Ather: ಬೆಂಗಳೂರಿನ ಎಥರ್‌ನಿಂದ ಹೊಸ ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್ ಬರಲಿದೆ, ದೃಢಪಡಿಸಿದ ಸಿಇಒ
ದೇಶಾದ್ಯಂತ ಕಳೆದ ಎರಡು ವರ್ಷದಿಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ದೊಡ್ಡ ಮಟ್ಟದಲ್ಲಿ ಖ್ಯಾತಿಗಳಿಸಿವೆ. ಅದರಲ್ಲೂ ಬೆಂಗಳೂರು ಮೂಲದ ಕಂಪನಿಗಳಾದ ಓಲಾ, ಎಥರ್ ಹಾಗೂ ಸಿಂಪಲ್ ಎನರ್ಜಿ ಇ-ಸ್ಕೂಟರ್‌ಗಳು ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಸದ್ಯ, ಎಥರ್ (Ather) ಹೊಸ ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಲು ಸಿದ್ಧತೆಯಲ್ಲಿ ತೊಡಗಿದೆ.
ಎಥರ್ ಎನರ್ಜಿಯ ಸಿಇಒ ತರುಣ್ ಮೆಹ್ತಾ ಅವರು, ಮುಂದಿನ ವರ್ಷದ ಆರಂಭದಲ್ಲಿ 'ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್' ಪರಿಚಯಿಸುವ ಕಂಪನಿಯ ಯೋಜನೆಯನ್ನು ಖಚಿತಪಡಿಸಿದ್ದಾರೆ. ಹೊಸ ಎಲೆಕ್ಟ್ರಿಕ್ ಸ್ಕೂಟರ್, 450 ಸರಣಿ ಎಲೆಕ್ಟ್ರಿಕ್ ಸ್ಕೂಟರ್ ಗಳಿಗಿಂತ ದೊಡ್ಡ ಗಾತ್ರದಲ್ಲಿರಲಿದ್ದು, ಭರಪೂರ ವೈಶಿಷ್ಟ್ಯಗಳು ತುಂಬಿರಲಿವೆ. ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಸಿಗಲಿದೆ ಎಂದು ತರುಣ್ ಮೆಹ್ತಾ ದೃಢಪಡಿಸಿದ್ದಾರೆ ಎಂದು ವರದಿಯಾಗಿದೆ.

ನೂತನ ಎಲೆಕ್ಟ್ರಿಕ್ ಸ್ಕೂಟರ್ ಕಂಪನಿಯ ಎಂಟ್ರಿ ಲೆವೆಲ್ ಮಾದರಿಯಾಗಿರಲಿದೆ ಎಂದು ಅಂದಾಜಿಸಲಾಗಿದ್ದು, ಮುಂದಿನ ವರ್ಷದ ಆರಂಭದಲ್ಲಿ ಕಾರ್ಯಕ್ಷಮತೆ ಹಾಗೂ ವಿನ್ಯಾಸವನ್ನು ಗಮನದಲ್ಲಿಟ್ಟುಕೊಂಡು 450 ಸರಣಿ ಸ್ಕೂಟರ್‌ಗಳು ಕೊಂಚ ನವೀಕರಣವನ್ನು ಪಡೆಯಲಿವೆ ಎಂದು ತಿಳಿದುಬಂದಿದೆ. ಎಥರ್‌ನಿಂದ ಹೊಸ ಸ್ಕೂಟರ್ ಬರಲಿದೆ ಎಂಬುದಕ್ಕೆ ಸಾಕ್ಷಿ ಎಂಬಂತೆ, ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್‌ವೊಂದು ಪರೀಕ್ಷಾರ್ಥ ಸಂಚಾರ ನಡೆಸುವಾಗ ಕಂಡುಬಂದಿದ್ದು, ಆ ಸ್ಪೈ ಚಿತ್ರಗಳು ಆನ್‌ಲೈನ್ ನಲ್ಲಿ ಸೋರಿಕೆಯಾಗಿವೆ.
ವಿನ್ಯಾಸದ ದೃಷ್ಟಿಯಿಂದ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅತ್ಯಾಕರ್ಷಕವಾಗಿದ್ದು, ದೊಡ್ಡದಾದ ಫ್ಲೋರ್‌ಬೋರ್ಡ್, ಸಿಂಗಲ್ - ಪೀಸ್ ಸೀಟ್, ಸಿಂಗಲ್ ಪೀಸ್ ಗ್ರಾಬ್-ರೈಲ್ ಅನ್ನು ಹೊಂದಿದೆ. ಈ ಸ್ಕೂಟರ್ ಎಡಭಾಗದಲ್ಲಿ ಮಡಚಬಹುದಾದ ಪಿಲಿಯನ್ ಫುಟ್‌ರೆಸ್ಟ್ ಇದೆ. ನವೀನ ಎಲ್‌ಇಡಿ ಹೆಡ್‌ಲೈಟ್ ಹಾಗೂ ಟೈಲ್‌ಲೈಟ್ ಪಡೆದಿದೆ. 12-ಇಂಚಿನ ಅಲಾಯ್ ವೀಲ್, ಮುಂಭಾಗದಲ್ಲಿ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದೆ.

ಈಗ, ದೇಶೀಯ ಮಾರುಕಟ್ಟೆಯಲ್ಲಿ ಮಾರಾಟಗೊಳಿಸುವ ಎಥರ್ 450 ಸರಣಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಗ್ಗೆ ವಿವರವನ್ನು ನೋಡುವುದಾದರೆ, '450ಎಸ್' ಕಂಪನಿಯ ಎಂಟ್ರಿ ಲೆವೆಲ್ ಮಾದರಿಯಾಗಿದೆ. ರೂ.1,29,999 ಎಕ್ಸ್ ಶೋರೂಂ ದರದಲ್ಲಿ ಬಿಡುಗಡೆಯಾಗಿದ್ದ ಈ ಸ್ಕೂಟರ್, 2.9 kWh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಪಡೆದಿದೆ. ಸಂಪೂರ್ಣ ಚಾರ್ಜ್ ನಲ್ಲಿ 115 km ವರೆಗೆ ಕ್ರಮಿಸಬಲ್ಲದು.
ಈ ಎಥರ್ 450ಎಸ್ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಳಸಲಾಗಿರುವ ಮೋಟಾರ್ 5.4 kW (7.2 hp) ಪವರ್ ಉತ್ಪಾದಿಸುತ್ತದೆ. 3.9 ಸೆಕೆಂಡುಗಳಲ್ಲಿ 0 ರಿಂದ 40 kmph ವೇಗವನ್ನು ಪಡೆಯಲಿದ್ದು, 90 kmph ಟಾಪ್ ಸ್ವೀಡ್ ಹೊಂದಿದೆ. ಮನೆಯ ವಿದ್ಯುತ್ ಬಳಕೆಯಲ್ಲಿ ಸಂಪೂರ್ಣ ಚಾರ್ಜ್ ಆಗಲು 8 ಗಂಟೆ 36 ನಿಮಿಷಗಳು ಬೇಕು. ಮುಂಭಾಗ ಹಾಗೂ ಹಿಂಭಾಗ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದೆ.
ಎಥರ್ ಮಾರಾಟಗೊಳಿಸುವ ಮಾದರಿಗಳಲ್ಲಿ 450ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಟಾಪ್ ಮಾದರಿಯಾಗಿದೆ. ಇದು 2.9 kWh ಮತ್ತು 3.7 kWh ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದ್ದು, ಕ್ರಮವಾಗಿ ರೂ.1,38,000 ಮತ್ತು ರೂ.1,44,921 ಬೆಲೆಯಲ್ಲಿ ಬಿಡುಗಡೆಯಾಗಿತ್ತು. ಫುಲ್ ಚಾರ್ಜ್ ನಲ್ಲಿ 115 km - 145 km ಓಡುತ್ತದೆ. ಎರಡು ತುದಿಯಲ್ಲಿ ಡಿಸ್ಕ್ ಬ್ರೇಕ್ ಹಾಗೂ 12-ಇಂಚಿನ ಅಲಾಯ್ ವೀಲ್ಸ್ ಹೊಂದಿದೆ.
ಇನ್ನು, ಎಥರ್ ಹೊಸ ಸ್ಕೂಟರ್ ಬಿಡುಗಡೆಗೆ ಸಿದ್ಧತೆ ನಡೆಸುತ್ತಿರುವುದು ಪ್ರತಿಸ್ಪರ್ಧಿಗಳಿಗೆ ನಡುಕ ಹುಟ್ಟಿಸಿದೆ. ನೂತನ ಎಲೆಕ್ಟ್ರಿಕ್ ಸ್ಕೂಟರ್, ಟಿವಿಎಸ್ ಐಕ್ಯೂಬ್ (TVS iQube) ಹಾಗೂ ಬಜಾಜ್ ಚೇತಕ್ (Bajaj Chetak) ಸ್ಕೂಟರ್‌ಗಳಿಗೆ ಪ್ರಬಲ ಎದುರಾಗಿಯಾಗಬಹುದು ಎಂದು ಅಂದಾಜಿಸಲಾಗಿದೆ. ಇದು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ ಎಂದು ಕಂಪನಿಯು ಮಾಹಿತಿಯನ್ನು ದೃಢಪಡಿಸಿರುವುದರಿಂದ ಗ್ರಾಹಕರಿಗೆ ನೀರಿಕ್ಷೆಗಳು ಹೆಚ್ಚಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವQರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








