Electric Two Wheelers: ಭಾರೀ ರೇಂಜ್.. ಬಜೆಟ್ ಬೆಲೆಗೆ ಸಿಗುವ ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್, ಬೈಕ್‌ಗಳು
ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು (Electric Two Wheelers) ಕೊಂಡುಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೂ ಯಾವ ಇ-ಸ್ಕೂಟರ್, ಬೈಕ್ ರೇಂಜ್ ನಲ್ಲಿ ಉತ್ತಮವಾಗಿರುತ್ತದೆ. ನಮ್ಮ ಬಜೆಟ್ ಬೆಲೆಗೆ ಖರೀದಿಗೆ ಸಿಗುತ್ತದೆಯೇ ಎಂಬ ಹತ್ತು ಹಲವು ಗೊಂದಲವಿರಬಹುದು. ಅದಕ್ಕೆ ಉತ್ತರ ನೀಡುವ ಪ್ರಯತ್ನ ಮಾಡಿದ್ದೇವೆ.
ಬೆಂಗಳೂರು ಮೂಲದ ಸಿಂಪಲ್ ಎನರ್ಜಿ, ಇತ್ತೀಚೆಗೆ ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿರುವ ಸಿಂಪಲ್ ಒನ್ (Simple ONE) ಎಲೆಕ್ಟ್ರಿಕ್ ಸ್ಕೂಟರ್ ಗರಿಷ್ಠ ರೇಂಜ್ ನೀಡುವುದಕ್ಕೆ ಹೆಸರುವಾಸಿಯಾಗಿದ್ದು, ಈ ಸ್ಕೂಟರ್ ಸಂಪೂರ್ಣ ಚಾರ್ಜಿನಲ್ಲಿ 212 km (IDC) ರೇಂಜ್ ಕೊಡುತ್ತದೆ. ರೂ.1.45 ಲಕ್ಷ ಆರಂಭಿಕ ಬೆಲೆಯಲ್ಲಿ (ಎಕ್ಸ್ ಶೋರೂಂ ಬೆಂಗಳೂರು) ಖರೀದಿಗೆ ಲಭ್ಯವಿದೆ.

ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ 5 kWh ಸಾಮರ್ಥ್ಯದ ಲಿಥಿಯಂ ಐಯಾನ್ ಬ್ಯಾಟರಿ ಪ್ಯಾಕ್ ಬಳಕೆ ಮಾಡಲಾಗಿದೆ. ಗೃಹ ವಿದ್ಯುತ್ ಬಳಕೆಯಲ್ಲಿ ಇದರ ಬ್ಯಾಟರಿ 0 - 80% ಚಾರ್ಜ್ ಆಗಲು 5 ಗಂಟೆ 54 ನಿಮಿಷ ಬೇಕು. ಈ ಸ್ಕೂಟರ್, 2.77 ಸೆಕೆಂಡ್‌ಗಳಲ್ಲಿ ಗಂಟೆಗೆ 0-40 ಕಿಮೀ ವೇಗವನ್ನು ಪಡೆಯಲಿದ್ದು, 105 km ಟಾಪ್ ಸ್ವೀಡ್ ಹೊಂದಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಓಲಾ ಕಂಪನಿ ಮಾರಾಟ ಮಾಡುವ ಎಲೆಕ್ಟ್ರಿಕ್ ಸ್ಕೂಟರ್ ಗಳಲ್ಲಿ 'ಎಸ್1 ಪ್ರೊ' ಟಾಪ್ ಎಂಡ್ ಮಾದರಿಯಾಗಿದೆ. ಇದು ಕೂಡ ಗರಿಷ್ಠ ರೇಂಜ್ ಹೊಂದಿದ್ದು, ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಫುಲ್ ಚಾರ್ಜಿನಲ್ಲಿ 181 km ಓಡುವ ಸಾಮರ್ಥ್ಯ ಹೊಂದಿದೆ. ರೂ.1.40 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗುತ್ತದೆ.
ಓಲಾ ಎಸ್1 ಪ್ರೊ ಎಲೆಕ್ಟ್ರಿಕ್ ಸ್ಕೂಟರ್ 4kWh ಬ್ಯಾಟರಿ ಪ್ಯಾಕ್ ಪಡೆದಿದ್ದು, 8.5 kW ಸಾಮರ್ಥ್ಯದ ಮೋಟಾರ್ ನಿಂದ ಚಲಿಸುತ್ತದೆ. 2.9 ಸೆಕೆಂಡುಗಳಲ್ಲಿ 0 - 40 kmph ವೇಗವನ್ನು ಪಡೆಯುತ್ತದೆ. ಜೊತೆಗೆ 95km/h ಟಾಪ್ ಸ್ವೀಡ್ ಹೊಂದಿದೆ. ಇದರ ಬ್ಯಾಟರಿ ಪ್ಯಾಕ್ ಸಂಪೂರ್ಣ ಚಾರ್ಜ್ ಆಗಲು 6.3 ಗಂಟೆ ಬೇಕು. ಈ ಸ್ಕೂಟರ್, ನಾರ್ಮಲ್, ಇಕೋ, ಸ್ಪೋರ್ಟ್ ಹಾಗೂ ಹೈಪರ್ ಎಂಬ ರೈಡಿಂಗ್ ಮೋಡ್ ಹೊಂದಿದೆ.
ದೇಶದ ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಹೀರೋದ 'ವಿಡಾ ವಿ1' ಎಲೆಕ್ಟ್ರಿಕ್ ಸ್ಕೂಟರ್ ಅತ್ಯಂತ ಕಡಿಮೆ ಬೆಲೆಯಲ್ಲಿ (ರೂ.1,25,900 ಎಕ್ಸ್ ಶೋರೂಂ) ಖರೀದಿಗೆ ಸಿಗುತ್ತದೆ. ಈ ಸ್ಕೂಟರ್, ಫುಲ್ ಚಾರ್ಜಿನಲ್ಲಿ 165 KM ಚಲಿಸುತ್ತದೆ. 3.94 kWh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಬಳಕೆ ಮಾಡಲಾಗಿದೆ. ಜೊತೆಗೆ, ಇದರ ಎಲೆಕ್ಟ್ರಿಕ್ ಮೋಟಾರ್ 7.8 hp ಪವರ್ ಉತ್ಪಾದಿಸುತ್ತದೆ.
ಈ ಹೀರೋ ವಿಡಾ ವಿ1 ಎಲೆಕ್ಟ್ರಿಕ್ ಸ್ಕೂಟರ್, 80 kmph ಟಾಪ್ ಸ್ವೀಡ್ ಹೊಂದಿದ್ದು, 3.2 ಸೆಕೆಂಡುಗಳಲ್ಲಿ 0-40 kmph ವೇಗವನ್ನು ಪಡೆಯಲಿದೆ. ವೈಟ್, ಆರೆಂಜ್, ಬ್ಲ್ಯಾಕ್ ಸೇರಿದಂತೆ 5 ಬಣ್ಣದ ಆಯ್ಕೆಯಲ್ಲಿ ಸಿಗುತ್ತದೆ. TFT ಟಚ್‌ಸ್ಕ್ರೀನ್, ಕ್ರೂಸ್ ಕಂಟ್ರೋಲ್, ಕೀಲೆಸ್ ಕಂಟ್ರೋಲ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
'ಒಬೆನ್ ರೋರ್' ಎಲೆಕ್ಟ್ರಿಕ್ ಬೈಕ್ ಆಗಿದ್ದು, ಭಾರತದ ಮಾರುಕಟ್ಟೆಯಲ್ಲಿ ರೂ.1.25 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಗ್ರಾಹಕರಿಗೆ ಸಿಗಲಿದ್ದು, ಸಂಪೂರ್ಣ ಚಾರ್ಜಿನಲ್ಲಿ 200 km ರೇಂಜ್ ನೀಡುತ್ತದೆ. ಇದು, 4.4 kwh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಪಡೆದಿದ್ದು, 100 kmph ಟಾಪ್ ಸ್ವೀಡ್ ಹೊಂದಿದೆ. ಜೊತೆಗೆ ಗ್ರಾಹಕರನ್ನು ಆಕರ್ಷಿಸುವ ಹತ್ತು ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
'ಟಾರ್ಕ್ ಕ್ರಾಟೋಸ್' ಕೂಡ ಎಲೆಕ್ಟ್ರಿಕ್ ಮೋಟಾರ್ ಸೈಕಲ್ ಆಗಿದ್ದು, ರೂ.1,31,070 ಆರಂಭಿಕ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ಈ ಬೈಕ್ ಫುಲ್ ಚಾರ್ಜಿನಲ್ಲಿ 120 Km ರೇಂಜ್ ನೀಡಲಿದ್ದು, 100 Kmph ಟಾಪ್ ಸ್ವೀಡ್ ಹೊಂದಿದೆ. ಫುಲ್ ಎಲ್ಇಡಿ ಲೈಟಿಂಗ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, USB ಚಾರ್ಜಿಂಗ್ ಹಾಗೂ ಫ್ರಂಟ್ ಸ್ಟೋರೇಜ್ ಬಾಕ್ಸ್ ಅನ್ನು ಹೊಂದಿದೆ.


Click it and Unblock the Notifications