ಬಹುನೀರಿಕ್ಷಿತ ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್ ವಿತರಣಾ ಅವಧಿಯ ಮಾಹಿತಿ ಬಹಿರಂಗ
ಬೆಂಗಳೂರು ಮೂಲದ ಸಿಂಪಲ್ ಎನರ್ಜಿ(Simple Energy) ಕಂಪನಿಯು ತನ್ನ ಬಹುನೀರಿಕ್ಷಿತ ಸಿಂಪಲ್ ಒನ್(Simple One) ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿ ವಿತರಣೆಗೆ ಸಿದ್ದವಾಗುತ್ತಿದ್ದು, ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಮುಂದಿನ ಕೆಲವೇ ದಿನಗಳಲ್ಲಿ ಗ್ರಾಹಕರ ಕೈಸೇರುವ ಸಿದ್ದತೆಯಲ್ಲಿದೆ.

ಹೊಸ ಸಿಂಪಲ್ ಒನ್ ಇವಿ ಸ್ಕೂಟರ್ ಮಾದರಿಯು ತಾಂತ್ರಿಕ ಅಂಶಗಳಲ್ಲಿ, ಬ್ಯಾಟರಿ ರೇಂಜ್ ಮತ್ತು ಬೆಲೆ ವಿಚಾರವಾಗಿ ಗ್ರಾಹಕರನ್ನು, ಹೊಸ ಇವಿ ಸ್ಕೂಟರ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಇತರೆ ಎಲ್ಲಾ ಇವಿ ಸ್ಕೂಟರ್‌ಗಳಿಂತಲೂ ಉತ್ತಮ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ.
ಅಗಸ್ಟ್ 14ರಂದ ಬಿಡುಗಡೆಯಾಗಿದ್ದ ಹೊಸ ಸ್ಕೂಟರ್ ಸ್ಕೂಟರ್ ಮಾದರಿಯು ಇದುವರೆಗೆ ಸುಮಾರು 30 ಸಾವಿರ ಗ್ರಾಹಕರಿಂದ ಬುಕ್ಕಿಂಗ್ ಪಡೆದುಕೊಂಡಿದ್ದು, ಹೊಸ ಸ್ಕೂಟರ್ ಮಾದರಿಯು ಮುಂಬರುವ ಜೂನ್ ವೇಳೆಗೆ ವಿತರಣೆಯಾಗಲಿದೆ.

ಇವಿ ಸ್ಕೂಟರ್ ಮಾದರಿಗಾಗಿ ಬುಕ್ಕಿಂಗ್ ಸಲ್ಲಿಸಿ ವಿತರಣೆಗಾಗಿ ಕಾಯುತ್ತಿರುವ ಗ್ರಾಹಕರಿಗೆ ಹೊಸ ಮಾಹಿತಿ ಹಂಚಿಕೊಂಡಿರುವ ಸಿಂಪಲ್ ಎನರ್ಜಿ ಕಂಪನಿಯು ಮುಂಬರುವ ಜೂನ್‌ನಿಂದ ವಿತರಣೆ ಆರಂಭಿಸುತ್ತಿದ್ದು, ಎಲ್ಲಾ ಹಂತದಲ್ಲೂ ವಿತರಣಾ ಪ್ರಕ್ರಿಯೆಯನ್ನು ಸರಳಗೊಳಿಸಿದ ನಂತರಷ್ಟೇ ಗ್ರಾಹಕರಿಗೆ ವಿತರಿಸಲು ಮುಂದಾಗಿದೆ.

ಸಿಂಪಲ್ ಎನರ್ಜಿ ಕಂಪನಿಯು ಸಿಂಪಲ್ ಒನ್ ಇವಿ ಸ್ಕೂಟರ್ ಬೆಲೆಯನ್ನು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 1.10 ಲಕ್ಷಕ್ಕೆ ನಿಗದಿಪಡಿಸಿದ್ದು, ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ವಿಶ್ವದಲ್ಲೇ ಅತಿ ಹೆಚ್ಚು ಮೈಲೇಜ್ ಹೊಂದಿರುವ ಇವಿ ಸ್ಕೂಟರ್ ಎಂಬ ಹೆಗ್ಗೆಳಿಕೆಗೆ ಪಾತ್ರವಾಗಿದೆ.

ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಬ್ಯಾಟರಿ ರೇಂಜ್ ಮತ್ತು ಬೆಲೆ ವಿಚಾರವಾಗಿ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುವ ಎಲ್ಲಾ ಗುಣವೈಶಿಷ್ಟ್ಯತೆ ಹೊಂದಿದ್ದು, ಬಿಡುಗಡೆಯ ನಂತರ ವಿತರಣೆಯನ್ನು ವಿಳಂಬ ಮಾಡುತ್ತಿರುವ ಹಿನ್ನಲೆಯಲ್ಲಿ ಗ್ರಾಹಕರು ಅಸಮಾಧಾನಗೊಂಡಿರುವುದನ್ನು ಕಂಪನಿಯು ಅರಿತಿದೆ. ಹೀಗಾಗಿ ಹೊಸ ಇವಿ ಸ್ಕೂಟರ್ ಮಾದರಿಗೆ ಕಾಯುತ್ತಿರುವ ಗ್ರಾಹಕರಿಗೆ ಭರವಸೆ ನೀಡಿರುವ ಕಂಪನಿಯು ಪ್ರತಿಸ್ಪರ್ಧಿಗಳಂತೆ ಸಾಮೂಹಿಕ ಉತ್ಪಾದನೆಗೆ ಧಾವಿಸದೆ ಸ್ಕೂಟರ್ ಅನ್ನು ಮತ್ತಷ್ಟು ಸುಧಾರಣೆಗೊಳಿಸಿ ಗ್ರಾಹಕರಿಗೆ ವಿತರಿಸುವುದಾಗಿ ಹೇಳಿಕೊಂಡಿದೆ.

ಸದ್ಯ ಅನಾವರಣಗೊಳಿಸಲಾದ ಸಿಂಪಲ್ ಒನ್ ಮಾದರಿಗಿಂತಲೂ ನವೀಕರಣಗೊಂಡ ಮಾದರಿಯು ಮತ್ತಷ್ಟು ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದ್ದು, ಹೊಸ ನವೀಕರಣ ಕುರಿತು ಕಂಪನಿಯು ಶೀಘ್ರದಲ್ಲೇ ಇನ್ನಷ್ಟು ಮಾಹಿತಿಯನ್ನು ಹಂಚಿಕೊಳ್ಳಲಿದೆ.

ಸಿಂಪಲ್ ಎನರ್ಜಿ ಕಂಪನಿಯು ಸದ್ಯ ನಮ್ಮ ಬೆಂಗಳೂರಿನಲ್ಲಿಯೇ ಹೊಸ ಉತ್ಪಾದನಾ ಘಟಕದಲ್ಲಿ ಇವಿ ಸ್ಕೂಟರ್‌ಗಳ ಉತ್ಪಾದನಾ ಪ್ರಕ್ರಿಯೆಯನ್ನು ನಡೆಸುತ್ತಿದ್ದು, ಕಂಪನಿಯು ಶೀಘ್ರದಲ್ಲಿಯೇ ಎರಡನೇ ಘಟಕವನ್ನು ತಮಿಳುನಾಡಿನ ಧರ್ಮಪುರಿಯಲ್ಲಿ ಆರಂಭಿಸುತ್ತಿದೆ.

ಆರಂಭಿಕ ಬಂಡವಾಳದೊಂದಿಗೆ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಈಗಾಗಲೇ ಮುಖ್ಯ ಕಚೇರಿ ಮತ್ತು ಉತ್ಪಾದನಾ ಘಟಕ ಹೊಂದಿರುವ ಸಿಂಪಲ್ ಎನರ್ಜಿ ಕಂಪನಿಯು ಮುಂದಿನ ಕೆಲವೇ ತಿಂಗಳಿನಲ್ಲಿ ಎರಡನೇ ಘಟಕದಲ್ಲೂ ಉತ್ಪಾದನೆ ಆರಂಭಿಸಲಿದೆ.
ಎರಡನೇ ಉತ್ಪಾದನಾ ಘಟಕವು ಸುಮಾರು 600 ಎಕರೆ ವಿಸ್ತಾರವಾಗಿದ್ದು, ಹೊಸ ಘಟಕ ನಿರ್ಮಾಣ ಮತ್ತು ಹೊಸ ಇವಿ ವಾಹನಗಳ ಅಭಿವೃದ್ದಿಗಾಗಿ ಕಂಪನಿಯು ಸುಮಾರು ರೂ. 2,500 ಕೋಟಿ ಬಂಡವಾಳವನ್ನು ಹಂತ-ಹಂತವಾಗಿ ಹೂಡಿಕೆ ಮಾಡುತ್ತಿದೆ.

ಸಿಂಪಲ್ ಎನರ್ಜಿ ಕಂಪನಿಯು ರೂ.2,500 ಕೋಟಿ ಬಂಡವಾಳದಲ್ಲಿ ರೂ. 1 ಸಾವಿರ ಕೋಟಿಯನ್ನು ಎರಡನೇ ಉತ್ಪಾದನಾ ಘಟಕದ ನಿರ್ಮಾಣಕ್ಕಾಗಿ ಮತ್ತು ಇನ್ನುಳಿದ ರೂ. 1,500 ಕೋಟಿ ಬಂಡವಾಳವನ್ನು ಮುಂದಿನ ಐದು ವರ್ಷಗಳಿಗೆ ಹಂತ-ಹಂತವಾಗಿ ಆರ್ ಅಂಡ್ ಡಿ, ಟೆಸ್ಟಿಂಗ್ ಟ್ರ್ಯಾಕ್ ಸೇರಿದಂತೆ ಮಾರುಕಟ್ಟೆ ವಿಸ್ತರಣೆಯ ಮೇಲೆ ಹೂಡಿಕೆ ಮಾಡಲಿದೆ.

ಸಿಂಪಲ್ ಎನರ್ಜಿ ಕಂಪನಿಯು ದೇಶದ 13 ರಾಜ್ಯಗಳ ಪ್ರಮುಖ ನಗರಗಳಲ್ಲಿ ಸದ್ಯ ಮಾರಾಟ ಸೌಲಭ್ಯವನ್ನು ಆರಂಭಿಸುತ್ತಿದ್ದು, ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆ ಹೆಚ್ಚಿದಂತೆ ಇವಿ ಸ್ಕೂಟರ್ ಮಾರಾಟ ಸೌಲಭ್ಯವು ಹಂತ-ಹಂತವಾಗಿ ದೇಶದ ಪ್ರಮುಖ ದೇಶಗಳಲ್ಲಿ ವಿಸ್ತರಣೆಯಾಗಲಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸ್ಪೋರ್ಟಿ ವಿನ್ಯಾಸದೊಂದಿಗೆ ಅತ್ಯುತ್ತಮ ತಂತ್ರಜ್ಞಾನ ಸೌಲಭ್ಯಗಳನ್ನು ಹೊಂದಿದ್ದು, ಹೊಸ ಸ್ಕೂಟರ್‌ನಲ್ಲಿ ತ್ರಿಕೊನಾಕಾರದ ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಹೆಡ್‌ಲ್ಯಾಂಪ್, ಸೈಡ್ ಬೈ ಟರ್ನ್ ಸಿಗ್ನಲ್ ಇಂಡಿಕೇಟರ್, ಫ್ಲ್ಯಾಟ್ ಫುಟ್‌ಬೋರ್ಡ್, ಅಯಾಲ್ ವ್ಹೀಲ್, ಸ್ಪೋರ್ಟಿ ರಿಯರ್ ವ್ಯೂ ಮಿರರ್, 30-ಲೀಟರ್ ಅಂಡರ್ ಸೀಟ್ ಸ್ಟೋರೇಜ್ ಹೊಂದಿದೆ.

ಸಿಂಪಲ್ ಎನರ್ಜಿ ಇವಿ ಸ್ಕೂಟರ್‌ನಲ್ಲಿ 4.5KW ಎಲೆಕ್ಟ್ರಿಕ್ ಮೋಟಾರ್ ಜೊತೆಗೆ 4.8kWh ಲೀಥಿಯಂ ಅಯಾನ್ ಬ್ಯಾಟರಿ(ಡ್ಯುಯಲ್ ಬ್ಯಾಟರಿ) ಜೋಡಣೆ ಮಾಡಿದ್ದು, ಪ್ರತಿ ಚಾರ್ಚ್‌ಗೆ ವಿವಿಧ ರೈಡ್ ಮೋಡ್‌ಗಳ ಚಾಲನಾ ಶೈಲಿ ಆಧಾರದ ಮೇಲೆ ಕನಿಷ್ಠ 203 ಕಿ.ಮೀ ನಿಂದ ಗರಿಷ್ಠ 236 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಪ್ರತಿ ಗಂಟೆಗೆ 105 ಕಿ.ಮೀ ಟಾಪ್ ಸ್ಪೀಡ್ ಹೊಂದಿರುವ ಹೊಸ ಸಿಂಪಲ್ ಒನ್ ಸ್ಕೂಟರ್ 72 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಕೇವಲ 2.95 ಸೆಕೆಂಡುಗಳಲ್ಲಿ ಸೊನ್ನೆಯಿಂದ 40ಕಿ.ಮೀ ಕ್ವಿಕ್ ಸ್ಪೀಡ್ ಪಡೆದುಕೊಳ್ಳಲಿದ್ದು, ಹೊಸ ಸ್ಕೂಟರ್ ಅನ್ನು ಸಿಂಪಲ್ ಕಂಪನಿಯು ಟ್ಯೂಬಲರ್ ಫ್ರೆಮ್ ಬಳಕೆ ಮಾಡಿದೆ.

ಜೊತೆಗೆ ಸಿಂಪಲ್ ಒನ್ ಸ್ಕೂಟರ್ ಮಾದರಿಯಲ್ಲಿ 1024x600 ಫಿಕ್ಸೆಲ್ ಹೊಂದಿರುವ 7 ಇಂಚಿನ ಟಚ್‌ಸ್ಕ್ರೀನ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂಥ್ ಮತ್ತು 4ಜಿ ಇಂಟರ್‌ನೆಟ್ ಸಂಪರ್ಕಕ್ಕಾಗಿ ಕನೆಕ್ಟೆಡ್ ಟೆಕ್ನಾಲಜಿ ನೀಡಲಾಗಿದೆ. ಕನೆಕ್ಟೆಡ್ ಫೀಚರ್ಸ್‌ನಲ್ಲಿ ಜಿಯೋ ಫೆನ್ಸಿಂಗ್, ಮ್ಯೂಜಿಕ್ ಕಂಟ್ರೋಲ್, ಎಸ್ಒಎಸ್ ಮೆಸೇಜ್, ವೆಹಿಕಲ್ ಟ್ರ್ಯಾಕಿಂಗ್, ಡ್ಯಾಕುಮೆಂಟ್ ಸ್ಟೋರೇಜ್, ಫೈಂಡ್ ಮೈ ಬೈಕ್ ಸೌಲಭ್ಯಗಳಿವೆ.


Click it and Unblock the Notifications








