಿನ ಒಟ್ಟು ವೆಚ್ಚದ ಶೇಕಡಾ 90 ರಷ್ಟು ಹಣವನ್ನು ನೀಡುತ್ತದೆ, ಇದು ಗ್ರಾಹಕರಿಗೆ ಹೆಚ್ಚುವರಿ ಪ್ರಯೋಜನವಾಗಿ ಕಾರ್ಯನಿರ್ವಹಿಸುತ್ತದೆ ಎಂಬುದು ಕೂದ ಕೂಡ ಗಮನಾರ್ಹವಾಗಿದೆ.

ಹೊಸ ವರ್ಷದ ಆರಂಭದಲ್ಲೇ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ Royal Enfield

ಯೋಜನೆಯನ್ನು ಪಡೆದುಕೊಳ್ಳಲು, ಗ್ರಾಹಕರು ತಮ್ಮ ರಾಯಲ್ ಎನ್‌ಫೀಲ್ಡ್ ಡೀಲರ್‌ಶಿಪ್ ಅಥವಾ L&T ಫೈನಾನ್ಸ್ ಶಾಖೆಗೆ ಭೇಟಿ ನೀಡಬಹುದು. ಅಲ್ಲದೇ ಆನ್ ಲೈನ್ ಮೂಲಕ L&T Finance ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ಹೊಸ ವರ್ಷದ ಆರಂಭದಲ್ಲೇ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ Royal Enfield

ರಾಯಲ್ ಎನ್‌ಫೀಲ್ಡ್‌ನ ಮಾದರಿ ಶ್ರೇಣಿಯು ಎಲ್ಲಾ-ಹೊಸ ಕ್ಲಾಸಿಕ್ 350, ಮಿಟಿಯೊರ್ 350, ಇಂಟರ್‌ಸೆಪ್ಟರ್ 650, ಕಾಂಟಿನೆಂಟಲ್ GT 650, ಹಿಮಾಲಯನ್ ಮತ್ತು ಬುಲೆಟ್ 350 ಅನ್ನು ಒಳಗೊಂಡಿದೆ. L&T ಫೈನಾನ್ಸ್ ಜೊತೆಗಿನ ಸಂಬಂಧವನ್ನು ರಾಯಲ್ ಎನ್‌ಫೀಲ್ಡ್ ಮೋಟಾರ್‌ಸೈಕಲ್ ಲೈನ್-ಅಪ್‌ನಾದ್ಯಂತ ನೀಡಲಾಗುವುದು.

ಹೊಸ ವರ್ಷದ ಆರಂಭದಲ್ಲೇ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ Royal Enfield

ಇನ್ನು ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ. ಈ ವರ್ಷ ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಬೈಕ್‌ಗಳನ್ನು ಬಿಡುಗಡೆಗೊಳಿಸಲಿದೆ. ಭಾರತದಲ್ಲಿ ರಾಯಲ್ ಎನ್‌ಫೀಲ್ಡ್ ಬೈಕ್‌ಗಳಿಗೆ ದೊಡ್ಡ ಅಭಿಮಾನಿ ವರ್ಗವಿದೆ. ಈ ರಾಯಲ್ ಎನ್‌ಫೀಲ್ಡ್ ಕಂಪನಿಯು 350ಸಿಸಿಯಿಂದ 650ಸಿಸಿ ವರೆಗಿನ ಬೈಕ್‌ಗಳನ್ನು ಬಿಡುಗಡೆಗೊಳಿಸಲಿವೆ. ಶೀಘ್ರದಲ್ಲೇ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು ಬಿಡುಗಡೆಯಗಲಿವೆ.

ಹೊಸ ವರ್ಷದ ಆರಂಭದಲ್ಲೇ ದ್ವಿಚಕ್ರ ವಾಹನ ಮಾರಾಟದಲ್ಲಿ ಕುಸಿತ Royal Enfield

ರಾಯಲ್ ಎನ್‌ಫೀಲ್ಡ್ ಇತ್ತೀಚೆಗೆ ಸ್ಕ್ರ್ಯಾಮ್, ಶಾಟ್‌ಗನ್, ಹಂಟರ್, ಫ್ಲೈಯಿಂಗ್ ಫ್ಲಿಯಾ, ಶೆರ್ಪಾ ಮತ್ತು ರೋಡ್ಸ್ಟರ್ ಸೇರಿದಂತೆ ಮುಂಬರುವ ಮಾದರಿಗಳಿಗಾಗಿ ಅನೇಕ ನೇಮ್‌ಪ್ಲೇಟ್‌ಗಳನ್ನು ಟ್ರೇಡ್‌ಮಾರ್ಕ್ ಮಾಡಿದೆ. ಈ ವರ್ಷ ಹಲವಾರು ನವೀಕರಣಗಳನೊಂದಿಗೆ ತಮ್ಮ ಜನಪ್ರಿಯ ಮಾದರಿಗಳನ್ನು ಪರಿಚಯಿಸುತ್ತದೆ. ಇದರಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತದಲ್ಲಿ ನ್ಯೂ ಜನರೇಷನ್ ಬುಲೆಟ್ 350 ಅನ್ನು 2022 ರಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ.

Most Read Articles

Kannada
English summary
Royal enfield january 2022 sales 58838 units monthly exports details
Story first published: Wednesday, February 2, 2022, 12:47 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X