ಆಗಸ್ಟ್‌ ತಿಂಗಳಿನಲ್ಲಿ ಅತಿಹೆಚ್ಚು ಮಾರಾಟವಾದ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಬ್ರಾಂಡ್‌ಗಳು

ಭಾರತದಲ್ಲಿ ಹೆಚ್ಚಾಗುತ್ತಿರುವ ಇಂಧನ ಬೆಲೆಗಳು ಹಾಗೂ ದ್ವಿಚಕ್ರ ವಾಹನಗಳ ನಿರ್ವಹಣ ವೆಚ್ಚಗಳಿಂದ ಸಾರ್ವಜನಿಕರು ಎಲೆಕ್ಟ್ರಿಕ್ ವಾಹನಗಳ ಮೊರೆ ಹೋಗುತ್ತಿದ್ದಾರೆ. ಹಾಗಾಗಿ ಕಳೆದ ಒಂದು ವರ್ಷದಿಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ತಯಾರಿಸುತ್ತಿರುವ ಕಂಪನಿಗಳು ಸ್ಥಿರವಾದ ಬೆಳವಣಿಗೆಯನ್ನು ದಾಖಲಿಸುತ್ತಿವೆ.

ಆಗಸ್ಟ್‌ ತಿಂಗಳಿನಲ್ಲಿ ಅತಿಹೆಚ್ಚು ಮಾರಾಟವಾದ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಬ್ರಾಂಡ್‌ಗಳು

ಇದರಲ್ಲಿ ಹೀರೋ ಎಲೆಕ್ಟ್ರಿಕ್ ಆಗಸ್ಟ್ 2022 ರಲ್ಲಿ ದ್ವಿಚಕ್ರ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಮತ್ತೊಮ್ಮೆ ಪ್ರಾಬಲ್ಯ ಸಾಧಿಸಿದೆ. ಹಾಗೆಯೇ ಎಥರ್ ಮಾರಾಟದಲ್ಲೂ ಹೆಚ್ಚಳವಾಗಿದ್ದು ಹಲವು ಕಂಪನಿಗಳನ್ನು ಹಿಂದಿಕ್ಕಿದೆ. ಆಗಸ್ಟ್ 2022 ರಲ್ಲಿ ಅತಿ ಹೆಚ್ಚು ಇ-ಸ್ಕೂಟರ್‌ಗಳನ್ನು ಮಾರಾಟ ಮಾಡಿದ ಅಗ್ರ ಐದು ಕಂಪನಿಗಳ ಬಗ್ಗೆ ಈ ಲೇಖನದಲ್ಲಿ ತಿಳಿದುಕೊಳ್ಳೋಣ.

ಆಗಸ್ಟ್‌ ತಿಂಗಳಿನಲ್ಲಿ ಅತಿಹೆಚ್ಚು ಮಾರಾಟವಾದ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಬ್ರಾಂಡ್‌ಗಳು

ಹೀರೋ ಎಲೆಕ್ಟ್ರಿಕ್

ಹೀರೋ ಎಲೆಕ್ಟ್ರಿಕ್ ಮತ್ತೊಮ್ಮೆ ಆಗಸ್ಟ್‌ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಅತಿದೊಡ್ಡ ಮಾರಾಟಗಾರನಾಗಿ ಗುರ್ತಿಸಿಕೊಂಡಿದೆ. ಕಳೆದ ತಿಂಗಳು 10,000 ಕ್ಕೂ ಹೆಚ್ಚು ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟವನ್ನು ನೋಂದಾಯಿಸಿದ ಏಕೈಕ ಕಂಪನಿಯಾಗಿ ಹೀರೋ ಎಲೆಕ್ಟ್ರಿಕ್ ಹೊರಹೊಮ್ಮಿದೆ. ಕಳೆದ ತಿಂಗಳು, ಹೀರೋ ಎಲೆಕ್ಟ್ರಿಕ್ 10,476 ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟದೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಆಗಸ್ಟ್‌ ತಿಂಗಳಿನಲ್ಲಿ ಅತಿಹೆಚ್ಚು ಮಾರಾಟವಾದ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಬ್ರಾಂಡ್‌ಗಳು

ಈ ವರ್ಷದ ಜುಲೈನಲ್ಲಿ ಕಂಪನಿಯು 8,954 ಯೂನಿಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡಿದೆ. ಹೀರೋ ಎಲೆಕ್ಟ್ರಿಕ್‌ನ ಆಪ್ಟಿಮಾ ಸಿಎಕ್ಸ್, ಫೋಟಾನ್, ಆಟ್ರಿಯಾ, ಎನ್‌ವೈಎಕ್ಸ್ ಮತ್ತು ಫ್ಲ್ಯಾಶ್ ಕಂಪನಿಯ ಕೆಲವು ಉತ್ತಮ ಮಾರಾಟದ ಮಾದರಿಗಳಾಗಿವೆ.

ಆಗಸ್ಟ್‌ ತಿಂಗಳಿನಲ್ಲಿ ಅತಿಹೆಚ್ಚು ಮಾರಾಟವಾದ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಬ್ರಾಂಡ್‌ಗಳು

ಹೀರೋ ಎಲೆಕ್ಟ್ರಿಕ್ ತನ್ನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲು ಪಂಜಾಬ್‌ನ ಲುಧಿಯಾನದಲ್ಲಿ ಹೊಸ ಕಾರ್ಖಾನೆಯನ್ನು ಸ್ಥಾಪಿಸಲಿದೆ. ಲುಧಿಯಾನದಲ್ಲಿ ಇದು ಕಂಪನಿಯ ಎರಡನೇ ಸ್ಥಾವರವಾಗಲಿದೆ. ಕಂಪನಿಯ ಹಳೆಯ ಸ್ಥಾವರದ ಬದಿಯಲ್ಲಿ ನಿರ್ಮಿಸಲಾಗುತ್ತಿರುವ ಇದು ಅತ್ಯಾಧುನಿಕ ಪ್ಲಾಂಟ್ ಎಂದು ಕಂಪನಿ ಹೇಳಿಕೊಂಡಿದೆ.

ಆಗಸ್ಟ್‌ ತಿಂಗಳಿನಲ್ಲಿ ಅತಿಹೆಚ್ಚು ಮಾರಾಟವಾದ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಬ್ರಾಂಡ್‌ಗಳು

ಓಕಿನಾವಾ ಆಟೋಟೆಕ್

ಓಕಿನಾವಾ ಆಟೋಟೆಕ್ ಎರಡನೇ ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಕಳೆದ ತಿಂಗಳು, ಓಕಿನಾವಾ 8,554 ಯುನಿಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟ ಮಾಡಿತು. ಜುಲೈ 2022 ರಲ್ಲಿ, ಕಂಪನಿಯು 8,096 ಯುನಿಟ್‌ಗಳನ್ನು ಮಾರಾಟ ಮಾಡಿತ್ತು. ಈ ವರ್ಷದ ಮೇ ತಿಂಗಳಲ್ಲಿ, ಕಂಪನಿಯು 9,290 ಯುನಿಟ್‌ಗಳ ಅತ್ಯಧಿಕ ಮಾರಾಟವನ್ನು ದಾಖಲಿಸಿದೆ.

ಆಗಸ್ಟ್‌ ತಿಂಗಳಿನಲ್ಲಿ ಅತಿಹೆಚ್ಚು ಮಾರಾಟವಾದ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಬ್ರಾಂಡ್‌ಗಳು

ಈ ಹಿಂದೆ ಎಲೆಕ್ಟ್ರಿಕ್ ಸ್ಕೂಟರ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣಗಳಲ್ಲಿ ಒಕಿನಾವಾ ಕಂಪನಿ ಕೂಡ ಒಂದಾಗಿದೆ. ಕಂಪನಿಯು ಸರ್ಕಾರದ ಪರಿಶೀಲನೆಯ ಮೂಲಕ ಹೋಗಬೇಕಾಗಿತ್ತು, ನಂತರ ಕಂಪನಿಯು ತನ್ನ ಕೆಲವು ದೋಷಯುಕ್ತ ಮಾದರಿಗಳನ್ನು ಹಿಂಪಡೆದಿದೆ.

ಆಗಸ್ಟ್‌ ತಿಂಗಳಿನಲ್ಲಿ ಅತಿಹೆಚ್ಚು ಮಾರಾಟವಾದ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಬ್ರಾಂಡ್‌ಗಳು

ಎಥರ್ ಎನರ್ಜಿ

ಎಥರ್ ಎನರ್ಜಿ ಮಾರಾಟದ ಬೆಳವಣಿಗೆಯ ವಿಷಯದಲ್ಲಿ ಮುಂಚೂಣಿಯಲ್ಲಿತ್ತು. ಹೊಸ ತಲೆಮಾರಿನ Ather 450X ಬಿಡುಗಡೆಯಾದ ಕೆಲವು ತಿಂಗಳ ನಂತರ, Ather ಗ್ರಾಹಕರಿಂದ ಅಗಾಧ ಪ್ರತಿಕ್ರಿಯೆಯನ್ನು ಪಡೆಯುತ್ತಿದೆ. ನಾವು ಅಂಕಿಅಂಶಗಳನ್ನು ನೋಡಿದರೆ, ಎಥರ್ ಮಾರಾಟವು ಜುಲೈ 2022 ರಲ್ಲಿ 2,389 ಯುನಿಟ್‌ಗಳಿಂದ ಆಗಸ್ಟ್ 2022 ರಲ್ಲಿ 6,410 ಯುನಿಟ್‌ಗಳಿಗೆ ಹೆಚ್ಚಾಗಿದೆ.

ಆಗಸ್ಟ್‌ ತಿಂಗಳಿನಲ್ಲಿ ಅತಿಹೆಚ್ಚು ಮಾರಾಟವಾದ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಬ್ರಾಂಡ್‌ಗಳು

ಈ ಮೂಲಕ ಎಥರ್ ಎನರ್ಜಿ ಮಾರಾಟವು ಶೇ 297 ರಷ್ಟು ಹೆಚ್ಚಾಗಿದೆ. ಹೊಸ ತಲೆಮಾರಿನ ಎಥರ್ 450X ಅನ್ನು 1.39 ಲಕ್ಷ ರೂಪಾಯಿಗಳಲ್ಲಿ (ಎಕ್ಸ್ ಶೋ ರೂಂ, ದೆಹಲಿ) ಲಭ್ಯಗೊಳಿಸಲಾಗಿದೆ. ಕಂಪನಿಯು ಈ ಮಾದರಿಯರಲ್ಲಿ 3.66 kWh ಲಿಥಿಯಂ-ಐಯಾನ್ ಬ್ಯಾಟರಿಯನ್ನು ಬಳಸಿದೆ.

ಆಗಸ್ಟ್‌ ತಿಂಗಳಿನಲ್ಲಿ ಅತಿಹೆಚ್ಚು ಮಾರಾಟವಾದ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಬ್ರಾಂಡ್‌ಗಳು

ಈ ಅತ್ಯಾಧುನಿಕ ಬ್ಯಾಟರಿಯಿಂದಾಗಿ ಸ್ಕೂಟರ್ 140 ಕಿ.ಮೀ ಮೈಲೇಜ್ ನೀಡುತ್ತದೆ. ಆದರೆ ಹಳೆಯ 450X ಕೇವಲ 90 ಕಿ.ಮೀ ವ್ಯಾಪ್ತಿಯನ್ನು ಹೊಂದಿತ್ತು. ಈ ಕಾರಣದಿಂದಾಗಿ ಗ್ರಾಹಕರು ಹೊಸ ಎಥರ್ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಹೆಚ್ಚಾಗಿ ಖರೀದಿಸುತ್ತಿದ್ದು, ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿದೆ.

ಆಗಸ್ಟ್‌ ತಿಂಗಳಿನಲ್ಲಿ ಅತಿಹೆಚ್ಚು ಮಾರಾಟವಾದ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಬ್ರಾಂಡ್‌ಗಳು

ಆಂಪಿಯರ್

ಆಂಪಿಯರ್ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟದಲ್ಲಿ ನಾಲ್ಕನೇ ಅತಿ ದೊಡ್ಡ ಮಾರಾಟದ ಕಂಪನಿಯಾಗಿದೆ. ಕಳೆದ ತಿಂಗಳು ಈ ಕಂಪನಿಯು ಭಾರತದಲ್ಲಿ 6,396 ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟವನ್ನು ನೋಂದಾಯಿಸಿದೆ, ಇದು ಜುಲೈ 2022 ರಲ್ಲಿ ಮಾರಾಟವಾದ 6,319 ಯುನಿಟ್‌ಗಳಿಗಿಂತ ಹೆಚ್ಚಾಗಿದೆ.

ಆಗಸ್ಟ್‌ ತಿಂಗಳಿನಲ್ಲಿ ಅತಿಹೆಚ್ಚು ಮಾರಾಟವಾದ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಬ್ರಾಂಡ್‌ಗಳು

ಆದರೆ ಜೂನ್ 2022 ರಲ್ಲಿ ಮಾರಾಟವಾದ 6,534 ಯುನಿಟ್‌ಗಳಿಗೆ ಹೋಲಿಸಿದರೆ ಮಾರಾಟವು ಸ್ವಲ್ಪ ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ತಮ್ಮ ಸ್ಕೂಟರ್‌ಗಳ ಅಪ್‌ಡೇಷನ್ ಮೂಲಕ ಮಾರುಕಟ್ಟೆಯಲ್ಲಿ ಉತ್ತಮ ಬೆಡಿಕೆ ಪಡೆದುಕೊಳ್ಳಲಿದ್ದೇವೆ ಎಂದು ಕಂಪನಿ ವಿಶ್ವಾಸ ವ್ಯಕ್ತಪಡಿಸಿದೆ.

ಆಗಸ್ಟ್‌ ತಿಂಗಳಿನಲ್ಲಿ ಅತಿಹೆಚ್ಚು ಮಾರಾಟವಾದ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಬ್ರಾಂಡ್‌ಗಳು

ಓಲಾ ಎಲೆಕ್ಟ್ರಿಕ್

ಕಳೆದ ಕೆಲವು ತಿಂಗಳುಗಳಲ್ಲಿ ಓಲಾ ಎಲೆಕ್ಟ್ರಿಕ್ ಮಾರಾಟವು ಆಶ್ಚರ್ಯಕರವಾಗಿ ಕಡಿಮೆಯಾಗಿದೆ. 2021 ಮತ್ತು 2022 ರ ಎರಡು ತ್ರೈಮಾಸಿಕಗಳಲ್ಲಿ ಉತ್ತಮ ಮಾರಾಟವನ್ನು ದಾಖಲಿಸಿದ ನಂತರ, Ola ನ ಇ-ಸ್ಕೂಟರ್ ಮಾರಾಟವು ತೀವ್ರ ಕುಸಿತವನ್ನು ದಾಖಲಿಸಿದೆ.

ಆಗಸ್ಟ್‌ ತಿಂಗಳಿನಲ್ಲಿ ಅತಿಹೆಚ್ಚು ಮಾರಾಟವಾದ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಬ್ರಾಂಡ್‌ಗಳು

Ola ಆಗಸ್ಟ್ 2022 ರಲ್ಲಿ S1 ಪ್ರೊ ಎಲೆಕ್ಟ್ರಿಕ್ ಸ್ಕೂಟರ್‌ನ 3,421 ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾತ್ರ ಮಾರಾಟ ಮಾಡಲು ಸಾಧ್ಯವಾಯಿತು. ಈ ಮಾರಾಟವು ಜುಲೈ 2022 ರಲ್ಲಿ ಮಾರಾಟವಾದ 3,862 ಯುನಿಟ್‌ಗಳಿಗಿಂತ ಕಡಿಮೆಯಾಗಿದೆ. ಓಲಾ ಈ ವರ್ಷದ ಏಪ್ರಿಲ್‌ನಲ್ಲಿ 12,000 ಸ್ಕೂಟರ್‌ಗಳನ್ನು ಮಾರಾಟ ಮಾಡಿದೆ.

ಆಗಸ್ಟ್‌ ತಿಂಗಳಿನಲ್ಲಿ ಅತಿಹೆಚ್ಚು ಮಾರಾಟವಾದ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಬ್ರಾಂಡ್‌ಗಳು

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಬಹುತೇಕ ಎಲ್ಲಾ ರಾಜ್ಯ ಸರ್ಕಾರಗಳು ಶ್ರಮಿಸುತ್ತಿವೆ. ಮುಂಬರುವ ದಿನಗಳಲ್ಲಿ ಗಣನೀಯವಾಗಿ ಕಾರ್ಬನ್ ಮುಕ್ತ ದೇಶವನ್ನಾಗಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಇದಕ್ಕಾಗಿ ಕೇಂದ್ರವು ಎಲೆಕ್ಟ್ರಿಕ್ ಸ್ಕೂಟರ್‌ಗಳ ಮೇಲಿನ ತೆರಿಗೆಯನ್ನು ಇಳಿಸಿ ಸಬ್ಸಿಡಿ ಕೂಡ ನೀಡುತ್ತಿದೆ. ಹಾಗಾಗಿ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಏರಿಕೆಯಾಗಿದೆ.

Most Read Articles

Kannada
English summary
Top 5 Best Selling Electric Scooter Brands in August
Story first published: Saturday, September 3, 2022, 15:56 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X