ಡಿಲರ್ಸ್ ಯಾರ್ಡ್ ತಲುಪಿದ ಯಮಹಾ ಇವಿ ಸ್ಕೂಟರ್- ಭಾರತದಲ್ಲಿ ಶೀಘ್ರದಲ್ಲಿಯೇ ಬಿಡುಗಡೆ ಸಾಧ್ಯತೆ..
ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನ ಮಾರಾಟವು ತೀವ್ರಗತಿಯಲ್ಲಿ ಬೆಳವಣಿಗೆ ಕಾಣುತ್ತಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಪ್ರಮುಖ ವಾಹನ ಕಂಪನಿಗಳು ತಮ್ಮ ಇವಿ ಸ್ಕೂಟರ್ ಮಾದರಿಗಳ ಮಾರಾಟ ಆರಂಭಿಸುವ ಸಿದ್ದತೆಯಲ್ಲಿವೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಸಾಂಪ್ರಾದಾಯಿಕ ವಾಹನಗಳ ಉತ್ಪಾದನೆ ಮಾಡುವ ಕಂಪನಿಗಳಿಂತಲೂ ಸ್ಟಾರ್ಟ್ಅಪ್ ಇವಿ ಕಂಪನಿಗಳೇ ಇವಿ ವಾಹನ ಮಾರಾಟದಲ್ಲಿ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಸ್ಟಾರ್ಟ್ಅಪ್ ಕಂಪನಿಗಳಿಗೆ ಪೈಪೋಟಿಯಾಗಿ ಇದೀಗ ಪ್ರಮುಖ ವಾಹನ ಕಂಪನಿಗಳು ಕೂಡಾ ಹೊಸ ಇವಿ ವಾಹನಗಳ ಬಿಡುಗಡೆಗೆ ಸಿದ್ದಗೊಳ್ಳುತ್ತಿರುವುದು ಮುಂದಿನ ಕೆಲವೇ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಇವಿ ವಾಹನ ಮಾದರಿಗಳು ರಸ್ತೆಗಿಳಿಯಲಿವೆ.

ದ್ವಿಚಕ್ರ ವಾಹನ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಯಮಹಾ ಕಂಪನಿಯು ಕೂಡಾ ಶೀಘ್ರದಲ್ಲಿಯೇ ತನ್ನ ಇವಿ ಸ್ಕೂಟರ್ ಕಾನ್ಸೆಪ್ಟ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಇವಿ ಸ್ಕೂಟರ್ ಬಿಡುಗಡೆಗೂ ಕಂಪನಿಯು ಡೀಲರ್ಸ್ ಯಾರ್ಡ್‌ಗಳಲ್ಲಿ ಹೊಸ ಇವಿ ಸ್ಕೂಟರ್ ಗಳ ಉತ್ಪಾದನಾ ಮಾದರಿಯನ್ನು ಪ್ರದರ್ಶನಗೊಳಿಸುತ್ತಿದೆ.

ಹೊಸ ಇವಿ ಸ್ಕೂಟರ್ ಪ್ರದರ್ಶನದ ಹೊರತಾಗಿ ಹೊಸ ಉತ್ಪನ್ನಗಳ ಯಾವುದೇ ಅಧಿಕೃತ ತಾಂತ್ರಿಕ ಮಾಹಿತಿ ಹಂಚಿಕೊಂಡಿಲ್ಲವಾದರೂ ಮುಂದಿನ ಕೆಲವೇ ದಿನಗಳಲ್ಲಿ ಹೊಸ ಸ್ಕೂಟರ್ ಮಾರಾಟ ಆರಂಭಿಸುವ ಯೋಜನೆ ಕುರಿತಾಗಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದು, ಹೊಸ ಸ್ಕೂಟರ್‌ಗಳು ಭಾರತದಲ್ಲಿ ಬಿಡುಗಡೆಗೂ ಮುನ್ನ ಯುರೋಪಿನ ಪ್ರಮುಖ ಮಾರುಕಟ್ಟೆಗಳಿಗೆ ಲಗ್ಗೆಯಿಡಲಿವೆ.

ಯಮಹಾ ಕಂಪನಿಯು ಹೊಸ ಇವಿ ಸ್ಕೂಟರ್‌ಗಳನ್ನು 2019ರ ಟೊಕಿಯೋ ಮೋಟಾರ್ ಶೋನಲ್ಲಿ ಮೊದಲ ಬಾರಿಗೆ ಅನಾವರಣಗೊಳಿಸಿದ್ದ ಇ-01 ಮತ್ತು ಇಸಿ-05 ಕಾನ್ಸೆಪ್ಟ್ ಮಾದರಿಗಳನ್ನು ಆಧರಿಸಿ ಬಿಡುಗಡೆ ಮಾಡುತ್ತಿದ್ದು, 2030ರ ವೇಳೆಗೆ ವಾರ್ಷಿಕವಾಗಿ ಸುಮಾರು ಶೇ. 33 ರಷ್ಟು ಇವಿ ವಾಹನಗಳ ಮಾರಾಟವನ್ನು ವಿಸ್ತರಿಸುವ ಗುರಿಹೊಂದಿದೆ.

2050ರ ವೇಳೆಗೆ ತನ್ನ ಶ್ರೇಣಿಯ ಶೇ.90 ರಷ್ಟು ವಾಹನಗಳನ್ನು ವಿದ್ಯುದ್ದೀಕರಿಸುವ ಗುರಿ ಹೊಂದಿರುವ ಯಮಹಾ ಕಂಪನಿಯು ಭವಿಷ್ಯದ ಯೋಜನೆಗಳಿಗೆ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇವಿ ಸ್ಕೂಟರ್ ವಿನೂತನ ವೈಶಿಷ್ಟ್ಯತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲು ಸಜ್ಜುಗೊಂಡಿದೆ.

ಹೊಸ ಇ-01 ಮತ್ತು ಇಸಿ-05 ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮೊದಲ ಬಾರಿಗೆ ಟೊಕಿಯೊ ಮೋಟಾರ್ ಶೋನಲ್ಲಿ ಪ್ರದರ್ಶನ ಮಾಡಿದ್ದ ಯಮಹಾ ಕಂಪನಿಯು ಈಗಾಗಲೇ ಟ್ರೇಡ್ ಮಾರ್ಕ್ ಕೂಡಾ ಸಲ್ಲಿಕೆ ಮಾಡಿದ್ದು, ಎಲೆಕ್ಟ್ರಿಕ್ ವಾಹನ ಉತ್ಪಾದನೆಗೆ ಮತ್ತು ಮಾರಾಟಕ್ಕಾಗಿ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ತೆರೆಯುವ ಯೋಜನೆಯಲ್ಲಿದೆ.

ಎಲೆಕ್ಟ್ರಿಕ್ ವಾಹನಗಳಿಗಾಗಿಯೇ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ತೆರೆಯುವ ಮೂಲಕ ಸಂಪೂರ್ಣವಾಗಿ ಎಲೆಕ್ಟ್ರಿಕ್ ವಾಹನಗಳಿಗಾಗಿ ಮೀಸಲಿಡಲು ಸಹಕಾರಿಯಾಗಲಿದ್ದು, ಹೊಸ ಯೋಜನೆಗಾಗಿ ಕಂಪನಿಯು ಭಾರೀ ಪ್ರಮಾಣದ ಹೂಡಿಕೆ ಮಾಡುವ ಯೋಜನೆಯಲ್ಲಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬ್ಲೂಟೂತ್ ಕನೆಕ್ಟಿವಿಟಿ, ಎಬಿಎಸ್, ಸ್ವಾಪ್ ಬ್ಯಾಟರಿ, ಜಿಯೋ ಫೆನ್ಸಿಂಗ್, ಎರಡು ಬದಿಯಲ್ಲೂ ಡಿಸ್ಕ್ ಬ್ರೇಕ್ ಸೌಲಭ್ಯಗಳ ಜೊತೆ ಹಲವಾರು ತಾಂತ್ರಿಕ ಅಂಶಗಳು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಲಾಗುತ್ತಿದ್ದು, ಹೊಸ ಸ್ಕೂಟರ್‌ಗಳನ್ನು ಜಾಗತಿಕ ಮಾರುಕಟ್ಟೆಗಳನ್ನು ಗುರಿಯಾಗಿಸಿ ಅಭಿವೃದ್ದಿಗೊಳಿಸಿದೆ.

ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅಭಿವೃದ್ದಿಗಾಗಿ ತೈವಾನ್ ಮೂಲದ ಇ-ಸ್ಕೂಟರ್ ತಯಾರಕರಾದ ಗೊಗೊ ಜೊತೆಗೂ ಸಹಭಾಗಿತ್ವ ಹೊಂದಿರುವ ಯಮಹಾ ಕಂಪನಿಯು ಹೊಸ ಯೋಜನೆ ಅಡಿ ಹಲವಾರು ಹೊಸ ಸ್ಕೂಟರ್‌ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ಗೊಗೊ ಕಂಪನಿಯು ಈಗಾಗಲೇ ಹಲವು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮಾಡುವ ಮೂಲಕ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಯಮಹಾ ಕಂಪನಿಯು ಇದೀಗ ಗೊಗೊ ಜೊತೆಗೂಡಿ ಜಾಗತಿಕ ಮಾರುಕಟ್ಟೆಗಾಗಿ ವಿವಿಧ ಮಾದರಿಯ ಇವಿ ಮಾದರಿಗಳನ್ನು ಸಿದ್ದಪಡಿಸುತ್ತಿದೆ.

ಇ-01 ಮತ್ತು ಇಸಿ-05 ಎಲೆಕ್ಟ್ರಿಕ್ ಸ್ಕೂಟರ್‌ಗಳು ಸಹ ಹೊಸ ಸಹಭಾಗಿತ್ವ ಯೋಜನೆ ಅಡಿಯಲ್ಲಿಯೇ ನಿರ್ಮಾಣಗೊಳ್ಳುತ್ತಿದ್ದು, ಇದರಲ್ಲಿ ಒಂದು ಮಾದರಿಯು ಈ ವರ್ಷದ ಮಧ್ಯಂತರದಲ್ಲಿ ಭಾರತದಲ್ಲೂ ಬಿಡುಗಡೆಯಾಗಬಹುದಾಗಿದೆ.

ಹೊಸ ಇವಿ ಸ್ಕೂಟರ್‌ಗಳ ತಾಂತ್ರಿಕ ಅಂಶಗಳ ಇನ್ನು ಯಾವುದೇ ನಿಖರವಾದ ತಾಂತ್ರಿಕ ಅಂಶಗಳಿಲ್ಲವಾದರೂ ಇ-01 ಮತ್ತು ಇಸಿ-05 ಎಲೆಕ್ಟ್ರಿಕ್ ಸ್ಕೂಟರ್‌ಗಳು ಅತ್ಯುತ್ತಮ ಬ್ಯಾಟರಿ ಪ್ಯಾಕ್ ಹೊಂದಿರಲಿದ್ದು, ಒಂದು ಬಾರಿ ಪೂರ್ಣ ಪ್ರಮಾಣದ ಚಾರ್ಜ್ ಮಾಡಿದ್ದಲ್ಲಿ 90 ಕಿ.ಮೀ ನಿಂದ 110 ಕಿ.ಮೀ ಮೈಲೇಜ್‌ನೊಂದಿಗೆ ಹಲವಾರು ಪ್ರೀಮಿಯಂ ಫೀಚರ್ಸ್ ಹೊಂದಿರಲಿವೆ ಎನ್ನಲಾಗಿದೆ.

ಯಮಹಾ ಇ-ಸ್ಕೂಟರ್‌ನ ದೊಡ್ಡ ಹೈಲೈಟ್ ಎಂದರೆ ಇದು ಬ್ಯಾಟರಿ ವಿನಿಮಯ ತಂತ್ರಜ್ಞಾನವನ್ನು ನೀಡುತ್ತದೆ. ಇದು ಬದಲಾಯಿಸಬಹುದಾದ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್‌ನಿಂದ ಚಾಲಿತವಾಗಿದೆ. ಇದು ಹಬ್-ಮೌಂಟೆಡ್ ಎಲೆಕ್ಟ್ರಿಕ್ ಮೋಟಾರ್‌ಗೆ ಶಕ್ತಿಯನ್ನು ನೀಡಲಿದ್ದು, ಇದು ಸುಮಾರು 3kW ಅನ್ನು ಬ್ಯಾಟರಿ ಪ್ಯಾಕ್ ಪಡೆದುಕೊಳ್ಳಬಹುದಾಗಿದೆ.

ಹೊಸ ಇವಿ ಎಲೆಕ್ಟ್ರಿಕ್ ಸ್ಕೂಟರ್ ಇಕೋ, ನಾರ್ಮಲ್ ಮತ್ತು ಪವರ್ ಸೇರಿದಂತೆ ಮೂರು ರೈಡ್ ಮೋಡ್ ಹೊಂದಿರಲಿದ್ದು, ಬ್ಯಾಟರಿ ಸ್ಥಿತಿ, ವೇಗ, ಇತ್ಯಾದಿಗಳಂತಹ ನಿರ್ಣಾಯಕ ಮಾಹಿತಿಯನ್ನು ಹಂಚಿಕೊಳ್ಳುವ ಸರಳವಾದ ಸಂಪೂರ್ಣ ಡಿಜಿಟಲ್ ಇನ್ಸ್‌ಟ್ರೂಮೆಂಟ್ ಕನ್ಸೋಲ್ ಅನ್ನು ಇದು ಪಡೆಯುತ್ತದೆ.


Click it and Unblock the Notifications








