Ather: ಸದ್ದಿಲ್ಲದೇ ಟ್ರೆಂಡ್ ಸೃಷ್ಟಿಸುತ್ತಿವೆ ಬೆಂಗಳೂರಿನ ಎಥರ್ ಎಲೆಕ್ಟ್ರಿಕ್ ಸ್ಕೂಟರ್‌ಗಳು

ಬೆಂಗಳೂರು ಮೂಲದ ಎಥರ್ ಎನರ್ಜಿ (Ather Energy) ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಕೆಲವೇ ದಿನಗಳ ಹಿಂದೆಯಷ್ಟೇ ಎಂಟ್ರಿ ಲೆವೆಲ್ 450ಎಸ್ ಹಾಗೂ ನವೀಕರಿಸಿದ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸುವ ಮೂಲಕ ದೊಡ್ಡಮಟ್ಟದಲ್ಲಿ ಸುದ್ದಿ ಮಾಡಿತ್ತು. ಸದ್ಯ ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಗೊಂಡಿದೆ.

ಎಥರ್ ಎನರ್ಜಿ, ಕಳೆದ ತಿಂಗಳು (ಆಗಸ್ಟ್) 8,062 ಯುನಿಟ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿ, 2022ರ ಇದೇ ಅವಧಿಗೆ ಹೋಲಿಸಿದರೆ (6,410 ಯುನಿಟ್) ವರ್ಷದಿಂದ ವರ್ಷಕ್ಕೆ ಶೇಕಡ 25.77% ಪ್ರಗತಿ ಸಾಧಿಸಿದೆ. ಜೊತೆಗೆ ಜುಲೈನಲ್ಲಿ (2023) ಮಾರಾಟ ಮಾಡಿದ 7,858 ಯುನಿಟ್ ಗೆ ಹೋಲಿಕೆ ಮಾಡಿದರೆ, ಈ ಆಗಸ್ಟ್ ನಲ್ಲಿ ತಿಂಗಳಿನಿಂದ ತಿಂಗಳಿಗೆ 2.6% ಬೆಳವಣಿಗೆ ಕಂಡಿದೆ.

Ather: ಸದ್ದಿಲ್ಲದೇ ಟ್ರೆಂಡ್ ಸೃಷ್ಟಿಸುತ್ತಿವೆ ಬೆಂಗಳೂರಿನ ಎಥರ್ ಎಲೆಕ್ಟ್ರಿಕ್ ಸ್ಕೂಟರ್‌ಗಳು

ಈ ವರ್ಷದ ಮೇ ತಿಂಗಳಲ್ಲಿ ಕಂಪನಿಯು ಅತಿಹೆಚ್ಚು 15,256 ಯುನಿಟ್ ಎಲೆಕ್ಟ್ರಿಕ್ ಸ್ಕೂಟರ್ ಸೇಲ್ ಮಾಡಿತ್ತು. ಅದನ್ನು ಗಮನಿಸಿದಾಗ, ಈಗಿನ ಮಾರಾಟ ಪ್ರಮಾಣ ತುಂಬಾ ಕೆಳ ಮಟ್ಟದಲ್ಲಿದೆ. ಕೇಂದ್ರ ಸರ್ಕಾರ ಫೇಮ್ II (FAME II) ಸಬ್ಸಿಡಿ ದರಗಳನ್ನು ಪರಿಷ್ಕರಿಸಿತ್ತು. ಅದರಿಂದ ಜೂನ್ 1ರಿಂದ ಎಥರ್ ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ಹೆಚ್ಚಳವಾಗಿತ್ತು. ಇದು ಜೂನ್, ಜುಲೈ ತಿಂಗಳಲ್ಲಿ ಮಾರಾಟ ಕುಸಿಯಲು ಕಾರಣವಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಥೆರ್ ಎನರ್ಜಿಯ ಚೀಫ್ ಬ್ಯುಸಿನೆಸ್ ಆಫೀಸರ್ ರವನೀತ್ ಸಿಂಗ್ ಫೋಕೆಲಾ ಅವರು, ಆಗಸ್ಟ್ ಕಂಪನಿಗೆ ಉತ್ತಮ ತಿಂಗಳಾಗಿದೆ. ನಾವು ಹೊಸ 450 ಸರಣಿಯ ಸ್ಕೂಟರ್‌ಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದೆವು. ಅದರಂತೆ 3 ಸ್ಕೂಟರ್ ಲಾಂಚ್ ಮಾಡಿದ್ದೆವು. ನಮಗೆ ಈ ಬಿಡುಗಡೆಯೂ ಮುಂಬರುವ ದಿನಗಳಲ್ಲಿ ಹೆಚ್ಚಿನ ಗ್ರಾಹಕರನ್ನು ತಲುಪಲು ಸಾಧ್ಯವಾಗುತ್ತದೆ' ಎಂದು ಹೇಳಿದ್ದಾರೆ.

Ather: ಸದ್ದಿಲ್ಲದೇ ಟ್ರೆಂಡ್ ಸೃಷ್ಟಿಸುತ್ತಿವೆ ಬೆಂಗಳೂರಿನ ಎಥರ್ ಎಲೆಕ್ಟ್ರಿಕ್ ಸ್ಕೂಟರ್‌ಗಳು

ಇತ್ತೀಚೆಗೆ, ಭಾರತದ ಮಾರುಕಟ್ಟೆಯಲ್ಲಿ ಲಾಂಚ್ ಆದ ಎಥರ್ ಕಂಪನಿಯ ಹೊಸ ಸ್ಕೂಟರ್ ಗಳ ಕುರಿತು ಮಾತನಾಡೋಣ. ಎಂಟ್ರಿ ಲೆವೆಲ್ 450ಎಸ್ ಇ-ಸ್ಕೂಟರ್, ರೂ.1,29,999 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದು, 2.9 kWh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಸಂಪೂರ್ಣ ಚಾರ್ಜಿನಲ್ಲಿ 115 km ರೇಂಜ್ ನೀಡುತ್ತದೆ.

ಎಥರ್ 450ಎಸ್ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಉಪಯೋಗಿಸಲಾಗಿರುವ ಎಲೆಕ್ಟ್ರಿಕ್ ಮೋಟಾರ್, 5.4 kW (7.2 hp) ಪವರ್ ಉತ್ಪಾದಿಸುತ್ತದೆ. 90 kmph ಟಾಪ್ ಸ್ವೀಡ್ ಹೊಂದಿದೆ. ಕೇವಲ 3.9 ಸೆಕೆಂಡುಗಳಲ್ಲಿ 0 ರಿಂದ 40 kmph ವೇಗವನ್ನು ಪಡೆಯಲಿದ್ದು, ಸ್ಮಾರ್ಟ್ಇಕೋ, ಇಕೋ, ರೈಡ್, ಸ್ಪೋರ್ಟ್ ಎಂಬ ನಾಲ್ಕು ರೈಡಿಂಗ್ ಮೋಡ್ ಆಯ್ಕೆಯನ್ನು ಹೊಂದಿದೆ.

ಮನೆಯ ವಿದ್ಯುತ್ ಬಳಕೆಯಲ್ಲಿ ಎಥರ್ 450ಎಸ್ ಇ-ಸ್ಕೂಟರ್‌ ಬ್ಯಾಟರಿ ಪ್ಯಾಕ್, ಪೂರ್ತಿ ಚಾರ್ಜ್ ಆಗಲು 8 ಗಂಟೆ 36 ನಿಮಿಷ ಬೇಕಾಗುತ್ತದೆ. ಸಸ್ಪೆನ್ಷನ್ ಸೆಟಪ್ ಹಾಗೂ ಬ್ರೇಕಿಂಗ್ ಸಿಸ್ಟಮ್ ವಿಚಾರವಾಗಿ ಹೇಳುವುದಾದರೆ, ಫ್ರಂಟ್ ಟೆಲಿಸ್ಕೋಪಿಕ್ ಫೋರ್ಕ್ಸ್, ರೇರ್ ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಪಡೆದಿದ್ದು, ಎರಡು ತುದಿಗಳಲ್ಲಿ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದೆ.

ಇನ್ನು, ಎಥರ್ 450ಎಕ್ಸ್ (2.9kWh ಬ್ಯಾಟರಿ) ಎಲೆಕ್ಟ್ರಿಕ್ ಸ್ಕೂಟರ್ ರೂ.1,38,000 ಹಾಗೂ 450ಎಕ್ಸ್ (3.7kWh) ರೂ.1,44,921 ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. ಇವು, ಬ್ಯಾಟರಿ ಪ್ಯಾಕ್ ಅನುಗುಣವಾಗಿ ಫುಲ್ ಚಾರ್ಜಿನಲ್ಲಿ 115 km ರಿಂದ 145 km ರೇಂಜ್ ನೀಡುತ್ತವೆ. 7 ಇಂಚಿನ TFT ಟಚ್‌ಸ್ಕ್ರೀನ್ ಸೇರಿದಂತೆ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, September 2, 2023, 15:57 [IST]
English summary
Ather energy sales in august 8062 units sold details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+