ಜೂನ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು 2022ರ ಜೂನ್ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ ಕಂಪನಿಯು ಒಟ್ಟು 61,407 ದ್ವಿಚಕ್ರ ವಾಹನಗಳನ್ನು ಮಾರಾಟಗೊಳಿಸಿವೆ.

ಜೂನ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಕಳೆದ ವರ್ಷದ ಜೂನ್ ತಿಂಗಳಿನಲ್ಲಿ 43,048 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಮಾರಾಟದಲ್ಲಿ ಶೇ.43 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಇನ್ನು 2022ರ ಮೇ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 63,643 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ತಿಂಗಳಿನಿಂದ ತಿಂಗಳ ಮಾರಾಟದಲ್ಲಿ ಶೇ.3.51 ರಷ್ಟು ಇಳಿಕೆಯನ್ನು ಕಂಡಿದೆ.

ಜೂನ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ 2022ರ ಜೂನ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 50,265 ಯುನಿಟ್‌ಗಳ ಮಾರಾಟವನ್ನು ನೋಂದಾಯಿಸಿದೆ, ಇದು ಜೂನ್ 2021 ರಲ್ಲಿ ಮಾರಾಟವಾದ 35,815 ಯುನಿಟ್‌ಗಳಿಗೆ ಹೋಲಿಸಿದರೆ ಶೇ.40 ರಷ್ಟು ಬೆಳವಣಿಗೆಯಾಗಿದೆ.

ಜೂನ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಇನ್ನು 2022ರ ಜೂನ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 11,142 ಯುನಿಟ್‌ಗಳನ್ನು ರಫ್ಟು ಮಾಡಿದ್ದಾರೆ. ಇನ್ನು ರಫ್ತಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು ಶೇಕಡ 54 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಜೂನ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

2022ರ ಜೂನ್ ತಿಂಗಳ ಮಾರಾಟದಲ್ಲಿ, ಬುಲೆಟ್ 350, ಕ್ಲಾಸಿಕ್ 350, ಮತ್ತು ಮೆಟಿಯೊರ್ 350 ನಂತಹ ಸಬ್ 350 ಸಿಸಿ ಮೋಟಾರ್‌ಸೈಕಲ್‌ಗಳು ಕಂಪನಿಗೆ ಅಗ್ರ ಕೊಡುಗೆಯಾಗಿ ಉಳಿದಿವೆ. ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 411 ಮತ್ತು ಹಿಮಾಲಯನ್ ಸಹ ಪ್ರಭಾವಶಾಲಿ ಮಾರಾಟದ ಪರಿಮಾಣಗಳೊಂದಿಗೆ ಕೊಡುಗೆ ನೀಡುವುದನ್ನು ಮುಂದುವರೆಸಿದೆ.

ಜೂನ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

2022ರ ಮಾರ್ಚ್ 31ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ, ಐಷರ್ ಮೋಟಾರ್ಸ್ ಕಾರ್ಯಾಚರಣೆಗಳಿಂದ ಒಟ್ಟು ಆದಾಯವು ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿತ್ತು 2020-21ರ ಹಣಕಾಸಿನ ವರ್ಷದ ತ್ರೈಮಾಸಿಕದಲ್ಲಿ ರೂ,2,940 ಕೋಟಿಗೆ ಹೋಲಿಸಿದರೆ ರೂ.3,193 ಕೋಟಿ, 8.6 ಶೇ. ಕಳೆದ ವರ್ಷ ಇದೇ ಅವಧಿಯಲ್ಲಿ ರೂ.526 ಕೋಟಿಗೆ ಹೋಲಿಸಿದರೆ ತೆರಿಗೆಯ ನಂತರದ ಲಾಭ ರೂ.610 ಕೋಟಿ, ಶೇ.16 ಹೆಚ್ಚಳವಾಗಿದೆ.

ಜೂನ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಇನ್ನು ರಾಯಲ್ ಎನ್‌ಫೀಲ್ಡ್ ಕಂಪನಿಯು ತನ್ನ ಮಾದರಿಗಳ ಸರಣಿಯನ್ನು ಹೊಸ ಭೌಗೋಳಿಕ ಪ್ರದೇಶಗಳಿಗೆ ವಿಸ್ತರಿಸುವುದರಿಂದ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕೇಂದ್ರೀಕೃತ ಪ್ರದೇಶವಾಗಿ ಉಳಿದಿವೆ. 2021 ರಲ್ಲಿ ಭಾರತ ಮತ್ತು ಥೈಲ್ಯಾಂಡ್‌ನಲ್ಲಿ ಬಿಡುಗಡೆಯಾದ ನಂತರ ಹೊಸ ಕ್ಲಾಸಿಕ್ 350 ಅನ್ನು ಫಿಲಿಪೈನ್ಸ್, ಕೊರಿಯಾ, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಮತ್ತು ಯುಕೆಯಲ್ಲಿಯು ಕೂಡ ಬಿಡುಗಡೆಗೊಳಿಸಿತ್ತು.

ಜೂನ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಇನ್ನು ರಾಯಲ್ ಎನ್‍ಫೀಲ್ಡ್ ತನ್ನ ಬಹುನಿರೀಕ್ಷಿತ ಸ್ಕ್ರಾಮ್ 411 ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ರಾಯಲ್ ಎನ್‍ಫೀಲ್ಡ್ ಸ್ಕ್ರಾಮ್ 411 ಬೈಕಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.2.03 ಲಕ್ಷಗಳಾಗಿದೆ. ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 411 ಜನಪ್ರಿಯ ಹಿಮಾಲಯನ್ ಅಡ್ವೆಂಚರ್ ಟೂರರ್ ಆಧಾರಿತ ಬೈಕ್ ಆಗಿದೆ. ಹಿಮಾಲಯದಿಂದ ತನ್ನನ್ನು ಪ್ರತ್ಯೇಕಿಸಲು ದೃಶ್ಯ ಬದಲಾವಣೆಗಳನ್ನು ಪಡೆಯುತ್ತದೆ.

ಜೂನ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಈ ಹೊಸ ಸ್ಕ್ರಾಮ್ 411 ಬೈಕಿನಲ್ಲಿ ವೃತ್ತಾಕಾರದ ಹೆಡ್‌ಲ್ಯಾಂಪ್, ಡರ್ಟ್‌ಬೈಕ್-ಶೈಲಿಯ ಮಡ್‌ಗಾರ್ಡ್‌ಗಳು, ಸಿಂಗಲ್ ಪೀಸ್ ಸೀಟ್, ದೊಡ್ಡ ಇಂಧನ ಟ್ಯಾಂಕ್ ಮತ್ತು ಡ್ಯುಯಲ್-ಪರ್ಪಸ್ ಟೈರ್‌ಗಳು ಹೊಂದಿದೆ, ಇವುಗಳು ಸರಿಯಾದ ಸ್ಕ್ರಾಂಬ್ಲರ್‌ನ ವಿನ್ಯಾಸದ ಲಕ್ಷಣಗಳಾಗಿವೆ. ಇದರೊಂದಿಗೆ ಇದೀಗ ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಸ್ಕ್ರಾಮ್ 411 ಬೈಕ್ ಗಾಗಿ ಅಕ್ಸೆಸರೀಸ್ ಗಳನ್ನು ಬಿಡುಗಡೆಗೊಳಿಸಿದೆ.

ಜೂನ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ಇನ್ನು ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ. ಈ ವರ್ಷ ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಬೈಕ್‌ಗಳನ್ನು ಬಿಡುಗಡೆಗೊಳಿಸಲಿದೆ. ಭಾರತದಲ್ಲಿ ರಾಯಲ್ ಎನ್‌ಫೀಲ್ಡ್ ಬೈಕ್‌ಗಳಿಗೆ ದೊಡ್ಡ ಅಭಿಮಾನಿ ವರ್ಗವಿದೆ. ಈ ರಾಯಲ್ ಎನ್‌ಫೀಲ್ಡ್ ಕಂಪನಿಯು 350ಸಿಸಿಯಿಂದ 650ಸಿಸಿ ವರೆಗಿನ ಬೈಕ್‌ಗಳನ್ನು ಬಿಡುಗಡೆಗೊಳಿಸಲಿವೆ. ಶೀಘ್ರದಲ್ಲೇ ಈ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.

ಜೂನ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ಶಾಟ್‌ಗನ್, ಹಂಟರ್, ಫ್ಲೈಯಿಂಗ್ ಫ್ಲಿಯಾ, ಶೆರ್ಪಾ ಮತ್ತು ರೋಡ್ಸ್ಟರ್ ಸೇರಿದಂತೆ ಮುಂಬರುವ ಮಾದರಿಗಳಿಗಾಗಿ ಅನೇಕ ನೇಮ್‌ಪ್ಲೇಟ್‌ಗಳನ್ನು ಟ್ರೇಡ್‌ಮಾರ್ಕ್ ಮಾಡಿದೆ. ಈ ವರ್ಷ ಹಲವಾರು ನವೀಕರಣಗಳನೊಂದಿಗೆ ತಮ್ಮ ಜನಪ್ರಿಯ ಮಾದರಿಗಳನ್ನು ಪರಿಚಯಿಸುತ್ತದೆ. ಇದರಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯ ನ್ಯೂ ಜನರೇಷನ್ ಬುಲೆಟ್ 350 ಬೈಕ್ ಒಳಗೊಂಡಿರಬಹುದು.

ಜೂನ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‍ಫೀಲ್ಡ್ ಕಂಪನಿಯು ಮುಂದೆ ಬಡುಗಡೆಗೊಳಿಸುವ ಮಾದರಿಗಳಲ್ಲಿ ಹೊಸ ಹಂಟರ್ 350 ಕೂಡ ಒಳಗೊಂಡಿದೆ. ಈ ನಿರ್ದಿಷ್ಟ ಮುಂಬರುವ ರಾಯಲ್ ಎನ್‌ಫೀಲ್ಡ್ ಮೋಟಾರ್‌ಸೈಕಲ್ ರಾಯಲ್ ಎನ್‌ಫೀಲ್ಡ್ ಮೆಟಿಯರ್ 350 ಪ್ಲಾಟ್‌ಫಾರ್ಮ್ (ರಾಯಲ್ ಎನ್‌ಫೀಲ್ಡ್ ಜೆ-ಪ್ಲಾಟ್‌ಫಾರ್ಮ್) ಅನ್ನು ಆಧರಿಸಿದೆ. ಮುಂಬರುವ ರಾಯಲ್ ಎನ್‌ಫೀಲ್ಡ್ ಹಂಟರ್ 350 ರಾಯಲ್ ಎನ್‌ಫೀಲ್ಡ್‌ನ ಉತ್ಪನ್ನ ಪೋರ್ಟ್‌ಫೋಲಿಯೊದಲ್ಲಿ ಕೈಗೆಟುಕುವ ಬೆಲೆಯನ್ನು ಹೊಂದಿರುತ್ತದೆ.

Article Published On: Saturday, July 2, 2022, 17:35 [IST]
English summary
Royal enfield registers 43 percent sales growth in june 2022 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+