Just In
- 8 hrs ago
ಕ್ರ್ಯಾಶ್ ಟೆಸ್ಟ್ನಲ್ಲಿ ಗರಿಷ್ಠ ರೇಟಿಂಗ್ ಪಡೆದುಕೊಂಡ ಹೊಸ ಕಿಯಾ ಇವಿ6 ಎಲೆಕ್ಟ್ರಿಕ್ ಕಾರು
- 8 hrs ago
ಕೇವಲ 40 ಸಾವಿರ ರೂ. ಬೆಲೆಗೆ ಬಿಡುಗಡೆಯಾಗಿದೆ 100 ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್
- 9 hrs ago
ಎರ್ಟಿಗಾದಲ್ಲಿ ಹೊಸ ಸಿಎನ್ಜಿ ರೂಪಾಂತರಗಳನ್ನು ಪರಿಚಯಿಸಲು ಸಜ್ಜಾದ ಮಾರುತಿ ಸುಜುಕಿ
- 10 hrs ago
ಏಪ್ರಿಲ್ ತಿಂಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಯಮಹಾ ಎಂಟಿ-15 ಬೈಕ್
Don't Miss!
- Sports
IPL 2022: ಕೆಎಲ್ ರಾಹುಲ್ ಹೋರಾಟ ವ್ಯರ್ಥ, ಲಕ್ನೋಗೆ ಮಣ್ಣು ಮುಕ್ಕಿಸಿದ ಆರ್ಸಿಬಿ ಟ್ರೋಫಿ ಕನಸು ಜೀವಂತ
- News
ವಿಮಾನ ಇಂಧನ ತೆರಿಗೆ ಕಡಿತ ಮಾಡುತ್ತಾ ಕೇಂದ್ರ ಸರ್ಕಾರ?
- Movies
ಹಿಜಾಬ್ ಧರಿಸಿ ಮುಸ್ಲಿಂ ಮಹಿಳೆಯರ ಪಾತ್ರ ಮಾಡುತ್ತಿರುವ ಸ್ಟಾರ್ ನಟಿಯರಿವರು
- Lifestyle
12 ಲಕ್ಷ ಖರ್ಚು ಮಾಡಿದ ನಾಯಿಯಾದ ಜಪಾನಿನ ವ್ಯಕ್ತಿ!
- Finance
ಮೇ 25ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Technology
ಅಪ್ಲಿಕೇಶನ್ ಡೆವಲಪರ್ಗಳಿಗೆ ಮತ್ತೊಮ್ಮೆ ಸಂದೇಶ ಕಳುಹಿಸಿದ ಆಪಲ್ ಕಂಪೆನಿ!
- Education
ESIC MTS 2022 : ಫೇಸ್ I ಫಲಿತಾಂಶ ಮತ್ತು ಫೇಸ್ II ಪ್ರವೇಶ ಪತ್ರ ಪ್ರಕಟ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಬಣ್ಣದ ಆಯ್ಕೆಯಲ್ಲಿ ಕಾಣಿಸಿಕೊಂಡ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350 ಬೈಕ್
ಕೆಲವು ದಿನಗಳ ಹಿಂದೆ ರಾಯಲ್ ಎನ್‌ಫೀಲ್ಡ್ ಕಂಪನಿಯು ತನ್ನ ಮಿಟಿಯೊರ್ 350 ಕ್ರೂಸರ್ ಹೊಸ ಬಣ್ಣದ ಆಯ್ಕೆಯನ್ನು ಪರಿಚಯಿಸಲಿದೆ ಎಂದು ಹೇಳಲಾಗುತ್ತಿತ್ತು. ಇದೀಗ ರಾಯಲ್ ಎನ್‌ಫೀಲ್ಡ್ ಡೀಲರ್‌ಶಿಪ್‌ನಲ್ಲಿ ಹೊಸ ನೆಟ್ ಮ್ಯಾಟ್ ಗ್ರೀನ್ ಬಣ್ಣದ ಮಿಟಿಯೊರ್ 350 ರೆಟ್ರೊ ಕ್ರೂಸರ್ ಬೈಕ್ ಕಾಣಿಸಿಕೊಂಡಿದೆ.

ಹಿಂದಿನ ನೀಲಿ ಬಣ್ಣದ ಆಯ್ಕೆಯಂತೆ, ಈ ಹೊಸ ಮ್ಯಾಟ್ ಗ್ರೀನ್ ಛಾಯೆಯು ಬೇಸ್ ಫೈರ್‌ಬಾಲ್ ರೂಪಾಂತರದಲ್ಲಿ ಲಭ್ಯವಿರುತ್ತದೆ. ಆದರೆ ಮುಂಬರುವ ಹಸಿರು ಛಾಯೆಯು ಮ್ಯಾಟ್ ಫಿನಿಶ್‌ನೊಂದಿಗೆ ಬರುವ ನಿರೀಕ್ಷೆಯಿದೆ. ರಾಯಲ್ ಎನ್‌ಫೀಲ್ಡ್ ಫೈರ್‌ಬಾಲ್ ರೂಪಾಂತರವು ಪ್ರಸ್ತುತ ಹಳದಿ ಮತ್ತು ಕೆಂಪು ಬಣ್ಣದ ಆಯ್ಕೆಯಲ್ಲಿದೆ. ಇದನ್ನು ಹೊರತುಪಡಿಸಿ ಮಿಟಿಯೊರ್ 350 ಅನ್ನು ಸ್ಟೆಲ್ಲರ್ ಮತ್ತು ಸೂಪರ್ನೋವಾ ಎಂಬ ಎರಡು ಇತರ ಟ್ರಿಮ್‌ಗಳಲ್ಲಿ ನೀಡಲಾಗುತ್ತದೆ, ಇದು ಮೆಟಾಲಿಕ್ ಬ್ಲೂ, ಮೆಟಾಲಿಕ್ ರೆಡ್, ಮ್ಯಾಟ್ ಬ್ಲಾಕ್, ಬ್ರೌನ್ ಮತ್ತು ಡ್ಯುಯಲ್-ಟೋನ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.

ರಾಯಲ್ ಎನ್ಫೀಲ್ಡ್ ಮಿಟಿಯೊರ್ 350 ಬೈಕಿನಲ್ಲಿ ಹೊಸ ಬಣ್ಣದ ಆಯ್ಕೆಯನ್ನು ಹೊರತಾಗಿ ಕ್ರೂಸರ್‌ನಲ್ಲಿ ಯಾವುದೇ ಇತರ ನವೀಕರಣಗಳನ್ನು ಹೊಂದಿರುವುದಿಲ್ಲವೆಂದು ನಿರೀಕ್ಷಿಸುತ್ತೇವೆ. ರಾಯಲ್ ಎನ್ಫೀಲ್ಡ್ ಮಿಟಿಯೊರ್ 350 ಬೈಕನ್ನು ತಮಿಳುನಾಡು ಮತ್ತು ಯುಕೆ ಮೂಲದ ಆರ್‌ಇ ತಂಡವು ವಿನ್ಯಾಸಗೊಳಿಸಿದೆ.

ಹಿಂದಿನ ಥಂಡರ್‌ಬರ್ಡ್ ಎಕ್ಸ್ ಮಾದರಿಯನ್ನು ಆಧರಿಸಿ ನಿರ್ಮಾಣಗೊಂಡಿರುವ ಮಿಟಿಯೊರ್ 350 ಬೈಕ್ ಮಾದರಿಯು ಥಂಡರ್‌ಬರ್ಡ್ ಬೈಕಿಗಿಂತಲೂ ಸಾಕಷ್ಟು ವಿಭಿನ್ನವಾಗಿ ಮತ್ತು ಆಕರ್ಷಕವಾಗಿದೆ. ಈ ಹೊಸ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350 ಬೈಕಿನಲ್ಲಿ 349 ಸಿಸಿ, ಏರ್/ಆಯಿಲ್-ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಇದರಲ್ಲಿ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅನ್ನು ಕೂಡ ಪಡೆಯುತ್ತದೆ. ಈ ಎಂಜಿನ್ 20.2 ಬಿಹೆಚ್‍ಪಿ ಪವರ್ ಮತ್ತು 27 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5-ಸ್ಪೀಡ್ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗಿದೆ.

ಈ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350 ಬೈಕನ್ನು ಹೊಸ ಜೆ ಪ್ಲಾಟ್‌ಫಾರ್ಮ್‌ನಲ್ಲಿ ವಿನ್ಯಾಸಗೊಳಿಸಲಾಗಿದೆ. ಡಬಲ್ ಡೌನ್‌ಟ್ಯೂಬ್ ಕ್ರೆಡಲ್ ಫ್ರೇಮ್ ಮೇಲೆ ಅಭಿವೃದ್ದಿಗೊಂಡಿರುವ ಹೊಸ ಬೈಕ್ ಮಾದರಿಯು ಥಂಡರ್‌ಬರ್ಡ್ ಮಾದರಿಗಿಂತಲೂ ಹೆಚ್ಚು ಅರಾಮದಾಯಕ ರೈಡಿಂಗ್ ಅನುಭವ ನೀಡುತ್ತದೆ.

ಈ ರೆಟ್ರೊ ಕ್ರೂಸರ್ ಬೈಕ್ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 41-ಎಂಎಂ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಟ್ವಿನ್ ಶಾಕ್ ಅಬ್ಸಾರ್ಬರ್ ಅನ್ನು ಹೊಂದಿದೆ..

ರಾಯಲ್ ಎನ್ಫೀಲ್ಡ್ ಮಿಟಿಯೊರ್ 350 ಬೈಕಿನ ಮುಂಭಾಗ 19-ಇಂಚಿನ ಮತ್ತು ಹಿಂಭಾಗದಲ್ಲಿ 17-ಇಂಚಿನ ಅಲಾಯ್ ವ್ಹೀಲ್ ಗಳನ್ನು ಜೋಡಿಸಲಾಗಿದೆ. ಇದು ಕ್ರಮವಾಗಿ 100 / 90-19 57 ಪಿ ಮತ್ತು 140 / 70-17 66 ಪಿ ಸಿಯೆಟ್ ಟ್ಯೂಬ್‌ಲೆಸ್ ಟೈರ್ ಅನ್ನು ಹೊಂದಿದೆ.

ಇದರೊಂದಿಗೆ ರಾಯಲ್ ಎನ್ಫೀಲ್ಡ್ ಮಿಟಿಯೊರ್ 350 ಬೈಕಿನಲ್ಲಿ ಟಿಪ್ಪರ್ ಪಾಡ್ ಒಳಗೊಂಡಿರುವ ಟರ್ನ್-ಬೈ-ಟರ್ನ್ ಗೂಗಲ್ ನ್ಯಾವಿಗೇಷನ್, ಬ್ಲೂಟೂತ್ ಮೂಲಕ ಕನೆಕ್ಟ್ ಮಾಡಬಹುದಾದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಇನ್ನು ಇದರೊಂದಿಗೆ ಹಲವಾರು ಫೀಚರ್ ಗಳನ್ನು ಒಳಗೊಂಡಿದೆ.
ಇನ್ನು ರಾಯಲ್ ಎನ್‌ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದೆ. ಈ ರಾಯಲ್ ಎನ್‌ಫೀಲ್ಡ್ ಕಂಪನಿಯು 2022ರ ಮಾರ್ಚ್ ತಿಂಗಳ ಮಾರಾಟದ ವರದಿಯನ್ನು ಇತ್ತೀಚೆಗೆ ಬಹಿರಂಗಪಡಿಸಿತ್ತು ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ ಕಂಪನಿಯು ಒಟ್ಟು 59,160 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

ಕಳೆದ ವರ್ಷದ ಮಾರ್ಚ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 66,058 ಯುನಿಟ್‌ಗಳನ್ನು ಮಾರಾಟಗೊಳಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಸುಮಾರು ಶೇಕಡಾ 2.39 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಇನ್ನು ದೇಶಿಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 58,477 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಆದರೆ ಕಳೆದ ವರ್ಷದ ಮಾರ್ಚ್ ತಿಂಗಳಿನಲ್ಲಿ 60,173 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ದೇಶಿಯ ಮಾರುಕಟ್ಟೆಯ ಮಾರಾಟದಲ್ಲಿ ಶೇಕಡಾ 3 ರಷ್ಟು ಕುಸಿತವನ್ನು ಕಂಡಿದೆ.

ಇನ್ನು ರಫ್ತು ವಿಭಾಗದಲ್ಲಿ, ಕಳೆದ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 9,200 ಯುನಿಟ್‌ಗಳನ್ನು ರಫ್ತು ಮಾಡಿದೆ. 2021ರ ಮಾರ್ಚ್ ತಿಂಗಳಿನಲ್ಲಿ 5,885 ಯುನಿಟ್‌ಗಳನ್ನು ರಫ್ತು ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ರಫ್ತಿಗೆ ಹೋಲಿಸಿದರೆ ಶೇಕಡಾ 56 ರಷ್ಟು ಏರಿಕೆಯಾಗಿದೆ.

ರಾಯಲ್ ಎನ್‍ಫೀಲ್ಡ್ ಮೆಟಿಯೊರ್ 350 ಬೈಕ್ ಅನ್ನು ಸಹ ವಿಶ್ವದ ಹಲವು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಲಾಗುತ್ತದೆ. ರಾಯಲ್ ಎನ್‌ಫೀಲ್ಡ್ ಕಂಪನಿಯ ಬೈಕ್‌ಗಳನ್ನು ಥೈಲ್ಯಾಂಡ್, ಯುರೋಪ್ ಸೇರಿದಂತೆ ಹಲವು ದೇಶಗಳಲ್ಲಿ ಮಾರಾಟ ಮಾಡಲಾಗುತ್ತದೆ. ಇನ್ನು ದೇಶಿಯ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ.

ಇದರಿಂದ ಈ ವರ್ಷ ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಬೈಕ್‌ಗಳನ್ನು ಬಿಡುಗಡೆಗೊಳಿಸಲಿದೆ. ಭಾರತದಲ್ಲಿ ರಾಯಲ್ ಎನ್‌ಫೀಲ್ಡ್ ಬೈಕ್‌ಗಳಿಗೆ ದೊಡ್ಡ ಅಭಿಮಾನಿ ವರ್ಗವಿದೆ. ಈ ರಾಯಲ್ ಎನ್‌ಫೀಲ್ಡ್ ಕಂಪನಿಯು 350ಸಿಸಿಯಿಂದ 650ಸಿಸಿ ವರೆಗಿನ ಬೈಕ್‌ಗಳನ್ನು ಬಿಡುಗಡೆಗೊಳಿಸಲಿವೆ. ಶೀಘ್ರದಲ್ಲೇ ಈ ಹೊಸ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು ಬಿಡುಗಡೆಯಗಲಿವೆ ಎಂದು ನಿರೀಕ್ಷಿಸುತ್ತೇವೆ.