ಭಾರತದಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಗಳಿವು!

ತೈಲ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚವು ಸಹ ಸಾಕಷ್ಟು ಏರಿಕೆಯಾಗುತ್ತಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತಂದಿರುವುದು ಮಹತ್ವ ಬದಲಾವಣೆಗೆ ಕಾರಣವಾಗಿದೆ.

ಭಾರತದಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಗಳಿವು!

ದುಬಾರಿ ಇಂಧನಗಳ ಪರಿಣಾಮ ಸಾಂಪ್ರಾದಾಯಿಕ ವಾಹನ ನಿರ್ವಹಣಾ ವೆಚ್ಚದಲ್ಲಿ ಕಳೆದ ಕೆಲ ತಿಂಗಳಿನಿಂದ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಿರುವಾಗ ಹೊಸ ವಾಹನ ಖರೀದಿದಾರರಿಗೆ ಎಲೆಕ್ಟ್ರಿಕ್ ವಾಹನಗಳು ಪ್ರಮುಖ ಆಕರ್ಷಣೆಯಾಗುತ್ತಿದ್ದು, ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಸರ್ಕಾರದ ಜೊತೆಗೆ ವಿವಿಧ ಖಾಸಗಿ ಕಂಪನಿಗಳು ಸಹ ಇವಿ ವಾಹನ ಪೂರಕವಾದ ಯೋಜನೆಗಳನ್ನು ಜಾರಿಗೆ ತರುತ್ತಿವೆ.

ಭಾರತದಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಗಳಿವು!

ಕೇಂದ್ರ ಸರ್ಕಾರದ ಫೇಮ್ 2 ಸಬ್ಸಡಿ ಯೋಜನೆ ಹೊರತುಪಡಿಸಿ ವಿವಿಧ ರಾಜ್ಯ ಸರ್ಕಾರಗಳು ರಾಜ್ಯ ಮಟ್ಟದಲ್ಲಿ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಭಾರತದಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಗಳಿವು!

ಇಂಧನಗಳ ಬೆಲೆ ಹೆಚ್ಚಳ ಮತ್ತು ಇವಿ ವಾಹನಗಳಿಗೆ ನೀಡಲಾಗುತ್ತಿರುವ ಸಬ್ಸಡಿ ಯೋಜನೆಗಳಿಂದಾಗಿ ಇವಿ ವಾಹನ ಮಾರಾಟವು ಕಳೆದ ಎರಡು ವರ್ಷಗಳಲ್ಲಿ ಸಾಕಷ್ಟು ಏರಿಕೆಯಾಗಿದ್ದು, ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಇವಿ ಸ್ಕೂಟರ್ ಮಾರಾಟ ಹೆಚ್ಚಿನ ಬೇಡಿಕೆಯಲ್ಲಿವೆ. ಇವಿ ಸ್ಕೂಟರ್ ವಿಭಾಗದಲ್ಲಿ ಪ್ರಮುಖ ಕಂಪನಿಗಳು ಹೆಚ್ಚಿನ ಬೇಡಿಕೆ ಪಡೆದುಕೊಂಡಿದ್ದು, ಪ್ರಮುಖ ಕಂಪನಿಗಳ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಗಳಿವು!

ಹೀರೋ ಎಲೆಕ್ಟ್ರಿಕ್

ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಸುಮಾರು 13 ವರ್ಷಗಳ ಅನುಭವ ಹೊಂದಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಇತ್ತೀಚೆಗೆ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಫೆಬ್ರವರಿ ಅವಧಿಯಲ್ಲಿ ಒಟ್ಟು 7,356 ಇವಿ ಸ್ಕೂಟರ್ ಮಾರಾಟ ಮಾಡಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ಭಾರತದಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಗಳಿವು!

ಈ ಮೂಲಕ ಕಂಪನಿಯು ಇವಿ ದ್ವಿಚಕ್ರ ವಾಹನ ಮಾರಾಟ ವಿಭಾಗದಲ್ಲಿ ಶೇ.36 ಪಾಲು ತನ್ನದಾಗಿಸಿಕೊಳ್ಳುವ ಮೂಲಕ ಅಗ್ರಸ್ಥಾನ ಕಾಯ್ದುಕೊಂಡಿದ್ದು, ಇವಿ ಸ್ಕೂಟರ್ ಮಾರಾಟವನ್ನು ಪ್ರಸಕ್ತ ವರ್ಷದ ಮಾರಾಟದಲ್ಲಿ ಕಳೆದ ವರ್ಷದ ಇವಿ ಸ್ಕೂಟರ್ ಮಾರಾಟಕ್ಕಿಂತ ಶೇಕಡಾ 15ರಷ್ಟು ಹೆಚ್ಚಿಸುವ ನೀರಿಕ್ಷೆಯಲ್ಲಿದೆ.

ಭಾರತದಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಗಳಿವು!

ಸದ್ಯ ದೇಶಾದ್ಯಂತ 500 ನಗರಗಳಲ್ಲಿ 700ಕ್ಕೂ ಹೆಚ್ಚು ಮಾರಾಟ ಮಳಿಗೆಗಳನ್ನು ಹೊಂದಿರುವ ಹೀರೋ ಎಲೆಕ್ಟ್ರಿಕ್ ಕಂಪನಿಯು ಅಗತ್ಯತೆಯ ಆಧಾರದ ಮೇಲೆ ಕಳೆದ ವರ್ಷ ಸುಮಾರು 1,500 ಹೊಸ ಫಾಸ್ಟ್ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಮಾರಾಟ ಮಳಿಗೆಗಳನ್ನು ತೆರೆಯಲು ಸಿದ್ದವಾಗಿದೆ.

ಭಾರತದಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಗಳಿವು!

ಒಕಿನಾವ

ವಿವಿಧ ಮಾದರಿಯ ಇವಿ ಸ್ಕೂಟರ್‌ಗಳ ಮಾರಾಟದೊಂದಿಗೆ ಉತ್ತಮ ಬೇಡಿಕೆ ಹೊಂದಿರುವ ಒಕಿನಾವ ಕಂಪನಿಯು ಫೆಬ್ರವರಿಯಲ್ಲಿ ಒಟ್ಟು 5,923 ಇವಿ ಸ್ಕೂಟರ್ ಮಾರಾಟ ಮಾಡಿ ಎರಡನೇ ಸ್ಥಾನದಲ್ಲಿದೆ.

ಭಾರತದಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಗಳಿವು!

ಒಕಿನಾವ ಕಂಪನಿಯು ಕಂಪನಿಯು ಸದ್ಯ ಗ್ರಾಹಕರ ಬೇಡಿಕೆಯೆಂತೆ ಪ್ರೈಸ್, ಆರ್30, ಲೈಟ್, ರಿಡ್ಜ್ ಪ್ಲಸ್, ಪ್ರೈಸ್ ಪ್ರೊ ಮತ್ತು ಐ-ಪ್ರೈಸ್ ಪ್ರೊ ಪ್ಲಸ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಭವಿಷ್ಯ ಯೋಜನೆಗಳಲ್ಲಿರುವ ಒಕಿ 90, ಒಕಿ100 ಸೇರಿದಂತೆ ಒಂದು ಮ್ಯಾಕ್ಸಿ ಸ್ಕೂಟರ್ ಮತ್ತು ಎರಡು ಹೈ ಸ್ಪೀಡ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಗಳನ್ನು ಬಿಡುಗಡೆಗಾಗಿ ಸಿದ್ದವಾಗುತ್ತಿವೆ.

ಭಾರತದಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಗಳಿವು!

ಎಲೆಕ್ಟ್ರಿಕ್ ವಾಹನಗಳ ಮಾರಾಟ ಆರಂಭಿಸಿದ ಏಳು ವರ್ಷಗಳ ಅವಧಿಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿರುವ ಒಕಿನಾವ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಹೊಸ ಯೋಜನೆಗೆ ಪೂರಕವಾಗಿ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಲು ರಾಜಸ್ತಾನದ ಗಡಿಭಾಗದಲ್ಲಿರುವ ಭಿವಾಡಿಯಲ್ಲಿನ ಹೊಸ ಉತ್ಪಾದನಾ ಘಟಕವನ್ನು ವಿಸ್ತರಿಸಿದೆ.

ಭಾರತದಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಗಳಿವು!

ಆಂಪಿಯರ್ ಎಲೆಕ್ಟ್ರಿಕ್

ಗ್ರಾಹಕರ ಬೇಡಿಕೆಯೆಂತೆ ವಿವಿಧ ಇವಿ ಸ್ಕೂಟರ್‌ಗಳ ಮೂಲಕ ಉತ್ತಮ ಮಾರಾಟ ಸೌಲಭ್ಯ ಹೊಂದಿರುವ ಆಂಪಿಯರ್ ಎಲೆಕ್ಟ್ರಿಕ್ ಕಂಪನಿಯು ಫೆಬ್ರವರಿಯಲ್ಲಿ ಒಟ್ಟು 4,303 ಇವಿ ಸ್ಕೂಟರ್ ಮಾರಾಟ ಮಾಡಿ ಮೂರನೇ ಸ್ಥಾನದಲ್ಲಿದೆ.

ಭಾರತದಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಗಳಿವು!

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಆರಂಭಿಸಿ ಸುಮಾರು 14 ವರ್ಷಗಳ ಅನುಭವ ಹೊಂದಿರುವ ಆಂಪಿಯರ್ ಎಲೆಕ್ಟ್ರಿಕ್ ಕಂಪನಿಯು ಕೂಡಾ ಸುಧೀರ್ಘ ಅವಧಿಯ ಪ್ರಯಾಣದಲ್ಲಿ ಹಲವಾರು ಬದಲಾವಣೆಗಳಿಗೆ ಕಾರಣವಾಗಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ತನ್ನ ವಾಹನ ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿದೆ.

ಭಾರತದಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಗಳಿವು!

ಓಲಾ ಎಲೆಕ್ಟ್ರಿಕ್

ಅತಿ ಹೆಚ್ಚು ಮೈಲೇಜ್ ನೀಡುವ ಎಸ್1 ಮತ್ತು ಎಸ್1 ಪ್ರೊ ಇವಿ ಸ್ಕೂಟರ್ ಮೂಲಕ ಹೊಸ ಸಂಚಲನಕ್ಕೆ ಕಾರಣವಾಗಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಫೆಬ್ರವರಿಯಲ್ಲಿ ಒಟ್ಟು 3,904 ಇವಿ ಸ್ಕೂಟರ್ ಮಾರಾಟ ಮಾಡಿ ಇವಿ ಸ್ಕೂಟರ್ ಮಾರಾಟದಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಭಾರತದಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಗಳಿವು!

ಓಲಾ ಹೊಸ ಎಸ್1 ಇವಿ ಸ್ಕೂಟರ್ ಮಾದರಿಯು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 99,999 ಬೆಲೆ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ರೂ. 1,29,999 ಬೆಲೆ ಹೊಂದಿದ್ದು, ಅತ್ಯತ್ತಮ ಕಾರ್ಯಕ್ಷಮತೆ, ಗರಿಷ್ಠ ಮೈಲೇಜ್, ಪ್ರೀಮಿಯಂ ಫೀಚರ್ಸ್ ಮತ್ತು ಬಜೆಟ್ ಬೆಲೆಯು ಹೊಸ ಸ್ಕೂಟರ್ ಆಯ್ಕೆ ಮೌಲ್ಯವನ್ನು ಹೆಚ್ಚಿಸಿವೆ.

ಭಾರತದಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಗಳಿವು!

ಹೊಸ ಎಸ್1 ವೆರಿಯೆಂಟ್‌‌ನಲ್ಲಿ ಓಲಾ ಕಂಪನಿಯು 2.98kWh ಮತ್ತು ಎಸ್1 ಪ್ರೊ ಮಾದರಿಯಲ್ಲಿ 3.97kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು, ಪ್ರತಿ ಚಾರ್ಜ್‌ಗೆ ಎಸ್1 ಮಾದರಿಯು ಗರಿಷ್ಠ 121 ಕಿ.ಮೀ ಮೈಲೇಜ್ ಹಿಂದಿರುಗಿಸಿದರೆ ಎಸ್1 ಪ್ರೊ ಮಾದರಿಯು ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಭಾರತದಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಗಳಿವು!

ಎಥರ್ ಎನರ್ಜಿ

ಪ್ರೀಮಿಯಂ 450 ಪ್ಲಸ್ ಮತ್ತು 450ಎಕ್ಸ್ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಎಥರ್ ಎನರ್ಜಿ ಕಂಪನಿಯು ಫೆಬ್ರವರಿ ತಿಂಗಳಿನಲ್ಲಿ ಒಟ್ಟು 2,229 ಇವಿ ಸ್ಕೂಟರ್ ಮಾರಾಟ ಮಾಡಿ ಇವಿ ಸ್ಕೂಟರ್ ಮಾರಾಟ ವಿಭಾಗದಲ್ಲಿ ಐದನೇ ಸ್ಥಾನದಲ್ಲಿದೆ.

ಭಾರತದಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಗಳಿವು!

ಗ್ರಾಹಕರ ಬೇಡಿಕೆಯೆಂತೆ ಸ್ಟ್ಯಾಂಡರ್ಡ್ 450 ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಮಾರಾಟದಿಂದ ಸ್ಥಗಿತಗೊಳಿಸಿರುವ ಎಥರ್ ಕಂಪನಿಯು 450 ಪ್ಲಸ್ ಮತ್ತು 450ಎಕ್ಸ್ ಮಾದರಿಯ ಮೇಲೆ ಹೆಚ್ಚು ಗಮನಹರಿಸಿದ್ದು, 450 ಪ್ಲಸ್ ಮಾದರಿಯು ಬೆಂಗಳೂರು ಎಕ್ಸ್‌ಶೋರೂಂ ಪ್ರಕಾರ ರೂ. 1,31,647 ಮತ್ತು 450ಎಕ್ಸ್ ಬೆಲೆಯನ್ನು ರೂ. 1,50,657ಕ್ಕೆ ಮಾರಾಟಗೊಳ್ಳುತ್ತಿವೆ.

ಭಾರತದಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಗಳಿವು!

ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್‌ಗಳಿಂತಲೂ ಹೆಚ್ಚು ಬಜೆಟ್ ಬೆಲೆಯಲ್ಲಿ ಉತ್ತಮ ಮೈಲೇಜ್ ಹೊಂದಿರುವ ಸ್ಕೂಟರ್‌ಗಳ ಗ್ರಾಹಕರು ಆಸಕ್ತಿ ತೋರುತ್ತಿದ್ದು, ಆರಂಭದಲ್ಲಿ ಪ್ರೀಮಿಯಂ ಇವಿ ಸ್ಕೂಟರ್‌ಗಳನ್ನು ಮಾತ್ರ ಅಭಿವೃದ್ದಿ ಮಾಡಲು ನಿರ್ಧರಿಸಿದ್ದ ಎಥರ್ ಕಂಪನಿಯು ಇದೀಗ ಗ್ರಾಹಕರ ಬೇಡಿಕೆಯೆಂತೆ ಬಜೆಟ್ ಮಾದರಿಗಳನ್ನು ಸಹ ಉತ್ಪಾದನೆ ಮಾಡುವ ಆಸಕ್ತಿ ತೋರಿದೆ.

Most Read Articles

Kannada
English summary
Top 5 electric two wheeler companies in india details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X