ಹೊಸ ತಂತ್ರಜ್ಞಾನದೊಂದಿಗೆ ಅತ್ಯಧಿಕ ಬ್ಯಾಟರಿ ದಕ್ಷತೆ ಖಾತ್ರಿಪಡಿಸಿದ ಸಿಂಪಲ್ ಎನರ್ಜಿ

ಸಿಂಪಲ್ ಎನರ್ಜಿ(Simple Energy) ಕಂಪನಿಯು ಹೊಸ ಸಿಂಪಲ್ ಒನ್ ಇವಿ ಸ್ಕೂಟರ್ ವಿತರಣೆಗೆ ಅಂತಿಮ ಸಿದ್ದತೆಯಲ್ಲಿದ್ದು, ಹೊಸ ಇವಿ ಸ್ಕೂಟರ್ ವಿತರಣೆ ಆರಂಭಕ್ಕೂ ಮುನ್ನ ಕಂಪನಿಯು ಹೊಸ ಇವಿ ಸ್ಕೂಟರ್ ಉತ್ಪಾದನೆ ಮತ್ತಷ್ಟು ಹೊಸತನ ಪರಿಚಯಿಸುವ ಮೂಲಕ ಸ್ಕೂಟರ್ ಕಾರ್ಯಕ್ಷಮತೆ ಮತ್ತು ಬ್ಯಾಟರಿ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಯೋಜನೆ ರೂಪಿಸಿದೆ.

ಹೊಸ ತಂತ್ರಜ್ಞಾನದೊಂದಿಗೆ ಅತ್ಯಧಿಕ ಬ್ಯಾಟರಿ ದಕ್ಷತೆ ಖಾತ್ರಿಪಡಿಸಿದ ಸಿಂಪಲ್ ಎನರ್ಜಿ

ಹೊಸ ಸಿಂಪಲ್ ಒನ್ ಇವಿ ಸ್ಕೂಟರ್ ಮಾದರಿಯು ಈಗಾಗಲೇ ತಾಂತ್ರಿಕ ಅಂಶಗಳಲ್ಲಿ, ಬ್ಯಾಟರಿ ರೇಂಜ್ ಮತ್ತು ಬೆಲೆ ವಿಚಾರವಾಗಿ ಗ್ರಾಹಕರನ್ನು ಸೆಳೆಯುತ್ತಿದ್ದು, ಹೊಸ ಸ್ಕೂಟರ್ ವಿತರಣೆಗೂ ಮುನ್ನ ಮತ್ತಷ್ಟು ಸ್ಕೂಟರ್ ಕಾರ್ಯಕ್ಷಮತೆಯಲ್ಲಿ ಸುಧಾರಿಸಲು ಸುಧಾರಿತ ತಾಂತ್ರಿಕ ಅಂಶಗಳೊಂದಿಗೆ ನಿರಂತರವಾಗಿ ಬದಲಾವಣೆಗಳನ್ನು ಮಾಡಲಾಗುತ್ತಿದೆ.

ಹೊಸ ತಂತ್ರಜ್ಞಾನದೊಂದಿಗೆ ಅತ್ಯಧಿಕ ಬ್ಯಾಟರಿ ದಕ್ಷತೆ ಖಾತ್ರಿಪಡಿಸಿದ ಸಿಂಪಲ್ ಎನರ್ಜಿ

ಸಿಂಪಲ್ ಒನ್ ಇವಿ ಸ್ಕೂಟರ್ ಮಾದರಿಯನ್ನು ಬಿಡುಗಡೆಗೊಳಿಸಿ ಬುಕ್ಕಿಂಗ್ ಆರಂಭಿಸಿರುವ ಸಿಂಪಲ್ ಎನರ್ಜಿ ಕಂಪನಿಯು ಮುಂಬರುವ ಜೂನ್‌ನಿಂದ ವಿತರಣೆ ಆರಂಭಿಸುವುದಾಗಿ ಹೇಳಿಕೊಂಡಿದ್ದು, ವಿತರಣೆ ಆರಂಭಕ್ಕೂ ಮುನ್ನ ಹೊಸ ಸ್ಕೂಟರ್‌ನಲ್ಲಿ ಕಂಪನಿಯು ಬ್ಯಾಟರಿ ರೇಂಜ್ ಮತ್ತು ಎಲೆಕ್ಟ್ರಿಕ್ ಮೋಟಾರ್ ಕಾರ್ಯಕ್ಷಮತೆಯಲ್ಲಿ ಮಹತ್ವದ ಬದಲಾವಣೆಯನ್ನು ಪರಿಚಯಿಸುತ್ತಿದೆ.

ಹೊಸ ತಂತ್ರಜ್ಞಾನದೊಂದಿಗೆ ಅತ್ಯಧಿಕ ಬ್ಯಾಟರಿ ದಕ್ಷತೆ ಖಾತ್ರಿಪಡಿಸಿದ ಸಿಂಪಲ್ ಎನರ್ಜಿ

ಉನ್ನತೀಕರಿಸಲಾದ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಕಂಪನಿಯು ಬ್ಯಾಟರಿ ನಿರ್ವಹಣಾ ವ್ಯವಸ್ಥೆಯನ್ನು (BMS) ಸುಧಾರಣೆಗೊಳಿಸಿದ್ದು, ಹೊಸ ತಂತ್ರಜ್ಞಾನ ಮೂಲಕ ಕಂಪನಿಯು ಎಲೆಕ್ಟ್ರಿಕ್ ವಾಹನ ಉದ್ಯಮದಲ್ಲಿಯೇ ಅತ್ಯಧಿಕ ದಕ್ಷತೆಯನ್ನು ಸಾಧಿಸಲು ಮುಂದಾಗಿದೆ.

ಹೊಸ ತಂತ್ರಜ್ಞಾನದೊಂದಿಗೆ ಅತ್ಯಧಿಕ ಬ್ಯಾಟರಿ ದಕ್ಷತೆ ಖಾತ್ರಿಪಡಿಸಿದ ಸಿಂಪಲ್ ಎನರ್ಜಿ

ಹೊಸ ಬ್ಯಾಟರಿ ನಿರ್ವಹಣಾ ವ್ಯವಸ್ಥೆಯ ಮೂಲಕ ಹೊಸ ಸ್ಕೂಟರ್ ಶೇ. 95 ರಷ್ಟು ಬ್ಯಾಟರಿ ದಕ್ಷತೆಯನ್ನು ಹಿಂದಿರುಗಿಸಲಿದ್ದು, 4.8 kWh ಬ್ಯಾಟರಿ ಹೊಂದಿರುವ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು 72 ಎನ್ಎಂ ಟಾರ್ಕ್ ಜೊತೆಗೆ ಇಕೋ ಮೋಡ್‌ನಲ್ಲೂ 200 ಕಿಮೀ ಗಿಂತಲೂ ಹೆಚ್ಚಿನ ಮೈಲೇಜ್ ಖಾತ್ರಿಪಡಿಸುತ್ತದೆ.

ಹೊಸ ತಂತ್ರಜ್ಞಾನದೊಂದಿಗೆ ಅತ್ಯಧಿಕ ಬ್ಯಾಟರಿ ದಕ್ಷತೆ ಖಾತ್ರಿಪಡಿಸಿದ ಸಿಂಪಲ್ ಎನರ್ಜಿ

ಸಿಂಪಲ್ ಎನರ್ಜಿ ಕಂಪನಿಯು ಹೊಸ ಬ್ಯಾಟರಿ ನಿರ್ವಹಣಾ ವ್ಯವಸ್ಥೆಯನ್ನು ISO 26262 ಭದ್ರತಾ ವ್ಯವಸ್ಥೆಯನ್ನು ಬೆಂಬಲಿಸುವಂತೆ ವಿನ್ಯಾಸಗೊಳಿಸಲಾಗಿದ್ದು, ಈ ಮಾರ್ಪಾಡುಗಳಿಂದ ಸಿಂಪಲ್ ಒನ್ ಉತ್ತಮ ಕಾರ್ಯಕ್ಷಮತೆಯೊಂದಿಗೆ ಉಷ್ಣಾಂಶ ನಿರ್ವಹಣೆ ಮತ್ತು ಉತ್ತಮ ದಕ್ಷತೆ ಗಮನಸೆಳೆಯಲಿದೆ.

ಹೊಸ ತಂತ್ರಜ್ಞಾನದೊಂದಿಗೆ ಅತ್ಯಧಿಕ ಬ್ಯಾಟರಿ ದಕ್ಷತೆ ಖಾತ್ರಿಪಡಿಸಿದ ಸಿಂಪಲ್ ಎನರ್ಜಿ

ಇನ್ನು ಸಿಂಪಲ್ ಒನ್ ಇವಿ ಸ್ಕೂಟರ್ ಮಾದರಿಯು 4.5KW ಎಲೆಕ್ಟ್ರಿಕ್ ಮೋಟಾರ್ ಜೊತೆಗೆ 4.8kWh ಲೀಥಿಯಂ ಅಯಾನ್ ಬ್ಯಾಟರಿ(ಡ್ಯುಯಲ್ ಬ್ಯಾಟರಿ) ಜೋಡಣೆ ಹೊಂದಿದ್ದು, ಇದು ಪ್ರತಿ ಚಾರ್ಚ್‌ಗೆ ವಿವಿಧ ರೈಡ್ ಮೋಡ್‌ಗಳ ಚಾಲನಾ ಶೈಲಿ ಆಧಾರದ ಮೇಲೆ ಕನಿಷ್ಠ 203 ಕಿ.ಮೀ ನಿಂದ ಗರಿಷ್ಠ 236 ಕಿ.ಮೀ ಮೈಲೇಜ್ ಹಿಂದಿರುಗಿಸುವುದಾಗಿ ಖಾತ್ರಿಪಡಿಸಿದೆ.

ಹೊಸ ತಂತ್ರಜ್ಞಾನದೊಂದಿಗೆ ಅತ್ಯಧಿಕ ಬ್ಯಾಟರಿ ದಕ್ಷತೆ ಖಾತ್ರಿಪಡಿಸಿದ ಸಿಂಪಲ್ ಎನರ್ಜಿ

ಇದರ ಜೊತೆಗೆ ಇನ್ನು ಹೆಚ್ಚಿನ ಮೈಲೇಜ್ ಬಯಸುವ ಗ್ರಾಹಕರಿಗೆ ಕಂಪನಿಯು ಹೆಚ್ಚುವರಿಯಾಗಿ 1.6 kWh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಅನ್ನು ಸಹ ಆಯ್ಕೆ ರೂಪದಲ್ಲಿ ಜೋಡಣೆ ಮಾಡುವುದಾಗಿ ಹೇಳಿಕೊಂಡಿದ್ದು, ಹೆಚ್ಚುವರಿ ಬ್ಯಾಟರಿ ಪ್ಯಾಕ್ ಮೂಲಕ ಸಿಂಪಲ್ ಒನ್ ಸ್ಕೂಟರ್ ಮಾಲೀಕರು ಪ್ರತಿ ಚಾರ್ಜ್‌ಗೆ 300 ಕಿ.ಮೀ ಗಿಂತಲೂ ಹೆಚ್ಚು ದೂರ ಪ್ರಯಾಣಿಸಬಹುದಾಗಿದೆ.

ಹೊಸ ತಂತ್ರಜ್ಞಾನದೊಂದಿಗೆ ಅತ್ಯಧಿಕ ಬ್ಯಾಟರಿ ದಕ್ಷತೆ ಖಾತ್ರಿಪಡಿಸಿದ ಸಿಂಪಲ್ ಎನರ್ಜಿ

1.6 kWh ಸಾಮರ್ಥ್ಯದ ಹೆಚ್ಚುವರಿ ಬ್ಯಾಟರಿ ಪ್ಯಾಕ್ ಅನ್ನು ಕಂಪನಿಯು ಹೊಸ ಸ್ಕೂಟರಿನ ಬೂಟ್‌ ಸ್ಪೆಸ್‌ನಲ್ಲಿ ಸುಲಭವಾಗಿ ಇರಿಸುವಂತೆ ವಿನ್ಯಾಸಗೊಳಿಸಿದ್ದು, ಇದು ದೂರದ ಪ್ರಯಾಣಕ್ಕೆ ಹೆಚ್ಚು ಸಹಕಾರಿಯಾಗಲಿದೆ.

ಹೊಸ ತಂತ್ರಜ್ಞಾನದೊಂದಿಗೆ ಅತ್ಯಧಿಕ ಬ್ಯಾಟರಿ ದಕ್ಷತೆ ಖಾತ್ರಿಪಡಿಸಿದ ಸಿಂಪಲ್ ಎನರ್ಜಿ

ಸಿಂಪಲ್ ಎನರ್ಜಿ ಕಂಪನಿಯು ಸದ್ಯ ಸ್ಟ್ಯಾಂಡರ್ಡ್ ಸಿಂಪಲ್ ಒನ್ ಇವಿ ಸ್ಕೂಟರ್ ಬೆಲೆಯನ್ನು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 1.10 ಲಕ್ಷಕ್ಕೆ ನಿಗದಿಪಡಿಸಿದ್ದು, ಹೆಚ್ಚುವರಿ ಬ್ಯಾಟರಿ ಪ್ಯಾಕ್ ಆಯ್ಕೆ ಮಾಡುವ ಗ್ರಾಹಕರು ರೂ. 1.44 ಲಕ್ಷ ದರ ಪಾವತಿ ಮಾಡಬೇಕಾಗುತ್ತದೆ.

ಹೊಸ ತಂತ್ರಜ್ಞಾನದೊಂದಿಗೆ ಅತ್ಯಧಿಕ ಬ್ಯಾಟರಿ ದಕ್ಷತೆ ಖಾತ್ರಿಪಡಿಸಿದ ಸಿಂಪಲ್ ಎನರ್ಜಿ

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ವಿಶ್ವದಲ್ಲೇ ಅತಿ ಹೆಚ್ಚು ಮೈಲೇಜ್ ಹೊಂದಿರುವ ಇವಿ ಸ್ಕೂಟರ್ ಎಂಬ ಹೆಗ್ಗೆಳಿಕೆಗೆ ಪಾತ್ರವಾಗಿದ್ದು, ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸ್ಪೋರ್ಟಿ ವಿನ್ಯಾಸದೊಂದಿಗೆ ಅತ್ಯುತ್ತಮ ತಂತ್ರಜ್ಞಾನ ಸೌಲಭ್ಯಗಳನ್ನು ಹೊಂದಿದೆ.

ಹೊಸ ತಂತ್ರಜ್ಞಾನದೊಂದಿಗೆ ಅತ್ಯಧಿಕ ಬ್ಯಾಟರಿ ದಕ್ಷತೆ ಖಾತ್ರಿಪಡಿಸಿದ ಸಿಂಪಲ್ ಎನರ್ಜಿ

ಹೊಸ ಸ್ಕೂಟರ್‌ನಲ್ಲಿ ತ್ರಿಕೊನಾಕಾರದ ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಹೆಡ್‌‌ಲ್ಯಾಂಪ್, ಸೈಡ್ ಬೈ ಟರ್ನ್ ಸಿಗ್ನಲ್ ಇಂಡಿಕೇಟರ್, ಫ್ಲ್ಯಾಟ್ ಫುಟ್‌ಬೋರ್ಡ್, ಅಯಾಲ್ ವ್ಹೀಲ್, ಸ್ಪೋರ್ಟಿ ರಿಯರ್ ವ್ಯೂ ಮಿರರ್, 30-ಲೀಟರ್ ಅಂಡರ್ ಸೀಟ್ ಸ್ಟೋರೇಜ್ ಹೊಂದಿದೆ.

ಹೊಸ ತಂತ್ರಜ್ಞಾನದೊಂದಿಗೆ ಅತ್ಯಧಿಕ ಬ್ಯಾಟರಿ ದಕ್ಷತೆ ಖಾತ್ರಿಪಡಿಸಿದ ಸಿಂಪಲ್ ಎನರ್ಜಿ

ಸಿಂಪಲ್ ಒನ್ ಸ್ಕೂಟರ್ ಮಾದರಿಯಲ್ಲಿ 1024x600 ಫಿಕ್ಸೆಲ್ ಹೊಂದಿರುವ 7 ಇಂಚಿನ ಟಚ್‌ಸ್ಕ್ರೀನ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂಥ್ ಮತ್ತು 4ಜಿ ಇಂಟರ್‌ನೆಟ್ ಸಂಪರ್ಕಕ್ಕಾಗಿ ಕನೆಕ್ಟೆಡ್ ಟೆಕ್ನಾಲಜಿ ನೀಡಲಾಗಿದೆ. ಕನೆಕ್ಟೆಡ್ ಫೀಚರ್ಸ್‌ನಲ್ಲಿ ಜಿಯೋ ಫೆನ್ಸಿಂಗ್, ಮ್ಯೂಜಿಕ್ ಕಂಟ್ರೋಲ್, ಎಸ್ಒಎಸ್ ಮೆಸೇಜ್, ವೆಹಿಕಲ್ ಟ್ರ್ಯಾಕಿಂಗ್, ಡ್ಯಾಕುಮೆಂಟ್ ಸ್ಟೋರೇಜ್, ಫೈಂಡ್ ಮೈ ಬೈಕ್ ಸೌಲಭ್ಯಗಳಿವೆ.

ಹೊಸ ತಂತ್ರಜ್ಞಾನದೊಂದಿಗೆ ಅತ್ಯಧಿಕ ಬ್ಯಾಟರಿ ದಕ್ಷತೆ ಖಾತ್ರಿಪಡಿಸಿದ ಸಿಂಪಲ್ ಎನರ್ಜಿ

ಈ ಮೂಲಕ ಪ್ರತಿ ಗಂಟೆಗೆ 105 ಕಿ.ಮೀ ಟಾಪ್ ಸ್ಪೀಡ್ ಹೊಂದಿರುವ ಹೊಸ ಸಿಂಪಲ್ ಒನ್ ಸ್ಕೂಟರ್ 72 ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಕೇವಲ 2.95 ಸೆಕೆಂಡುಗಳಲ್ಲಿ ಸೊನ್ನೆಯಿಂದ 40 ಕಿ.ಮೀ ಕ್ವಿಕ್ ಸ್ಪೀಡ್ ಪಡೆದುಕೊಳ್ಳಲಿದ್ದು, ಹೊಸ ಸ್ಕೂಟರ್ ಅನ್ನು ಸಿಂಪಲ್ ಕಂಪನಿಯು ಟ್ಯೂಬಲರ್ ಫ್ರೆಮ್ ಬಳಕೆ ಮಾಡಿದೆ.

Most Read Articles

Kannada
English summary
Simple one electric scooter returns 95 percent efficiency with bms technology
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X