Just In
- 55 min ago
130 km ರೇಂಜ್ ನೀಡುವ 'ecoDryft' ಬೈಕ್ ಬಿಡುಗಡೆ... .ರೂ.99,999ಕ್ಕೆ ಸಿಗುತ್ತೆ!
- 3 hrs ago
ಶೀಘ್ರವೇ ಕಡಿಮೆ ಬೆಲೆಯಲ್ಲಿ ಸಿಗಲಿದೆ ಮಾರುತಿ ಸುಜುಕಿ ಆಲ್ಟೊ ಕೆ10 ಎಕ್ಸ್ಟ್ರಾ ಎಡಿಷನ್
- 5 hrs ago
ಬಹುನೀರಿಕ್ಷಿತ 'ಅಲ್ಟ್ರಾವೈಲೆಟ್ F77' ಬೈಕ್ ಹೇಗಿದೆ ಗೋತ್ತಾ.. ಇಲ್ಲಿದೆ ವಿಮರ್ಶೆ
- 1 day ago
ಬೆಲೆ ಏರಿಕೆ ಪಡೆದುಕೊಂಡ ಪರ್ಫಾಮೆನ್ಸ್ ಕಾರು ಪ್ರಿಯರ ಮೆಚ್ಚಿನ ಹ್ಯುಂಡೈ ಐ20 ಎನ್ ಲೈನ್
Don't Miss!
- News
ಆವಲಗುರ್ಕಿ: ಆದಿಯೋಗಿ ಪ್ರತಿಮೆ ನೋಡಲು ಬರುವ ಭಕ್ತರಿಂದ ಸುಂಕ ವಸೂಲಿ ಆರೋಪ, ಭುಗಿಲೆದ್ದ ಆಕ್ರೋಶ
- Sports
ಟೀಮ್ ಇಂಡಿಯಾಗೆ ಹೊಸ ತಲೆನೋವು: ಮಂಕಾಗಿದ್ದಾರೆ ಭರವಸೆ ಮೂಡಿಸಿದ್ದ ಆಟಗಾರರು
- Technology
ಸ್ಯಾಮ್ಸಂಗ್ ಗ್ಯಾಲಕ್ಸಿ S22 ಬೆಲೆಯಲ್ಲಿ ಏಕಾಏಕಿ ಭಾರೀ ಇಳಿಕೆ!..ಸಖತ್ ಆಫರ್!
- Movies
ಅದಿತಿಯನ್ನು ಭೇಟಿಯಾಗ್ತಾನಾ ಧ್ರುವ? ಆದ್ಯ ಪ್ಲಾನ್ ಸುಹಾಸಿನಿ ಮುಂದೆ ವರ್ಕ್ ಆಗುತ್ತಾ?
- Lifestyle
ಒಂಟಿಯಾಗಿ ಅಂಟಾರ್ಟಿಕಾ ಯಾತ್ರೆ ಮಾಡಿದ ಮೊದಲ ಮಹಿಳೆ: ಕ್ಯಾಪ್ಟನ್ ಪ್ರೀತ್ ಚಾಂದಿ, ಇವರ ಸ್ಟೋರಿಯೇ ಸ್ಪೂರ್ತಿದಾಯಕ
- Finance
Budget 2023 Expectations: ಸಾಮಾನ್ಯ ಜನರ ಬಜೆಟ್ ನಿರೀಕ್ಷೆಗಳೇನು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಶೀಘ್ರದಲ್ಲಿಯೇ ಹೊಸ ಬಣ್ಣದ ಆಯ್ಕೆಯಲ್ಲಿ ಬಿಡುಗಡೆಯಾಗಲಿದೆ ಟಿವಿಎಸ್ ಎನ್‌ಟಾರ್ಕ್ 125
ಟಿವಿಎಸ್ ಮೋಟಾರ್ ಕಂಪನಿಯು ಮುಂಬರುವ ದಸರಾ ಮತ್ತು ದೀಪಾವಳಿ ವಿಶೇಷತೆಗಾಗಿ ಎನ್‌ಟಾರ್ಕ್ 125 ಪ್ರೀಮಿಯಂ ಸ್ಕೂಟರ್ ಮಾದರಿಯಲ್ಲಿ ಹೊಸ ಬಣ್ಣದ ಆಯ್ಕೆ ನೀಡಲು ಮುಂದಾಗಿದೆ.

ಎನ್‌ಟಾರ್ಕ್ 125 ಮೂಲಕ ಪ್ರೀಮಿಯಂ ಸ್ಕೂಟರ್ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಿವಿಎಸ್ ಕಂಪನಿಯು ಗ್ರಾಹಕರ ಬೇಡಿಕೆ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಿದ್ದು, ಕಂಪನಿಯು ಇದೀಗ ಮತ್ತೊಂದು ಹೊಸ ಬಣ್ಣದ ಆಯ್ಕೆಯನ್ನು ಪರಿಚಯಿಸುವ ಸುಳಿವು ನೀಡಿದೆ.

ದಸರಾ ಆರಂಭಕ್ಕೂ ಮುನ್ನ ಹೊಸ ಬಣ್ಣದ ಆಯ್ಕೆ ಹೊಂದಿರುವ ಟಿವಿಎಸ್ ಎನ್‌ಟಾರ್ಕ್ ಮಾದರಿಯು ಖರೀದಿಗೆ ಲಭ್ಯವಿರಲಿದ್ದು, ಹೊಸ ಎಕ್ಸ್‌ಟಿ ವೆರಿಯೆಂಟ್ ಬಿಡುಗಡೆಯ ನಂತರ ಇದು ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ಸುಳಿವು ನೀಡಿದೆ.

ಎನ್‌ಟಾರ್ಕ್ 125 ಸ್ಕೂಟರ್ ಮಾದರಿಯಲ್ಲಿ ಟಿವಿಎಸ್ ಕಂಪನಿಯು ಸದ್ಯ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಡ್ರಮ್, ಡಿಸ್ಕ್, ರೇಸ್ ಎಡಿಷನ್, ಸೂಪರ್ ಸ್ಕ್ವಾಡ್ ಎಡಿಷನ್ ಮತ್ತು ರೇಸ್ ಎಕ್ಸ್‌ಪಿ ಎನ್ನುವ ಐದು ವೆರಿಯೆಂಟ್‌ಗಳಲ್ಲಿ ಮಾರಾಟ ಮಾಡುತ್ತಿದ್ದು, ಕಳೆದ ಕೆಲ ತಿಂಗಳ ಹಿಂದಷ್ಟೇ ಹೊಸದಾಗಿ ಟಾಪ್ ಎಂಡ್ ಮಾದರಿಯಾಗಿ ಎನ್‌ಟಾರ್ಕ್ 125 ಎಕ್ಸ್‌ಟಿ ವರ್ಷನ್ ಪರಿಚಯಿಸಿತ್ತು.

ಡ್ರಮ್ ಮಾದರಿಯು ಬೆಂಗಳೂರು ಎಕ್ಸ್‌ಶೋರೂಂ ಪ್ರಕಾರ ರೂ. 84,141, ಡಿಸ್ಕ್ ಮಾದರಿಯು ರೂ. 89,249 ರೇಸ್ ಎಡಿಷನ್ ಮಾದರಿಯು ರೂ. 92,746 ಸೂಪರ್ ಸ್ಕ್ವಾಡ್ ಎಡಿಷನ್ ರೂ. 95,196 ಮತ್ತು ರೇಸ್ ಎಕ್ಸ್‌ಪಿ ಎಡಿಷನ್ ರೂ. 96,746 ಬೆಲೆ ಮತ್ತು ಇದೀಗ ಬೆಲೆ ಇಳಿಕೆ ಮಾಡಲಾದ ಎಕ್ಸ್‌ಟಿ ಮಾದರಿಯು ರೂ. 1,04,696 ಬೆಲೆ ಹೊಂದಿದೆ.

ಹೊಸ ಆವೃತ್ತಿಯಲ್ಲಿ ಆಕರ್ಷಕ ಗ್ರಾಫಿಕ್ಸ್ ಡಿಸೈನ್‌ನೊಂದಿಗೆ ಸ್ಪೋರ್ಟಿ ಲುಕ್ ಇಷ್ಟಪಡುವ ಗ್ರಾಹಕರ ಆಯ್ಕೆಗೆ ಉತ್ತಮಯಾಗಲಿದ್ದು, ಹೊಸ ಆವೃತ್ತಿಯಲ್ಲಿ ಕಂಪನಿಯು ಉನ್ನತೀಕರಿಸಿದ ಕನೆಕ್ಟೆಡ್ ತಂತ್ರಜ್ಞಾನದೊಂದಿಗೆ ನಿಯೋ ಗ್ರಿನ್ ಬಣ್ಣದ ಆಯ್ಕೆ ನೀಡಿದೆ.

ಉನ್ನತೀಕರಿಸಿದ ಸ್ಮಾರ್ಟ್ಎಕ್ಸ್‌ಟಾಕ್ ಕನೆಕ್ಟ್ ತಂತ್ರಜ್ಞಾನದಿಂದಾಗಿ ಎನ್‌ಟಾರ್ಕ್ 125 ಸ್ಕೂಟರ್ ಬಳಕೆದಾರರು ಇದೀಗ ವಾಯ್ಸ್ ಕಮಾಂಡ್ ಮೂಲಕ ಸ್ಕೂಟರಿನ ಪ್ರಮುಖ ತಾಂತ್ರಿಕ ಅಂಶಗಳ ಮಾಹಿತಿ ಪಡೆಯಬಹುದಾಗಿದ್ದು, ಡಿಸ್‌ಪ್ಲೇ ಮೂಲಕ ಪ್ರಸಕ್ತ ವಿದ್ಯಮಾನ ಮಾಹಿತಿಯನ್ನು ಸುಲಭವಾಗಿ ಪಡೆಯಬಹುದಾಗಿದೆ.

ಜೊತೆಗೆ ಸ್ಮಾರ್ಟ್ಎಕ್ಸ್‌ಟಾಕ್ ಕನೆಕ್ಟ್ ಸೌಲಭ್ಯವನ್ನು ಸ್ಮಾರ್ಟ್‌ಫೋನ್‌ಗೆ ಸಂಪರ್ಕಿಸುವ ಮೂಲಕ ಕರೆ ಸ್ವಿಕಾರವನ್ನು ಡಿಸ್‌ಪ್ಲೇ ಮೂಲಕ ಸುಲಭವಾಗಿ ನಿರ್ವಹಿಸಬಹುದಾಗಿದ್ದು, ಮುಖ್ಯವಾಗಿ ವಾಯ್ಸ್ ಕಮಾಂಡ್ ಮೂಲಕವೇ ಹಲವು ಅಲರ್ಟ್ ಸೌಲಭ್ಯಗಳನ್ನು ಒದಗಿಸುತ್ತದೆ.

ಸ್ಕೂಟರ್‌ನಲ್ಲಿ ಇಂಧನ ಖಾಲಿಯಾಗುವ, ಸ್ಮಾರ್ಟ್ಎಕ್ಸ್‌ಟಾಕ್‌ಗೆ ಕನೆಕ್ಟ್ ಮಾಡಲಾದ ಫೋನ್ ಬ್ಯಾಟರಿ ಚಾರ್ಜಿಂಗ್ ಲೆವಲ್, ಟ್ರಾಫಿಕ್‌ಗಳಲ್ಲಿ ಅನಗತ್ಯವಾಗಿ ಇಂಧನ ಹಾಳುತ್ತಿದ್ದರೆ ವಾಯ್ಸ್ ಅಲರ್ಟ್ ಮಾಡಲಿದ್ದು, ಇದು ರೈಡಿಂಗ್ ಮೌಲ್ಯವನ್ನು ಮತ್ತಷ್ಟು ಹೆಚ್ಚಿಸುತ್ತದೆ.

ಇದರ ಹೊರತಾಗಿ ಹೊಸ ಸ್ಕೂಟರ್‌ನಲ್ಲಿ ಸ್ಟ್ಯಾಂಡರ್ಡ್ ಮಾದರಿಯಲ್ಲಿರುವಂತೆಯೇ ಎಂಜಿನ್ ಮತ್ತು ಇತರೆ ತಾಂತ್ರಿಕ ಸೌಲಭ್ಯವನ್ನು ಮುಂದುವರಿಸಲಾಗಿದ್ದು, ಹೊಸ ಸ್ಕೂಟರ್‌ನಲ್ಲಿ 124 ಏರ್ ಕೂಲ್ಡ್, ಫ್ಯೂಲ್ ಇಂಜೆಕ್ಷೆಡ್ ಎಂಜಿನ್ ಜೋಡಣೆ ಮಾಡಲಾಗಿದೆ.

ಸ್ಟ್ಯಾಂಡರ್ಡ್ ಮಾದರಿಗಳಂತೆ ಹೊಸ ಮಾದರಿಯು 9.25-ಬಿಎಚ್‌ಪಿ ಮತ್ತು 10.5-ಎನ್ಎಂ ಟಾರ್ಕ್ ಉತ್ಪಾದಿಸಲಿದ್ದು, ಹೊಸ ಸ್ಕೂಟರ್‌ನಲ್ಲಿರುವ ರೇಸ್ ಮೋಡ್ ಪರ್ಫಾಮೆನ್ಸ್‌ಗಾಗಿ ಮತ್ತು ಸ್ಟ್ರೀಟ್ ಮೋಡ್ ಇಂಧನ ದಕ್ಷತೆ ಕಾಯ್ದುಕೊಳ್ಳಲು ಸಹಕಾರಿಯಾಗಿದೆ.

ಜೊತೆಗೆ ಎನ್‌ಟಾರ್ಕ್ 125 ಹೊಸ ಮಾದರಿಯಲ್ಲಿ ಇತರೆ ವೆರಿಯೆಂಟ್‌ಗಳಲ್ಲಿರುವಂತೆ ಉನ್ನತೀಕರಿಸಲಾದ ಹಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ನೀಡಲಾಗಿದ್ದು, ಟಿ ಆಕಾರದ ಹೆಡ್‌ಲ್ಯಾಂಪ್ ಮತ್ತು ಟೈಲ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್ಎಸ್, ಪೂರ್ಣ ಪ್ರಮಾಣದ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಏಂಜಿನ್ ಕಿಲ್ ಸ್ವಿಚ್, 5.8 -ಲೀಟರ್ ಫ್ಯೂಲ್ ಟ್ಯಾಂಕ್ ಹೊಂದಿದೆ.

ಹೊಸ ಎಕ್ಸ್‌ಟಿ ಮಾದರಿಯು ರೇಸ್ ಎಕ್ಸ್‌ಪಿ ಮಾದರಿಗಿಂತಲೂ ತುಸು ಹೆಚ್ಚುವರಿ ಬೆಲೆ ಹೊಂದಿದ್ದು, ಹೊಸ ಮಾದರಿಯೊಂದಿಗೆ ಕಂಪನಿಯು 125 ಸಿಸಿ ವಿಭಾಗದಲ್ಲಿ ಸ್ಪೋರ್ಟಿ ಸ್ಕೂಟರ್ ಇಷ್ಟಪಡುವ ಗ್ರಾಹಕರನ್ನು ಸೆಳೆಯುತ್ತಿದೆ. ಮುಂಬರುವ ದಿನಗಳಲ್ಲಿ ಹೊಸ ಬಣ್ಣದ ಆಯ್ಕೆ ಹೊಂದಿರುವ ಮಾದರಿಯು ಮತ್ತಷ್ಟು ಬೇಡಿಕೆ ಪಡೆದುಕೊಳ್ಳಲಿದೆ.