ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ Triumph Trident 660 ಬೈಕ್

ಪ್ರೀಮಿಯಂ ಹಾಗೂ ಪರ್ಫಾಮೆನ್ಸ್ ಬೈಕ್ ತಯಾರಕ ಕಂಪನಿಯಾದ ಟ್ರಯಂಫ್ ಮೋಟಾರ್‌ಸೈಕಲ್ ತನ್ನ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕನ್ನು ಕಳೆದ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಟ್ರಯಂಫ್ ತನ್ನ ಈ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕಿನ ಬೆಲೆಯನ್ನು ಹೆಚ್ಚಿಸಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ Triumph Trident 660 ಬೈಕ್

ಟ್ರಯಂಫ್ ಮೋಟಾರ್‌ಸೈಕಲ್ಸ್ ಇಂಡಿಯಾ ತನ್ನ ಎಂಟ್ರಿ ಲೆವೆಲ್ ರೋಡ್‌ಸ್ಟರ್, ಟ್ರಯಂಫ್ ಟ್ರೈಡೆಂಟ್ 660 ಬೆಲೆಯನ್ನು ರೂ,50,000 ವರೆಗೂ ಹೆಚ್ಚಿಸಲಾಗಿದೆ, ಇದೀಗ ಈ ಟ್ರಯಂಫ್ ಟ್ರೈಡೆಂಟ್ 660 ಬೈಕಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ,7,45,000 ಆಗಿದೆ.ಟ್ರೈಡೆಂಟ್ 660 ಟ್ರಯಂಫ್ ಮೋಟಾರ್‌ಸೈಕಲ್ ಲೈನ್-ಅಪ್‌ನಲ್ಲಿ ಎಂಟ್ರಿ ಲೆವೆಲ್ ಮಾದರಿಯಾಗಿದೆ, ಜೊತೆಗೆ ಟ್ರಯಂಫ್ ಟ್ರಿಪಲ್ ಎಂಜಿನ್ ರೋಡ್‌ಸ್ಟರ್ ಲೈನ್-ಅಪ್ ಆಗಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ Triumph Trident 660 ಬೈಕ್

1968 ರಿಂದ 1975 ರವರೆಗೆ ಟ್ರೈಡೆಂಟ್ ಎಂಬ ಹಳೆಯ ಐಕಾನಿಕ್ ಬೈಕಿನ ಉತ್ಪಾದನೆಯಲ್ಲಿತ್ತು. ಅದೇ ಐಕಾನಿಕ್ ಬೈಕಿನ ಹೆಸರಿನಲ್ಲಿ ಟ್ರಯಂಫ್ ಕಂಪನಿಯು ಹೊಸ ಮಾದರಿಯನ್ನು ಬಿಡುಗಡೆಗೊಳಿಸಲಾಗಿತ್ತು. ಈ ಹೊಸ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್ ಹಲವಾರು ಅತ್ಯಾಧುನಿಕ ಫೀಚರ್ಸ್ ಮತ್ತು ತಂತ್ರಜ್ಙಾನಗಳನ್ನು ಹೊಂದಿವೆ. ಇನ್ನು ಟ್ರಯಂಫ್ ಮೋಟಾರ್‌ಸೈಕಲ್ ಇತ್ತೀಚೆಗೆ ಈ ಬೈಕನ್ನು ಚೀನಾ ಮಾರುಕಟ್ಟೆಯಲ್ಲಿಯು ಕೂಡ ಬಿಡುಗಡೆಗೊಳಿಸಲಾಗಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ Triumph Trident 660 ಬೈಕ್

ಟ್ರಯಂಫ್ ಟ್ರೈಡೆಂಟ್ 660 ಬೈಕ್ ಅತ್ಯಂತ ಸೊಗಸಾದ ವಿನ್ಯಾಸ ಮತ್ತು ನವೀಕರಿಸಿದ ಎಂಜಿನ್ ಅನ್ನು ಹೊಂದಿದೆ. ಇದು ಹೊಸ ವಿನ್ಯಾಸ ಶೈಲಿಯನ್ನು ಹೊಂದಿದೆ. ಅಲ್ಲದೇ ಪವರ್ ಫುಲ್ ಎಂಜಿನ್ ಅನ್ನು ಒಳಗೊಂಡಿದೆ. ಈ ಹೊಸ ಬೈಕ್ ಸ್ಕಪಲ್ಟಡ್ ಫ್ಯೂಯಲ್ ಟ್ಯಾಂಕ್ ನೊಂದಿಗೆ ಮಸ್ಕಲರ್ ಲುಕ್ ಅನ್ನು ಹೊಂದಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ Triumph Trident 660 ಬೈಕ್

ಇನ್ನು ಇದು ಸಿಂಗಲ್-ಪೀಸ್ ಸೀಟ್, ಎಕ್ಸ್‌ಪೋಸ್ಡ್ ಫ್ರೇಮ್ ಮತ್ತು ಎಂಜಿನ್ ಜೊತೆ ವೃತ್ತಾಕಾರದ ಅಂಶಗಳೊಂದಿಗೆ ಸಣ್ಣದಾಗಿ ರೆಟ್ರೋ ಶೈಲಿಯಯಲ್ಲಿ ಕಾಣುತ್ತದೆ. ಈ ಟ್ರಯಂಫ್ ಬೈಕಿನಲ್ಲಿ ರೈಡರ್ ಏಡ್ಸ್ ಮತ್ತು ಎಲೆಕ್ಟ್ರಾನಿಕ್ಸ್ ಅನ್ನು ಸಹ ನೀಡುತ್ತದೆ, ಉದಾಹರಣೆಗೆ ರೈಡ್-ಬೈ-ವೈರ್, ಟ್ರ್ಯಾಕ್ಷನ್ ಕಂಟ್ರೋಲ್, ರೈನ್ ಮತ್ತು ರೋಡ್ ರೈಡರ್ ಮೋಡ್ ಗಳು ಸೇರಿದಂತೆ ಇತರ ಹಲವಾರು ಅತ್ಯಾಧುನಿಕ ಫೀಚರ್ಸ್ ಗಳನ್ನು ಹೊಂದಿವೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ Triumph Trident 660 ಬೈಕ್

ಹೊಸ ಟ್ರಯಂಫ್ ಟ್ರೈಡೆಂಟ್ 660 ಬೈಕಿನಲ್ಲಿ ಇನ್-ಲೈನ್ ಮೂರು-ಸಿಲಿಂಡರ್ 660 ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 10,250 ಆರ್‌ಪಿಎಂನಲ್ಲಿ 80 ಬಿಹೆಚ್‌ಪಿ ಪವರ್ ಮತ್ತು 6,250 ಆರ್‌ಪಿಎಂನಲ್ಲಿ 64 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸು ಸಾಮರ್ಥ್ಯವನ್ನು ಹೊಂದಿದೆ. ಎಂಜಿನ್ ನೊಂದಿಗೆ ಸ್ಲಿಪ್/ಅಸಿಸ್ಟ್ ಕ್ಲಚ್‌ನೊಂದಿಗೆ 6-ಸ್ಪೀಡ್ ಗೇರ್‌ಬಾಕ್ಸ್‌ ಜೋಡಿಸಲಾಗಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ Triumph Trident 660 ಬೈಕ್

ಈ ಟ್ರೈಡೆಂಟ್ 660 ಬೈಕ್ ಎಲ್ಇಡಿ ಲೈಟಿಂಗ್ ಮತ್ತು ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಗಾಗಿ ಟಿಎಫ್ಟಿ ಡಿಸ್ ಪ್ಲೇಯನ್ನು ಸಹ ಒಳಗೊಂಡಿದೆ. 'ಮೈ ಟ್ರಯಂಫ್' ಆ್ಯಪ್ ಬಳಸಿ ಈ ಬೈಕಿನಲ್ಲಿರುವ ಡಿಜಿಟಲ್ ಡಿಸ್ಪ್ಲೇಯನ್ನು ರೈಡರ್ ಸ್ಮಾರ್ಟ್‌ಫೋನ್‌ಗೆ ಕನೆಕ್ಟ್ ಮಾಡಬಹುದಾಗಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ Triumph Trident 660 ಬೈಕ್

ಈ ಹೊಸ ಟ್ರಯಂಫ್ ಟ್ರೈಡೆಂಟ್ 660 ಬೈಕ್ ಟೂಬುಲರ್ ಸ್ಟೀಲ್ ಚಾಸಿಸ್ ಅನ್ನು ಹೊಂದಿದೆ. ಟ್ರೈಡೆಂಟ್ 660 ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 41 ಎಂಎಂ ಶೋವಾ ಯುಎಸ್‌ಡಿ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಶೋವಾ ಮೊನೊ-ಶಾಕ್ ಸೆಟಪ್ ಅನ್ನು ಒಳಗೊಂಡಿದೆ,

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ Triumph Trident 660 ಬೈಕ್

ಇನ್ನು ಇದರ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 310 ಎಂಎಂ ಟ್ವಿನ್ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಸಿಂಗಲ್ ಡಿಸ್ಕ್ ಬ್ರೇಕ್ ಅನ್ನು ಹೊಂದಿದೆ, ಇದರೊಂದಿಗೆ ಹೆಚ್ಚಿನ ಸುರಕ್ಷತೆಗಾಗಿ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ನೀಡಲಾಗಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ Triumph Trident 660 ಬೈಕ್

ಇನ್ನು ಹೊಸ ಟ್ರಯಂಫ್ ಟೈಗರ್ 1200 ಬೈಕ್ ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ. ಇದೀಗ ಈ ಹೊಸ ಟ್ರಯಂಫ್ ಟೈಗರ್ 1200 ಬೈಕ್ ಖರೀದಿಗಾಗಿ ಪ್ರಿ-ಬುಕ್ಕಿಂಗ್ ಅನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಈ ಬೈಕ್ ಅನ್ನು ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಇ ಹೊಸ ಟ್ರಯಂಫ್ ಟೈಗರ್ 1200 ಬೈಕ್ ಕ್ಲಾಸ್ ಲೀಡಿಂಗ್ ಹ್ಯಾಂಡ್ಲಿಂಗ್‌ನೊಂದಿಗೆ ಗಮನಾರ್ಹವಾಗಿ ಹಗುರವಾದ, ಹೆಚ್ಚು ಶಕ್ತಿಶಾಲಿಯಾಗಿದೆ. ಈ ಹೊಸ ಟೈಗರ್ 1200 ಸಂಪೂರ್ಣವಾಗಿ ಹೊಸ ಬೈಕ್ ಆಗಿದ್ದು, ಹೆಚ್ಚು ಪವರ್, ಹೊಸ ಚಾಸಿಸ್ ಮತ್ತು ಕಡಿಮೆ ತೂಕದೊಂದಿಗೆ ಹೊಸ ಟ್ರಿಪಲ್ ಎಂಜಿನ್ ಅನ್ನು ಒಳಗೊಂಡಿದೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ Triumph Trident 660 ಬೈಕ್

ಟ್ರಯಂಫ್ ಟೈಗರ್ 900 ನಂತೆ, 2022ರ ಟ್ರಯಂಫ್ ಟೈಗರ್ 1200 ಬೈಕ್ ಅನ್ನು ಎರಡು ಮಾದರಿಗಳಲ್ಲಿ ನೀಡಲಾಗುವುದು, ಟೈಗರ್ 1200 ಜಿಟಿ ಮಾದರಿಯು ಹೆಚ್ಚು ರಸ್ತೆ-ಆಧಾರಿತವಾಗಿದೆ, ಆದರೆ ಟೈಗರ್ 1200 ರ್‍ಯಾಲಿ ಮಾದರಿಯು ಹೆಚ್ಚು ಆಫ್-ರೋಡ್ ಆಧಾರಿತವಾಗಿರುತ್ತದೆ. ಈ ಹೊಸ ಟ್ರಯಂಫ್ ಟೈಗರ್ 1200 ಜಿಟಿ 19-ಇಂಚಿನ ಮುಂಭಾಗ ಮತ್ತು 18-ಇಂಚಿನ ಹಿಂಬದಿಯು ಅಲ್ಯೂಮಿನಿಯಂ ವ್ಹೀಲ್ ಗಳನ್ನು ಹೊಂದಿವೆ. ಆದರೆ ರ್‍ಯಾಲಿ ಮಾದರಿಯು ಎಲ್ಲಾ ರೀತಿ ಕಠಿಣ ಭೂಪ್ರದೇಶಗಳಲ್ಲಿಯು ಚಲಿಸುವಂತೆ ವಿನ್ಯಾಸಗೊಳಿಸಲಾಗಿದೆ, ಇದರ ಮುಂಭಾಗ 21-ಇಂಚಿನ ಮತ್ತು ಹಿಂಭಾಗ 18-ಇಂಚಿನ ಟ್ಯೂಬ್‌ಲೆಸ್ ಸ್ಪೋಕ್ಡ್ ವ್ಹೀಲ್ ಗಳನ್ನು ಒಳಗೊಂಡಿವೆ.

ಭಾರತದಲ್ಲಿ ಬೆಲೆ ಏರಿಕೆ ಪಡೆದುಕೊಂಡ Triumph Trident 660 ಬೈಕ್

ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್ ಮ್ಯಾಟ್ ಜೆಟ್ ಬ್ಲಾಕ್/ಮ್ಯಾಟ್ ಸಿಲ್ವರ್ ಐಸ್, ಸಿಲ್ವರ್ ಐಸ್ ಮತ್ತು ಡಯಾಬ್ಲೊ ರೆಡ್, ಕ್ರಿಸ್ಟಲ್ ವೈಟ್ ಮತ್ತು ಸಾಫೈರ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಈ ಟ್ರಯಂಫ್ ಟ್ರೈಡೆಂಟ್ 660 ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಕವಾಸಕಿ ಝಡ್650 ಬೈಕಿಗೆ ಪೈಪೋಟಿ ನೀಡುತ್ತಿದೆ,

More from DriveSpark

Article Published On: Tuesday, February 1, 2022, 17:31 [IST]
English summary
Triumph motorcycles india increased the price of trident 660 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+