ಬೆಂಗಳೂರು ಮೂಲದ ಓಲಾ, ಎಥರ್, ಸಿಂಪಲ್ ಎನರ್ಜಿ ಕಂಪನಿಗಳದ್ದೇ ಹವಾ: ದೇಶದಲ್ಲಿ ಇವೇ ಟಾಪ್ ಗುರು!
ದೇಶೀಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಬೆಂಗಳೂರು ಮೂಲದ ಓಲಾ (ola) ಎಥರ್ (ather) ಹಾಗೂ ಸಿಂಪಲ್ ಎನರ್ಜಿ (simple energy) ಕಂಪನಿಗಳು ದೊಡ್ಡ ಮಟ್ಟದಲ್ಲಿ ಖ್ಯಾತಿಗಳಿಸಿವೆ. ಅವುಗಳ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಹುತೇಕ ಗ್ರಾಹಕರನ್ನು ಸೆಳೆದಿವೆ. ಅದರಲ್ಲೂ ಓಲಾ ಕಂಪನಿ, ಹಲವು ತಿಂಗಳಿಂದ ಪ್ರಥಮ ಸ್ಥಾನದಲ್ಲಿ ಮುಂದುವರೆದಿದೆ.
ಮೊದಲಿಗೆ ಓಲಾ ಕಂಪನಿ ಸ್ಕೂಟರ್‌ಗಳ ಬಗ್ಗೆ ಮಾತನಾಡೋಣ. ಟಾಪ್ ಎಂಡ್ ಮಾದರಿ ಎಸ್1 ಪ್ರೊ (S1 Pro), ರೂ.1,47,499 ಎಕ್ಸ್ ಶೋರೂಂ ದರದಲ್ಲಿ ಗ್ರಾಹಕರಿಗೆ ಸಿಗುತ್ತದೆ. ಸಂಪೂರ್ಣ ಚಾರ್ಜ್ ನಲ್ಲಿ 195 ಕಿಲೋಮೀಟರ್ ರೇಂಜ್ ನೀಡುಲಿದ್ದು, 120 kmph ಟಾಪ್ ಸ್ವೀಡ್ ಹೊಂದಿದೆ. ಓಲಾದ ಇತರೆ ಮಾದರಿಗೆ ಹೋಲಿಸಿದರೆ, ನೂರರಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಓಲಾ ಎಸ್1 ಏರ್ (OLA S1 Air) ವಿಡ್ ರೇಂಜ್ ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ರೂ.1,19,999 ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿದಾರರಿಗೆ ಲಭ್ಯವಿದೆ. ಈ ಹಿಂದೆ, ಗರಿಷ್ಠ ಸಂಖ್ಯೆಯಲ್ಲಿ ಬುಕ್ಕಿಂಗ್ ಪಡೆಯುವ ಮೂಲಕ ಬೃಹತ್ ದಾಖಲೆಯೊಂದನ್ನು ನಿರ್ಮಾಣ ಮಾಡಿತ್ತು. ಇದು, 3 kWh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಪಡೆದಿದ್ದು, ಫುಲ್ ಚಾರ್ಜ್ ನಲ್ಲಿ 151 km ರೇಂಜ್ ಕೊಡುತ್ತದೆ. 90 kmph ಟಾಪ್ ಸ್ವೀಡ್ ಹೊಂದಿದೆ.
ಓಲಾ ಎಸ್1 ಎಕ್ಸ್ (Ola S1 X) ಎಲೆಕ್ಟ್ರಿಕ್ ಸ್ಕೂಟರ್ ಎಂಟ್ರಿ ಲೆವೆಲ್ ಮಾದರಿಯಾಗಿದ್ದು, ಡೀಲರ್ ಶಿಪ್ ತಲುಪುದನ್ನು ಶುರು ಮಾಡಿದೆ. ರೂ.1,09,999 ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಲಭ್ಯವಿದೆ. 3 kWh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊಂದಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 151 ಕಿಲೋಮೀಟರ್ ರೇಂಜ್ ನೀಡುತ್ತದೆ. 5 - ಇಂಚಿನ LCD ಡಿಸ್ಪ್ಲೇ, LED ಲೈಟಿಂಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಬೆಂಗಳೂರು ಮೂಲದ ಕಂಪನಿಯಾಗಿರುವ ಎಥರ್ (Ather) ಕೂಡ ಉತ್ತಮ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರಾಟ ಮಾಡುತ್ತದೆ. 450ಎಸ್ ಅದರ ಎಂಟ್ರಿ ಲೆವೆಲ್ ಮಾದರಿಯಾಗಿದ್ದು, ರೂ.1,29,999 ದರದಲ್ಲಿ ಗ್ರಾಹಕರಿಗೆ ದೊರೆಯುತ್ತದೆ. 2.9 kWh ಬ್ಯಾಟರಿ ಪ್ಯಾಕ್ ಹೊಂದಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 115 km ರೇಂಜ್ ನೀಡಲಿದ್ದು, 90 kmph ಟಾಪ್ ಸ್ವೀಡ್ ಹೊಂದಿದೆ.
ಮತ್ತೊಂದು, ಟಾಪ್ ಎಂಡ್ ಮಾದರಿಯೆಂದು ಬಿಂಬಿಸಲಾಗಿರುವ ಎಥರ್ 450ಎಕ್ಸ್ (Ather 450X), ಎರಡು ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ದೊರೆಯಲಿದೆ. ಅವುಗಳೆಂದರೆ, 2.9 kWh ಹಾಗೂ 3.7 kWh ಬ್ಯಾಟರಿ ಪ್ಯಾಕ್. ರೂ.1,38,000 ಆರಂಭಿಕ ದರವನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ ಫುಲ್ ಚಾರ್ಜ್ ನಲ್ಲಿ 115 km ರಿಂದ 145 km ರೇಂಜ್ ಕೊಡುತ್ತದೆ.
ಸಿಂಪಲ್ ಎನರ್ಜಿ ಕಂಪನಿಯು ಗರಿಷ್ಠ ರೇಂಜ್ ನೀಡುವ 'ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ರೂ.1.45 ಲಕ್ಷ ಪ್ರಾರಂಭಿಕ ಬೆಲೆಯಲ್ಲಿ ಬಿಡುಗಡೆಗೊಳಿಸಿತ್ತು. ಇದು, ಶಕ್ತಿಯುತ 5 kWh ಸಾಮರ್ಥ್ಯದ ಲಿಥಿಯಂ ಐಯಾನ್ ಬ್ಯಾಟರಿ ಪ್ಯಾಕ್ ಹೊಂದಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 212 km ರೇಂಜ್ ಕೊಡಲಿದೆ. 105 km ಟಾಪ್ ಸ್ವೀಡ್ ಹೊಂದಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ಹತ್ತಾರು ವೈಶಿಷ್ಠ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications