ಎಲೆಕ್ಟ್ರಾನಿಕ್ಸ್ ದೈತ್ಯ 'ಏಸರ್'ನಿಂದ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ: ವಿಶೇಷತೆಗಳೇನು?
ಭಾರತದಲ್ಲಿ ಇಂಧನ ಬೆಲೆಗಳು ಗಗನಕ್ಕೇರಿದೆ. ಇದರಿಂದ ಹೆಚ್ಚಿನ ಜನರು ಎಲೆಕ್ಟ್ರಿಕ್ ವಾಹನಗಳ ಕಡೆ ಮುಖ ಮಾಡುತ್ತಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನ (Electric Two-Wheeler) ಬಳಕೆ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಬೇಡಿಕೆಯು ಭಾರೀ ಹೆಚ್ಚಾಗುತ್ತಿದೆ.
ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಬೇಡಿಕೆಗೆ ತಕ್ಕಂತೆ ವಿವಿಧ ಕಂಪನಿಗಳು ಮಾರುಕಟ್ಟೆಯನ್ನು ಪ್ರವೇಶಿಸುತ್ತಿವೆ. ಅದರಲ್ಲೂ ಓಲಾ, ಟಿವಿಎಸ್, ಎಥರ್ ಹಾಗೂ ಬಜಾಜ್ ಇ-ಸ್ಕೂಟರ್‌ಗಳನ್ನು ಅಧಿಕ ಜನರು ಕೊಂಡುಕೊಳ್ಳುತ್ತಿದ್ದಾರೆ. ಈ ನಡುವೆ ತೈವಾನ್ ಮೂಲದ ಬಹುರಾಷ್ಟ್ರೀಯ ಸಂಸ್ಥೆ ಏಸರ್ (Acer), ಲಾಪ್ ಟ್ಯಾಪ್ ಸೇರಿದಂತೆ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳಿಂದ ದೇಶ - ವಿದೇಶದಲ್ಲಿ ಭಾರೀ ಜನಪ್ರಿಯತೆಗಳಿಸಿದ ಕಂಪನಿಯು ಭಾರತೀಯ ಮಾರುಕಟ್ಟೆಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಲಿದೆ.

ಏಸರ್ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಭಾನುವಾರ ಹೈದರಾಬಾದ್‌ನಲ್ಲಿ ನಡೆದ ಸಮಾರಂಭದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಚೊಚ್ಚಲ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಿದೆ. ಈ ಹೊಸ ಏಸರ್ MUVI 125 4G ಎಲೆಕ್ಟ್ರಿಕ್ ಸ್ಕೂಟರ್ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.1 ಲಕ್ಷವಾಗಿದೆ. ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಭಾರತೀಯ ಎಲೆಕ್ಟ್ರಿಕ್ ಮೊಬಿಲಿಟಿ ಪ್ಲಾಟ್‌ಫಾರ್ಮ್ eBikeGo ಸಹಭಾಗಿತ್ವದಲ್ಲಿ ಬಿಡುಗಡೆ ಮಾಡಲಾಗಿದೆ.
eBikeGo ವಾಹನದ ವಿನ್ಯಾಸ ಮತ್ತು ತಯಾರಿಕೆಯ ಜವಾಬ್ದಾರಿಯನ್ನು ಹೊಂದಿದೆ. ಏಸರ್ ಕಂಪನಿಯು ಡೀಲರ್‌ಶಿಪ್ ಭೇಟಿಗೆ ಆಸಕ್ತ ಗ್ರಾಹಕರನ್ನು ಆಹ್ವಾನಿಸಿದೆ. ಆಸಕ್ತ ಗ್ರಾಹಕರು ಪ್ರಿ-ಬುಕಿಂಗ್ ಮತ್ತು ಡೀಲರ್‌ಶಿಪ್ ವಿಚಾರಣೆಗಳಿಗೆ, ಆಸಕ್ತರು ಕಂಪನಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕಾಗುತ್ತದೆ. ಏಸರ್ MUVI 125 4G ಗಾಗಿ ಪ್ರಿ-ಬುಕಿಂಗ್ ಅನ್ನು ಶೀಘ್ರದಲ್ಲೇ Acer ಬ್ರ್ಯಾಂಡ್ ತೆರೆಯುತ್ತದೆ.

ಈ ವರ್ಷದ ಸೆಪ್ಟೆಂಬರ್‌ನಲ್ಲಿ ಗ್ರೇಟರ್ ನೋಯ್ಡಾದಲ್ಲಿ ನಡೆದ EV ಇಂಡಿಯಾ ಎಕ್ಸ್‌ಪೋ 2023 ರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಮೊದಲ ಬಾರಿಗೆ ಪ್ರದರ್ಶಿಸಲಾಯಿತು. ಇದು ಸ್ವ್ಯಾಪ್ ಮಾಡಬಹುದಾದ ಬ್ಯಾಟರಿಗಳೊಂದಿಗೆ ಬರುತ್ತದೆ. ಇದರ ಎರಡು ತೆಗೆಯಬಹುದಾದ ಬ್ಯಾಟರಿಗಳನ್ನು ಹೊಂದಿದ್ದು, 48V 35.2Ah ಪ್ರತಿ ಚಾರ್ಜ್‌ಗೆ 80 ಕಿಲೋಮೀಟರ್‌ಗಳ ರೇಂಜ್ ಅನ್ನು ನೀಡುತ್ತದೆ. ಇನ್ನು ಈ ಎಲೆಕ್ಟ್ರಿಕ್ ಸ್ಕೂಟರ್ 75 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ.
ಹೊಸ ಏಸರ್ MUVI 125 4G ಎಲೆಕ್ಟ್ರಿಕ್ ಸ್ಕೂಟರ್ ಬಿಳಿ, ಕಪ್ಪು ಮತ್ತು ಬೂದು ಎಂಬ ಮೂರು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ. ಕಂಪನಿ ಪ್ರಕಾರ, ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ನಾಲ್ಕು ಗಂಟೆಗಳ ಅವಧಿಯಲ್ಲಿ ಫುಲ್ ಚಾರ್ಜ್ ಮಾಡಬಹುದು. ಸವಾರರು ಒಂದು ಸಮಯದಲ್ಲಿ ಕೇವಲ ಒಂದು ಬ್ಯಾಟರಿಯನ್ನು ಬಳಸಲು ಸಹ ಆಯ್ಕೆ ಮಾಡಬಹುದು. ನಗರ ಪ್ರಯಾಣಿಕರಿಗೆ ಫ್ಯೂಚರಿಸ್ಟಿಕ್ ಎಲೆಕ್ಟ್ರಿಕ್ ಮೊಬಿಲಿಟಿ ಪರಿಹಾರವಾಗಿ ಸ್ಕೂಟರ್ ಅನ್ನು ಪ್ರಚಾರ ಮಾಡಲಾಗುತ್ತಿದೆ.
ಇದು ಲಘು-ತೂಕದ ಚಾಸಿಸ್‌ನೊಂದಿಗೆ ಬರುತ್ತದೆ. ಕಠಿಣ ರಸ್ತೆಗಳಲ್ಲೂ ಸುಗಮ ಚಲನೆಗಾಗಿ 16-ಇಂಚಿನ ವ್ಹೀಲ್ ಗಳನ್ನು ಹೊಂದಿವೆ. ಚಾಸಿಸ್ ನವೀನ ಹಿಂಭಾಗದ ಶಾಕ್ ಅಬ್ಸಾರ್ಬರ್ ಸಿಸ್ಟಮ್‌ನಿಂದ ಪೂರಕವಾಗಿದೆ, ಇದು ಮುಂಭಾಗದ ಹೈಡ್ರಾಲಿಕ್ ಫೋರ್ಕ್‌ನೊಂದಿಗೆ ಜೋಡಿಯಾಗಿ ಬರುತ್ತದೆ, ಸವಾರರಿಗೆ ಚುರುಕುತನ ಮತ್ತು ಸ್ಥಿರತೆಯನ್ನು ನೀಡುತ್ತದೆ. ಇನ್ನು ಈ ಎಲೆಕ್ಟ್ರಿಕ್ ಸ್ಕೂಟರ್ ಫೀಚರ್ಸ್ ಗಳನ್ನು ಹೆಚ್ಚು ಕಸ್ಟಮೈಸ್ ಮಾಡಬಹುದಾಗಿದೆ.
ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಕಸ್ಟಮೈಸ್ ಮಾಡಲು ಮತ್ತು ಅದನ್ನು ಕನೆಕ್ಟಿವಿಟಿ ಫೀಚರ್ಸ್ ಬಳಸಲು Android ಅಥವಾ iOS ಸ್ಮಾರ್ಟ್‌ಫೋನ್ ಅನ್ನು ಬಳಸಬಹುದು. ಇದು ಬ್ಲೂಟೂತ್-ಶಕ್ತಗೊಂಡ 4-ಇಂಚಿನ LCD ಡಿಸ್ ಪ್ಲೇಯನ್ನು ಪಡೆಯುತ್ತದೆ ಮತ್ತು ಮೂರು ಕಾನ್ಫಿಗರೇಶನ್‌ಗಳು ಲಭ್ಯವಿದೆ. ಟೆಕ್ ದೈತ ಕಂಪನಿಯ ಸ್ಕೂಟರ್ ಆಗಿರುವುದರಿಂದ ಸಾಕಷ್ಟು ಅದ್ಭುತ ಫೀಚರ್ಸ್ ಗಳನ್ನು ಹೊಂದಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








