ಪದೇ ಪದೇ ತೊಂದರೆ ಕೊಡುತ್ತಿದ್ದ ತನ್ನ ಇವಿ ಸ್ಕೂಟರ್‌ಗೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಭೂಪ!

ಭಾರತದಲ್ಲಿ ಎರಡನೇ ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕಂಪನಿಯಾಗಿ ಹೊರಹೊಮ್ಮಿದ ಓಲಾ ಎಲೆಕ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ತನ್ನದೇ ಆದ ಹೆಸರನ್ನು ಮಾಡುತ್ತಿದೆ. ಓಲಾ ನೀಡುವ ಕೆಲವು ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಗ್ಗೆ ಹಲವೆಡೆ ಉತ್ತಮ ಪ್ರತಿಕ್ರಿಯೆ ಲಭ್ಯವಾದರೆ, ಕೆಲವೆಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಪದೇ ಪದೇ ತೊಂದರೆ ಕೊಡುತ್ತಿದ್ದ ತನ್ನ ಇವಿ ಸ್ಕೂಟರ್‌ಗೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಭೂಪ!

ಓಲಾ ಎಲೆಕ್ಟ್ರಿಕ್ ಸ್ಕೂಟರ್ ಮಾಲೀಕರು ಮತ್ತು ನೆಟ್ಟಿಗರು ಈ ಬ್ರ್ಯಾಂಡ್‌ನ ಬಗ್ಗೆ ತಮ್ಮ ಅಸಹನೆ ಮತ್ತು ಅಸಮಾಧಾನವನ್ನು ಸಾಮಾಜಿಕ ಮಾಧ್ಯಮ ವೇದಿಕೆಯಾಗಿ ವ್ಯಕ್ತಪಡಿಸುತ್ತಿದ್ದಾರೆ. ಕೆಲ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಮಾಲೀಕರ ಪ್ರಯಾಣ ಸುಗಮವಾಗಿ ಸಾಗುತ್ತಿದ್ದರೆ, ಇನ್ನು ಕೆಲ ಮಾಲೀಕರ ಪ್ರಯಾಣಕ್ಕೆ ಪ್ರತಿ ಹಂತದಲ್ಲೂ ಸಂಕಷ್ಟ ಎದುರಾಗುತ್ತಿರುವುದು ಇದಕ್ಕೆ ಕಾರಣವಾಗಿದೆ.

ಪದೇ ಪದೇ ತೊಂದರೆ ಕೊಡುತ್ತಿದ್ದ ತನ್ನ ಇವಿ ಸ್ಕೂಟರ್‌ಗೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಭೂಪ!

ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ವ್ಯಕ್ತಿಯೊಬ್ಬ ತನ್ನ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಅಸಮಾಧಾನಗೊಂಡು ಪೆಟ್ರೋಲ್ ಸುರಿದು ರಸ್ತೆಯಲ್ಲಿ ಬೆಂಕಿ ಹಚ್ಚಿ ಸುಟ್ಟಿದ್ದಾನೆ. ತಮಿಳುನಾಡಿನ ಅಂಬೂರಿನ ಫಿಸಿಯೋಥೆರಪಿಸ್ಟ್ ಪೃಥ್ವಿರಾಜ್ ಕಳೆದ ಮೂರು ತಿಂಗಳಿಂದ ಓಲಾ ಎಸ್1 ಪ್ರೊ ಟಾಪ್ ಎಂಡ್ ಎಲೆಕ್ಟ್ರಿಕ್ ಸ್ಕೂಟರ್ ಬಳಸುತ್ತಿದ್ದಾರೆ.

ಪದೇ ಪದೇ ತೊಂದರೆ ಕೊಡುತ್ತಿದ್ದ ತನ್ನ ಇವಿ ಸ್ಕೂಟರ್‌ಗೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಭೂಪ!

ಆದರೆ, ಸ್ಕೂಟರ್ ಖರೀದಿಸಿದ ಮೊದಲ ದಿನದಿಂದಲೇ ಅದರಲ್ಲಿ ಸಮಸ್ಯೆಗಳು ಕಾಣಿಸಿಕೊಂಡಿದ್ದು, ಈ ಬಗ್ಗೆ ಓಲಾ ಸಂಸ್ಥೆಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಪೃತ್ವಿರಾಜ್ ದೂರಿದ್ದಾರೆ. ಈ ವಾಹನದ ನೋಂದಣಿಯಿಂದ ಹಿಡಿದು ಅದರ ವ್ಯಾಪ್ತಿಯವರೆಗೆ ಪೃಥ್ವಿರಾಜ್ ಹಲವು ಸಮಸ್ಯೆಗಳನ್ನು ಎದುರಿಸಿದ್ದಾರೆ ಎಂದು ವರದಿಯಾಗಿದೆ.

ಪದೇ ಪದೇ ತೊಂದರೆ ಕೊಡುತ್ತಿದ್ದ ತನ್ನ ಇವಿ ಸ್ಕೂಟರ್‌ಗೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಭೂಪ!

ವಾಸ್ತವವಾಗಿ Ola S1-Pro ಎಲೆಕ್ಟ್ರಿಕ್ ಸ್ಕೂಟರ್ ಸ್ಟ್ಯಾಂಡರ್ಡ್‌ ಕಂಡಿಷನ್ಸ್‌ ಪ್ರಕಾರ, ಪೂರ್ಣ ಚಾರ್ಜ್‌ನಲ್ಲಿ 181 ಕಿ.ಮೀ ವ್ಯಾಪ್ತಿಯನ್ನು ನೀಡುತ್ತದೆ ಎಂದು ಪ್ರಮಾಣೀಕರಿಸಲಾಗಿದೆ. ಆದರೆ, ಅವರು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಕೇವಲ 44 ಕಿ.ಮೀಗೆ ಸ್ಕೂಟರ್‌ ನಿಂತುಹೋಗುತ್ತಿದೆ. ಇದರಿಂದ ಕುಪಿತಗೊಂಡ ಮಾಲೀಕ ಆಂಬೂರು ಹೆದ್ದಾರಿ ಬದಿ ನಿಲ್ಲಿಸಿ ತನ್ನ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಇದೀಗ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತಮಿಳಿನ ಜನಪ್ರಿಯ ಸುದ್ದಿ ವಾಹಿನಿಯೊಂದು ಕೂಡ ಈ ಕುರಿತ ಸುದ್ದಿಯನ್ನು ಪ್ರಸಾರ ಮಾಡಿದೆ.

ಪದೇ ಪದೇ ತೊಂದರೆ ಕೊಡುತ್ತಿದ್ದ ತನ್ನ ಇವಿ ಸ್ಕೂಟರ್‌ಗೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಭೂಪ!

ವೀಡಿಯೊದಲ್ಲಿರುವ ವರದಿ ಪ್ರಕಾರ, ಪೃಥ್ವಿರಾಜ್ ಖರೀದಿಸಿದ ಓಲಾ ಎಸ್ 1 ಪ್ರೊ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಗುಡಿಯಾಥಂ ಆರ್‌ಟಿಒಗೆ ನೋಂದಣಿಗಾಗಿ ತೆಗೆದುಕೊಂಡು ಹೋಗಿದ್ದಾರೆ. ಆದರೆ, ಆರ್ ಟಿಒ ಅಧಿಕಾರಿಗಳು ಇದು ತಮ್ಮ ವ್ಯಾಪ್ತಿಗೆ ಬರುವುದಿಲ್ಲ, ಆಂಬೂರಿನಲ್ಲಿ ನೋಂದಣಿ ಮಾಡಿಸಬೇಕು ಎಂದು ಹೇಳಿ ವಾಪಸ್ ಕಳುಹಿಸಿದ್ದಾರೆ.

ಪದೇ ಪದೇ ತೊಂದರೆ ಕೊಡುತ್ತಿದ್ದ ತನ್ನ ಇವಿ ಸ್ಕೂಟರ್‌ಗೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಭೂಪ!

ಒರಿಜಿನಲ್ ಸ್ಕೂಟರ್ ನಲ್ಲಿ ನಾನಾ ಸಮಸ್ಯೆಗಳಿಂದ ಕಂಗೆಟ್ಟಿದ್ದ ಪೃಥ್ವಿರಾಜ್ ಗೆ ನೋಂದಣಿ ಪ್ರಕ್ರಿಯೆ ಇನ್ನಷ್ಟು ಗೊಂದಲ ಮೂಡಿಸಿತ್ತು. ಇದೇ ಸಂದರ್ಭದಲ್ಲಿ ಅವರು ತಮ್ಮ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಅಂಬೂರು ಕಡೆಗೆ ಬರುತ್ತಿದ್ದಾಗ ಏಕಾಏಕಿ ಎಲೆಕ್ಟ್ರಿಕ್ ಸ್ಕೂಟರ್ ಅರ್ಧಕ್ಕೆ ನಿಂತಿದೆ. ಓಲಾ ಎಲೆಕ್ಟ್ರಿಕ್ ಸ್ಕೂಟರ್ ಸಮಸ್ಯೆಗಳ ಸರಮಾಲೆಯಿಂದ ಸಿಟ್ಟಿಗೆದ್ದ ಪೃಥ್ವಿರಾಜ್ ರಸ್ತೆ ಬದಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಸಂಪೂರ್ಣ ಸುಟ್ಟು ಕರಕಲಾಗಿದೆ.

ಪದೇ ಪದೇ ತೊಂದರೆ ಕೊಡುತ್ತಿದ್ದ ತನ್ನ ಇವಿ ಸ್ಕೂಟರ್‌ಗೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಭೂಪ!

ಓಲಾ ಎಲೆಕ್ಟ್ರಿಕ್ ಸ್ಕೂಟರ್ ವಿರುದ್ಧ ಪೃಥ್ವಿರಾಜ್ ಮಾತ್ರವಲ್ಲದೆ ದೇಶದ ಅನೇಕ ಜನರು ವಿವಿಧ ರೀತಿಯಲ್ಲಿ ದೂರುಗಳನ್ನು ನೀಡುತ್ತಿದ್ದಾರೆ. ಈ ಹಿಂದೆ, ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ತಮ್ಮ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಕಂಪನಿಯು ದೂರುಗಳನ್ನು ನಿರ್ಲಕ್ಷಿಸಿದ್ದಕ್ಕೆ ತನ್ನ ಓಲಾ ಸ್ಕೂಟರ್‌ ಅನ್ನು ಕತ್ತೆಗೆ ಕಟ್ಟಿಹಾಕಿ ಮೆರವಣಿಗೆ ಮಾಡಿದ್ದರು.

ಪದೇ ಪದೇ ತೊಂದರೆ ಕೊಡುತ್ತಿದ್ದ ತನ್ನ ಇವಿ ಸ್ಕೂಟರ್‌ಗೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಭೂಪ!

ಓಲಾ ಎಲೆಕ್ಟ್ರಿಕ್ ಭಾರತದಲ್ಲಿ ಯಾವುದೇ ನೇರ ಡೀಲರ್‌ಶಿಪ್‌ಗಳನ್ನು ಹೊಂದಿಲ್ಲ. ಗ್ರಾಹಕರು ಈ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ನೇರವಾಗಿ ಆನ್‌ಲೈನ್‌ನಲ್ಲಿ ಖರೀದಿಸುತ್ತಿದ್ದು, ವಾಹನದಲ್ಲಿ ಯಾವುದೇ ಸಮಸ್ಯೆಗಳಿದ್ದರೆ ಆನ್‌ಲೈನ್‌ನಲ್ಲಿ ದೂರು ನೀಡುತ್ತಿದ್ದಾರೆ. ಹಾಗಾಗಿ, ಈ ಸಮಸ್ಯೆಗಳನ್ನು ಬಗೆಹರಿಸುವುದು ಕೂಡ ಕಂಪನಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಪದೇ ಪದೇ ತೊಂದರೆ ಕೊಡುತ್ತಿದ್ದ ತನ್ನ ಇವಿ ಸ್ಕೂಟರ್‌ಗೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಭೂಪ!

ಆನ್‌ಲೈನ್‌ನಲ್ಲಿ ಖರೀದಿಸಿದ ಗ್ರಾಹಕರು ನೀಡಿದ ವಿಳಾಸದಲ್ಲಿ ಕಂಪನಿಯು ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ವಿತರಿಸುತ್ತದೆ. ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗಳ ಸೇವೆಗಾಗಿ ಕಂಪನಿಯು ನೇರವಾಗಿ ಗ್ರಾಹಕರ ಮನೆಗೆ ಹೋಗಿ ಸೇವೆಗಳನ್ನು ಒದಗಿಸುತ್ತದೆ. ಈ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆಯ ಅಗತ್ಯವಿದೆ ಎಂದು ವಾಹನ ಕೊಂಡ ಮಾಲೀಕರು ಹೇಳುತ್ತಿದ್ದಾರೆ.

ಪದೇ ಪದೇ ತೊಂದರೆ ಕೊಡುತ್ತಿದ್ದ ತನ್ನ ಇವಿ ಸ್ಕೂಟರ್‌ಗೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಭೂಪ!

1,441 ಓಲಾ ಇವಿಗಳ ಹಿಂಪಡೆಯುತ್ತಿರುವುದಾಗಿ ಘೋಷಣೆ

ಇತ್ತೀಚೆಗೆ ಪುಣೆಯಲ್ಲಿ ಓಲಾ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಕಂಪನಿಯು ಎಚ್ಚೆತ್ತುಕೊಂಡಿದೆ. ಅಪಘಾತದ ಸಂಭವನೀಯ ಕಾರಣಗಳನ್ನು ಅನ್ವೇಷಿಸಲು S1 ಪ್ರೊ ಮಾದರಿಗಳ 1,441 ಯುನಿಟ್‌ಗಳನ್ನು ಹಿಂಪಡೆಯುವುದಾಗಿ ಕಂಪನಿಯು ಘೋಷಿಸಿದೆ.

ಪದೇ ಪದೇ ತೊಂದರೆ ಕೊಡುತ್ತಿದ್ದ ತನ್ನ ಇವಿ ಸ್ಕೂಟರ್‌ಗೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಭೂಪ!

ಈ ಹಿಂಪಡೆಯುವಿಕೆಗೆ ಅನ್ವಯವಾಗುವ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಕಂಪನಿಯು ಸಂಪೂರ್ಣವಾಗಿ ಪರಿಶೀಲಿಸುತ್ತದೆ. ಇದಕ್ಕಾಗಿ ಕಂಪನಿಯು ತಮ್ಮ ಗ್ರಾಹಕರನ್ನು ಗುರುತಿಸಿ ಅವರನ್ನು ಪ್ರತ್ಯೇಕವಾಗಿ ಸಂಪರ್ಕಿಸುತ್ತಿದೆ.

ಪದೇ ಪದೇ ತೊಂದರೆ ಕೊಡುತ್ತಿದ್ದ ತನ್ನ ಇವಿ ಸ್ಕೂಟರ್‌ಗೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಭೂಪ!

Ola S1 ವಿವರಗಳು

Ola ಭಾರತೀಯ ಮಾರುಕಟ್ಟೆಯಲ್ಲಿ S1 ಮತ್ತು S1 Pro ಎಂಬ ಎರಡು ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡುತ್ತದೆ. ಇವೆರಡೂ ಒಂದೇ ರೀತಿಯ 8.5 kW ವಿದ್ಯುತ್ ಮೋಟರ್ ಅನ್ನು ಹೊಂದಿವೆ. ಆದರೆ ಬ್ಯಾಟರಿ ಪ್ಯಾಕ್ ವಿಭಿನ್ನವಾಗಿದೆ. Ola S1 2.98 kWh ಬ್ಯಾಟರಿ ಪ್ಯಾಕ್‌ನೊಂದಿಗೆ ಬರುತ್ತದೆ. ಇದು ಪೂರ್ಣ ಚಾರ್ಜ್‌ನಲ್ಲಿ 121 ಕಿ.ಮೀ ಪ್ರಮಾಣೀಕೃತ ಮೈಲೇಜ್ ನೀಡುತ್ತದೆ. ಇದರ ಗರಿಷ್ಠ ವೇಗ ಗಂಟೆಗೆ 90 ಕಿಮೀ ಎಂದು ಕಂಪನಿ ಹೇಳಿಕೊಂಡಿದೆ.

ಪದೇ ಪದೇ ತೊಂದರೆ ಕೊಡುತ್ತಿದ್ದ ತನ್ನ ಇವಿ ಸ್ಕೂಟರ್‌ಗೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಭೂಪ!

Ola S1 Pro ವಿವರಗಳು

Ola S1 Pro ಎಲೆಕ್ಟ್ರಿಕ್ ಸ್ಕೂಟರ್ 3.97 kWh ಬ್ಯಾಟರಿ ಪ್ಯಾಕ್‌ನೊಂದಿಗೆ ಬರುತ್ತದೆ. ಈ ಮಾದರಿಯು ಸಂಪೂರ್ಣ ಚಾರ್ಜ್‌ನಲ್ಲಿ 181 ಕಿಮೀ ವ್ಯಾಪ್ತಿಯನ್ನು ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಇದರ ಗರಿಷ್ಠ ವೇಗ ಗಂಟೆಗೆ 115 ಕಿ.ಮೀ. ಈ ಎಲೆಕ್ಟ್ರಿಕ್ ಸ್ಕೂಟರ್‌ಗಳು 750 ವ್ಯಾಟ್ ಆನ್‌ಬೋರ್ಡ್ ಚಾರ್ಜರ್‌ನೊಂದಿಗೆ ಸಂಪೂರ್ಣವಾಗಿ ಚಾರ್ಜ್ ಮಾಡಲು ಸುಮಾರು 7 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಅದೇ ವೇಗದ ಚಾರ್ಜರ್ ಸಹಾಯದಿಂದ 1 ಗಂಟೆಗಿಂತ ಕಡಿಮೆ ಅವಧಿಯಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಬಹುದು.

Most Read Articles

Kannada
English summary
Tamil nadu man sets ola s1 pro on fire after facing repeated issues with it
Story first published: Wednesday, April 27, 2022, 19:20 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X