ಪವರ್‌ಫುಲ್ ಅಡ್ವೆಂಚರ್ ಬೈಕ್ ಪ್ರಿಯರಿಗಾಗಿ ಬರುತ್ತಿದೆ ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450

ರಾಯಲ್ ಎನ್‌ಫೀಲ್ಡ್ ಭಾರತದಲ್ಲಿ ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರಾಂಡ್ ಗಳಲ್ಲಿ ಒಂದಾಗಿದೆ. ರಾಯಲ್ ಎನ್‌ಫೀಲ್ಡ್ ರೆಟ್ರೊ ಮತ್ತು ಕ್ಲಾಸಿಕ್ ಮೋಟಾರ್‌ಸೈಕಲ್‌ಗಳಿಗೆ ಹೆಚ್ಚು ಜನಪ್ರಿಯತೆಯನ್ನು ಗಳಿಸಿದೆ.

Recommended Video

Royal Enfield Hunter 350 | ಹೊಸ ಬೈಕ್ ಕುರಿತಾದ ಮೊದಲ ಅನಿಸಿಕೆಯ ವಾಕ್‌ರೌಂಡ್ #FirstLook

ವಿಶೇಷವಾಗಿ ಭಾರತದಲ್ಲಿ ಹೆಚ್ಚಿನ ಜನರು ಎನ್‌ಫೀಲ್ಡ್ ಅನ್ನು ಖರೀದಿಸುತ್ತಾರೆ. ರಾಯಲ್ ಎನ್‌ಫೀಲ್ಡ್ ಹಲವಾರು ಜನರ ಕನಸಿನ ಬೈಕ್ ಆಗಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತದಲ್ಲಿ ಹಲವಾರು ಜನಪ್ರಿಯ ಬೈಕ್ ಗಳನ್ನು ಮಾರಾಟ ಮಾಡುತ್ತಿದೆ.

ಪವರ್‌ಫುಲ್ ಅಡ್ವೆಂಚರ್ ಬೈಕ್ ಪ್ರಿಯರಿಗಾಗಿ ಬರುತ್ತಿದೆ ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450

ಇದೀಗ ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಟೀಸರ್ ವಿಡಿಯೋವನ್ನು ಬಿಡುಗಡೆಗೊಳಿಸಿದೆ. 1, 2, 3 ಎಂಬ ಶೀರ್ಷಿಕೆಯೊಂದಿಗೆ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್‌ನ ನದಿಯನ್ನು ದಾಟುತ್ತಿರುವುದನ್ನು ಟೀಸರ್ ತೋರಿಸುತ್ತದೆ. ಇದು ಮುಂಬರುವ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450 ಆಗಿರಬಹುದು, ಈ ಬೈಕಿನಲ್ಲಿ ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಎತ್ತರದ ವಿಂಡ್‌ಶೀಲ್ಡ್ ಅನ್ನು ಒಳಗೊಂಡಿದೆ. ಅದರ 400cc ಒಡಹುಟ್ಟಿದವರಿಗಿಂತ ಇದನ್ನು ಪ್ರತ್ಯೇಕಿಸಲು, ಬೈಕ್ ತಯಾರಕರು ಅದರ ಇಂಧನ ಟ್ಯಾಂಕ್, ಮುಂಭಾಗದ ಕೊಕ್ಕು, ಸೈಡ್ ಪ್ಯಾನೆಲ್‌ಗಳು ಮತ್ತು ಎಕ್ಸಾಸ್ಟ್‌ಗೆ ಕೆಲವು ಬದಲಾವಣೆಗಳನ್ನು ಮಾಡಿದ್ದಾರೆ.

ಪವರ್‌ಫುಲ್ ಅಡ್ವೆಂಚರ್ ಬೈಕ್ ಪ್ರಿಯರಿಗಾಗಿ ಬರುತ್ತಿದೆ ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450

ಸ್ಟೆಪ್-ಅಪ್ ಸ್ಪ್ಲಿಟ್ ಸೀಟ್‌ಗಳು, ಫುಟ್‌ಪೆಗ್‌ಗಳ ಸ್ಥಾನ ಮತ್ತು ಹ್ಯಾಂಡಲ್‌ಬಾರ್ ಮತ್ತು ರೈಡ್ ಏರೋಗಾಮಿಕ್ಸ್ ಅಂಶಗಳು ಅಸ್ತಿತ್ವದಲ್ಲಿರುವ 400cc ಮಾಡೆಲ್‌ನಿಂದ ಮುಂದಕ್ಕೆ ಸಾಗುವಂತೆ ತೋರುತ್ತಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450 ಬೈಕಿನಲ್ಲಿ 450ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ.

ಪವರ್‌ಫುಲ್ ಅಡ್ವೆಂಚರ್ ಬೈಕ್ ಪ್ರಿಯರಿಗಾಗಿ ಬರುತ್ತಿದೆ ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450

ಈ ಎಂಜಿನ್ 40 ಬಿಹೆಚ್‍ಪಿ ಪವರ್ ಮತ್ತು 45 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಇದು ಹಿಮಾಲಯನ್ 400cc ಗಿಂತ ಹೆಚ್ಚು ಶಕ್ತಿಶಾಲಿ ಮತ್ತು ಟಾರ್ಕ್ಯುಯರ್ ಆಗಿದೆ. ಎರಡನೆಯದು 24.3 ಬಿಹೆಚ್‍ಪಿ ಪವರ್ ಮತ್ತು 32 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಪ್ರಸ್ತುತ ಹಿಮಾಲಯನ್ ಬೈಕಿನಲ್ಲಿ 5-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಿದರೆ ಹೊಸ ಎನ್‌ಫೀಲ್ಡ್ ಹಿಮಾಲಯನ್ 450 ಬೈಕಿನಲ್ಲಿ 6-ಸ್ಪೀಡ್ ಗೇರ್‌ಬಾಕ್ಸ್‌ ಅನ್ನು ಜೋಡಿಸಬಹುದು.

ಪವರ್‌ಫುಲ್ ಅಡ್ವೆಂಚರ್ ಬೈಕ್ ಪ್ರಿಯರಿಗಾಗಿ ಬರುತ್ತಿದೆ ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450

ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450 ಬೈಕಿನ ಸಸ್ಪೆನ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ USD ಫೋರ್ಕ್‌ಗಳನ್ನು ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸಸ್ಪೆನ್ಷನ್ ಯುನಿಟ್ ಅನ್ನು ಒಳಗೊಂಡಿರುತ್ತದೆ. ಇದು ಉತ್ತಮ ವೇಗದ ಕಾರ್ಯಕ್ಷಮತೆಯನ್ನು ಖಚಿತಪಡಿಸುತ್ತದೆ.

ಪವರ್‌ಫುಲ್ ಅಡ್ವೆಂಚರ್ ಬೈಕ್ ಪ್ರಿಯರಿಗಾಗಿ ಬರುತ್ತಿದೆ ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450

ಇನ್ನು ಸುರಕ್ಷತೆಯಲ್ಲಿ ಪ್ರಮುಖ ಪಾತ್ರವಹಿಸುವ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗ ಮತ್ತು ಹಿಂಭಾಗದ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿರುತ್ತದೆ. ಹಿಂಭಾಗದ ಬ್ರೇಕ್‌ಗೆ ಡ್ಯುಯಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಹೊಂದಿರಲಿದೆ.

ಪವರ್‌ಫುಲ್ ಅಡ್ವೆಂಚರ್ ಬೈಕ್ ಪ್ರಿಯರಿಗಾಗಿ ಬರುತ್ತಿದೆ ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450

ಈ ಹೊಸ ಬೈಕ್ 21 ಇಂಚಿನ ಮುಂಭಾಗ ಮತ್ತು 17 ಇಂಚಿನ ಹಿಂದಿನ ಚಕ್ರಗಳೊಂದಿಗೆ ಬರಲಿದೆ. 400cc ಹಿಮಾಲಯನ್‌ನಂತೆಯೇ, ಅದರ 450 ಆವೃತ್ತಿಯು 2190 ಎಂಎಂ ಉದ್ದ, 840 ಎಂಎಂ ಅಗಲ ಮತ್ತು 1360 ಎಂಎಂ ಎತ್ತರವನ್ನು ಹೊಂದಿರುತ್ತದೆ.

ಪವರ್‌ಫುಲ್ ಅಡ್ವೆಂಚರ್ ಬೈಕ್ ಪ್ರಿಯರಿಗಾಗಿ ಬರುತ್ತಿದೆ ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450

ವೈಶಿಷ್ಟ್ಯಗಳ ವಿಷಯದಲ್ಲಿ, ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450 ಬೈಕಿನಲ್ಲಿ ರೈಡ್-ಬೈ-ವೈರ್ ಥ್ರೊಟಲ್, ಡಿಜಿಟಲ್ ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಟ್ರಿಪ್ಪರ್ ನ್ಯಾವಿಗೇಷನ್ ಸಿಸ್ಟಮ್ ಅನ್ನು ನೀಡುತ್ತದೆ. ಈ ಬೈಕ್ ಆಯ್ಕೆಯಾಗಿ ಹಿಟೆಡ್ ಗ್ರಿಪ್ಸ್, ಹ್ಯಾಂಡ್‌ಗಾರ್ಡ್‌ಗಳು ಮತ್ತು ಹ್ಯಾಂಡಲ್‌ಬಾರ್ ಅನ್ನು ಪಡೆಯಬಹುದು.

ಪವರ್‌ಫುಲ್ ಅಡ್ವೆಂಚರ್ ಬೈಕ್ ಪ್ರಿಯರಿಗಾಗಿ ಬರುತ್ತಿದೆ ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450

ರಾಯಲ್ ಎನ್‌ಫೀಲ್ಡ್ ಭಾರತದಲ್ಲಿ ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರಾಂಡ್ ಗಳಲ್ಲಿ ಒಂದಾಗಿದೆ. ರಾಯಲ್ ಎನ್‌ಫೀಲ್ಡ್ ಬ್ರ್ಯಾಂಡ್ ರೆಟ್ರೊ-ಶೈಲಿಯ ಸ್ಟ್ರೀಟ್ ಬೈಕ್‌ಗಳಲ್ಲಿ ಪರಿಣತಿ ಹೊಂದಿದ್ದರೂ, ಅದರ ಪೋರ್ಟ್‌ಫೋಲಿಯೊದಲ್ಲಿ ಅಡ್ವೆಂಚರ್ ಬೈಕ್ ಅನ್ನು ಕೂಡ ಒಳಗೊಂಡಿದೆ.

ಪವರ್‌ಫುಲ್ ಅಡ್ವೆಂಚರ್ ಬೈಕ್ ಪ್ರಿಯರಿಗಾಗಿ ಬರುತ್ತಿದೆ ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450

ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಸ್ಟೈಲಿಷ್ ಮತ್ತು ಒರಟಾದ ಅಡ್ವೆಂಚರ್ ಮೋಟಾರ್‌ಸೈಕಲ್ ಆಗಿದ್ದು, ಎಂತಹ ರಸ್ತೆಗಳಲ್ಲೂ ಗಮ್ಯಸ್ಥಾನ ತಲುಪಲು ವಿನ್ಯಾಸಗೊಳಿಸಲಾಗಿದೆ. ಆದರೆ ಈ ಮೋಟಾರ್‌ಸೈಕಲ್ ಸಂಪೂರ್ಣವಾಗಿ ಸಮರ್ಥವಾಗಿಲ್ಲ ಎಂಬ ಮಾತುಗಳು ಅಲ್ಲಲ್ಲಿ ಕೇಳಿಬರುತ್ತಿವೆ. ಹಾಗಾಗಿ ರಾಯಲ್ ಎನ್‌ಫೀಲ್ಡ್ ಈಗ ಹಿಮಾಲಯನ್ ಮೋಟಾರ್‌ಸೈಕಲ್‌ನ ಹೆಚ್ಚು ಪವರ್ ಫುಲ್ ಆವೃತ್ತಿಯನ್ನು ಅಭಿವೃದ್ಧಿಪಡಿಸುತ್ತಿದೆ. ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್‌ನೊಂದಿಗೆ, KTM 390 ಅಡ್ವೆಂಚರ್ ಮತ್ತು BMW G310 GS ನಂತಹ ಹೆಚ್ಚು ಶಕ್ತಿಶಾಲಿ ಮೋಟಾರ್‌ಸೈಕಲ್‌ಗಳೊಂದಿಗೆ ಸುಲಭವಾಗಿ ಸ್ಪರ್ಧಿಸವಂತಹ ಮಾದರಿಯನ್ನು ತರಲು ವಾಹನ ತಯಾರಕರು ಸಜ್ಜಾಗಿದ್ದಾರೆ.

ಪವರ್‌ಫುಲ್ ಅಡ್ವೆಂಚರ್ ಬೈಕ್ ಪ್ರಿಯರಿಗಾಗಿ ಬರುತ್ತಿದೆ ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450

ಪ್ರಸ್ತುತ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ ಬಗ್ಗೆ ಹೇಳುವುದಾದರೆ, ಈ ಮಾದರಿಯು ಸ್ಟ್ಯಾಂಡರ್ಡ್, ಡ್ಯುಯಲ್ ಟೋನ್ ಮತ್ತು ಪೈನ್ ಗ್ರೀನ್ ಮತ್ತು ಗ್ರಾನೈಟ್ ಬ್ಲ್ಯಾಕ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಈ ಬೈಕಿನಲ್ಲಿ 'ಟ್ರಿಪ್ಪರ್ ನ್ಯಾವಿಗೇಷನ್' ಅನ್ನು ಸಹ ಒಳಗೊಂಡಿದೆ. ಹೊಸ ಸರಳ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಪಾಡ್ ಅನ್ನು ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ನೀಡಲಾಗಿದೆ. ಈ ಟ್ರಿಪ್ಪರ್ ನ್ಯಾವಿಗೇಷನ್ ಸಿಸ್ಟಂ ಬೈಕ್ ರೈಡಿಂಗ್ ವೇಳೆ ಸವಾರನಿಗೆ ಹೆಚ್ಚು ಸಹಕಾರಿಯಾಗಿರುತ್ತದೆ. ಈ ರಾಯಲ್ ಎನ್‌ಫೀಲ್ಡ್ ಎಕ್ಸ್‌ಪ್ಲೊರ್ ಆ್ಯಂಡ್ ಪ್ಲ್ಯಾನ್ ರೈಡರ್ ಆ್ಯಪ್ ಮೂಲಕ ಟ್ರಿಪ್ರರ್ ಮೀಟರ್‌ಗೆ ಕನೆಕ್ಟ್ ಮಾಡಬಹುದಾಗಿದೆ. ಇದು ಟರ್ನ್ ಬೈ ಟರ್ನ್ ನ್ಯಾವಿಗೇಷನ್ ಸೇವೆಯನ್ನು ಒದಗಿಸುತ್ತದೆ.

ಪವರ್‌ಫುಲ್ ಅಡ್ವೆಂಚರ್ ಬೈಕ್ ಪ್ರಿಯರಿಗಾಗಿ ಬರುತ್ತಿದೆ ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಇನ್ನು ಮುಂದಿನ ತಿಂಗಳುಗಳಲ್ಲಿ ರಾಯಲ್ ಎನ್‌ಫೀಲ್ಡ್ ಭಾರತೀಯ ಮಾರುಕಟ್ಟೆಗೆಯಲ್ಲಿ ಹೊಸ ಮಾದರಿಗಳನ್ನು ಪರಿಚಯಿಸಲಿದೆ. ಇದರಲ್ಲಿ ಹೊಸ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450 ಬೈಕ್ ಕೂಡ ಒಳಗೊಂಡಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಬೈಕಿನ ಬಗ್ಗೆ ಹೆಚ್ಚಿನ ವಿವರಗಳು ಮುಂದಿನ ದಿನಗಳಲ್ಲಿ ಬಹಿರಂಗವಾಗಲಿದೆ.

Most Read Articles

Kannada
English summary
Upcoming royal enfield himalayan 450 teased india launch details
Story first published: Tuesday, August 23, 2022, 16:09 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X