Just In
Don't Miss!
- Lifestyle
ಆಯುರ್ವೇದ ಔಷಧಿ ಸೇವಿಸುವ ಮುನ್ನ ಈ ಎಚ್ಚರಿಕೆಗಳನ್ನು ನೀವು ತೆಗೆದುಕೊಳ್ಳಲೇಬೇಕು
- News
ಪಲ್ಲವಿ ಡೇ ಬಳಿಕ ಮತ್ತೊಬ್ಬ ಯುವ ರೂಪದರ್ಶಿ ಆತ್ಮಹತ್ಯೆ
- Sports
ಮಹಿಳಾ ಟಿ20 ಚಾಲೆಂಜ್: ವೆಲಾಸಿಟಿ ವಿರುದ್ಧ ಗೆದ್ದ ಟ್ರೈಲ್ಬ್ಲೇಜರ್ಸ್, ಆದ್ರೂ ಫೈನಲ್ ಮಿಸ್
- Finance
ಮೇ 26ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Movies
ಬಾಲಕೃಷ್ಣ 107ನೇ ಸಿನಿಮಾದ ಟೈಟಲ್ 'ಜೈ ಬಾಲಯ್ಯ'
- Technology
ಸ್ಯಾಮ್ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್ಫೋನ್ ಬಿಡುಗಡೆ! ವಿಶೇಷತೆ ಏನು?
- Education
Karnataka SSLC Revaluation 2022 : ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಟಾಪ್-5 ಬೈಕ್‌ಗಳಿವು..
ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷ ಹಲವಾರು ಬೈಕ್‌ಗಳು ಬಿಡುಗಡೆಗೊಂಡಿವೆ, ಮುಂದಿನ ದಿನಗಳಲ್ಲಿ ಇನ್ನು ಹಲವಾರು ಜನಪ್ರಿಯ ಬೈಕ್‌ಗಳು ಬಿಡುಗಡೆಯಾಗಲಿವೆ. ವಿಶೇಷವಾಗಿ ಈ ವರ್ಷ ಜನಪ್ರಿಯ ಪ್ರೀಮಿಯಂ ಬೈಕ್‌ಗಳು ಬಿಡುಗಡೆಯಾಗಲಿವೆ.

ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ದಿನಗಳಲ್ಲಿ ಮಿಡ್ ವೈಟ್ ಮತ್ತು ಹೆಚ್ಚಿನ ಸಾಮರ್ಥ್ಯದ ಮೋಟಾರ್‌ಸೈಕಲ್‌ಗಳನ್ನು ಬಿಡುಗಡೆ ಮಾಡಲು ಹಲವು ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಗಳು ನಿರ್ಧರಿಸಲಾಗಿದೆ ಮತ್ತು ಸಾಕಷ್ಟು ಉತ್ಸಾಹಿಗಳು ಹೆಚ್ಚಿನ ನಿರೀಕ್ಷೆಯೊಂದಿಗೆ ಕಾಯುತ್ತಿದ್ದಾರೆ. ಭಾರತದಲ್ಲಿ ಬಿಡುಗಡೆ ಮಾಡುವುದಾಗಿ ಕಂಪನಿಯು ಖಚಿತಪಡಿಸಿದ ಟಾಪ್-5 ಬೈಕ್‌ಗಳಿವೆ. ಈ ಬೈಕ್‌ಗಳ ಬಗ್ಗೆ ಹೆಚ್ಚಿನ ಮಾಹಿತಿಗಳು ಇಲ್ಲಿದೆ.

2022ರ ಕೆಟಿಎಂ ಆರ್‌ಸಿ 390
ಆಸ್ಟ್ರಿಯಾದ ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಕೆಟಿಎಂ (KTM) ತನ್ನ 2022ರ ಕೆಟಿಎಂ ಆರ್‌ಸಿ 390 ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ 2022ರ ಕೆಟಿಎಂ ಆರ್‌ಸಿ 390 (KTM RC 390) ಬೈಕ್ ಹಲವಾರು ಹೊಸ ನವೀಕರಣಗಳೊಂದಿಗೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ. ಕೆಟಿಎಂ ಇಂಡಿಯಾ ತನ್ನ ವೆಬ್‌ಸೈಟ್‌ನಲ್ಲಿ 2022ರ ಆರ್‌ಸಿ 390 ಬೈಕ್ ಬಿಡುಗಡೆಗೆ ಮುಂಚಿತವಾಗಿ ಪಟ್ಟಿ ಮಾಡಿದೆ.

ಬಜಾಜ್ ಆಟೋ 2022ರ ಕೆಟಿಎಂ ಆರ್‌ಸಿ 390 ಗಾಗಿ ಅನುಮೋದನೆ ದಾಖಲೆಗಳನ್ನು ಸಲ್ಲಿಸಿದೆ. ಕಂಪನಿಯು ಶೀಘ್ರದಲ್ಲೇ ಅಧಿಕೃತ ಬಿಡುಗಡೆ ಮಾಡಬಹುದೆಂದು ಈ ದಾಖಲೆಗಳು ಸೂಚಿಸುತ್ತವೆ. ಆದರೆ ಅಧಿಕೃತ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿಲ್ಲ, ಈ ಇಂಡಿಯಾ-ಸ್ಪೆಕ್ ಮಾಡೆಲ್ ಸ್ವೀಕರಿಸುವ ಎಲ್ಲಾ ವೈಶಿಷ್ಟ್ಯಗಳನ್ನು ಕಂಪನಿಯು ಪಟ್ಟಿ ಮಾಡಿದೆ.

ಆದರೆ ಈ ಹೊಸ ಕೆಟಿಎಂ ಆರ್‌ಸಿ 390 ಸೂಪರ್‌ಸ್ಪೋರ್ಟ್ ಬೈಕ್ ಈ ತಿಂಗಳಲ್ಲಿ ಅಥವಾ ಮುಂದಿನ ತಿಂಗಳಿನಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ..ಹೊಸ ಕೆಟಿಎಂ ಆರ್‌ಸಿ 390 ಬೈಕ್ ಕಳೆದ ವರ್ಷ ಅಂತರರಾಷ್ತ್ರೀಯ ಮಾರುಕಟ್ಟೆಗಳನ್ನು ಪ್ರವೇಶಿಸಿದೆ. ಭಾರತದಲ್ಲಿನ ಅಭಿಮಾನಿಗಳು ಈ ಬೈಕ್ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ಹೊಸ ಕೆಟಿಎಂ ಆರ್‌ಸಿ 390 ಬೈಕ್ ಹಿಂದಿನ ಮಾದರಿಗಿಂತ ಹೆಚ್ಚು ಅಗ್ರೇಸಿವ್ ವಿನ್ಯಾಸವನ್ನು ಹೊಂದಿದೆ.

ಈ ನ್ಯೂ ಜನರೇಷನ್ ಕೆಟಿಎಂ ಆರ್‌ಸಿ 390 ಬೈಕ್ ಅದೇ 373.2 ಸಿಸಿ, ಸಿಂಗಲ್ ಸಿಲಿಂಡರ್, ಲಿಕ್ವಿಡ್ ಕೂಲ್ಡ್, ಫ್ಯೂಯಲ್-ಇಂಜೆಕ್ಟ್ ಎಂಜಿನ್ ಹೊಂದಿರುತ್ತದೆ. ಈ ಎಂಜಿನ್ 43.5 ಬಿಹೆಚ್‍ಪಿ ಪವರ್ ಮತ್ತು 37 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಇದರೊಂದಿಗೆ ಸ್ಲಿಪ್ಪರ್ ಮತ್ತು ಅಸಿಸ್ಟ್ ಕ್ಲಚ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತದೆ.

ಟ್ರಯಂಫ್ ಟೈಗರ್ ಸ್ಪೋರ್ಟ್ 660
ಟ್ರಯಂಫ್ ಕಂಪನಿಯು ತನ್ನ ಹೊಸ ಟೈಗರ್ ಸ್ಪೋರ್ಟ್ 660 ಬೈಕ್ ಅನ್ನುಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದೀಗ ಟ್ರಯಂಫ್ ಕಂಪನಿಯು ಟೈಗರ್ ಸ್ಪೋರ್ಟ್ 660 ಬೈಕ್ ಬಿಡುಗಡೆಗೊಳಿಸುವ ದಿನಾಂಕವನ್ನು ಬಹಿರಂಗಪಡಿಸಿದೆ. ಈ ಹೊಸ ಟ್ರಯಂಫ್ ಟೈಗರ್ ಸ್ಪೋರ್ಟ್ 660(Triumph Tiger Sport 660) ಬೈಕ್ 2022ರ ಮಾರ್ಚ್ 29 ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಹೊಸ ಟೈಗರ್ ಸ್ಪೋರ್ಟ್ 660 ಅಡ್ವೆಂಚರ್ ಟೂರರ್ ಬೈಕಿನ ಬೆಲೆಯು ಅಂದಾಜು ರೂ. 8-9 ಲಕ್ಷವಾಗಿರಬಹುದು ಎಂದು ನಾವು ನಿರೀಕ್ಷಿಸುತ್ತೇವೆ. ಈ ಹೊಸ ಟ್ರಯಂಫ್ ಟೈಗರ್ ಸ್ಪೋರ್ಟ್ 660 ಕಂಪನಿಯ ಸಾಲಿನಲ್ಲಿ ಹೊಸ ಎಂಟ್ರಿ ಲೆವೆಲ್ ಟೈಗರ್ ಆಗಿದ್ದು, ಅವರ ಅತ್ಯಂತ ಕೈಗೆಟುಕುವ ಟೈಗರ್ ಆಗಿದೆ. ಟೈಗರ್ ಸ್ಪೋರ್ಟ್ 660 ಬ್ರ್ಯಾಂಡ್‌ನ ಇತ್ತೀಚಿನ ನೇಕೆಡ್ ಸ್ಟ್ರೀಟ್‌ಫೈಟರ್-ಟ್ರಿಡೆಂಟ್ 660 ನ ಅದೇ ಫ್ರೇಮ್ ಅನ್ನು ಆಧರಿಸಿದೆ.

ಇದು ಟ್ರೈಡೆಂಟ್ 660 ಮಾದರಿಯನ್ನು ಆಧರಿಸಿದ್ದರೂ, ಇದು ಸ್ಪೋರ್ಟ್ಸ್ ಟೂರಿಂಗ್ ಬೈಕ್ ಆಗಿದೆ. ಇದರಲ್ಲಿ ಕೆಲವು ವ್ಯತ್ಯಾಸಗಳನ್ನು ಪಡೆಯಲಿದೆ. ಈ ಸ್ಪೋರ್ಟಿಯಾಗಿ ಕಾಣುವ ಅರ್ಧ-ಫೇರಿಂಗ್, ನೇರವಾದ ರೈಡಿಂಗ್ ಪೋಷಿಸನ್, ಹೆಚ್ಚು ಸಸ್ಪೆಂಕ್ಷನ್ ಟ್ರ್ಯಾವೆಲ್, ಎತ್ತರದ ಸೀಟ್ ಮತ್ತು ಉತ್ತಮ ಟ್ರ್ಯಾವೆಲ್ ಸಾಮರ್ಥ್ಯಕ್ಕಾಗಿ ಲಗೇಜ್ ಫ್ರೇಮ ಅನ್ನು ಕೂಡ ಹೊಂದಿದೆ. ಈ ಹೊಸ ಬೈಕ್ ವಿನ್ಯಾಸವು ಖಂಡಿತವಾಗಿಯೂ ಆಕರ್ಷಕವಾಗಿದೆ

ಈ ಹೊಸ ಟೈಗರ್ ಸ್ಪೋರ್ಟ್ 660 ಬೈಕಿನಲ್ಲಿ 660 ಸಿಸಿ ಇನ್-ಲೈನ್ ಮೂರು ಸಿಲಿಂಡರ್ ಎಂಜಿನ್ ಅನ್ನು ಟ್ರೈಡೆಂಟ್ 660 ನೊಂದಿಗೆ ಹಂಚಿಕೊಳ್ಳಲಾಗಿದೆ. ಈ ಎಂಜಿನ್ 79 ಬಿಹೆಚ್‍ಪಿ ಪವರ್ ಮತ್ತು 64 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್ ಬಾಕ್ಸ್ ನೊಂದಿಗೆ ಜೋಡಿಸಲಾಗುತ್ತದೆ.

ಟ್ರಯಂಫ್ ಟೈಗರ್ 1200
ಟ್ರಯಂಫ್ ಮೋಟಾರ್‌ಸೈಕಲ್ಸ್ ಜಾಗತಿಕವಾಗಿ ತನ್ನ ಹೊಸ ಟೈಗರ್ 1200 ಬೈಕ್ ಅನ್ನು ಈ ತಿಂಗಳ ಆರಂಭದಲ್ಲಿ ಅನಾವರಣಗೊಳಿಸಿತ್ತು. ಈ ಹೊಸ ಟ್ರಯಂಫ್ ಟೈಗರ್ 1200(Triumph Tiger 1200) ಬೈಕ್ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ. ಈ ಹೊಸ ಟ್ರಯಂಫ್ ಟೈಗರ್ 1200 ಬೈಕ್ ಖರೀದಿಗಾಗಿ ಪ್ರಿ-ಬುಕ್ಕಿಂಗ್ ಅನ್ನು ಸ್ವೀಕರಿಸಲು ಪ್ರಾರಂಭಿಸಲಾಗಿದೆ.

ಹೊಸ ಟ್ರಯಂಫ್ ಟೈಗರ್ 1200 ಬೈಕ್ ಕ್ಲಾಸ್ ಲೀಡಿಂಗ್ ಹ್ಯಾಂಡ್ಲಿಂಗ್‌ನೊಂದಿಗೆ ಗಮನಾರ್ಹವಾಗಿ ಹಗುರವಾದ, ಹೆಚ್ಚು ಶಕ್ತಿಶಾಲಿಯಾಗಿದೆ. ಈ ಹೊಸ ಟೈಗರ್ 1200 ಸಂಪೂರ್ಣವಾಗಿ ಹೊಸ ಬೈಕ್ ಆಗಿದ್ದು, ಹೆಚ್ಚು ಪವರ್, ಹೊಸ ಚಾಸಿಸ್ ಮತ್ತು ಕಡಿಮೆ ತೂಕದೊಂದಿಗೆ ಹೊಸ ಟ್ರಿಪಲ್ ಎಂಜಿನ್ ಅನ್ನು ಒಳಗೊಂಡಿದೆ. ಟ್ರಯಂಫ್ ಟೈಗರ್ 900 ನಂತೆ, 2022ರ ಟ್ರಯಂಫ್ ಟೈಗರ್ 1200 ಬೈಕ್ ಅನ್ನು ಎರಡು ಮಾದರಿಗಳಲ್ಲಿ ನೀಡಲಾಗುವುದು,

ಈ ಹೊಸ ಟ್ರಯಂಫ್ ಟೈಗರ್ 1200 ಬೈಕಿನಲ್ಲಿ 1,160 ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 9,000 ಆರ್‌ಪಿಎಂನಲ್ಲಿ 148 ಬಿಹೆಚ್‍ಪಿ ಪವರ್ ಮತ್ತು 7,000 ಆರ್‌ಪಿಎಂನಲ್ಲಿ 130 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಹೊಸ ಎಂಜಿನ್ ಉತ್ತಮ ವೇಗವರ್ಧಕವನ್ನು ಹೊಂದಿದೆ ಎಂದು ಹೇಳಲಾಗುತ್ತದೆ ಮತ್ತು ಹಗುರವಾದ ಕಡಿಮೆ ನಿರ್ವಹಣೆ ಶಾಫ್ಟ್ ಡ್ರೈವ್ ಅನ್ನು ಸಹ ಒಳಗೊಂಡಿದೆ.

ರಾಯಲ್ ಎನ್‌ಫೀಲ್ಡ್ ಹಂಟರ್ 350
ಈ ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಬೈಕ್‌ಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ರಾಯಲ್ ಎನ್‍ಫೀಲ್ಡ್ ಕಂಪನಿಯು ಮುಂದೆ ಬಿಡುಗಡೆಗೊಳಿಸುವ ಮಾದರಿಗಳಲ್ಲಿ ಹೊಸ ಹಂಟರ್ 350 ಕೂಡ ಒಳಗೊಂಡಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕ್ ಈ ವರ್ಷದ ಮಧ್ಯಂತರ ಅವಧಿಯಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.

ಈ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕ್ ಬ್ರ್ಯಾಂಡ್‌ನ 350ಸಿಸಿ ವಿಭಾಗದಲ್ಲಿ ಇರಿಸಲಾಗುತ್ತದೆ. ಇನ್ನು ಈ ಹೊಸ ಹಂಟರ್ 350 ಬೈಕನ್ನು ಬ್ರ್ಯಾಂಡ್‌ನ ಹೊಸ ಜೆ-ಪ್ಲಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತದೆ. ಈ ಹೊಸ ಬೈಕ್ ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

ರಾಯಲ್ ಎನ್‌ಫೀಲ್ಡ್ ಸೂಪರ್ ಮಿಟಿಯೊರ್ 650
ರಾಯಲ್ ಎನ್ಫೀಲ್ಡ್ ಭಾರತೀಯ ಮಾರುಕಟ್ಟೆಗೆ ಹೊಸ 650 ಸಿಸಿ ಕ್ರೂಸರ್‌ನಲ್ಲಿ ಕೆಲಸ ಮಾಡುತ್ತಿದೆ. ಇದು ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ GT650 ನಂತಹ ಅದೇ 648 ಸಿಸಿ ಏರ್/ಆಯಿಲ್-ಕೂಲ್ಡ್, ಸಿಂಗಲ್-ಸಿಲಿಂಡರ್ ಎಂಜಿನ್‌ನಿಂದ ಚಾಲಿತವಾಗುತ್ತದೆ. ಈ ಎಂಜಿನ್ 47.65 ಬಿಹೆಚ್‍ಪಿ ಪವರ್ ಮತ್ತು 52 ಎನ್ಎಂ ಅನ್ನು ಉತ್ಪಾದಿಸುವ ನಿರೀಕ್ಷೆಯಿದೆ ಮತ್ತು ಇದನ್ನು 6-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗುತ್ತದೆ.