ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ರಾಯಲ್ ಎನ್‍ಫೀಲ್ಡ್ ಮಿಟಿಯೊರ್ 350 ಬೈಕ್

ರಾಯಲ್ ಎನ್‍ಫೀಲ್ಡ್ ಮಿಟಿಯೊರ್ 350 ಬೈಕ್ ಖರೀದಿಸಲು ಬಯಸುವ ಗ್ರಾಹಕರಿಗೆ ಕಂಪನಿಯು ಶಾಕ್ ನೀಡಿದೆ. ಈ ಹೊಸ ರಾಯಲ್ ಎನ್‍ಫೀಲ್ಡ್ ಮಿಟಿಯೊರ್ 350 ಬೈಕಿನ ಬೆಲೆಯನ್ನು ಹೆಚ್ಚಿಸಿದೆ. ಇದರಿಂದ ಭಾರತೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‍ಫೀಲ್ಡ್ ಮಿಟಿಯೊರ್ 350 ಬೈಕ್ ತುಸು ದುಬಾರಿಯಾಗಿದೆ.

ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ರಾಯಲ್ ಎನ್‍ಫೀಲ್ಡ್ ಮಿಟಿಯೊರ್ 350 ಬೈಕ್

ಚಿಪ್ ಕೊರತೆಯ ಪರಿಣಾಮವಾಗಿ ಟ್ರಿಪ್ಪರ್ ನ್ಯಾವಿಗೇಷನ್ ಪಾಡ್ ಅನ್ನು ತೆಗೆದುಹಾಕುವುದರಿಂದ, ಮಿಟಿಯೊರ್ 350 ಬೈಕಿನ ಬೆಲೆಯನ್ನು ಏಪ್ರಿಲ್‌ನಲ್ಲಿ ಮೊದಲು ಹೆಚ್ಚಿಸಲಾಯಿತು ಮತ್ತು ನಂತರ ಮೇ ತಿಂಗಳಲ್ಲಿ ಕಡಿಮೆಯಾಯಿತು. ಮೇ ತಿಂಗಳಲ್ಲಿ ನಡೆದ ಬೆಲೆ ಕಡಿತವು ಪ್ರಾಯೋಗಿಕವಾಗಿ ಪ್ರಸ್ತುತ ಬೆಲೆಯಿಂದ ಸಂಪೂರ್ಣವಾಗಿ ಆವರಿಸಲ್ಪಟ್ಟಿದೆ. ಹೊಸ ರಾಯಲ್ ಎನ್‍ಫೀಲ್ಡ್ ಮಿಟಿಯೊರ್ 350 ಬೈಕಿನ ಬೆಲೆಯನ್ನು ರೂ,5,000 ವರೆಗೆ ಹೆಚ್ಚಿಸಲಾಗಿದೆ. ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕಿನ ಬೆಲೆ ಏರಿಕೆಯನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ.

ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ರಾಯಲ್ ಎನ್‍ಫೀಲ್ಡ್ ಮಿಟಿಯೊರ್ 350 ಬೈಕ್

ಹೊಸ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕ್ ಹೊಸ ಮ್ಯಾಟ್ ಗ್ರೀನ್ ಬಣ್ಣದ ಆಯ್ಕೆಯು ಫೈರ್‌ಬಾಲ್ ಯೆಲ್ಲೋ ಮತ್ತು ಫೈರ್‌ಬಾಲ್ ರೆಡ್‌ಗೆ ಹೋಲುವ ಬ್ಲ್ಯಾಕ್ಡ್-ಔಟ್ ಥೀಮ್‌ನೊಂದಿಗೆ ಬರುತ್ತಿದೆ. ಇದಲ್ಲದೆ ವ್ಹೀಲ್ ಗಳ ಮೇಲೆ ಗ್ರೀ ಸ್ಟ್ರೀಪ್ ಉಪಸ್ಥಿತಿಯು ಆಸಕ್ತಿದಾಯಕ ವಿವರವಾಗಿದೆ.

ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ರಾಯಲ್ ಎನ್‍ಫೀಲ್ಡ್ ಮಿಟಿಯೊರ್ 350 ಬೈಕ್

ಮತ್ತೊಂದೆಡೆ, ಹೊಸದಾಗಿ ಬಿಡುಗಡೆಗೊಳಿಸಲಾದ ಗ್ರೀನ್ ಬಣ್ಣದ ಆಯ್ಕೆಯು ಬ್ಲ್ಯಾಕ್ಡ್-ಔಟ್ ಥೀಮ್ ಅನ್ನು ಸಹ ಹೊಂದಿದೆ. ಆದರೆ ವ್ಹೀಲ್ ಗಳ ಮೇಲಿನ ಬ್ಯಾಡ್ಜಿಂಗ್ ಮತ್ತು ಸ್ಟ್ರೀಪ್ ಯೆಲ್ಲೋ ಬಣ್ಣವನ್ನು ಹೊಂದಿರುತ್ತದೆ. ಅದರ ಜೊತೆಗೆ, ರಾಯಲ್ ಎನ್‌ಫೀಲ್ಡ್ ಸೂಪರ್‌ನೋವಾ ರೆಡ್ ಬಣ್ಣದ ಆಯ್ಕೆಯಲ್ಲಿಯು ಲಭ್ಯವಿದೆ.

ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ರಾಯಲ್ ಎನ್‍ಫೀಲ್ಡ್ ಮಿಟಿಯೊರ್ 350 ಬೈಕ್

ಈ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕಿನಲ್ಲಿ ಹೊಸ ಬಣ್ಣದ ಆಯ್ಕೆಯನ್ನು ಹೊರತಾಗಿ ಕ್ರೂಸರ್‌ನಲ್ಲಿ ಯಾವುದೇ ಇತರ ಪ್ರಮುಖ ನವೀಕರಣಗಳನ್ನು ಹೊಂದಿಲ್ಲ. ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕನ್ನು ತಮಿಳುನಾಡು ಮತ್ತು ಯುಕೆ ಮೂಲದ ಆರ್‌ಇ ತಂಡವು ವಿನ್ಯಾಸಗೊಳಿಸಲಾಗಿದೆ.

ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ರಾಯಲ್ ಎನ್‍ಫೀಲ್ಡ್ ಮಿಟಿಯೊರ್ 350 ಬೈಕ್

ಹಿಂದಿನ ಥಂಡರ್‌ಬರ್ಡ್ ಎಕ್ಸ್ ಮಾದರಿಯನ್ನು ಆಧರಿಸಿ ನಿರ್ಮಾಣಗೊಂಡಿರುವ ಮಿಟಿಯೊರ್ 350 ಬೈಕ್ ಮಾದರಿಯು ಥಂಡರ್‌ಬರ್ಡ್ ಬೈಕಿಗಿಂತಲೂ ಸಾಕಷ್ಟು ವಿಭಿನ್ನವಾಗಿ ಮತ್ತು ಆಕರ್ಷಕವಾಗಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕಿನಲ್ಲಿ 349 ಸಿಸಿ, ಏರ್/ಆಯಿಲ್-ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಇದರಲ್ಲಿ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅನ್ನು ಕೂಡ ಪಡೆಯುತ್ತದೆ.

ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ರಾಯಲ್ ಎನ್‍ಫೀಲ್ಡ್ ಮಿಟಿಯೊರ್ 350 ಬೈಕ್

ಈ ಎಂಜಿನ್ 20.2 ಬಿಹೆಚ್‍ಪಿ ಪವರ್ ಮತ್ತು 27 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗಿದೆ. ಈ ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕನ್ನು ಹೊಸ ಜೆ ಪ್ಲಾಟ್‌ಫಾರ್ಮ್‌ನಲ್ಲಿ ವಿನ್ಯಾಸಗೊಳಿಸಲಾಗಿದೆ.

ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ರಾಯಲ್ ಎನ್‍ಫೀಲ್ಡ್ ಮಿಟಿಯೊರ್ 350 ಬೈಕ್

ಡಬಲ್ ಡೌನ್‌ಟ್ಯೂಬ್ ಕ್ರೆಡಲ್ ಫ್ರೇಮ್ ಮೇಲೆ ಅಭಿವೃದ್ದಿಗೊಂಡಿರುವ ಈ ಮಿಟಿಯೊರ್ 350 ಬೈಕ್ ಮಾದರಿಯು ಥಂಡರ್‌ಬರ್ಡ್ ಮಾದರಿಗಿಂತಲೂ ಹೆಚ್ಚು ಅರಾಮದಾಯಕ ರೈಡಿಂಗ್ ಅನುಭವ ನೀಡುತ್ತದೆ. ಈ ರೆಟ್ರೊ ಕ್ರೂಸರ್ ಬೈಕ್ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 41-ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಟ್ವಿನ್ ಶಾಕ್‌ ಅಬ್ಸಾರ್ಬರ್‌ ಅನ್ನು ಹೊಂದಿದೆ.

ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ರಾಯಲ್ ಎನ್‍ಫೀಲ್ಡ್ ಮಿಟಿಯೊರ್ 350 ಬೈಕ್

ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೈಕಿನ ಮುಂಭಾಗ 19-ಇಂಚಿನ ಮತ್ತು ಹಿಂಭಾಗದಲ್ಲಿ 17-ಇಂಚಿನ ಅಲಾಯ್ ವ್ಹೀಲ್ ಗಳನ್ನು ಜೋಡಿಸಲಾಗಿದೆ. ಇದು ಕ್ರಮವಾಗಿ 100 / 90-19 57 ಪಿ ಮತ್ತು 140 / 70-17 66 ಪಿ ಸಿಯೆಟ್ ಟ್ಯೂಬ್‌ಲೆಸ್ ಟೈರ್ ಅನ್ನು ಹೊಂದಿದೆ. ಇದರೊಂದಿಗೆ ರಾಯಲ್ ಎನ್‍ಫೀಲ್ಡ್ ಮಿಟಿಯೊರ್ 350 ಬೈಕಿನಲ್ಲಿ ಟಿಪ್ಪರ್ ಪಾಡ್ ಒಳಗೊಂಡಿರುವ ಟರ್ನ್-ಬೈ-ಟರ್ನ್ ಗೂಗಲ್ ನ್ಯಾವಿಗೇಷನ್, ಬ್ಲೂಟೂತ್ ಮೂಲಕ ಕನೆಕ್ಟ್ ಮಾಡಬಹುದಾದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಅಳವಡಿಇದೆ. ಇನ್ನು ಇದರೊಂದಿಗೆ ಹಲವಾರು ಫೀಚರ್ ಗಳನ್ನು ಒಳಗೊಂಡಿದೆ.

ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ರಾಯಲ್ ಎನ್‍ಫೀಲ್ಡ್ ಮಿಟಿಯೊರ್ 350 ಬೈಕ್

ರಾಯಲ್ ಎನ್‌ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು 2022ರ ಜೂನ್ ತಿಂಗಳ ಮಾರಾಟದ ವರದಿಯನ್ನು ಇತ್ತೀಚೆಗೆ ಬಹಿರಂಗಪಡಿಸಿತು. ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ ಕಂಪನಿಯು ಒಟ್ಟು 61,407 ದ್ವಿಚಕ್ರ ವಾಹನಗಳನ್ನು ಮಾರಾಟಗೊಳಿಸಿವೆ. ಕಳೆದ ವರ್ಷದ ಜೂನ್ ತಿಂಗಳಿನಲ್ಲಿ 43,048 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಮಾರಾಟದಲ್ಲಿ ಶೇ.43 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ರಾಯಲ್ ಎನ್‍ಫೀಲ್ಡ್ ಮಿಟಿಯೊರ್ 350 ಬೈಕ್

ಇನ್ನು 2022ರ ಮೇ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 63,643 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ತಿಂಗಳಿನಿಂದ ತಿಂಗಳ ಮಾರಾಟದಲ್ಲಿ ಶೇ.3.51 ರಷ್ಟು ಇಳಿಕೆಯನ್ನು ಕಂಡಿದೆ. ರಾಯಲ್ ಎನ್‌ಫೀಲ್ಡ್ 2022ರ ಜೂನ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 50,265 ಯುನಿಟ್‌ಗಳ ಮಾರಾಟವನ್ನು ನೋಂದಾಯಿಸಿದೆ, ಇದು ಜೂನ್ 2021 ರಲ್ಲಿ ಮಾರಾಟವಾದ 35,815 ಯುನಿಟ್‌ಗಳಿಗೆ ಹೋಲಿಸಿದರೆ ಶೇ.40 ರಷ್ಟು ಬೆಳವಣಿಗೆಯಾಗಿದೆ.

ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ರಾಯಲ್ ಎನ್‍ಫೀಲ್ಡ್ ಮಿಟಿಯೊರ್ 350 ಬೈಕ್

ಇನ್ನು 2022ರ ಜೂನ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 11,142 ಯುನಿಟ್‌ಗಳನ್ನು ರಫ್ಟು ಮಾಡಿದ್ದಾರೆ. ಇನ್ನು ರಫ್ತಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು ಶೇಕಡ 54 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. 2022ರ ಜೂನ್ ತಿಂಗಳ ಮಾರಾಟದಲ್ಲಿ, ಬುಲೆಟ್ 350, ಕ್ಲಾಸಿಕ್ 350, ಮತ್ತು ಮೆಟಿಯೊರ್ 350 ನಂತಹ ಸಬ್ 350 ಸಿಸಿ ಮೋಟಾರ್‌ಸೈಕಲ್‌ಗಳು ಕಂಪನಿಗೆ ಅಗ್ರ ಕೊಡುಗೆಯಾಗಿ ಉಳಿದಿವೆ. ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 411 ಮತ್ತು ಹಿಮಾಲಯನ್ ಸಹ ಪ್ರಭಾವಶಾಲಿ ಮಾರಾಟದ ಪರಿಮಾಣಗಳೊಂದಿಗೆ ಕೊಡುಗೆ ನೀಡುವುದನ್ನು ಮುಂದುವರೆಸಿದೆ.

ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ರಾಯಲ್ ಎನ್‍ಫೀಲ್ಡ್ ಮಿಟಿಯೊರ್ 350 ಬೈಕ್

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಈ ವರ್ಷ ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಬೈಕ್‌ಗಳನ್ನು ಬಿಡುಗಡೆಗೊಳಿಸಲಿದೆ. ಭಾರತದಲ್ಲಿ ರಾಯಲ್ ಎನ್‌ಫೀಲ್ಡ್ ಬೈಕ್‌ಗಳಿಗೆ ದೊಡ್ಡ ಅಭಿಮಾನಿ ವರ್ಗವಿದೆ. ಈ ರಾಯಲ್ ಎನ್‌ಫೀಲ್ಡ್ ಕಂಪನಿಯು 350ಸಿಸಿಯಿಂದ 650ಸಿಸಿ ವರೆಗಿನ ಬೈಕ್‌ಗಳನ್ನು ಬಿಡುಗಡೆಗೊಳಿಸಲಿವೆ. ಶೀಘ್ರದಲ್ಲೇ ಈ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು ಬಿಡುಗಡೆಯಗಲಿವೆ ಎಂದು ನಿರೀಕ್ಷಿಸುತ್ತೇವೆ. ಇನ್ನು ರಾಯಲ್ ಎನ್‌ಫೀಲ್ಡ್ ಮಿಟಿಯೊರ್ 350 ಬೆಲೆ ಏರಿಕೆಯು ಮಾರಾಟದ ಮೇಲೆ ಪರಿಣಾಮ ಬೀರುತ್ತದೆಯೇ ಎಂಬುದನ್ನು ಕಾದು ನೋಡಬೇಕು.

Article Published On: Wednesday, July 20, 2022, 12:59 [IST]
English summary
Royal enfield meteor 350 price hiked in india find here more details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+